ಮುಸ್ಲಿಂ ಓಲೈಕೆಗೆ 31 ವರ್ಷದ ಕೇಸು ಓಪನ್: ರಾಜ್ಯ ಸರ್ಕಾರದ ವಿರುದ್ಧ ಬಿಎಸ್‌ವೈ ಕಿಡಿ
ರಾಜ್ಯ ಕಾಂಗ್ರೆಸ್ ಸರ್ಕಾರ ಅಲ್ಪಸಂಖ್ಯಾತರನ್ನು ತುಷ್ಟಿಗೊಳಿಸಲು 31 ವರ್ಷ ಹಳೆಯ ಪ್ರಕರಣವನ್ನು ಈಗ ತೆರೆದು ಹಿಂದೂ ಕಾರ್ಯಕರ್ತರಿಗೆ ತೊಂದರೆ ನೀಡುತ್ತಿರುವುದು ಖಂಡನೀಯ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಬೆಂಗಳೂರು (ಜ.06): ರಾಜ್ಯ ಕಾಂಗ್ರೆಸ್ ಸರ್ಕಾರ ಅಲ್ಪಸಂಖ್ಯಾತರನ್ನು ತುಷ್ಟಿಗೊಳಿಸಲು 31 ವರ್ಷ ಹಳೆಯ ಪ್ರಕರಣವನ್ನು ಈಗ ತೆರೆದು ಹಿಂದೂ ಕಾರ್ಯಕರ್ತರಿಗೆ ತೊಂದರೆ ನೀಡುತ್ತಿರುವುದು ಖಂಡನೀಯ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ತುಷ್ಟೀಕರಣದ ನಾಟಕ ಬಿಟ್ಟು ಎಲ್ಲ ವರ್ಗದ ಜನರ ಪರ ಕೆಲಸ ಮಾಡಬೇಕು ಎಂದು ಆಗ್ರಹಿಸಿದರು.
ಬಾಬರಿ ಮಸೀದಿ ಕೆಡವಿದ ಮಾರನೇ ದಿನ ಹುಬ್ಬಳ್ಳಿಯಲ್ಲಿ ಹಿಂದಿನ ಪೇಜಾವರ ಶ್ರೀಗಳು, ಶೇಷಾದ್ರಿ ಅವರು ರಾಮನ ಪ್ರತಿಷ್ಠಾಪನೆಗೆ ಬಂದಿದ್ದಾಗ ನಾನೂ ಅವರೊಂದಿಗೆ ಇದ್ದೆ. ಇದೀಗ ಕಾಂಗ್ರೆಸ್ ಸರ್ಕಾರ ದುರುದ್ದೇಶದಿಂದ ನಮ್ಮ ಹಿಂದೂ ಕಾರ್ಯಕರ್ತರಿಗೆ ಕಿರುಕುಳ ನೀಡಲು ಮುಂದಾಗಿದೆ. 31 ವರ್ಷದ ಹಳೆಯ ಪ್ರಕರಣವನ್ನು ಮತ್ತೆ ತೆರೆದು ಹಿಂದೂ ಕಾರ್ಯಕರ್ತ ಶ್ರೀಕಾಂತ ಪೂಜಾರಿ ವಿರುದ್ಧ ಇಲ್ಲಸಲ್ಲದ ಆರೋಪ ಮಾಡುತ್ತಿರುವುದು ಅಕ್ಷಮ್ಯ ಅಪರಾಧ ಎಂದು ಕಿಡಿಕಾರಿದರು.
ಭಾರತ ಈಗಿರುವುದೇ ಹಿಂದೂ ರಾಷ್ಟ್ರ: ವಿಶ್ವಪ್ರಸನ್ನ ತೀರ್ಥ ಶ್ರೀ!
