Asianet Suvarna News Asianet Suvarna News

ಕರ್ನಾಟಕದ 7 ವಿಧಾನಪರಿಷತ್‌ ಸ್ಥಾನಕ್ಕೆ ಚುನಾವಣೆ ದಿನಾಂಕ ಘೋಷಣೆ

* ಕರ್ನಾಟಕದ ಏಳು ವಿಧಾನಪರಿಷತ್‌ ಸ್ಥಾನಕ್ಕೆ ಚನಾವಣೆ ಘೋಷಣೆ
* ವಿಧಾನಪರಿಷತ್ ಚುನಾವಣೆಗೆ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ
* ಮೇ 17ರಂದು ಅಧಿಸೂಚನೆ ಪ್ರಕಟ

election commission of india Date Announces To 7 Karnataka MLC Poll rbj
Author
Bengaluru, First Published May 10, 2022, 2:17 PM IST

ಬೆಂಗಳೂರು, (ಮೇ.10): ಕರ್ನಾಟಕ ವಿಧಾನಪರಿಷತ್‌ ಆಯ್ಕೆಯಾಗಿರುವ 7 ಸದಸ್ಯರ ಅವಧಿ ಜೂನ್ 14 ರಂದು ಮುಕ್ತಾಯವಾಗಲಿದ್ದು ಈ ಸ್ಥಾನಗಳಿಗೆ ಚುನಾವಣೆ ಘೋಷಣೆ ಮಾಡಲಾಗಿದೆ.

ವಿಧಾನಸಭೆಯಿಂದ ವಿಧಾನಪರಿಷತ್ ಚುನಾವಣೆಗೆ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಮಂಗಳವಾರ ಪ್ರಕಟಿಸಿದ್ದು, ಇದೇ ಜೂನ್ 3ರಂದು ಚುನಾವಣೆ ನಡೆಯಲಿದೆ. 

ಮೇ 17ರಂದು ಅಧಿಸೂಚನೆಯನ್ನ ಹೊರಡಿಸಲಾಗುತ್ತದೆ.  ಮೇ 24 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು, ಮೇ 25ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಇನ್ನು ಮೇ 27 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ ಎಂದು ಆಯೋಗ ತಿಳಿಸಿದೆ.

ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ರಿಲೀಸ್, ಕುತೂಹಲ ಮೂಡಿಸಿದ ಹೊರಟ್ಟಿ ನಡೆ

ಜೂನ್ 3ರಂದು ಬೆಳ್ಳಗ್ಗೆ 9 ರಿಂದ ಸಂಜೆ 4ರವರೆಗೂ ಮತದಾನ ನಡೆಯಲಿದ್ದು ಅದೇ ದಿನ ಸಂಜೆ ಪಲಿತಾಂಶವನ್ನ ಪ್ರಕಟಿಸಲಾಗುವುದು ಎಂದು ಚುನಾವಣೆ ಆಯೋಗ ತಿಳಿಸಿದೆ.  

ಬಿಜೆಪಿಯ ಲಕ್ಷ್ಮಣ ಸವದಿ, ಲೆಹೆರ್ ಸಿಂಗ್ ಸಿರೋಯಾ, ಕಾಂಗ್ರೆಸ್‌ನ ಆರ್.ಬಿ.ತಿಮ್ಮಾಪುರ, ಅಲ್ಲಂ ವೀರಭದ್ರಪ್ಪ, ವೀಣಾ ಅಚ್ಚಯ್ಯ, ಜೆಡಿಎಸ್‌ ಕೆ.ವಿ.ನಾರಾಯಣ ಸ್ವಾಮಿ ಹಾಗೂ ಎಚ್.ಎಂ.ರಮೇಶ್ ಗೌಡ ನಿವೃತ್ತಿಯಿಂದ ತೆರವಾಗುವ ಸ್ಥಾನಕ್ಕೆ ಜೂನ್ 3ರಂದು ಚುನಾವಣೆ ನಡೆಯಲಿದೆ ಎಂದು ಆಯೋಗ ತಿಳಿಸಿದೆ.

MLC Election: ಬೆಳಗಾವಿಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಡಾ. ಪ್ರಭಾಕರ್ ಕೋರೆ ಪುತ್ರಿ?

