ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಕಾರು ತಡೆದು ಸರ್ಚ್ ಮಾಡಿದ ಬೆನ್ನಲ್ಲೇ ಈಗ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರಯಾಣಿಸುತ್ತಿದ್ದ ಕಾರನ್ನು ತಡೆದು ತಪಾಸಣೆ ಮಾಡಿದರು.

ಬೆಳಗಾವಿ, (ಏ.07): ಕೊರೋನಾ ಎರಡನೇ ಅಲೆ ಆತಂಕದ ನಡುವೆಯೂ ರಾಜ್ಯದಲ್ಲಿ ಉಪಚುನಾವಣೆ ಪ್ರಚಾರ ಕಾರ್ಯ ಬಿರುಸಿನಿಂದ ಸಾಗಿದೆ. ಏಪ್ರಿಲ್ 17ರಂದು ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ನಡೆಯಲಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇನ್ನು ಕಾಂಗ್ರೆಸ್ ಹಾಗೂ ಬಿಜೆಪಿ ತಮ್ಮ ಅಭ್ಯರ್ಥಿಗಳ ಗೆಲುವಿಗಾಗಿ ನಾಯಕರುಗಳು ಕಾಲಿಗೆ ಚಕ್ರಕಟ್ಟಿಕೊಂಡು ಕ್ಷೇತ್ರದಾದ್ಯಂತ ಭರ್ಜರಿ ಮತಬೇಟೆಯಲ್ಲಿ ತೊಡಗಿದ್ದಾರೆ. ಮತ್ತೊಂದು ಚುನಾವಣೆ ಆಯೋಗ ಕೂಡ ನಾಯಕರುಗಳ ಮೇಲೆ ಹದ್ದಿನ ಕಣ್ಣಿಟ್ಟಿದೆ.

3 ಉಪಚುನಾವಣೆ: ಅಖಾಡದಲ್ಲೀಗ 30 ಅಭ್ಯರ್ಥಿಗಳು

ಇದಕ್ಕೆ ಪೂರಕವೆಂಬಂತೆ ಚುನಾವಣಾ ಪ್ರಚಾರಕ್ಕೆ ಇಂದು (ಬುಧವಾರ) ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬೆಳಗಾವಿ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಈ ವೇಳೆ ಚುನಾವಣಾಧಿಕಾರಿಗಳು ಡಿ.ಕೆ. ಶಿವಕುಮಾರ್ ಅವರ ಕಾರ್ ತಡೆದು ತಪಾಸಣೆ ಮಾಡಿದರು.

 ಹುಬ್ಬಳ್ಳಿಯಿಂದ ಬೆಳಗಾವಿಗೆ ತೆರಳುವ ವೇಳೆ ಮಾರ್ಗ ಮಧ್ಯೆ ಹಿರೇಬಾಗೇವಾಡಿ ಟೋಲ್ ಬಳಿ ಡಿ.ಕೆ. ಶಿವಕುಮಾರ್ ಅವರ ಕಾರ್​ನ್ನು ತಡೆದು ಚುನಾವಣಾ ಅಧಿಕಾರಿಗಳು ತಪಾಸಣೆ ನಡೆಸಿದ್ದಾರೆ. 

ಇನ್ನು ಇದೇ ಚುನಾವಣಾ ಪ್ರಚಾರದ ಸಲುವಾಗಿ ಬೆಳಗಾವಿ ಜಿಲ್ಲೆಗೆ ಆಗಮಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಕಾರನ್ನು ನಿನ್ನೆ (ಮಂಗಳವಾರ) ಸಹ ಚುನಾವಣಾ ಸಿಬ್ಬಂದಿ ತಪಾಸಣೆ ಮಾಡಿದನ್ನು ಇಲ್ಲಿ ಸ್ಮರಿಸಬಹುದು.