ರಾಹುಲ್ ಗಾಂಧಿ ಅನರ್ಹತೆಯಿಂದ ತೆರವಾಗಿರುವ ವಯನಾಡು ಉಪ ಚುನಾವಣೆ ಕುತೂಹಲಕ್ಕೆ ಆಯೋಗ ಉತ್ತರ!
ಚುನಾವಣಾ ಆಯೋಗ ಕರ್ನಾಟಕ ವಿಧಾನಸಭಾ ಚುನಾವಣೆ ಜೊತೆಗೆ 4 ರಾಜ್ಯಗಳ ಉಪ ಚುನಾವಣಾ ದಿನಾಂಕ ಘೋಷಿಸಿದೆ. ಇದರ ಬೆನ್ನಲ್ಲೇ ಅನರ್ಹಗೊಂಡಿರುವ ರಾಹುಲ್ ಗಾಂಧಿ ವಯನಾಡು ಕ್ಷೇತ್ರದ ಉಪಚುನಾವಣೆ ಯಾವಾಗ ಅನ್ನೋ ಕುತೂಹಲ ಜೋರಾಗಿದೆ. ಇದಕ್ಕೆ ಚುನಾವಣಾ ಆಯೋಗ ಉತ್ತರ ನೀಡಿದೆ.
ನವದೆಹಲಿ(ಮಾ.29): ಜೈಲು ಶಿಕ್ಷೆ ತೀರ್ಪಿನಿಂದ ವಯನಾಡು ಸಂಸದ ರಾಹುಲ್ ಗಾಂಧಿ ತಮ್ಮ ಸ್ಥಾನದಿಂದ ಅನರ್ಹಗೊಂಡಿದ್ದಾರೆ. ಅನರ್ಹತೆ ವಿರುದ್ದ ಪ್ರತಿಭಟನೆಗಳು, ರಾಜಕೀಯ ಚದುರಂಗದಾಟ ನಡೆಯುತ್ತಲೇ ಇದೆ. ಇದರ ನಡುವೆ ಕೇಂದ್ರ ಚುನಾವಣಾ ಆಯೋಗ ಕರ್ನಾಟಕ ವಿಧಾನಸಭಾ ಚುನಾವಣೆ ಹಾಗೂ ನಾಲ್ಕು ರಾಜ್ಯಗಳು ಉಪ ಚುನಾವಣೆ ದಿನಾಂಕವನ್ನು ಘೋಷಿಸಿದೆ. ಇದರ ನಡುವೆ ಎಲ್ಲರ ಕುತೂಹಲ ವಯನಾಡು ಉಪ ಚುನಾವಣೆ ಮೇಲಿತ್ತು. ಈ ಕುರಿತು ಮಾಧ್ಯಮದ ಪ್ರಶ್ನೆಗೆ ಚುನಾವಣಾ ಆಯೋಗ ಉತ್ತರ ನೀಡಿದೆ. ರಾಹುಲ್ ಗಾಂಧಿ ಅನರ್ಹತೆಯಿಂದ ತೆರವಾಗಿರುವ ವಯನಾಡು ಸಂಸದ ಸ್ಥಾನದ ಉಪ ಚುನಾವಣೆಗೆ ಸಮಯವಿದೆ. ಚುನಾವಣಾ ಆಯೋಗ ಆತುರದ ನಿರ್ಧಾರ ತೆಗೆದುಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದೆ.
ಕರ್ನಾಟಕ ವಿಧಾನಸಭಾ ಚುನಾವಣೆ ಜೊತಗೆ ಪಂಜಾಬ್ ಜಲಂಧರ್ ಲೋಕಸಭಾ ಚುನಾವಣಾ ಉಪ ಚುನಾವಣೆಯನ್ನು ಘೋಷಿಸಲಾಗಿದೆ. ಇನ್ನು ಉತ್ತರ ಪ್ರದೇಶ, ಪಂಜಾಬ್, ಒಡಿಶಾ ಹಾಗೂ ಮೇಘಾಲಯ ವಿಧಾನಸಭಾ ಉಪ ಚುನಾವಣೆ ದಿನಾಂಕವನ್ನೂ ಘೋಷಿಸಲಾಗಿದೆ. ಈ ಘೋಷಣೆಯಲ್ಲಿ ವಯನಾಡು ಕ್ಷೇತ್ರದ ಚುನಾವಣೆ ಕುರಿತು ಯಾವುದೇ ಮಾಹಿತಿ ಇರಲಿಲ್ಲ. ಹೀಗಾಗಿ ಈ ಕುರಿತು ಆಯೋಗ ಸ್ಪಷ್ಟನೆ ನೀಡಿದೆ. ಫೆಬ್ರವರಿ ಅಂತ್ಯದವರೆಗಿದ್ದ ಎಲ್ಲಾ ಕ್ಷೇತ್ರಗಳ ಉಪ ಚುನಾವಣೆಗೆ ಆಯೋಗ ದಿನಾಂಕ ಘೋಷಿಸಿದೆ. ಮಾರ್ಚ್ ತಿಂಗಳಲ್ಲಿ ತೆರವಾಗಿರುವ ಯಾವುದೇ ಕ್ಷೇತ್ರಕ್ಕೆ ಆಯೋಗ ಉಪ ಚುನಾವಣೆ ದಿನಾಂಕ ನಿಗದಿ ಪಡಿಸಿಲ್ಲ ಎಂದಿದೆ.
