ಶಾಸಕ ಜನಾರ್ದನ ರೆಡ್ಡಿ ನಾಮಪತ್ರ ಸಲ್ಲಿಕೆಯಲ್ಲಿ ದೋಷ: ಡಿಸಿಗೆ ಪತ್ರ ಬರೆದ ಚುನಾವಣಾ ಆಯೋಗ
ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಕಟ್ಟಿ ರಾಜ್ಯ ರಾಜಕಾರಣದಲ್ಲಿ ಎರಡನೇ ಇನ್ನಿಂಗ್ಸ್ ಆರಂಭಿಸಿ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಶಾಸಕರಾಗಿ ಆಯ್ಕೆಯಾದ ಶಾಸಕ ಜನಾರ್ದನ ರೆಡ್ಡಿಗೆ ಇದೀಗ ಸಂಕಷ್ಟ ಎದುರಾಗಿದೆ.
ಕೊಪ್ಪಳ (ಜು.05): ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಕಟ್ಟಿ ರಾಜ್ಯ ರಾಜಕಾರಣದಲ್ಲಿ ಎರಡನೇ ಇನ್ನಿಂಗ್ಸ್ ಆರಂಭಿಸಿ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಶಾಸಕರಾಗಿ ಆಯ್ಕೆಯಾದ ಶಾಸಕ ಜನಾರ್ದನ ರೆಡ್ಡಿಗೆ ಇದೀಗ ಸಂಕಷ್ಟ ಎದುರಾಗಿದೆ. ಗಂಗಾವತಿ ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದು ಮತ್ತೆ ವಿಧಾನಸಭೆಗೆ ಪ್ರವೇಶ ಮಾಡಿರುವ ಶಾಸಕ ಜನಾರ್ದನ ರೆಡ್ಡಿಗೆ ಹೊಸ ಸಂಕಷ್ಟವೊಂದು ಎದುರಾಗಿದೆ.
ಹೌದು! ಜನಾರ್ದನ ರಡ್ಡಿ ನಾಮಪತ್ರದಲ್ಲಿನ ದೋಷದ ಬಗ್ಗೆ ಪರಿಶೀಲಿಸಿ ವರದಿ ನೀಡುವಂತೆ ಕೊಪ್ಪಳ ಜಿಲ್ಲಾಧಿಕಾರಿಗೆ ರಾಜ್ಯ ಚುನಾವಣಾಧಿಕಾರಿ ಪತ್ರ ಬರೆದಿದ್ದಾರೆ. ಅನಂತಪುರದ ಗಣಿ ಉದ್ಯಮಿ ಟಪಾಲು ಶ್ಯಾಮ್ ಪ್ರಸಾದ್ ಎನ್ನುವರು ಜನಾದರ್ನ ರೆಡ್ಡಿ ನಾಮಪತ್ರ ಸಲ್ಲಿಸುವಾಗ ಸರಿಯಾದ ಮಾಹಿತಿ ನೀಡಿಲ್ಲ. ವಾಹನಗಳು, ಆಸ್ತಿ ವಿವರ ಸರಿಯಾಗಿ ನೀಡಿಲ್ಲ ಎಂದು ಆರೋಪಿಸಿ ಚುನಾವಣಾ ಆಯೋಕ್ಕೆ ದೂರು ನೀಡಿದ್ದರು. ಈ ದೂರನ್ನು ಚುನಾವಣಾ ಆಯೋಗ ಸಹ ಗಂಭೀರವಾಗಿ ಪರಿಗಣಿಸಿದ್ದು, ಅದನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಲು ಸೂಚನೆ ನೀಡಿದೆ.
Belagavi: ಗ್ರೇಡ್-2 ತಹಶೀಲ್ದಾರ್ ಅಶೋಕ್ ಮಣ್ಣಿಕೇರಿ ಸಾವು ಪ್ರಕರಣಕ್ಕೆ ಹೊಸ ಟ್ವಿಸ್ಟ್; ಡೆತ್‌ನೋಟ್ ಪತ್ತೆ!
