Asianet Suvarna News Asianet Suvarna News

ನಿಮ್ಮ ಸುತ್ತಮುತ್ತ ಇರುವವರೆಲ್ಲಾ ಟೆರರಿಸ್ಟ್ಗಳು: ಡಿಕೆಶಿಗೆ ಎಚ್‌.ಡಿ.ಕುಮಾರಸ್ವಾಮಿ ತಿರುಗೇಟು

ನಿಮ್ಮ ಸುತ್ತಮುತ್ತ ಇರುವವರೆಲ್ಲಾ ಟೆರರಿಸ್ಟ್ಗಳು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. 

Ex CM HD Kumaraswamy Slams On DK Shivakumar At Mysuru gvd
Author
First Published May 23, 2024, 9:14 PM IST

ಮೈಸೂರು (ಮೇ.23): ನಿಮ್ಮ ಸುತ್ತಮುತ್ತ ಇರುವವರೆಲ್ಲಾ ಟೆರರಿಸ್ಟ್ಗಳು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಡನೆ ಮಾತನಾಡಿದ ಅವರು, ನನಗೆ ಡಿ.ಕೆ. ಶಿವಕುಮಾರ್ ಕಂಡರೆ ಅಸೂಯೆ ಅಂತಾ ಹೇಳಿದ್ದಾರೆ. ನಾನು ಯಾಕೆ ಅವರನ್ನು ನೋಡಿ ಅಸೂಯೆ ಪಡಲಿ. ವೀಡಿಯೋ ಮಾಡಿರುವುದು ಒಂದು ಭಾಗ. ವೀಡಿಯೋವನ್ನು ಚುನಾವಣೆಗಾಗಿ ವಿತರಿಸಿದ್ದು ಅಪರಾಧ ಅಲ್ಲವೆ? ವೀಡಿಯೋ ಮಾಡಿದ್ದಕ್ಕಿಂತಾ ಅದರ ವಿತರಣೆ ಅಪರಾಧ ಅಲ್ವಾ? ಎಂದು ಪ್ರಶ್ನಿಸಿದರು.

ಮಹಾನುಭಾವರು 1980 ಲ್ಲೇ ಸಿಡಿ ಫ್ಯಾಕ್ಟರಿ ಓಪನ್ ಮಾಡಿದ್ದಾರೆ. ಅಧಿಕಾರ ಯಾರ ಅಪ್ಪನ ಆಸ್ತಿಯಲ್ಲ. ರಾಜಕೀಯದಲ್ಲಿ ಏಳು ಬೀಳು ಭಗವಂತನ ಇಚ್ಚೆ. ಇದರಲ್ಲಿ ಅಸೂಯೆ ಯಾಕೆ? ಪ್ರಧಾನಿ ಸ್ಥಾನವನ್ನೇ ಅತ್ಯಂತ ಸುಲಭವಾಗಿ ತೆರವು ಮಾಡಿದ ವಂಶ ನಮ್ಮದು. ಎಲ್ಲಾ ಅಧಿಕಾರವನ್ನು ನಾವು ನೋಡಿಯಾಗಿದೆ ಸಿಡಿ ಡಿಕೆ ಶಿವು ಎಂದು ಕುಮಾರಸ್ವಾಮಿ ನೇರವಾಗಿ ಮೂದಲಿಸಿದರು. ನಮಗೆ ಅಧಿಕಾರ ಬೇಡ ಅಂದರು ಬಂದಿದೆ. ನಾವು ಅಧಿಕಾರ ಹುಡುಕಿಕೊಂಡು ಹೋಗಿಲ್ಲ. ನಿಮಗೆ ಇದು ಗೊತ್ತಿರಲಿ ಎಂದರು.

ಪ್ರಜ್ವಲ್‌ ವಿದೇಶದಿಂದ ಬರುವ ವಿಚಾರ ನನಗೆ ಗೊತ್ತಿಲ್ಲ: ಎಚ್‌.ಡಿ.ರೇವಣ್ಣ

ವಿರೋಧಿಗಳಿಗೆ ತೊಂದರೆ ಕೊಡುವುದು. ದ್ವೇಷದ ರಾಜಕಾರಣ ಮಾಡುವುದಷ್ಟೆ ಸರ್ಕಾರದ ಕೆಲಸ ಆಗಿದೆ. ಸರ್ಕಾರದ ಪ್ರಯೋಜಕತ್ವದಲ್ಲಿ ಮೇ 30 ರಂದು ಹಾಸನದಲ್ಲಿ ಪ್ರತಿಭಟನೆ ಆಯೋಜಿಸಲಾಗಿದೆ. ಅಂಗನವಾಡಿ ಕಾರ್ಯಕರ್ತರನ್ನು ಪ್ರತಿಭಟನೆಗೆ ಕರೆ ತರಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ನನಗೆ ಹೇಳಿ ನಾನೇ ಒಂದಿಷ್ಟು ಮಹಿಳೆಯರನ್ನು ಪ್ರತಿಭಟನೆಗೆ ಕಳುಹಿಸುತ್ತೇನೆ ಎಂದು ಅವರು ಹೇಳಿದರು.

