Asianet Suvarna News Asianet Suvarna News

ಸಿದ್ದರಾಮಯ್ಯ ಜನತಾದರ್ಶನ ಜಾಹೀರಾತಿಗೆ ಸೀಮಿತ: ಎಚ್‌.ಡಿ.ಕುಮಾರಸ್ವಾಮಿ

ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಜನತಾದರ್ಶನ ಮಾಡುವುದಾಗಿ ಜಾಹೀರಾತು ಕೊಟ್ಟು ಹೇಳಿದ್ದಾರೆ. ಅವರ ಜನತಾದರ್ಶನ ಜಾಹೀರಾತಿಗೆ ಸೀಮಿತವಾಗಿದೆ ಎಂದು ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಟಾಂಗ್ ನೀಡಿದರು. 

Ex CM HD Kumaraswamy Slams On CM Siddaramaiah At Ramanagara gvd
Author
First Published Nov 27, 2023, 8:53 PM IST

ರಾಮನಗರ (ನ.27): ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಜನತಾದರ್ಶನ ಮಾಡುವುದಾಗಿ ಜಾಹೀರಾತು ಕೊಟ್ಟು ಹೇಳಿದ್ದಾರೆ. ಅವರ ಜನತಾದರ್ಶನ ಜಾಹೀರಾತಿಗೆ ಸೀಮಿತವಾಗಿದೆ ಎಂದು ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಟಾಂಗ್ ನೀಡಿದರು. ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ.ವಿಜಯೇಂದ್ರ ಬಿಡದಿ ಸಮೀಪದ ಕೇತಗಾನಹಳ್ಳಿಯ ತೋಟಕ್ಕೆ ಆಗಮಿಸಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರ ತೆರಿಗೆ ಹಣ ಖರ್ಚು ಮಾಡಿ ಜಾಹಿರಾತು‌ ನೀಡುತ್ತಿದ್ದಾರೆ. ಪ್ರತಿ ದಿನ ಆ ಜಾಹೀರಾತುಗಳಲ್ಲಿ ಸುಳ್ಳು‌ ಹೇಳುತ್ತಿದ್ದಾರೆ ಎಂದು ಕಿಡಿ ಕಾರಿದರು.

ನಾನು, ಯಡಿಯೂರಪ್ಪ ಇದ್ದಾಗ ಹೇಗೆ ಜನತಾದರ್ಶನ ನಡೆಸಿದೆವು ಎನ್ನುವುದು ರಾಜ್ಯದ ಜನತೆಗೆ ಗೊತ್ತಿದೆ. ಬೆಳಗ್ಗೆಯಿಂದ ಸಂಜೆಯವರೆಗೆ ಬಿಡುವು ಪಡೆಯದೇ ಅಸಂಖ್ಯಾತ ಜನರ ಅಹವಾಲು ಸ್ವೀಕರಿಸಿ ಸ್ಥಳದಲ್ಲೇ ಪರಿಹಾರ ಕೊಡುತ್ತಿದ್ದ ಆ ದಿನಗಳನ್ನು ಜನರು ಮರೆತಿಲ್ಲ ಎಂದರು. ಜೆಡಿಎಸ್ ಯುವ ಘಟಕದ ಅಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ, ಜಿಲ್ಲಾಧ್ಯಕ್ಷರಾದ ಮಾಜಿ ಶಾಸಕರಾದ ಎ.ಮಂಜುನಾಥ್ ಮತ್ತಿತರರು ಹಾಜರಿದ್ದರು.

