Asianet Suvarna News Asianet Suvarna News

ಇಂದೇ ಎಲೆಕ್ಷನ್‌ ನಡೆದರೂ ಬಿಜೆಪಿಗೆ 135 ಸ್ಥಾನ ಬರುತ್ತೆ : ಬಿಎಸ್‌ವೈ

ಇವತ್ತು ವಿಧಾನಸಭಾ ಚುನಾವಣೆ ನಡೆದರೆ 135 ಕ್ಕಿಂತ ಹೆಚ್ಚಿನ ಸೀಟನ್ನು ಗೆದ್ದು ಬಿಜೆಪಿ ರಾಜ್ಯದಲ್ಲಿ ಆಡಳಿತ ಮಾಡುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ವಿಶ್ವಾಸದಿಂದ ನುಡಿದರು.

Even if elections are held today BJP will get 135 seats says BSY at bengaluru rav
Author
First Published Nov 30, 2023, 7:36 AM IST

ಶಿವಮೊಗ್ಗ (ನ.30) : ಇವತ್ತು ವಿಧಾನಸಭಾ ಚುನಾವಣೆ ನಡೆದರೆ 135 ಕ್ಕಿಂತ ಹೆಚ್ಚಿನ ಸೀಟನ್ನು ಗೆದ್ದು ಬಿಜೆಪಿ ರಾಜ್ಯದಲ್ಲಿ ಆಡಳಿತ ಮಾಡುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ವಿಶ್ವಾಸದಿಂದ ನುಡಿದರು.

ಜಿಲ್ಲಾ ಬಿಜೆಪಿ ವತಿಯಿಂದ ನಗರದ ಪ್ರೇರಣಾ ಸಭಾಂಗಣದಲ್ಲಿ ಬುಧವಾರ ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರರಿಗೆ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ವಿಜಯೇಂದ್ರ ರಾಜ್ಯದ ಅಧ್ಯಕ್ಷರಾದ ಮೇಲೆ ರಾಜ್ಯದ ಉದ್ದಗಲಕ್ಕೆ ಅಭೂತಪೂರ್ವ ಸ್ವಾಗತ ಸಿಗುತ್ತಿದೆ. ಕಾರ್ಯಕರ್ತರಲ್ಲಿ ಉತ್ಸಾಹ ತುಂಬಿ ತುಳುಕುತ್ತಿದೆ ಎಂದರು.

ರಾಜ್ಯ ಸರ್ಕಾರ ಹಿಟ್ ವಿಕೆಟ್ ಆಗಬಹುದು: ಎಚ್‌ಡಿಕೆ ವಾರ್ನ್!

ವಿಜಯೇಂದ್ರ ಅಧ್ಯಕ್ಷ ಆಗುತ್ತಾರೆ ಎಂದು ಯಾರೂ ನಿರೀಕ್ಷೆ ಮಾಡಿರಲಿಲ್ಲ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಜೀ ಅವರು ದೂರವಾಣಿ ಮೂಲಕ ಮಾತನಾಡಿ, ಈ ವಿಷಯದ ಬಗ್ಗೆ ಮಾತನಾಡಿದಾಗ ನಾನೂ ನಂಬಿರಲಿಲ್ಲ. ವಿಜಯೇಂದ್ರ ಬಂದು ಹೇಳಿದ ಮೇಲೆಯೇ ನಾನು ನಂಬಿದ್ದು. ಮಾಧ್ಯಮದಲ್ಲಿ ಬಂದ ವರದಿ ಆಧಾರದ ಮೇಲೆ ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷರಾಗಿ ನೇಮಕ ಮಾಡಿದ್ದಾರೆ ಎಂದರು.

ಈಗ ಚುನಾವಣೆ ನಡೆದರೂ ಸ್ಪಷ್ಟ ಬಹುಮತ ಬರೋದು ನಿಶ್ಚಿತ. ಆಗಿರುವ ತಪ್ಪನ್ನು ಸರಿಪಡಿಸಿಕೊಂಡು, ಮುಂದೆ ವಿಜಯೇಂದ್ರ ನೇತೃತ್ವದಲ್ಲಿ ಪಕ್ಷವನ್ನು ಬಲಪಡಿಸಿ ಲೋಕಸಭಾ ಚುನಾವಣೆಯಲ್ಲಿ 28ಕ್ಕೆ 28 ಸ್ಥಾನಗಳನ್ನೂ ಗೆಲ್ಲಬೇಕು ಎಂದು ಸಂಕಲ್ಪ ಮಾಡಬೇಕಿದೆ ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.

ಯುವಕರಿಗೆ ವಿಜಯೇಂದ್ರ, ಹಿರಿಯರಿಗೆ ನಾನು ಸ್ಫೂರ್ತಿ - ಆರ್ ಅಶೋಕ್

Follow Us:
Download App:
  • android
  • ios