ರಾಯಚೂರು, (ಮಾ,13): ಮಸ್ಕಿ ವಿಧಾನಸಭೆ ಉಪ ಚುನಾವಣೆಯ ದಿನಾಂಕ ಘೋಷಣೆಗೆ ತಯಾರಿ ನಡೆದಿದೆ. ಇದಕ್ಕೆ ಪೂರಕವೆಂಬಂತೆ ಮಸ್ಕಿ ಕ್ಷೇತ್ರಕ್ಕೆ ಚುನಾವಣಾ ಆಯೋಗ ಅಧಿಕಾರಿಯನ್ನ ನೇಮಿಸಿದೆ. 

ಲಿಂಗಸುಗೂರು ಸಹಾಯಕ ಆಯುಕ್ತರನ್ನು ಚುನಾವಣಾ ಅಧಿಕಾರಿಯನ್ನಾಗಿ ನಿಯುಕ್ತಿಗೊಳಿಸಿ ಚುನಾವಣಾ ಆಯೋಗ ಆದೇಶ ಹೊರಡಿಸಿದೆ. ಈ ಮೂಲಕ ಸದ್ಯ ಮತದಾರರ ಪಟ್ಟಿ, ಗುರುತಿನ ಚೀಟಿ ಹಾಗೂ ಮತಗಟ್ಟೆಗಳ ಮಾಹಿತಿಗಳನ್ನ ಕ್ರೋಢೀಕರಿಸಿ ಚುನಾವಣಾ ದಿನಾಂಕ ಘೋಷಣೆಗೆ ಸಿದ್ಧತೆ ನಡೆಸಿದೆ. 

ವಿಜಯೇಂದ್ರನ ಆಪರೇಷನ್ ಕಮಲ ಸಕ್ಸಸ್: ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಮಾಜಿ ಸಂಸದ

ಇತ್ತ ಕಾಂಗ್ರೆಸ್ ಹಾಗೂ ಜೆಡಿಎಸ್ ಈಗಾಗಲೇ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ಕೈಗೊಂಡಿವೆ. ಮತದಾರರನ್ನು ಸೆಳೆಯಲು ನಾನಾ ತಂತ್ರಗಳನ್ನು ರೂಪಿಸುತ್ತಿವೆ.

 ಈ ಎಲ್ಲಾ ಬೆಳವಣಿಗೆಗಳ ಮಧ್ಯೆ ಕಾಂಗ್ರೆಸ್ ಬಿಜೆಪಿ ಪಕ್ಷಗಳು ತಮ್ಮ ಗೆಲುವಿಗಾಗಿ ಕಾರ್ಯತಂತ್ರ ಶುರುಮಾಡಿವೆ. ಇನ್ನು ಇದೇ‌ ಮಾರ್ಚ್​ 20ರಂದು ಮಸ್ಕಿಯಲ್ಲಿ ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ ಪಕ್ಷ ಸೇರ್ಪಡೆ ಕಾರ್ಯಕ್ರಮ ಹಾಗೂ ಕಾರ್ಯಕರ್ತರ ಸಮಾವೇಶ ನಡೆಯಲಿದೆ. ಈ ಮೂಲಕ ಮಸ್ಕಿ ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲ್ ಗೆಲುವಿಗೆ ಸಿಎಂ ಬಿಎಸ್​​ವೈ ಮೆಗಾ ಪ್ಲಾನ್ ಮಾಡಿದ್ದಾರೆ.

ಇತ್ತ ಕಾಂಗ್ರೆಸ್, ತನ್ನ ಅಭ್ಯರ್ಥಿ ಬಸನಗೌಡ ತುರುವಿಹಾಳ ಗೆಲುವಿಗಾಗಿ ಕಾರ್ಯತಂತ್ರ ಶುರುಮಾಡಿದೆ. ವಿರೂಪಾಕ್ಷಪ್ಪ ಬಿಜೆಪಿ‌ ಸೇರಿದ್ದರಿಂದ ಪಕ್ಷಕ್ಕೆ ಉಂಟಾಗಿರುವ ಡ್ಯಾಮೇಜ್ ಕಂಟ್ರೋಲ್ ಮಾಡುವಂತೆ ಕೋರಿ ಬಸನಗೌಡ ತುರುವಿಹಾಳ್ ಸಿದ್ದರಾಮಯ್ಯರ ಮೊರೆ ಹೋಗಿದ್ದಾರೆ.