ರಾಹುಲ್‌ ಗಾಂಧಿಗೆ ಬರೋಬ್ಬರಿ 5 ದಿನಗಳ ಕಾಲ ಜಾರಿ ನಿರ್ದೇಶನಾಲಯ ವಿಚಾರಣೆ ನಡೆಸಿದ ಬಳಿಕ, ಕಾಂಗ್ರೆಸ್ ಪಕ್ಷದ ಹಂಗಾಮಿ ಅಧ್ಯಕ್ಷ ಸೋನಿಯಾ ಗಾಂಧಿಗೆ ಇಡಿ ಹೊಸ ನೋಟಿಸ್‌ ಜಾರಿ ಮಾಡಿದೆ. ಜುಲೈ 21ಕ್ಕೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ. 

ನವದೆಹಲಿ (ಜುಲೈ 11): ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಜಾರಿ ನಿರ್ದೇಶನಾಲಯ ಮತ್ತೊಮ್ಮೆ ಸಮನ್ಸ್ ಜಾರಿ ಮಾಡಿದೆ. ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಆಪಾದಿತ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜುಲೈ 21 ರಂದು ವಿಚಾರಣೆಗೆ ಹಾಜರಾಗುವಂತೆ ಇಡಿ ಸೋನಿಯಾ ಗಾಂಧಿಯವರನ್ನು ಕೇಳಿದೆ. ಇದಕ್ಕೂ ಮುನ್ನ ಸೋನಿಯಾ ಗಾಂಧಿ ಅವರು ವಿಚಾರಣೆಗಾಗಿ ಇಡಿ ಮುಂದೆ ಹಾಜರಾಗಲು ಇನ್ನೂ ಕೆಲವು ದಿನಗಳ ಕಾಲಾವಕಾಶ ಕೋರಿದ್ದರು. ಸೋನಿಯಾ ಗಾಂಧಿ ಹಾಗೂ ಅವರ ಪುತ್ರ ರಾಹುಲ್‌ ಗಾಂಧಿ ಇಬ್ಬರಿಗೂ ಜಾರಿ ನಿರ್ದೇಶನಾಲಯ ಕಳೆದ ತಿಂಗಳು ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ಜಾರಿ ಮಾಡಿತ್ತು. ಇದೇ ವೇಳೆ ಸೋನಿಯಾ ಗಾಂಧಿ ಅನಾರೋಗ್ಯಕ್ಕೆ ತುತ್ತಾಗಿದ್ದರಿಂದ ಅಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆಯ ವೇಳೆ ಅವರಿಗೆ ಕೊರೋನಾ ತಗುಲಿದ್ದು ಪತ್ತೆಯಾಗಿತ್ತು. ಇದರ ಬೆನ್ನಲ್ಲಿ ಇಡಿ ನೋಟಿಸ್‌ಗೆ ಉತ್ತರ ನೀಡಿದ್ದ ಸೋನಿಯಾ ಗಾಂಧಿ, ವಿಚಾರಣೆಯನ್ನು ಮುಂದೂಡುವಂತೆ ಮನವಿ ಮಾಡಿದ್ದರು. ಇಡಿ ಕೂಡ ಇದನ್ನು ಪುರಸ್ಕರಿಸಿ ವಿಚಾರಣೆಯನ್ನು ಮುಂದೂಡಿಕೆ ಮಾಡಿತ್ತು. ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬಳಿಕವೂ ಸೋನಿಯಾ ಗಾಂಧಿ, ಇಡಿಗೆ ಮತ್ತೊಮ್ಮೆ ಮನವಿ ಸಲ್ಲಿಸಿ ವಿಚಾರಣೆ ಮುಂದೂಡಿಕೆ ಮಾಡಿದ್ದರು.

Scroll to load tweet…


ಕೊರೊನಾ ವಿರುದ್ಧ ಹೋರಾಡುತ್ತಿರುವ ಸೋನಿಯಾ ಗಾಂಧಿ (Sonia Gandhi) ಅವರಿಗೆ ವೈದ್ಯರು ವಿಶ್ರಾಂತಿ ಸೂಚಿಸಿದ್ದಾರೆ, ಇದರಿಂದಾಗಿ ಅವರು ಕೆಲವು ವಾರಗಳವರೆಗೆ ಇಡಿ (Enforcement Directorate ) ಮುಂದೆ ಹಾಜರಾಗಲು ಸಾಧ್ಯವಾಗುವುದಿಲ್ಲ ಎಂದು ಹೇಳಲಾಗಿತ್ತು. ಇಡಿ ಕೂಡ ಅವರ ಮನವಿಯನ್ನು ಒಪ್ಪಿಕೊಂಡಿತ್ತು.

ಗೋವಾ ಬಿಕ್ಕಟ್ಟು: 5 ಶಾಸಕರು ಇನ್ನೂ ನಾಪತ್ತೆ, ಹಿರಿಯ ಕಾಂಗ್ರೆಸ್‌ ನಾಯಕನನ್ನು ಕಳುಹಿಸಿದ ಸೋನಿಯಾ!

