Asianet Suvarna News Asianet Suvarna News

40% ಕಮಿಷನ್‌ ತನಿಖೆ ಹಿಂದೆ ರಾಜಕೀಯ ಸೇಡು: ಬೊಮ್ಮಾಯಿ ಕಿಡಿ

ಶೇ.40ರಷ್ಟು ಕಮಿಷನ್‌ ಆರೋಪದ ತನಿಖೆ ಹಿಂದೆ ರಾಜಕೀಯವಾಗಿ ಸೇಡು ತೀರಿಸಿಕೊಳ್ಳುವ ಹುನ್ನಾರ ಇದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

Ex CM Basavaraj Bommai Slams On Congress Govt gvd
Author
First Published Aug 28, 2023, 10:19 AM IST

ಬೆಂಗಳೂರು (ಆ.28): ಶೇ.40ರಷ್ಟು ಕಮಿಷನ್‌ ಆರೋಪದ ತನಿಖೆ ಹಿಂದೆ ರಾಜಕೀಯವಾಗಿ ಸೇಡು ತೀರಿಸಿಕೊಳ್ಳುವ ಹುನ್ನಾರ ಇದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶೇ.40ರಷ್ಟು ಕಮಿಷನ್‌, ಕೋವಿಡ್‌ ಅಕ್ರಮಗಳ ತನಿಖೆಗೆ ವಿಚಾರಣಾ ಆಯೋಗಗಳ ರಚನೆ ಸಂಬಂಧ ಪ್ರತಿಕ್ರಿಯಿಸಿ, ವಿಚಾರಣೆ ಆಗಲಿ, ತನಿಖೆ ಆಗಲಿ, ಇದರಲ್ಲಿ ಆಶ್ಚರ್ಯವಿಲ್ಲ ಎಂದರು. ಈಗಾಗಲೇ ಪಿಎಸ್‌ಐ ನೇಮಕಾತಿ ಪ್ರಕರಣದ ತನಿಖೆ ನಡೆದು ಚಾರ್ಜ್‌ಶೀಟ್‌ ಆಗಿದೆ. 

ಇವರು ಚಾರ್ಜ್‌ಶೀಟ್‌ನಲ್ಲಿ ಇರುವವರ ರಕ್ಷಣೆ ಮಾಡುತ್ತಾರಾ ಅಥವಾ ಇನ್ನೊಂದು ಆಯಾಮದಲ್ಲಿ ತನಿಖೆ ಮಾಡುತ್ತಾರಾ? ಪಿಎಸ್‌ಐ ಪ್ರಕರಣದ ತನಿಖೆಯನ್ನೂ ಪೊಲೀಸರೇ ಮಾಡಬೇಕು. ಯಾವ ರೀತಿ ತನಿಖೆ ಮಾಡುತ್ತಾರೆ ಕಾದು ನೋಡೋಣ ಎಂದು ಹೇಳಿದರು. ಶೇ.40ರಷ್ಟು ಕಮಿಷನ್‌ ಆರೋಪಲ್ಲಿ ನಿರ್ದಿಷ್ಟಪ್ರಕರಣ ಇಲ್ಲ. ದಾಖಲೆ ಇಲ್ಲ. ಎರಡು ವರ್ಷವಾದರೂ ಅವರು ದಾಖಲೆ ಕೊಟ್ಟಿಲ್ಲ. ಲೋಕಾಯುಕ್ತದ ಎದುರು ಟೆಂಡರ್‌ಗೆ ಸಂಬಂಧಿಸಿದ ಹಲವು ಪ್ರಕರಣಗಳು ಇವೆ. 

ಆ.30ರ ಬಳಿಕ ಖಾಸಗಿ ಸಾರಿಗೆ ಸಂಸ್ಥೆಗಳಿಂದ ಬಂದ್‌?: ಸಿಎಂ ಸಿದ್ದುಗೆ 3 ದಿನಗಳ ಗಡುವು

ಇವುಗಳನ್ನೂ ತನಿಖೆಗೆ ಕೊಡುತ್ತಾರಾ? ಹೊಸ ದೂರು ನೀಡಿದರೆ ಇವರು ಸೇರಿಸಿಕೊಳ್ಳುತ್ತಾರಾ ಎಂದು ಪ್ರಶ್ನಿಸಿದರು. ಭ್ರಷ್ಟಾಚಾರ ಯಾವತ್ತಿದ್ದರೂ ಭ್ರಷ್ಟಾಚಾರವೇ. ಅವರ ಕಾಲದ ಆರೋಪಗಳನ್ನು ತನಿಖೆ ಮಾಡುತ್ತಾರಾ? ನಮ್ಮ ಕಾಲದ ಆರೋಪಗಳನ್ನು ತನಿಖೆ ಮಾಡಿ ಅಂತ ಮುಕ್ತವಾಗಿ ಹೇಳಿದ್ದೇವೆ. ಆದರೆ, ಅವರ ಕಾಲದ ಆರೋಪಗಳ ಬಗ್ಗೆಯೂ ತನಿಖೆ ಮಾಡಲಿ. ಇದಕ್ಕೆ ಹಿಂದೇಟು ಹಾಕುತ್ತಿದ್ದಾರೆ. ಇದರ ಹಿಂದೆ ರಾಜಕೀಯ ಸೇಡು ತೀರಿಸಿಕೊಳ್ಳುವ, ರಾಜಕೀಯವಾಗಿ ದುರುಪಯೋಗಪಡಿಸಿಕೊಳ್ಳುವ ಹುನ್ನಾರ ಇದೆ ಎಂದು ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬಸವರಾಜ ಬೊಮ್ಮಾಯಿ ಕಿಡಿಕಾರಿದರು.