ಸರ್ಕಾರಿ ಯೋಜನೆ ಸದುಪಯೋಗವಾಗಲಿ: ಸರ್ಕಾರದ ಯೋಜನೆಗಳನ್ನು ಸದುಪಯೋಗ ಪಡಿಸಿಕೊಂಡು ಪಿಡಿಒಗಳು ಗ್ರಾಮಗಳಲ್ಲೇ ಕಾರ್ಯ ನಿರ್ವಹಿಸಬೇಕು. ಯೋಜನೆಗಳನ್ನು ಫಲಾನುಭವಿಗಳಿಗೆ ಮುಟ್ಟಿಸುವಲ್ಲಿ ಕಾರ್ಯ ನಿರ್ವಹಿಸಬೇಕೆಂದು ಶಾಸಕ ಗಾಲಿ ಜನಾರ್ದನ ರೆಡ್ಡಿ ಹೇಳಿದರು. ತಾಲೂಕಿನ ಕೇಸರಹಟ್ಟಿ ಗ್ರಾಮದಲ್ಲಿ ಗ್ರಾಪಂನ ನೂತನ ಕಟ್ಟಡದ ಉದ್ಘಾಟನೆ ನೆರವೇರಿಸಿ ಮಾತನಾಡಿದರು. ಗ್ರಾಮ ಪಂಚಾಯಿತಿಗಳಿಗೆ ಉತ್ತಮ ಕಟ್ಟಡ ಇದ್ದರೆ ಸಾರ್ವಜನಿಕರು ಕಾರ್ಯಾಲಯಕ್ಕೆ ಆಗಮಿಸಿ ಹೆಚ್ಚಿನ ಸೌಲಭ್ಯ ಪಡೆಯಲು ಅನುಕೂಲವಾಗುತ್ತದೆ.
ಈ ನಿಟ್ಟಿನಲ್ಲಿ ಕೇಸರಹಟ್ಟಿಯ ಗ್ರಾಪಂ ಕಟ್ಟಡ ತಾಲೂಕಿಗೆ ಮಾದರಿ ಕಟ್ಟಡವಾಗಿದೆ ಎಂದರು. ನರೇಗಾದಡಿ ಹಳ್ಳಿ ಜನರಿಗೆ ದುಡಿಯಲು ಕೆಲಸ ನೀಡಬೇಕು. ಜೊತೆಗೆ ಸಮುದಾಯಿಕ ಕಾಮಗಾರಿಗಳ ಜೊತೆಗೆ ವೈಯಕ್ತಿಕ ಕಾಮಗಾರಿಗಳನ್ನು ನೀಡಿ ಸ್ವಾವಲಂಬಿ ಜೀವನ ನಡೆಸಲು ಅನುಕೂಲವಾಗುವಂತೆ ಸಹಕಾರ ನೀಡಲು ಅಧಿಕಾರಿಗಳಿಗೆ ಶಾಸಕರು ಸೂಚಿಸಿದರು. ನರೇಗಾದಡಿ .28.50 ಲಕ್ಷ ವೆಚ್ಚದಲ್ಲಿ ಭಾರತ ನಿರ್ಮಾಣ ಸೇವಾ ಕೇಂದ್ರ ಹಾಗೂ 17.50 ಲಕ್ಷ ವೆಚ್ಚದಲ್ಲಿ ಎನ್‌ಆರ್‌ಎಲ್‌ಎಂ ಶೆಡ್ ನಿರ್ಮಾಣಗೊಂಡಿದೆ.
ಮಾಡಲು ಕೆಲಸವಿಲ್ಲದೆ ಅನಗತ್ಯವಾಗಿ ಬಿಜೆಪಿ ಪ್ರತಿಭಟನೆ: ಡಿ.ಕೆ.ಶಿವಕುಮಾರ್
ನರೇಗಾದಡಿ ಗ್ರಾಮೀಣ ಭಾಗದಲ್ಲಿ ಯೋಜನೆಗಳ ಸೌಲಭ್ಯ ಪಡೆದು ಎಲ್ಲ ಹಳ್ಳಿಗಳು ಅಭಿವೃದ್ಧಿ ಹೊಂದಲಿ ಎಂದರು. ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಜಿ.ವೀರಪ್ಪ, ಗ್ರಾಪಂ ಅಧ್ಯಕ್ಷ ಬಸವರಾಜ್ ಹಳ್ಳಿ, ತಾಪಂ ಇಒ ಮಹಾಂತಗೌಡ, ಜಿಪಂ ಮಾಜಿ ಸದಸ್ಯ ಮಂಜುನಾಥ್ ಗದ್ದಡಕಿ, ನಿರ್ದೇಶಕ ಸುರೇಶ್ ಉಪ್ಪಾರ, ನಾಗೇಶ ಕುರುಡಿ, ಪಿಡಿಒ ಕೃಷ್ಣ ಎಚ್., ಪ್ರಶಾಂತ್ ಭಾನಾಪುರ, ಗ್ರಾಪಂ ಉಪಾಧ್ಯಕ್ಷ ವಿರೂಪಮ್ಮ, ಭಾಗವಹಿಸಿದ್ದರು.