ನ್ಯಾಷನಲ್‌ ಹೆರಾಲ್ಡ್‌ (National Herald) ಅಕ್ರಮದ ವಿಚಾರದಲ್ಲಿ ಜುಲೈ ಅಂತ್ಯದಲ್ಲಿ ತನಿಖಾ ಸಂಸ್ಥೆಯ ಮುಂದೆ ಹಾಜರಾಗುವಂತೆ ಮತ್ತು ಅಕ್ರಮ ಹಣ ವರ್ಗಾವಣೆ (money laundering case) ಪ್ರಕರಣದಲ್ಲಿ ತಮ್ಮ ಹೇಳಿಕೆಯನ್ನು ದಾಖಲಿಸಿಕೊಳ್ಳುವಂತೆ ಇಡಿ ಕಾಂಗ್ರೆಸ್ ಅಧ್ಯಕ್ಷೆ(congress interim president) ಸೋನಿಯಾ ಗಾಂಧಿ ಅವರಿಗೆ ಸೂಚಿಸಿತ್ತು.

ಬಾಟ್ಲಾ ಹೌಸ್ ಶೂಟೌಟ್ ನಲ್ಲಿ ಉಗ್ರ ಸತ್ತಾಗ ಸೋನಿಯಾ ಕಣ್ಣೀರು ಹಾಕಿದ್ರಂತೆ: Pralhad Joshi

ಈ ವೇಳೆ ಐದು ದಿನಗಳಲ್ಲಿ ಸುಮಾರು 50 ಗಂಟೆಗಳ ಕಾಲ ರಾಹುಲ್ ಗಾಂಧಿ ಅವರನ್ನು ವಿಚಾರಣೆಗೊಳಪಡಿಸಲಾಗಿದೆ. ಈ ಸಂದರ್ಭದಲ್ಲಿ ಅವರ ಹೇಳಿಕೆಗಳನ್ನು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ದಾಖಲಿಸಿಕೊಳ್ಳಲಾಗಿದೆ. ಸೋನಿಯಾ ಗಾಂಧಿ ಅವರ ಪುತ್ರ ರಾಹುಲ್ ಗಾಂಧಿ ಅವರು ಇದೇ ಪ್ರಕರಣದಲ್ಲಿ ಕೇಂದ್ರ ತನಿಖಾ ಸಂಸ್ಥೆಯಿಂದ ಐದು ದಿನಗಳ ಕಾಲ 10-12 ಗಂಟೆಗಳ ಕಾಲ ಸರಣಿ ವಿಚಾರಣೆಗೆ ಒಳಗಾಗಿದ್ದರು. ಏಜೆನ್ಸಿ ಅಧಿಕಾರಿಗಳೊಂದಿಗೆ ಮ್ಯಾರಥಾನ್ ಪ್ರಶ್ನಾರ್ಥಕ ಅವಧಿಗಳನ್ನು ಹೇಗೆ ನಿರ್ವಹಿಸಿದ್ದೀರಿ ಎಂದು ಪ್ರಶ್ನೆ ಕೇಳಿದಾಗ ಹಾಸ್ಯದ ದಾಟಿಯಲ್ಲಿಯೇ ಉತ್ತರಿಸಿದ್ದ ರಾಹುಲ್ ಗಾಂಧಿ, 'ನಾನು ವಿಪಸ್ಸನಾ ಮಾಡುತ್ತೇನೆ ಎಂದು ಅವರಿಗೆ ಹೇಳಿದೆ" ಎಂದು ತಿಳಿಸಿದ್ದರು.

"ಭಾರತ ಸರ್ಕಾರ... ನನ್ನನ್ನು ಐದು ದಿನಗಳ ಕಾಲ ಇಡಿ (ಕಚೇರಿ) ಯಲ್ಲಿ ಕೂರಿಸುವ ಮೂಲಕ ನನ್ನ ನಡವಳಿಕೆಯನ್ನು ಬದಲಾಯಿಸುತ್ತೇನೆ ಎಂದು ಪ್ರಧಾನಿ ಭಾವಿಸುತ್ತಾರೆ. ಇದು ಪ್ರಧಾನಿಯ ಮನಸ್ಸಿನಲ್ಲಿ ಇರುವ ಗೊಂದಲವಾಗಿದೆ' ಎಂದು ರಾಹುಲ್ ಗಾಂಧಿ ಕಳೆದ ವಾರ ತಮ್ಮ ಸಂಸದೀಯ ಕ್ಷೇತ್ರವಾದ ವಯನಾಡ್‌ಗೆ ಭೇಟಿ ನೀಡಿದ ಸಂದರ್ಭದಲ್ಲಿ ಹೇಳಿದ್ದರು. ಹಣಕಾಸಿನ ಅಪರಾಧಗಳನ್ನು ತನಿಖೆ ಮಾಡುವ ಸಂಸ್ಥೆಯು ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಸೋನಿಯಾ ಗಾಂಧಿ ಕುಟುಂಬದ ಪಾತ್ರದ ಬಗ್ಗೆ ತನಿಖೆ ನಡೆಸುತ್ತಿದೆ. ಇದು ಕಾಂಗ್ರೆಸ್ ಮುಖವಾಣಿಯಾದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಯನ್ನು ನಡೆಸುತ್ತಿದ್ದ AJL (ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್) ಅನ್ನು ಯಂಗ್ ಇಂಡಿಯನ್ಸ್ ಸ್ವಾಧೀನಪಡಿಸಿಕೊಳ್ಳುವುದನ್ನು ಒಳಗೊಂಡಿರುವ ವಿಚಾರವಾಗಿದೆ. ಇದಕ್ಕೂ ಮುನ್ನ ಸಂಸ್ಥೆಯು ತನಿಖೆಯ ಭಾಗವಾಗಿ ಹಿರಿಯ ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ಪವನ್ ಬನ್ಸಾಲ್ ಅವರನ್ನು ವಿಚಾರಣೆಗೆ ಒಳಪಡಿಸಿತ್ತು.