ತಮಿಳುನಾಡಿಗೆ ನೀರು ಹರಿಸಿದರೆ ರೈತರಿಗೆ ಅನ್ಯಾಯ ಮಾಡಿದಂತೆ: ಬೊಮ್ಮಾಯಿ ಕಿಡಿ
‘ರಾಜ್ಯ ಸರ್ಕಾರ ಈಗಾಗಲೇ ತಮಿಳುನಾಡಿಗೆ ಸಾಕಷ್ಟು ನೀರು ಹರಿಸಿದೆ. ಡ್ಯಾಂನಲ್ಲಿ ನೀರು ಇಲ್ಲದಂತೆ ಮಾಡಿಟ್ಟಿದೆ’ ಅಂತಾ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕಿಡಿಕಾರಿದರು.
ಗದಗ (ಸೆ.13) (ಸೆ.13): ‘ರಾಜ್ಯ ಸರ್ಕಾರ ಈಗಾಗಲೇ ತಮಿಳುನಾಡಿಗೆ ಸಾಕಷ್ಟು ನೀರು ಹರಿಸಿದೆ. ಡ್ಯಾಂನಲ್ಲಿ ನೀರು ಇಲ್ಲದಂತೆ ಮಾಡಿಟ್ಟಿದೆ’ ಅಂತಾ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕಿಡಿಕಾರಿದರು. ಗದಗನಲ್ಲಿ ಮಾತ್ನಾಡಿದ ಅವ್ರು, ‘15 ದಿನಗಳ ಕಾಲ ಪ್ರತಿದಿನ 10 ಸಾವಿರ ಕ್ಯುಸೆಕ್ ಹಾಗೂ ಮುಂದಿನ 15 ದಿವಸ 5 ಸಾವಿರ ಕ್ಯುಸೆಕ್ ನೀರು ಹರಿಸಿದ್ದಾರೆ. ಹೀಗಾಗಿ, ಕುಡಿಯಲು ಸಹ ನೀರು ಇಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಸೆ.12ರ ನಂತರ ನೀರು ಹರಿಸುವುದಿಲ್ಲ ಎಂದು ಸುಪ್ರೀಂ ಕೋರ್ಟ್‌ಗೆ ಪ್ರಮಾಣಪತ್ರ ಸಲ್ಲಿಸಿದ್ದಾರೆ. ಸರ್ವಪಕ್ಷದ ಸಭೆಯಲ್ಲೂ ನೀರು ಬಿಡಲ್ಲ ಅನ್ನೋ ನಿರ್ಣಯ ತೆಗೆದುಕೊಳ್ಳಲಾಗಿದೆ.
ಸರ್ಕಾರ ಇದಕ್ಕೆ ಬದ್ಧವಾಗಿರಬೇಕು. ಆಕಸ್ಮಾತ್ ನೀರು ಬಿಟ್ಟಿದ್ದೇ ನಿಜವಾದರೆ ಕಾವೇರಿ ಜಲಾನಯನ ಪ್ರದೇಶದ ರೈತರು ಹಾಗೂ ಜನರಿಗೆ ಸರ್ಕಾರ ದೊಡ್ಡ ಅನ್ಯಾಯ ಮಾಡಿದಂತೆ ಆಗುತ್ತದೆ’ ಎಂದರು. ಲೋಕಸಭಾ ಚುನಾವಣೆಯಲ್ಲಿ ಹಾವೇರಿ– ಗದಗ ಕ್ಷೇತ್ರದಿಂದ ಸ್ಪರ್ಧಿಸುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ‘ಅವೆಲ್ಲ ಊಹಾಪೋಹಗಳು. ನಾನು ಆಕಾಂಕ್ಷಿ ಅಲ್ಲ’ ಎಂದು ತಿಳಿಸಿದರು. ಚೈತ್ರಾ ಕುಂದಾಪುರ ಅವರ ವಂಚನೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ‘ಚೈತ್ರಾ ಅವರು ಯಾರಾರಿಗೆ ಏನೇನು ಹೇಳಿದ್ದಾರೆ ಎಂಬ ಮಾಹಿತಿ ಇಲ್ಲ. ಆದರೆ, ಯಾರೇ ಇರಲಿ ತನಿಖೆ ನಡೆಸಿ, ಸತ್ಯಾಸತ್ಯತೆ ಹೊರಗೆ ತರಬೇಕು’ ಎಂದು ಹೇಳಿದರು.
