ಸಂಕಷ್ಟದಲ್ಲಿರುವ ರೈತರಿಗೆ ನೈತಿಕಸ್ಥೈರ್ಯ ಹೇಳುವುದನ್ನು ಬಿಟ್ಟು ರಾಜ್ಯಸರ್ಕಾರ ಸಿಎಲ್‌ಪಿ ಮೀಟಿಂಗ್, ಸಂಪುಟದ ಗೊಂದಲದಲ್ಲಿ ಮುಳುಗಿದೆ. ಕಾಂಗ್ರೆಸ್ ಸರ್ಕಾರದ ಸಚಿವರು ಹಾಗೂ ಶಾಸಕರ ನಡುವೆಯೇ ಸಮನ್ವಯತೆ ಇಲ್ಲ. ಸ್ವತಃ ಮುಖ್ಯಮಂತ್ರಿಗಳೇ ಶಾಸಕರನ್ನು ಸಮಾಧಾನಪಡಿಸಲು ಪ್ರಯತ್ನಿಸಿದರೂ ಸಾಧ್ಯವಾಗುತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟೀಕಿಸಿದರು.
ಹಾವೇರಿ (ಜು.29): ಸಂಕಷ್ಟದಲ್ಲಿರುವ ರೈತರಿಗೆ ನೈತಿಕಸ್ಥೈರ್ಯ ಹೇಳುವುದನ್ನು ಬಿಟ್ಟು ರಾಜ್ಯಸರ್ಕಾರ ಸಿಎಲ್‌ಪಿ ಮೀಟಿಂಗ್, ಸಂಪುಟದ ಗೊಂದಲದಲ್ಲಿ ಮುಳುಗಿದೆ. ಕಾಂಗ್ರೆಸ್ ಸರ್ಕಾರದ ಸಚಿವರು ಹಾಗೂ ಶಾಸಕರ ನಡುವೆಯೇ ಸಮನ್ವಯತೆ ಇಲ್ಲ. ಸ್ವತಃ ಮುಖ್ಯಮಂತ್ರಿಗಳೇ ಶಾಸಕರನ್ನು ಸಮಾಧಾನಪಡಿಸಲು ಪ್ರಯತ್ನಿಸಿದರೂ ಸಾಧ್ಯವಾಗುತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟೀಕಿಸಿದರು. ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಿಎಲ್‌ಪಿ ಮೀಟಿಂಗ್ ಅವರ ಆಂತರಿಕ ವಿಚಾರ.
ಆದರೆ, ಸರ್ಕಾರ ರಚನೆಯಾದ ಮೊದಲ ದಿನದಿಂದಲೂ ಸಿಎಂ ಆಯ್ಕೆ ಮಾಡೋದ್ರಿದ ಹಿಡಿದು ಎಲ್ಲದರಲ್ಲೂ ಸರ್ಕಾರ ಗೊಂದಲದಲ್ಲಿದೆ. ಶಾಸಕರು, ಮಂತ್ರಿಗಳ ನಡುವೆ ಸಮನ್ವಯತೆಯೇ ಇಲ್ಲ. ಒಟ್ಟಾರೆ ಇಡೀ ಸರ್ಕಾರವೇ ಗೊಂದಲದಲ್ಲಿದೆ ಎಂದು ವ್ಯಂಗ್ಯವಾಡಿದರು. ಇನ್ನು, ಇತ್ತೀಚೆಗೆ ಸಿಎಂ ಸಿದ್ದರಾಮಯ್ಯ ಹಾವೇರಿಗೆ ಬಂದಾಗ ಕೆಲವು ಸೂಚ್ಯಂಕದಲ್ಲಿ ಹಾವೇರಿ ಹಿಂದಿದೆ ಎಂದಿದ್ದಾರೆ. ಕಳೆದ 5 ವರ್ಷದ ಹಿಂದಿನ ವರದಿ ಈಗ ಬಂದಿದೆ. ನಾನು ಸಿಎಂ ಆಗಿದ್ದಾಗ ಆರೋಗ್ಯ, ಶಿಕ್ಷಣಕ್ಕೆ ದಾಖಲೆ ಪ್ರಮಾಣದ ಹಣ ಕೊಟ್ಟಿದ್ದೇನೆ. 2013ರಲ್ಲಿ ಮೆಡಿಕಲ್ ಕಾಲೇಜು ಗದಗಿಗೆ ಸ್ಥಳಾಂತರ ಮಾಡಿದ್ದೀರಿ.
