ಮತ್ತೊಂದು ಚುನಾವಣೆಗೆ ಡೇಟ್ ಫಿಕ್ಸ್ ಆಗಿದ್ದು, ಜೆಡಿಎಸ್, ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳಲ್ಲಿ ರಾಜಕೀಯ ಲೆಕ್ಕಾಚಾರಗಳು ಶುರುವಾಗಿವೆ.
ಬೆಂಗಳೂರು, (ಜ.19): ಎಸ್.ಎಲ್. ಧರ್ಮೇಗೌಡ ನಿಧನದಿಂದಾಗಿ ತೆರವಾದ ಉಪಸಭಾಪತಿ ಸ್ಥಾನಕ್ಕೆ ಚುನಾವಣೆ ಘೋಷಣೆಯಾಗಿದೆ.
ಈ ಬಗ್ಗೆ ಪರಿಷತ್ ಕಾರ್ಯದರ್ಶಿ ಕೆ.ಆರ್.ಮಹಾಲಕ್ಷ್ಮಿ ಅವರು ಇಂದು (ಮಂಗಳವಾರ) ಅಧಿಸೂಚನೆ ಹೊರಡಿಸಿದ್ದು, ಜನವರಿ 29ರಂದು ಉಪಸಭಾಪತಿ ಸ್ಥಾನಕ್ಕೆ ಚುನಾವಣೆ ನಡೆಯಲಿದೆ ಎಂದು ತಿಳಿಸಿದ್ದಾರೆ.
ಡಿಸೆಂಬರ್ 28 ಮಧ್ಯರಾತ್ರಿ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಗುಣಸಾಗರದ ಬಳಿ ಚಲಿಸುತ್ತಿದ್ದ ರೈಲಿಗೆ ಅಡ್ಡಬಂದು ಧರ್ಮೇಗೌರಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಇದೀಗ ಅವರಿಂದ ತೆರವಾಗಿರುವ ಸ್ಥಾನಕ್ಕೆ ಚುನಾವಣೆ ನಡೆಯಲಿದೆ.
ಧರ್ಮೇಗೌಡ್ರ ಅಂತಿಮ ದರ್ಶನದಲ್ಲಿ ಒಟ್ಟಿಗೆ ಕಾಣಿಸಿಕೊಂಡ ದಿಗ್ಗಜ ನಾಯಕರು
ವಿಧಾನ ಪರಿಷತ್ತಿನ ಕಾರ್ಯವಿಧಾನ ಮತ್ತು ನಡವಳಿಕೆಯ ನಿಯಮ 8(1)ರ ಅನ್ವಯ ಉಪ ಸಭಾಪತಿಯವರ ಸ್ಥಾನಕ್ಕೆ ಚುನಾವಣೆಯನ್ನು ಮಾನ್ಯ ಸಭಾಪತಿಯವರು ಶುಕ್ರವಾರ, ದಿನಾಂಕ 29-01-2021ರಂದು ನಡೆಸತಕ್ಕದೆಂದು ಗೊತ್ತುಪಡಿಸಿರುತ್ತಾರೆ.
ಚುನಾವಣೆ ಗೊತ್ತು ಮಾಡಿದ ದಿನಾಂಕ 29-01-2021ರ ಹಿಂದಿನ ದಿನ ಅಂದ್ರೆ ದಿನಾಂಕ 28-01-2021ರ ಮಧ್ಯಾಹ್ನ 3 ಗಂಟೆಗೆ ಮೊದಲು ಯಾವುದೇ ಕಾಲದಲ್ಲಿ ಯಾವೊಬ್ಬ ಸದಸ್ಯನು ಇನ್ನೊಬ್ಬ ಸದಸ್ಯನನ್ನು ಉಪ ಸಭಾಪತಿಯನ್ನಾಗಿ ಆರಿಸುವ ಬಗ್ಗೆ ಕಾರ್ಯದರ್ಶಿಯವರಿಗೆ ಹೆಸರಿಸಿ, ವಿಧಾನಸೌಧದ ಕೊಠಡಿ ಸಂಖ್ಯೆ-156ಸಿ ಇಲ್ಲಿ ಲಿಖಿತ ಮೂಲಕ ಸೂಚನೆಯನ್ನು ಅಭ್ಯರ್ಥಿಯು ಅವರ ಹೆಸರನ್ನು ಸೂಚಿಸುವವರೊಂದಿಗೆ ಅಥವಾ ಅನುಮೋದಕರೊಂದಿಗೆ ಖುದ್ದಾಗಿ ಸಲ್ಲಿಸತಕ್ಕದ್ದು ಎಂದು ಅಧಿಸೂಚನೆಯಲ್ಲಿ ತಿಳಿಸಿದ್ದಾರೆ.
Read Exclusive COVID-19 Coronavirus News updates, from Karnataka, India and World at Asianet News Kannada.
ವರ್ಚುಯಲ್ ಬೋಟ್ ರೇಸಿಂಗ್ ಗೇಮ್ ಆಡಿ ಮತ್ತು ನಿಮಗೆ ನೀವೇ ಸವಾಲು ಹಾಕಿಕೊಳ್ಳಿ ಈಗಲೇ ಆಡಲು ಕ್ಲಿಕ್ಕಿಸಿ
Last Updated Jan 19, 2021, 10:30 PM IST