ಚುನಾವಣಾ ಆಯೋಗದಿಂದ ಮತ್ತೊಂದು ಘೋಷಣೆ, 4 ರಾಜ್ಯಗಳ ಉಪಚುನಾವಣೆ ದಿನಾಂಕ ಪ್ರಕಟ!
ರಾಹುಲ್ ಗಾಂಧಿ ಅನರ್ಹತೆಯಿಂದ ತೆರವಾಗಿರುವ ವಯನಾಡು ಕ್ಷೇತ್ರದಲ್ಲಿ ಉಪ ಚುನಾವಣೆ ನಡೆಸಲು ಆಯೋಗ ಯಾವುದೇ ಆತುರ ನಿರ್ಧಾರ ತೆಗೆದುಕೊಳ್ಳುವುದಿಲ್ಲ. ರಾಹುಲ್ ಗಾಂಧಿ ಅನರ್ಹರಾಗಿದ್ದಾರೆ. ಆದರೆ ಅವರಿಗೆ 30 ದಿನದ ಕಾಲಾವಕಾಶ ನೀಡಿದ್ದು, ಮೇಲ್ಮನವಿ ಸಲ್ಲಿಸುವ ಅವಕಾಶ ನೀಡಿದೆ. ಒಂದು ಸ್ಥಾನ ತೆರವಾದ 6 ತಿಂಗಳ ಒಳಗೆ ಚುನಾವಣೆ ನಡೆಸಬೇಕು. ವಯನಾಡು ಕ್ಷೇತ್ರಕ್ಕೆ ಚುನಾವಣೆ ನಡೆಸಲು ಇನ್ನು ಸಮಯವಿದೆ. ಇಷ್ಟೇ ಅಲ್ಲ ರಾಹುಲ್ ಗಾಂಧಿ ತೀರ್ಪಿಗೆ ತಡೆಯಾಜ್ಞೆ ತರವು ಹಾಗೂ ಇತರ ಕಾನೂನು ಪ್ರಕ್ರಿಯೆಗೆ ಅವಕಾಶ ನೀಡಿರುವುದರಿಂದ, ಕೋರ್ಟ್ ನಿರ್ಧಾರದ ಬಳಿಕ ಆಯೋಗ ಮುಂದಿನ ಕ್ರಮ ಕೈಗೊಳ್ಳಲಿದೆ ಎಂದು ಆಯೋಗದ ಮುಖ್ಯಸ್ಥ ರಾಜೀವ್ ಕುಮಾರ್ ಹೇಳಿದ್ದಾರೆ.
ಬೆಂಗಳೂರಲ್ಲಿ ಮತದಾನ ಪ್ರಮಾಣ ಹೆಚ್ಚಿಸಲು ಚುನಾವಣಾ ಆಯೋಗ ಪ್ಲ್ಯಾನ್ ಹೀಗಿದೆ ನೋಡಿ..
ರಾಹುಲ್ ಗಾಂಧಿ ಜೈಲು ಶಿಕ್ಷೆ ತೀರ್ಪಿಗೆ ತಡೆಯಾಜ್ಞೆ ನೀಡುವಲ್ಲಿ ಯಶಸ್ವಿಯಾದರೆ, ರಾಹುಲ್ ಗಾಂಧಿಯ ಅನರ್ಹತೆಯನ್ನು ಆಯೋಗ ತೆರವು ಮಾಡಲಿದೆ. ಲಕ್ಷದ್ವೀಪದ ಸಂಸದ ಮೊಹಮ್ಮದ್ ಫೈಜಲ್ ಅನರ್ಹಗೊಂಡಿದ್ದರು. ಆದರೆ ಕೇರಳ ಹೈಕೋರ್ಟ್ ಈ ತೀರ್ಪಿಗೆ ತಡೆಯಾಜ್ಞೆ ನೀಡಿತ್ತು. ಹೀಗಾಗಿ ಮೊಹಮ್ಮದ್ ಫೈಜಲ್ ಅನರ್ಹತೆಯನ್ನು ಚುನಾವಣಾ ಆಯೋಗ ಹಿಂಪಡೆದಿತ್ತು. ಇದರಿಂದ ಫೈಜಲ್ ಲೋಕಸಭಾ ಸಂಸದ ಸ್ಥಾನ ಮರಳಿ ಪಡೆಪಡೆದಿದ್ದಾರೆ. ಒಂದು ವೇಳೆ ರಾಹುಲ್ ಗಾಂಧಿ ವಯನಾಡು ಕ್ಷೇತ್ರಕ್ಕೆ ಚುನಾವಣೆ ಘೋಷಿಸದರೆ, ಎದುರಿಸಲು ಕಾಂಗ್ರೆಸ್ ಸಜ್ಜಾಗಿತ್ತು. ಗಾಂಧಿ ಕುಟುಂಬದ ಕುಡಿ, ರಾಹುಲ್ ಗಾಂಧಿ ಸಹೋದರಿ ಪ್ರಿಯಾಂಕ ಗಾಂಧಿ ವಯನಾಡು ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಅನ್ನೋ ಮಾತುಗಳು ಕೇಳಿಬಂದಿತ್ತು.