ಮೊಹರಂ ಹಬ್ಬ: ಚಿಕ್ಕಮಗಳೂರಿನಲ್ಲಿ ಹಿಂದೂ ಮುಸ್ಲಿಂ ಭಾವೈಕ್ಯತೆಯ ದ್ಯೋತಕ
ಜಿಲ್ಲೆಗೆ ಮೆಡಿಕಲ್ ಕಾಲೇಜು ಕೊಡಲಿಕ್ಕೆ ನಾವೇ ಬರಬೇಕಾಯಿತು. ಯಡಿಯೂರಪ್ಪ ಮೆಡಿಕಲ್ ಕಾಲೇಜಿಗೆ ಅನುಮೋದನೆ ಕೊಟ್ಟರು. ಸಿದ್ದರಾಮಯ್ಯ ಕಾಲದಲ್ಲಿ ಕಾಲೇಜಿಗೆ ಒಂದು ನಯಾ ಪೈಸಾ ಕೊಡಲಿಲ್ಲ ಅನುದಾನ ಎಂದು ಮುಖ್ಯಮಂತ್ರಿಗೆ ತಿರುಗೇಟು ನೀಡಿದರು. ಒಟ್ಟಾರೆ ನಮ್ಮ ಸರ್ಕಾರ ಮಾಡಿರುವ ಅಭಿವೃದ್ಧಿ ಕಾರ‍್ಯ ನಿಲ್ಲಿಸದಿದ್ದರೆ ಎಲ್ಲಾ ಸೂಚ್ಯಂಕದಲ್ಲೂ ಹಾವೇರಿ ಅಭಿವೃದ್ಧಿಯಾಗಲಿದೆ ಎಂದರಲ್ಲದೆ, ಮೆಡಿಕಲ್ ಕಾಲೇಜು ನಿರ್ಮಾಣ ಪ್ರಕರಣ ಎಸ್‌ಐಟಿಗೆ ಕೊಡುತ್ತೇವೆ ಎಂದಿದ್ದಾರೆ ದಯವಿಟ್ಟು ಕೊಡಲಿ. ಅದಕ್ಕೆ ನಮ್ಮದೇನೂ ಅಭ್ಯಂತರ ಇಲ್ಲ ಎಂದರು.
ಡ್ಯಾಮೇಜ್ ಕಂಟ್ರೋಲ್‌ಗೆ ಡಿಕೆಶಿ ಸಿಂಗಾಪುರ ಕತೆ: ಕಾಂಗ್ರೆಸ್ ಮುಖಂಡ ಬಿ.ಕೆ.ಹರಿಪ್ರಸಾದ್ ಹೇಳಿಕೆಯಿಂದ ಸರ್ಕಾರಕ್ಕೆ ಆಗಿರುವ ಡ್ಯಾಮೇಜ್ ನಿಯಂತ್ರಣ ಮಾಡಲು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸಿಂಗಾಪುರ ಷಡ್ಯಂತ್ರದ ಕತೆ ಹೇಳಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಲೇವಡಿ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಶಿವಕುಮಾರ್ ಮುಂದೆ ತಾವು ಮಾಡುವ ಕಾರ್ಯತಂತ್ರದ ಬಗ್ಗೆ ಈಗ ಮಾತನಾಡುತ್ತಿದ್ದಾರೆ. ಇದು ಅವರಲ್ಲಿಯೇ ಸಮಾಧಾನ ಇಲ್ಲ ಎನ್ನುವುದು ತೋರಿಸಿದೆ. ಬಿಜೆಪಿಯ ಹೈಕಮಾಂಡ್ ಈ ಸರ್ಕಾರ ಅಸ್ಥಿರಗೊಳಿಸುವ ಬಗ್ಗೆ ಆಲೋಚಿಸಿಲ್ಲ’ ಎಂದು ಸ್ಪಷ್ಟಪಡಿಸಿದರು.
ಅಧಿಕ ಭಾರದ ಕಲ್ಲು ಸಾಗಾಣಿಕೆ ವಿರುದ್ಧ ಕ್ರಮಕ್ಕೆ ಶಾಸಕ ಸುಬ್ಬಾರೆಡ್ಡಿ ಸೂಚನೆ
‘ಶಿವಕುಮಾರ್ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ನಡುವೆ ಭಿನ್ನಾಭಿಪ್ರಾಯ ಇದೆ ಎನ್ನುವುದು ಸತ್ಯ. ಶಿವಕುಮಾರ್ ಸರ್ಕಾರದ ಅಸ್ಥಿರತೆಯ ಬಗ್ಗೆ ಎರಡು ಬಾರಿ ಬಹಿರಂಗವಾಗಿ ಹೇಳಿಕೆ ನೀಡಿದರೂ ಮುಖ್ಯಮಂತ್ರಿಗಳು ತಮಗೆ ಮಾಹಿತಿ ಇಲ್ಲ ಅಂತಾರೆ. ಹೀಗೆಂದರೆ ಇಬ್ಬರ ನಡುವೆ ಹೊಂದಾಣಿಕೆ ಇಲ್ಲ ಎಂದೇ ಅರ್ಥವಾಗುತ್ತದೆ’ ಎಂದರು. ‘ಸಿದ್ದರಾಮಯ್ಯ ಗ್ಯಾರಂಟಿಗಳಿಗೆ ಹಣ ನೀಡುವ ಸಲುವಾಗಿ ಅಭಿವೃದ್ಧಿಗೆ ಅನುದಾನ ಇಲ್ಲ ಎಂದು ಹೇಳಿದ್ದಾರೆ. ವರ್ಗಾವಣೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿರುವುದು ಸ್ಪಷ್ಟವಾಗಿದೆ. ಶಾಸಕರೇ ಬಹಿರಂಗವಾಗಿಯೇ ಹೇಳಿದ್ದಾರೆ. ಸಚಿವರ ವಿರುದ್ಧ ಅಸಮಾಧಾನ ಹೊರ ಹಾಕಿದ್ದಾರೆ. ಆದರೆ, ಸಿದ್ದರಾಮಯ್ಯ ಅವರು ಅರ್ಧ ಸತ್ಯ ಹೇಳಿದ್ದಾರೆ’ ಎಂದು ತಿಳಿಸಿದರು.
