Asianet Suvarna News Asianet Suvarna News

ಧರ್ಮಕ್ಕೊಂದು ಸಮಾವೇಶ, ಜಾತಿಗೊಂದು ಸಭೆ ಜಾತ್ಯತೀತವೇ: ಸಿದ್ದು ವಿರುದ್ಧ ಎಚ್‌ಡಿಕೆ ವಾಗ್ದಾಳಿ

ಜೆಡಿಎಸ್ ಪಕ್ಷದ ಜಾತ್ಯತೀತ ನಿಲುವಿನ ಬಗ್ಗೆ ಲಘುವಾಗಿ ಟೀಕೆ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಟೀಕಾಪ್ರಹಾರ ನಡೆಸಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಮುಖ್ಯಮಂತ್ರಿ‍ಯವರು ಜಾತ್ಯಾತೀತ, ಕೋಮುವಾದ ಎಂದು ಹೇಳಿಕೊಂಡೇ ರಾಜಕೀಯ ಲಾಭ ಮಾಡಿಕೊಂಡಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. 

Ex CM HD Kumaraswamy Slams On CM Siddaramaiah gvd
Author
First Published Oct 1, 2023, 4:23 AM IST

ಬೆಂಗಳೂರು (ಅ.01): ಜೆಡಿಎಸ್ ಪಕ್ಷದ ಜಾತ್ಯತೀತ ನಿಲುವಿನ ಬಗ್ಗೆ ಲಘುವಾಗಿ ಟೀಕೆ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಟೀಕಾಪ್ರಹಾರ ನಡೆಸಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಮುಖ್ಯಮಂತ್ರಿ‍ಯವರು ಜಾತ್ಯಾತೀತ, ಕೋಮುವಾದ ಎಂದು ಹೇಳಿಕೊಂಡೇ ರಾಜಕೀಯ ಲಾಭ ಮಾಡಿಕೊಂಡಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಟ್ವೀಟ್‌ ಮಾಡಿರುವ ಅವರು, ಸಿದ್ದರಾಮಯ್ಯ ಜಾತ್ಯಾತೀತ ತತ್ವಗಳನ್ನು ಆಚರಣೆ ಮಾಡುವುದಿಲ್ಲ. ಅವರು ಛದ್ಮವೇಷಧಾರಿ, ಡೋಂಗಿ ಸಮಾಜವಾದಿ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ. ಅವರ ಬೆನ್ನು ಅವರಿಗೆ ಕಾಣುವುದಿಲ್ಲ. ನಾಲಿಗೆಗೂ ಮೂಳೆ ಇರುವುದಿಲ್ಲ. 

ಮುಖ್ಯಮಂತ್ರಿ ಸೀಟಿನಲ್ಲಿ ಕೂತರೂ 'ಸಿದ್ದಸುಳ್ಳು'ಗಳಿಗೆ ಕೊರತೆಯೇನೂ ಇಲ್ಲ. 'ಜಾತ್ಯಾತೀತ' ಎನ್ನುವ ಟ್ಯಾಗ್ ಲೈನ್ ಇಟ್ಟುಕೊಂಡು ಜಾತಿ ಸಭೆಗಳನ್ನು ಮಾಡಿ ಕುಕ್ಕರ್, ಇಸ್ತ್ರೀ ಪೆಟ್ಟಿಗೆ ಹಂಚುವುದು ಜಾತ್ಯತೀತವೇ? ಅಹಿಂದ ಎಂದು ಹೇಳಿಕೊಂಡು ಧರ್ಮಕ್ಕೊಂದು ಸಮಾವೇಶ, ಜಾತಿಗೊಂದು ಸಭೆ ನಡೆಸುವುದು ಜಾತ್ಯತೀತವೇ? ಕೋಮುವಾದಿ ಎಂದು ಬಿಜೆಪಿಯನ್ನು ಹೀಗಳೆಯುತ್ತಾ ಆ ಪದದಿಂದಲೇ ರಾಜಕೀಯ ಲಾಭ ಗಿಟ್ಟಿಸಿಕೊಳ್ಳುವ ಡೋಂಗಿ ಸಮಾಜವಾದಿ. ಅವರ  ಅಡ್ಜಸ್ಟ್ಮೆಂಟ್ ರಾಜಕಾರಣ ಜಗತ್ಪ್ರಸಿದ್ಧಿಯಾಗಿದೆ. ಇಂಡಿಯಾ ಎಂಬ ಮೈತ್ರಿಕೂಟದಲ್ಲಿ ಅದೇ ಬಿಜೆಪಿಯ ಬಿ ಟೀಂಗಳನ್ನು ಇಟ್ಟುಕೊಂಡು, ಅವುಗಳ ಬಾಲಂಗೋಚಿ ಆಗಿರುವ ಕಾಂಗ್ರೆಸ್ ಪಕ್ಷ ಜಾತ್ಯತೀತವೇ? ಎಂದು ಕಿಡಿಕಾರಿದ್ದಾರೆ. 

ಪ್ರಧಾನಿ ಮೋದಿ ಜಗತ್ತೇ ಮೆಚ್ಚುವಂತಹ ನಾಯಕ: ಸಂಸದ ರಮೇಶ ಜಿಗಜಿಣಗಿ

2006ರಲ್ಲಿ ಬಿಜೆಪಿ ಜತೆ ಸರ್ಕಾರ ರಚಿಸಿದ ಏಕೈಕ ಕಾರಣಕ್ಕೆ ಬಿಜೆಪಿ ಬಿ ಟೀಂ ಎಂದು ಜೆಡಿಎಸ್ ಗೆ ಮುದ್ರೆ ಹಾಕಲಾಗಿದೆ. 2018ರಲ್ಲಿ ಅದೇ ಬಿ ಟೀಂ ಜತೆ ಸರ್ಕಾರ ರಚಿಸಲು ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡರ ಮನೆಗೆ ಬಂದು ಸಾಲಾಗಿ ಕೈಕಟ್ಟಿ ನಿಂತುಕೊಂಡಿರಿ!! ಮರೆತಿರಾ ಛದ್ಮವೇಷಧಾರಿ?? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಾತ್ಯಾತೀತ ಎನ್ನುವುದು ನಾಲಿಗೆ ಮೇಲಿನ ಮಾತಲ್ಲ, ಹೃದಯದ ಆಳದಲ್ಲಿರುವ ನಿಷ್ಠೆ. ಸ್ವಾರ್ಥ ರಾಜಕಾರಣವನ್ನೇ ಹಾಸಿಹೊದ್ದು, ಅಧಿಕಾರ ದಾಹವೇ ಹಾಸುಹೊಕ್ಕಾಗಿರುವ ಅವರಿಗೆ ಜಾತ್ಯತೀತತೆ ಕೇವಲ ಭಾಷಣದ ಸರಕಷ್ಟೇ. ನಮ್ಮ ಬದ್ಧತೆ, ಅಚಲತೆ, ಜಾತ್ಯಾತೀತತೆಯನ್ನು ಪ್ರಶ್ನಿಸುವ ಯೋಗ್ಯತೆ ಅವರಿಗೆ ಖಂಡಿತಾ ಇಲ್ಲ ಎಂದು ಟೀಕಿಸಿದ್ದಾರೆ.

Follow Us:
Download App:
  • android
  • ios