ರೆಸಾರ್ಟ್‌ನಲ್ಲಿ ಬಿಜೆಪಿ ನಾಯಕರ ಚಿಂತನ ಸಭೆ: ಮುಂಬರುವ ಲೋಕಸಭಾ ಚುನಾವಣೆಗೆ ಹೊಸ ವರ್ಷದಲ್ಲಿ ತಯಾರಿ ಆರಂಭಿಸುತ್ತಿರುವ ರಾಜ್ಯ ಬಿಜೆಪಿಯು ಇದೇ ತಿಂಗಳ 8ರಂದು (ಸೋಮವಾರ) ಪಕ್ಷದ ಹಿರಿಯ ಮುಖಂಡರ ಚಿಂತನ ಸಭೆ ಕರೆದಿದೆ. ನಗರದ ಹೊರವಲಯದ ರೆಸಾರ್ಟ್‌ವೊಂದರಲ್ಲಿ ಅಂದು ಬೆಳಗ್ಗೆಯಿಂದ ಸಂಜೆವರೆಗೆ ಸುದೀರ್ಘವಾಗಿ ನಡೆಯುವ ಈ ಸಭೆಯಲ್ಲಿ ಪಾಲ್ಗೊಳ್ಳುವಂತೆ 50ಕ್ಕೂ ಹೆಚ್ಚು ಮುಖಂಡರಿಗೆ ಆಹ್ವಾನ ಹೋಗಿದೆ. ಪಕ್ಷದ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರೂ ಸಭೆಗೆ ಆಗಮಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇದೊಂದು ರೀತಿಯಲ್ಲಿ ಚಿಂತನ ಮಂಥನ ಸಭೆಯಾಗಿದ್ದು, ಕಳೆದ ವಿಧಾನಸಭಾ ಚುನಾವಣೆಯಲ್ಲಿನ ತಪ್ಪುಗಳು ಪುನರಾವರ್ತನೆಯಾಗದಂತೆ ಲೋಕಸಭಾ ಚುನಾವಣೆ ಎದುರಿಸಲು ಅನುಸರಿಸಬೇಕಾದ ಕಾರ್ಯತಂತ್ರಗಳ ಬಗ್ಗೆ ಮುಕ್ತವಾಗಿ ಚರ್ಚೆ ನಡೆಸಲು ಉದ್ದೇಶಿಸಲಾಗಿದೆ. ಈಗಾಗಲೇ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯಾಗಿದ್ದು, ಕ್ಷೇತ್ರಗಳ ಹಂಚಿಕೆ ಆಗಬೇಕಾಗಿದೆ. ಮೈತ್ರಿ ಹಿನ್ನೆಲೆಯಲ್ಲಿ ಉಭಯ ಪಕ್ಷಗಳ ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರ ನಡುವೆ ಹೊಂದಾಣಿಕೆ ಸಮಸ್ಯೆ ಉಂಟಾಗದಂತೆ ಕ್ರಮ ಕೈಗೊಳ್ಳುವ ಬಗ್ಗೆ ಸಮಾಲೋಚನೆ ನಡೆಯಲಿದೆ.
ಭಾರತವನ್ನು ಹಿಂದುರಾಷ್ಟ್ರ ಮಾಡಿಯೇ ತೀರುತ್ತೇವೆ: ಪ್ರಮೋದ್ ಮುತಾಲಿಕ್
ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ ಮೈತ್ರಿ ಪಕ್ಷಗಳು ಗರಿಷ್ಠ ಸ್ಥಾನ ಪಡೆಯುವುದಕ್ಕೆ ಪೂರಕವಾಗಿ ರಣತಂತ್ರ ಕೈಗೊಳ್ಳಲು ತೀರ್ಮಾನಿಸಲಾಗಿದೆ ಎಂದು ಉನ್ನತ ಮೂಲಗಳು ಮಾಹಿತಿ ನೀಡಿವೆ. ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಡಿ.ವಿ.ಸದಾನಂದಗೌಡ, ಬಸವರಾಜ ಬೊಮ್ಮಾಯಿ, ಮಾಜಿ ಉಪಮುಖ್ಯಮಂತ್ರಿಗಳಾದ ಕೆ.ಎಸ್.ಈಶ್ವರಪ್ಪ, ಗೋವಿಂದ ಕಾರಜೋಳ, ವಿಧಾನಮಂಡಲದ ಉಭಯ ಸದನಗಳ ಪ್ರತಿಪಕ್ಷದ ನಾಯಕರಾದ ಆರ್.ಅಶೋಕ್, ಕೋಟ ಶ್ರೀನಿವಾಸ ಪೂಜಾರಿ, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ಶೋಭಾ ಕರಂದ್ಲಾಜೆ ಮತ್ತಿತರರು ಪಾಲ್ಗೊಳ್ಳಲಿದ್ದಾರೆ ಎನ್ನಲಾಗಿದೆ.