ನವದೆಹಲಿ, (ಫೆ.18): ರಾಜ್ಯದ ವಿಧಾನ ಪರಿಷತ್ ಸದಸ್ಯರಾಗಿದ್ದ ಧರ್ಮೇಗೌಡ ನಿಧನದಿಂದ ತೆರವಾಗಿದ್ದ ಪರಿಷತ್ ಸ್ಥಾನಕ್ಕೆ ಚುನಾವಣೆ ಘೋಷಣೆಯಾಗಿದೆ. 

ಮಾರ್ಚ್ 15ರಂದು ಚುನಾವಣೆ ನಡೆಯಲಿದ್ದು, ಅಂದು ಸಂಜೆಯೇ ಫಲಿತಾಂಶವನ್ನು ಘೋಷಣೆ ಮಾಡುವುದಾಗಿ ಕೇಂದ್ರ ಚುನಾವಣಾ ಆಯೋಗ ತಿಳಿಸಿದೆ.

ವಿಧಾನಸಭೆ ಸದಸ್ಯರಿಂದ ಈ ಸ್ಥಾನದ ಆಯ್ಕೆ ನಡೆಯಲಿದ್ದು, ಮಾರ್ಚ್‌ 15ರಂದು ಮತದಾನ ನಿಗದಿಪಡಿಸಲಾಗಿದೆ. ಫೆಬ್ರವರಿ 25ರಂದು ಈ ಸಂಬಂಧ ಅಧಿಸೂಚನೆ ಹೊರಬೀಳಲಿದೆ.

ಧರ್ಮೇಗೌಡ್ರ ಅಂತಿಮ ದರ್ಶನದಲ್ಲಿ ಒಟ್ಟಿಗೆ ಕಾಣಿಸಿಕೊಂಡ ದಿಗ್ಗಜ ನಾಯಕರು

ನಾಮಪತ್ರ ಸಲ್ಲಿಕೆಗೆ ಮಾರ್ಚ್‌ 4 ಕೊನೆಯ ದಿನವಾಗಿದ್ದು, 5ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ನಾಮಪತ್ರ ಹಿಂದಕ್ಕೆ ಪಡೆಯಲು ಮಾರ್ಚ್‌ 8 ಕೊನೆಯ ದಿನವಾಗಿದೆ. 

ಮತದಾನವು 15ರಂದು ಬೆಳಿಗ್ಗೆ 9 ರಿಂದ ಮಧ್ಯಾಹ್ನ 4ರವರೆಗೆ ನಡೆಯಲಿದ್ದು, ಸಂಜೆ 5ಕ್ಕೆ ಮತ ಎಣಿಕೆ ಕಾರ್ಯ ನಿಗದಿ ಮಾಡಿ ಕೇಂದ್ರ ಚುನಾವಣಾ ಆಯೋಗ ಆದೇಶ ಹೊರಡಿಸಿದೆ.

ಡಿಸೆಂಬರ್ 28 ಮಧ್ಯರಾತ್ರಿ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಗುಣಸಾಗರದ ಬಳಿ ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಉಪಸಭಾಪತಿ ಧರ್ಮೇಗೌರಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಮೊನ್ನೇ ಉಪಸಭಾಪತಿ ಸ್ಥಾನಕ್ಕೆ ಚುನಾವಣೆ ನಡೆದಿತ್ತು.