ಕಾಂಗ್ರೆಸ್‌ ಅಧಿಕಾರಕ್ಕೆ ಬಂದಾಗಲೆಲ್ಲಾ ಹಿಂದುಗಳ ಹತ್ಯೆ: ಮಾಜಿ ಸಚಿವ ಶ್ರೀರಾಮುಲು

ರಾಜ್ಯದಲ್ಲಿ ಹಿಂದೂ ಕಾರ್ಯಕರ್ತರ ಹತ್ಯೆ ಶುರುವಾಗಿದೆ. ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ರಾಜ್ಯದ ಎಲ್ಲೆಡೆ ಕೊಲೆ, ದೌರ್ಜನ್ಯ ನಡೆಯುತ್ತಿದೆ. ಮುಖ್ಯಮಂತ್ರಿಗಳ ಕ್ಷೇತ್ರದಲ್ಲಿಯೇ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಅಂದ ಮೇಲೆ ರಾಜ್ಯದ ಇತರೆ ಭಾಗಗಳ ಪರಿಸ್ಥಿತಿ ಹೇಗಿರಬೇಡ ಯೋಚಿಸಿ ಎಂದ ಮಾಜಿ ಸಚಿವ ಬಿ. ಶ್ರೀರಾಮುಲು 
 

Every Time Congress Comes to Power  in Karnataka Hindus Killed Says B Sriramulu grg

ಮೈಸೂರು(ಜು.13): ರಾಜ್ಯದಲ್ಲಿ ಕಾನೂನನ್ನು ಗಂಟು ಮೂಟೆಕಟ್ಟಿ ಬಿಸಾಕಲಾಗಿದೆ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದಾಗಲೆಲ್ಲಾ ಹಿಂದೂ ಕಾರ್ಯಕರ್ತರ ಹತ್ಯೆಯಾಗಿದೆ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ಆರೋಪಿಸಿದರು.

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಹಿಂದೂ ಕಾರ್ಯಕರ್ತರ ಹತ್ಯೆ ಶುರುವಾಗಿದೆ. ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ರಾಜ್ಯದ ಎಲ್ಲೆಡೆ ಕೊಲೆ, ದೌರ್ಜನ್ಯ ನಡೆಯುತ್ತಿದೆ. ಮುಖ್ಯಮಂತ್ರಿಗಳ ಕ್ಷೇತ್ರದಲ್ಲಿಯೇ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಅಂದ ಮೇಲೆ ರಾಜ್ಯದ ಇತರೆ ಭಾಗಗಳ ಪರಿಸ್ಥಿತಿ ಹೇಗಿರಬೇಡ ಯೋಚಿಸಿ ಎಂದರು.

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಿಂದ ಪ್ರಿಯಾಂಕ ಗಾಂಧಿ ಸ್ಪರ್ಧಿಸ್ತಾರಾ?

ರಾಜ್ಯದಲ್ಲಿ ಹಿಂದೂ ಕಾರ್ಯಕರ್ತರಿಗೆ, ಸ್ವಾಮೀಜಿಗಳಿಗೆ ರಕ್ಷಣೆ ಇಲ್ಲದಂತಾಗಿದೆ. ಕಾಂಗ್ರೆಸ್‌ ಸರ್ಕಾರ ಬಂದಾಗಲೆಲ್ಲಾ ರಾಜ್ಯದ ಒಳಗಿನ ಜಿಹಾದಿ ಮನಃಸ್ಥಿತಿ ಇರೋ ಜನ ಎದ್ದು ಕೂರುವುದರಿಂದ ಕೊಲೆಗಳು ನಡೆಯುತ್ತವೆ. ವೇಣುಗೋಪಾಲ ನಾಯಕನ ಕೊಲೆ ಪೂರ್ವ ನಿಯೋಜಿತವಾದದ್ದು ಎಂದು ಅವರು ಆರೋಪಿಸಿದರು.

ವೇಣುಗೋಪಾಲ ನಾಯಕನ ಹತ್ಯೆ ಬಳಿಕ ಅವರ ಕುಟುಂಬಕ್ಕೆ ಸ್ಪಂದಿಸುವ ಕೆಲಸವನ್ನು ಜಿಲ್ಲಾ ಉಸ್ತುವಾರಿ ಸಚಿವರೂ ಮಾಡಿಲ್ಲ. ಮುಖ್ಯಮಂತ್ರಿ ಆದಿಯಾಗಿ ಎಲ್ಲರೂ ಕಣ್ಮುಚ್ಚಿ ಕುಳಿತಿದ್ದಾರೆ ಎಂದು ಅವರು ಟೀಕಿಸಿದರು.

Latest Videos
Follow Us:
Download App:
  • android
  • ios