ನಾವು ಕೇಳಿದ್ದರ ಕಾಲು ಭಾಗ ಬರ ಪರಿಹಾರವನ್ನೂ ಕೊಟ್ಟಿಲ್ಲ: ಸಿಎಂ ಸಿದ್ದರಾಮಯ್ಯ
ಸುಪ್ರೀಂ ಕೋರ್ಟಿನ ಸೂಚನೆಯ ಮೇರೆಗೆ ಕೇಂದ್ರ ಸರ್ಕಾರ 3464 ಕೋಟಿ ರು. ಬರ ಪರಿಹಾರ ನೀಡುತ್ತಿದ್ದು, ಇದು ರಾಜ್ಯ ಸರ್ಕಾರ ಸಲ್ಲಿಸಿದ ಮನವಿಯ ಕಾಲು ಭಾಗವೂ ಇಲ್ಲ. ಈ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ಮುಂದಿನ ಕ್ರಮದ ಬಗ್ಗೆ ನಿರ್ಧರಿಸಲಾಗುವುದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಸಮಾಧಾನ ಹೊರಹಾಕಿದ್ದಾರೆ.
ಕಲಬುರಗಿ (ಏ.28): ಸುಪ್ರೀಂ ಕೋರ್ಟಿನ ಸೂಚನೆಯ ಮೇರೆಗೆ ಕೇಂದ್ರ ಸರ್ಕಾರ 3464 ಕೋಟಿ ರು. ಬರ ಪರಿಹಾರ ನೀಡುತ್ತಿದ್ದು, ಇದು ರಾಜ್ಯ ಸರ್ಕಾರ ಸಲ್ಲಿಸಿದ ಮನವಿಯ ಕಾಲು ಭಾಗವೂ ಇಲ್ಲ. ಈ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ಮುಂದಿನ ಕ್ರಮದ ಬಗ್ಗೆ ನಿರ್ಧರಿಸಲಾಗುವುದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಸಮಾಧಾನ ಹೊರಹಾಕಿದ್ದಾರೆ. ಕಲಬುರಗಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಎನ್‌ಡಿಆರ್‌ಎಫ್ ಮಾರ್ಗಸೂಚಿಯಂತೆ ರಾಜ್ಯ 18,172 ಕೋಟಿ ರು. ಪರಿಹಾರ ಕೇಳಿದ್ದೇವೆ.
48 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ, 35 ಸಾವಿರ ಕೋಟಿ ರು.ನಷ್ಟು ಬೆಳೆ ನಷ್ಟವಾಗಿದೆ. ಆದರೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ವಿತ್ತ ಮಂತ್ರಿ ನಿರ್ಮಲಾ ಸೀತಾರಾಂ ಅವರು ರಾಜ್ಯ ವಿಳಂಬವಾಗಿ ಮನವಿ ಸಲ್ಲಿಸಿದೆ ಎಂದು ಸುಳ್ಳು ಹೇಳಿದ್ದಾರೆ ಎಂದರು. ಬರ ಪರಿಹಾರ ವಿಚಾರದಲ್ಲಿ ರಾಜ್ಯ ಸರ್ಕಾರ ಸುಪ್ರಿಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಸುಪ್ರಿಂ ಕೋರ್ಟ್ ಸಮಸ್ಯೆಯನ್ನು ಬೇಗ ಬಗೆಹರಿಸುವಂತೆ ನಿರ್ದೇಶನ ನೀಡಿದ ಬಳಿಕ ಕೇಂದ್ರ ಈಗ ₹3454 ಕೋಟಿ ಬಿಡುಗಡೆ ಮಾಡಿದೆ, ಇದು ಸಾಕಾಗುವುದಿಲ್ಲ. ನಮ್ಮ ಪ್ರಾಸ್ತಾವನೆಗೆ ಹೋಲಿಸಿದರೆ 1/4 ರಷ್ಟು ಕೂಡಾ ಆಗುವುದಿಲ್ಲ ಎಂದರು.
ರಾಮೇಶ್ವರಂ ಕೆಫೆಬಾಂಬ್ ಸ್ಫೋಟಕ್ಕೆ ಶಂಕಿತರು ಸಾಮಗ್ರಿ ಖರೀದಿಸಿದ್ದು ಚೆನ್ನೈನಲ್ಲಿ!
ಡಿಕೆಶಿ ಹಾಗೂ ನನ್ನ ನಡುವೆ ಭಿನ್ನಮತವಿಲ್ಲ: ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಮಧ್ಯೆ ಶೀತಲ ಸಮರ ನಡೆದಿದೆ ಎನ್ನುವ ಅಸ್ಸಾಂ ಸಿಎಂ ಹಿಮಂಥ ಬಿಸ್ವಾ ಶರ್ಮ ಹೇಳಿಕೆ ಪ್ರತಿಕ್ರಿಯಿಸಿದ ಸಿಎಂ, ಆಸ್ಸಾಂ ಸಿಎಂಗೆ ಇಲ್ಲಿನ ವಿಚಾರ ಗೊತ್ತಿಲ್ಲ. ತಮ್ಮ ಹಾಗೂ ಶಿವಕುಮಾರ್ ಮಧ್ಯೆ ಯಾವುದೇ ಶೀತಲ ಸಮರವಿಲ್ಲ ಎಂದು ಸ್ಪಷ್ಟಪಡಿಸಿದರು. ನಾವೆಲ್ಲ ಒಗ್ಗಟ್ಟಾಗಿದ್ದೇವೆ, ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳು ಜನರಿಗೆ ತಲುಪಿವೆ. ಅವರು ಬುದ್ಧಿವಂತರಿದ್ದು ನಮಗೆ ಆಶೀರ್ವಾದ ಮಾಡಲಿದ್ದಾರೆ ಎನ್ನುವ ವಿಶ್ವಾಸವಿದೆ ಎಂದರು.