ಬರ ವಿಚಾರದಲ್ಲಿ ಬೊಮ್ಮಾಯಿ ರಾಜಕೀಯ ಸಲ್ಲ: ಬರ ಘೋಷಣೆ ವಿಷಯದಲ್ಲಿ ರಾಜ್ಯದಲ್ಲಿ ಕುಳಿತು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜಕೀಯ ಮಾಡುವುದನ್ನು ಬಿಟ್ಟು ದೆಹಲಿಗೆ ತೆರಳಿ ಬರ ಘೋಷಣೆ ಸಂಬಂಧ ಕೇಂದ್ರದ ಮಾನದಂಡಗಳನ್ನು ಬದಲಿಸುವಂತೆ ಕೇಂದ್ರದ ಮನವೊಲಿಸಿ ರಾಜ್ಯದ ಜನರ ಹಿತ ಕಾಯ್ದುಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಅವರು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಕಿವಿಮಾತು ಹೇಳಿದರು.

ತಾವರಖೇಡದಲ್ಲಿ ಹಕ್ಕುಪತ್ರ ವಿತರಣೆ ಕಾರ್ಯಕ್ರಮದ ನಂತರ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮಳೆಯ ಕೊರತೆ ಉಂಟಾಗಿದೆ. ಬರ ಪ್ರದೇಶವೆಂದು ಘೋಷಣೆ ಮಾಡಲು ಕೇಂದ್ರದ ನಿಮಮಗಳು, ಮಾನದಂಡಗಳು ಅಡ್ಡಿಯಾಗಿವೆ. ಆದ್ದರಿಂದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕರ್ನಾಟಕದಲ್ಲಿ ಕುಳಿತು ರಾಜ್ಯ ಸರ್ಕಾರ ಬರ ಘೋಷಣೆ ಮಾಡಬೇಕು ಎಂದು ಹೇಳಿಕೆ ನೀಡುವ ಮೂಲಕ ರಾಜಕೀಯ ಮಾಡಬಾರದು ಎಂದು ಹೇಳಿದರು.

ಕಲುಷಿತ ಆಹಾರ ಸೇವಿಸಿ ಮೃತಪಟ್ಟ ದಂಪತಿ ಸಾವಿನ ರಹಸ್ಯ ಬಯಲು: ಮಗನೇ ತಂದೆ-ತಾಯಿಗೆ ವಿಷ ಹಾಕಿದ

ರಾಜ್ಯದ ರೈತರ ಹಿತ ಕಾಪಾಡಲು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದೆಹಲಿಗೆ ತೆರಳಿ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವರ ಬಳಿ ಹೋಗಿ ಬರ ಘೋಷಣೆ ಮಾನದಂಡಗಳನ್ನು ಮಾರ್ಪಾಡು ಮಾಡುವಂತೆ ಒತ್ತಾಯಿಸಬೇಕು ಎಂದು ತಿಳಿಸಿದರು. ಕೇಂದ್ರವು ಎನ್‌ಡಿಆರ್‌ಎಫ್‌ ನಿಯಮದ ಪ್ರಕಾರ ಸಹಾಯಕ್ಕೆ ಬರಬೇಕಿದೆ. ಆದರೆ ಕೇಂದ್ರ ರಾಜ್ಯದ ರೈತರ ಸಹಾಯಕ್ಕೆ ಬರುತ್ತಿಲ್ಲ. ಮಾಜಿ ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೆ ರಾಜ್ಯದ ರೈತರ ಹಿತ ರಕ್ಷಣೆ ಮಾಡುವ ಇಚ್ಚೆ ಇದ್ದರೆ ದೆಹಲಿಗೆ ತೆರಳಿ ಕೇಂದ್ರದ ಮನವೊಲಿಸಿ ಬರ ಘೋಷಣೆ ಮಾನದಂಡಗಳನ್ನು ಸರಳೀಕರಣಗೊಳಿಸಬೇಕು ಎಂದು ಕೇಂದ್ರದ ಮೇಲೆ ಒತ್ತಡ ಹೇರಬೇಕು ಎಂದು ತಿಳಿಸಿದರು.

Follow Us:
Download App:
  • android
  • ios