ಬಿಜೆಪಿ ಅಭ್ಯರ್ಥಿ ಪ್ರಕಟ
ವಾಯುವ್ಯ ಶಿಕ್ಷಕರ ಕ್ಷೇತ್ರಕ್ಕೆ ಅರುಣ್ ಶಹಾಪುರ, ವಾಯುವ್ಯ ಪದವೀಧರರ ಕ್ಷೇತ್ರಕ್ಕೆ ಹನುಮಂತ ನಿರಾಣಿ ಮತ್ತು ದಕ್ಷಿಣ ಪದವೀಧರ ಕ್ಷೇತ್ರಕ್ಕೆ ಎಂ.ವಿ. ರಾಜಶೇಖರ್ ಅವರನ್ನು ಅಭ್ಯರ್ಥಿಗಳನ್ನಾಗಿ ಘೋಷಿಸಲಾಗಿದೆ. ದಕ್ಷಿಣ ಪದವೀಧರ ಕ್ಷೇತ್ರದಲ್ಲಿ ಮಾಜಿ ಎಂಎಲ್​ಸಿ ಗೋ. ಮಧುಸೂಧನ್  ಅವರಿಗೆ ಟಿಕೆಟ್ ಕೈತಪ್ಪಿದೆ. 

ಇನ್ನು ಪಶ್ಚಿಮ ಪದವೀಧರ ಕ್ಷೇತ್ರಕ್ಕೆ ಕೆಲ ಗೊಂದಗಳು ಇದ್ದು, ಅವು ಬಗೆಹರಿಯದ ಕಾರಣ ಅಭ್ಯರ್ಥಿ ಘೋಷಣೆ ಮಾಡಿಲ್ಲ.  ಆದರೆ ಮಾಜಿ ಸಿಎಂ ಯಡಿಯೂರಪ್ಪ ಆಪ್ತ ಮತ್ತು ಮಾಜಿ ಎಂಎಲ್ಸಿ ಮೋಹನ್ ಲಿಂಬಿಕಾಯಿ ಈ ಕ್ಷೇತ್ರದ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ.

ಮತ್ತೊಂದೆಡೆ  ಬಿಜೆಪಿ ಸೇರ್ಪಡೆಯಾದ ಸಭಾಪತಿ ಬಸವರಾಜ ಹೊರಟ್ಟಿ (Basavaraj Horatti) ಅವರನ್ನು ಪಶ್ಚಿಮ ಪದವೀಧರ ಕ್ಷೇತ್ರದಿಂದ ಕಣಕ್ಕಿಳಿಸಲು ಬಿಜೆಪಿ ಪ್ಲಾನ್ ಮಾಡಿದೆ. ಆದ್ರೆ, ಇದಕ್ಕೆ ಮೋಹನ್ ಲಿಂಬೆಕಾಯಿ ವಿರೋಧ ವ್ಯಕ್ತಪಡಿಸಿದ್ದು,  ಪಶ್ಚಿಮ ಪದವೀಧ ಟಿಕೆಟ್ ನನಗೆ ಬೇಕೆಂದು ಪಟ್ಟು ಹಿಡಿದಿದ್ದಾರೆ.

ಇನ್ನು ಪರಿಷತ್ ಚುನಾವಣೆಯಲ್ಲಿ, ವಾಯುವ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಬಂಡಾಯ ಎದ್ದಿದೆ. ಬೆಳಗಾವಿ ಜಿಲ್ಲೆಯವರಿಗೆ ಬಿಜೆಪಿ ಟಿಕೆಟ್ ನೀಡದ್ದಕ್ಕೆ ಆಕ್ರೋಶ ವ್ಯಕ್ತವಾಗಿದೆ.

ಹಾಲಿ MLC ರುಣ್ ಶಹಾಪುರ್‌ಗೆ ಟಿಕೆಟ್ ನೀಡಿದ್ದಕ್ಕೆ ಅಸಮಾಧಾನ ವ್ಯಕ್ತವಾಗಿದೆ. ಪಕ್ಷೇತರ ಅಭ್ಯರ್ಥಿಯಾಗಿ ಡಾ. ಪ್ರಭಾಕರ್ ಕೋರೆ ಪುತ್ರಿ ಕಣಕ್ಕಿಳಿಯಲಿದ್ದಾರೆ. ಅಭ್ಯರ್ಥಿ ಆಯ್ಕೆ ಬಗ್ಗೆ ಬೆಳಗಾವಿಯಲ್ಲಿ 2 ಸಾವಿರಕ್ಕೂ ಹೆಚ್ಚು ಶಿಕ್ಷಕರು ಸಭೆ ಸೇರಿದ್ದಾರೆ. 

Follow Us:
Download App:
  • android
  • ios