ಕಾಂಗ್ರೆಸ್​ನವರು ಕುಡುಕ ಸೂ.. ಮಕ್ಳು: ಅವಾಚ್ಯ ಪದ ಹಿಂಪಡೆದ ಸಚಿವ ಈಶ್ವರಪ್ಪ

*  ಕಾಂಗ್ರೆಸ್ ನಾಯಕರ ವಿರುದ್ಧ ಅವಾಚ್ಯ ಶಬ್ದ ಬಳಕೆಗೆ ತೀವ್ರ ವಿರೋಧ
* ಕಾಂಗ್ರೆಸ್​ನವರ ಬಗ್ಗೆ ಬಳಸಿದ ಅವಾಚ್ಯ ಪದ ಹಿಂಪಡೆದ ಸಚಿವ ಕೆ ಎಸ್ ಈಶ್ವರಪ್ಪ
* ಆ ಪದವನ್ನು ವಿತ್ ಡ್ರಾ ಮಾಡಿದ್ದೇನೆ ಎಂದ ಈಶ್ವರಪ್ಪ
 

Eshwarappa Takes Back his Statement against congress leaders rbj

ಬೆಳಗಾವಿ, (ಆ.10): ಕಾಂಗ್ರೆಸ್ ನಾಯಕರ ವಿರುದ್ಧ ಅವಾಚ್ಯ ಶಬ್ದ ಬಳಕೆಗೆ ತೀವ್ರ ವಿರೋಧ ವ್ಯಕ್ತವಾದ ಹಿನ್ನಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್  ಸಚಿವ ಕೆ.ಎಸ್.ಈಶ್ವರಪ್ಪ ತಮ್ಮ ಹೇಳಿಕೆಯನ್ನು ವಾಪಸ್ ಪಡೆದುಕೊಂಡಿದ್ದಾರೆ.

ಬೆಳಗಾವಿಯಲ್ಲಿ ಇಂದು (ಆ.10) ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಈಶ್ವರಪ್ಪ, ಕಾಂಗ್ರೆಸ್ ನಾಯಕರ ವಿರುದ್ಧ ಸಿಟ್ಟಿನ ಭರದಲ್ಲಿ ಆಡಿದ್ದ 'ಆ ಮಾತನ್ನು' ವಾಪಸ್ ಪಡೆದಿದ್ದೇನೆ. ಸಿಟ್ಟಿನ ಭರದಲ್ಲಿ ನಾನು ಆ ರೀತಿಯಾಗಿ ಹೇಳಿಕೆ ನೀಡಿದ್ದೇನೆ. ನಾನು ಆ ಪದವನ್ನು ವಾಪಸ್ ಪಡೆಯುತ್ತೇನೆ ಎಂದರು.

ಹೊಡೆದು ಒಂದಕ್ಕೆ ಎರಡು ತೆಗೆದುಬಿಡಿ, ಪ್ರತೀಕಾರದ ಕಿಚ್ಚು ಹೊತ್ತಿಸಿದ ಈಶ್ವರಪ್ಪ

ಶೌಚಾಲಯಕ್ಕೆ ಮೋದಿ ಹೆಸರಿಡಬೇಕೆನ್ನುವುದು ಒಪ್ಪಬೇಕಾ? ಕಾಂಗ್ರೆಸ್‌ನವರ ಆ ಹೇಳಿಕೆಯನ್ನು ನಾವು ಒಪ್ಪಬೇಕಾ? ಅದಕ್ಕೆ ನಾನು ತಕ್ಷಣ ಆ ರೀತಿ ಹೇಳಕೆಯನ್ನು ನೀಡಿದೆ ಎಂದು ಹೇಳಿದರು.

ಸುಲಭ ಶೌಚಾಲಯಗಳಿಗೆ ನರೇಂದ್ರ ಮೋದಿ ಹೆಸರಿಡಬೇಕು ಎಂದು ಹರಿಪ್ರಸಾದ್ರಂತಹ ವ್ಯಕ್ತಿ ಹೇಳಿದಮೇಲೆ ನನಗೂ ಸಿಟ್ಟು ಬಂತು. ನಾನು ಹೇಳಿದ್ದು ಹೌದು, ಆ ಒಂದು ಪದ ಬಳಸಿದ್ದು ತಪ್ಪೇ. ಸಿಟ್ಟಿನ ಭರದಲ್ಲಿ ಹೇಳಿ ಆ ಪದವನ್ನು ವಿತ್ ಡ್ರಾ ಮಾಡಿದ್ದೇನೆ ಎಂದು ಅವರು ಸ್ಪಷ್ಟಪಡಿಸಿದರು.

 ಹಿಂದೆ ಭಾರತೀಯ ಜನಸಂಘ ಅಧ್ಯಕ್ಷ ದೀನದಯಾಳ ಉಪಾಧ್ಯಾಯ ಕಗ್ಗೊಲೆ ಆಯಿತು. ಆಗ ನಮ್ಮ ಹತ್ತಿರ ಶಕ್ತಿ ಇರಲಿಲ್ಲ. ಆಗ ಇಡೀ ರಾಷ್ಟ್ರೀಯ ನಾಯಕರು ಶಾಂತಿಯಿಂದ ಇರೀ ಎಂದರು. ಕೇರಳದಲ್ಲಿ ಆರ್‌ಎಸ್‌ಎಸ್ ಕಚೇರಿ ಮೇಲೆ ಅದೇ ರೀತಿ ದಾಳಿ ಮುಂದುವರಿಯಿತು. ಆಗ ನಮ್ಮ ಹಿರಿಯರು ಯಾವುದೇ ಕಾರಣಕ್ಕೂ ಸುಮ್ಮನಿರಬೇಡಿ. ನೀವಾಗೆ ನೀವು ಯಾರನ್ನೂ ಹೊಡಿಬೇಡಿ, ನಿಮ್ಮ ಹೊಡೆದವರನ್ನು ಬಿಡಬೇಡಿ ಫೇಸ್ ವಿತ್ ಸೇಮ್ ಸ್ಟಿಕ್ ಎಂದು ಹೇಳಿದ್ದರು. ಇದನ್ನು ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ನಾನು ಹೇಳಿದ್ದು ಎಂದು ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡರು.

Latest Videos
Follow Us:
Download App:
  • android
  • ios