ಡಿಕೆಶಿ ಸಿಬಿಐ ಕೇಸ್ ವಾಪಸಿನ ನಿರ್ಧಾರಕ್ಕೆ ಛೀಮಾರಿ ಬೀಳಲಿದೆ: ಎಚ್‌.ಡಿ.ಕುಮಾರಸ್ವಾಮಿ

ಎಂಪಿ ಚುನಾವಣೆವರೆಗೂ ಸರ್ಕಾರದ ಜಾತಿಗಣತಿ ನಾಟಕ: ಲೋಕಸಭೆ ಚುನಾವಣೆವರೆಗೂ ಕಾಂಗ್ರೆಸ್‌ ಸರ್ಕಾರ ‘ಜಾತಿಗಣತಿ’ ನಾಟಕ ಆಡುತ್ತದೆ ಆನಂತರವೂ ಈ ಸರ್ಕಾರದಿಂದ ಏನೂ ಆಗದು ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಟೀಕಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾತಿಗಣತಿ ವರದಿಯನ್ನು ಸರ್ಕಾರ ಇನ್ನೂ ನಾಲ್ಕು ತಿಂಗಳು ಅಧ್ಯಯನ ಮಾಡಲಾಗುವುದು ಎಂದು ಹೇಳುತ್ತಿದೆ. ನನ್ನ ಪ್ರಕಾರ ಲೋಕಸಭೆ ಚುನಾವಣೆ ತನಕ ಇದು ಏನೂ ಆಗಲ್ಲ. ಯಾರೂ ಗಾಬರಿ ಆಗಬೇಕಾದ ಅವಶ್ಯಕತೆ ಇಲ್ಲ ಎಂದರು.

ಇದೇ ಸಿದ್ದರಾಮಯ್ಯ ಅವರು 2018ರಲ್ಲಿ ಕಾಂತರಾಜು ವರದಿ ಕೊಡಲು ಬಂದಾಗ ಆ ವರದಿಯನ್ನು ಕುಮಾರಸ್ವಾಮಿ ಸ್ವೀಕರಿಸಿಲ್ಲ ಎಂದು ಈಗ ಹೇಳುತ್ತಿ ದ್ದಾರೆ. ಹಾಗಾದರೆ ಆಗಲೇ ವರದಿ ಸಿದ್ಧವಾಗಿತ್ತು ಎಂದಾಯಿತಲ್ಲಾ? ಈಗ ನಿಮ್ಮ ಸರ್ಕಾರ ಬಂದು 6 ತಿಂಗಳಾಗಿದೆ. ಇನ್ನೂ ಯಾಕೆ ವರದಿ ಸ್ವೀಕಾರ ಮಾಡಿಲ್ಲ? ಎಂದವರು ಸರ್ಕಾರಕ್ಕೆ ಪ್ರಶ್ನೆ ಎಸೆದಿದ್ದಾರೆ.

ಕನಕಪುರದಲ್ಲಿ ಎಸಿ ಕೋರ್ಟ್: ವಕೀಲರ ಹೋರಾಟಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಬೆಂಬಲ

ಯುವಕರೊಬ್ಬರು ರಾಜ್ಯಾಧ್ಯಕ್ಷರಾಗಿ ನೇಮಕವಾಗಿರುವುದರಿಂದ ಆ ಪಕ್ಷದ ಕಾರ್ಯಕರ್ತರಲ್ಲಿ ಹುರುಪು ಹೆಚ್ಚಾಗಿದೆ. ಅದಕ್ಕಾಗಿ ವಿಜಯೇಂದ್ರ ಶ್ರಮ ಹಾಕುತ್ತಿರುವುದನ್ನು ನೋಡುತ್ತಿದ್ದೇನೆ. ಬಹಳ ದಿನಗಳ ಹಿಂದೆಯೇ ವಿಜಯೇಂದ್ರ ಅವರನ್ನು ಭೇಟಿ ಮಾಡಬೇಕಿತ್ತು. ಹಲವಾರು ಕಾರ್ಯಕ್ರಮಗಳು ಇದ್ದ ಕಾರಣ ಸಾಧ್ಯವಾಗಲಿಲ್ಲ. ಇವತ್ತು ನಮ್ಮ ಭೇಟಿಯ ಉದ್ದೇಶ ರಾಜ್ಯದ ಅಭಿವೃದ್ಧಿಯ ಉದ್ದೇಶವಾಗಿದೆ.
-ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿಗಳು

Follow Us:
Download App:
  • android
  • ios