ಬರಗಾಲ ಘೋಷಣೆಗೆ ಮೂಹೂರ್ತ ತೆಗೆಸುತ್ತಿದ್ದೀರಾ: ಕಾಂಗ್ರೆಸ್ ಸರ್ಕಾರಕ್ಕೆ ಬೊಮ್ಮಾಯಿ ಪ್ರಶ್ನೆ?
ಲೋಕಸಭೆ ಚುನಾವಣೆಗೆ ಸ್ಪರ್ಧೆ: ಲೋಕಸಭಾ ಚುನಾವಣೆಯಲ್ಲಿ ಸ್ಪರ್ದೆ ಮಾಡಲ್ಲ ಎನ್ನುವ ಮೂಲಕ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ರಾಜ್ಯ ರಾಜಕೀಯದಲ್ಲಿ ಮುಂದುವರೆಯುವ ಇಂಗಿತ ವ್ಯಕ್ತಪಡಿಸಿದ್ದಾರೆ. ಬಸವರಾಜ ಬೊಮ್ಮಾಯಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಎಂಬ ಚರ್ಚೆಗೆ ಫುಲ್ ಸ್ಟಾಪ್ ಇಡೋ ಪ್ರಯತ್ನ ಮಾಡಿದ್ದಾರೆ.
ನಾನು ರಾಷ್ಟ್ರ ರಾಜಕಾರಣಕ್ಕೆ ಹೋಗುತ್ತೇನೆ ಎಂದು ಎಲ್ಲಿಯಾದರೂ ಹೇಳಿದ್ದೀನಾ? ಹಾವೇರಿ–ಗದಗ ಲೋಕಸಭಾ ಚುನಾವಣೆಗೆ ನಾನು ಸ್ಪರ್ಧೆ ಮಾಡುತ್ತೇನೆ ಎಂಬುದು ಮಾಧ್ಯಮದ ಸೃಷ್ಟಿ. ನಾನು ಲೋಕಸಭೆ ಚುನಾವಣೆಗೆ ನಿಲ್ಲೋ ಪ್ರಶ್ನೆಯೇ ಇಲ್ಲ. ಅಭ್ಯರ್ಥಿ ಆಯ್ಕೆಯನ್ನು ಕೇಂದ್ರದಲ್ಲಿ ಪಕ್ಷ ತೀರ್ಮಾನಿಸುತ್ತದೆ ಎಂದು ಶಾಸಕ ಬಸವರಾಜ ಬೊಮ್ಮಾಯಿ ಹೇಳಿದರು.ನಗರದ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಶನಿವಾರ ನಡೆದ ಜಿಲ್ಲಾ ಕೋರ್ ಕಮಿಟಿ ಸಭೆಯ ನಂತರ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.
ಮೋದಿ ಅವರೇ ನಿಮ್ಮ ಸಮಯ ಮುಗಿದಿದೆ, ಮುಂದಿನ ಪ್ರಧಾನಿ ರಾಹುಲ್ ಗಾಂಧಿ: ಸಲೀಂ ಅಹ್ಮದ್
ಹಾವೇರಿ–ಗದಗ ಲೋಕಸಭಾ ಕ್ಷೇತ್ರವನ್ನು ಗೆಲ್ಲುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಿದ್ದೇವೆ. ಪಕ್ಷದ ಅಧ್ಯಕ್ಷರು ಪದಾಧಿಕಾರಿಗಳು ಸೇರಿ ಕೋರ್ ಸಮಿತಿ ರಚಿಸಬೇಕು. ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ ಅಭ್ಯರ್ಥಿಗಳ ಜೊತೆ ಚರ್ಚೆ ಮಾಡಿದ್ದೇವೆ. ಬೂತ್ ಮಟ್ಟದಿಂದ ಪಕ್ಷ ಸಂಘಟಿಸಿ, ಯುವಕರಿಗೆ, ಮಹಿಳೆಯರಿಗೆ, ಒಬಿಸಿಯವರಿಗೆ ಹೆಚ್ಚಿನ ಪ್ರಧಾನ್ಯತೆ ಕೊಡಲು ನಿರ್ಣಯ ಕೈಗೊಂಡಿದ್ದೇವೆ ಎಂದು ಮಾಹಿತಿ ನೀಡಿದರು.