ಪೆನ್ ಡ್ರೈವ್ ಮೂಲವೇ ಕಾರ್ತಿಕ್: ಕಾರ್ತಿಕ್ ಹಾಸನದ ಕಾಂಗ್ರೆಸ್ ಅಭ್ಯರ್ಥಿ ಇಟ್ಟುಕೊಂಡು ಡಿ.ಕೆ. ಸುರೇಶ್ ಬಳಿಗೆ ಮೊದಲು ಹೋಗಿದ್ದ. ನಂತರ ಅದನ್ನು ಸಿಡಿ ಶಿವಕುಮಾರ್ ಕಾಪಿ ಮಾಡಿಕೊಂಡಿದ್ದಾರೆ. ನಾನು ಪ್ರಜ್ವಲ್ ಪರವಾಗಿ ಇಲ್ಲ. ಆತನ ಅಪರಾಧ ಸಾಬೀತಾದರೆ ಶಿಕ್ಷೆ ಕೊಡಿ ಎಂದರು. ಮುಖ್ಯಮಂತ್ರಿಗಳೇ ಅಧಿಕಾರ ಶಾಶ್ವತ ಅಲ್ಲ. ನಿಮ್ಮ ಅಧಿಕಾರ ದುರುಪಯೋಗದ ವಿರುದ್ಧ ಕಾನೂನು ಹೋರಾಟ ಮಾಡಬೇಕಾಗುತ್ತದೆ. ದೇವರಾಜೇಗೌಡ, ಶಿವರಾಮೇಗೌಡ, ಡಿ.ಕೆ. ಶಿವಕುಮಾರ್ ಪೆನ್ ಡ್ರೈವ್ ವಿತರಣೆ ಹಿಂದೆ ಇದ್ದಾರೆ. ಅರ್ಧ ನಿಮಿಷದಲ್ಲೆ ಎಲ್ಲವೂ ತೀರ್ಮಾನವಾಗಿದೆ. ಈಗ ಎಂಟು ಜನ ಪೊಲೀಸರ ರಕ್ಷಣೆಯಲ್ಲಿ ಕಾರ್ತಿಕ್ ಇದ್ದಾನೆ? ಯಾವ ಕಾರಣಕ್ಕೆ ಇನ್ನೂ ಕಾರ್ತಿಕ್ ಬಂಧನ ತೋರಿಸಿಲ್ಲ? ಕೋರ್ಟ್ ಗೆ ಹಾಜರು ಪಡಿಸಿಲ್ಲ ಹೇಳಿ? ಎಂದು ಪ್ರಶ್ನಿಸಿದರು.

ನನ್ನ ಬಳಿ ಇರುವ ಪೆನ್ ಡ್ರೈವ್ ನಿಮ್ಮ ಸರ್ಕಾರದ ವರ್ಗಾವಣೆಯ ಭ್ರಷ್ಟಾಚಾರದ್ದು. ಅದನ್ನು ನಾನು ಈಗ ಬಿಟ್ಟರೆ ಅದು ನನ್ನದೇ ಸೃಷ್ಟಿ ಅಂತಾ ಬೇಕಾದರೆ ನೀವು ಹೇಳುತ್ತೀರಾ. ಎಸ್.ಐ.ಟಿಗೆ ಇದುವರೆಗೂ ಕೊಟ್ಟ ಯಾವ ಪ್ರಕರಣ ತಾರ್ಕಿಕ ಅಂತ್ಯ ಕಂಡಿದೆ ಹೇಳಿ? ನನ್ನ ಅವಧಿಯಲ್ಲಿ ಯಾವ ಪ್ರಕರಣವನ್ನೂ ಎಸ್.ಐ.ಟಿಗೆ ಕೊಟ್ಟಿರಲಿಲ್ಲ. ಅವರೇನೂ ಟೆರರಿಸ್ಟಾ ಫೋನ್ ಟ್ಯಾಪ್ ಮಾಡೋಕೆ ಅಂತಾ ಕೆಲವರು ಕೇಳಿದ್ದಾರೆ. ಆದರೆ ಅವರ ಬಳಿ ಇರುವವರೆಲ್ಲಾ ಟೆರರಿಸ್ಟ್ ಗಳೇ. ಬಹಳಷ್ಟು ಟೆರರಿಸ್ಟ್ ಗಳು ಇವರ ಸುತ್ತಮುತ್ತಲೇ ಇದ್ದಾರೆ ಎಂದು ಗಂಭೀರ ಆರೋಪ ಮಾಡಿದರು. ಈಗ ಸಿಎಂ ಪೆನ್ ಡ್ರೈವ್ ಬಗ್ಗೆ ಯಾರೂ ಮಾತನಾಡಬೇಡಿ ಅಂದಿದ್ದಾರೆ. ಏಕೆಂದರೆ ನಿಮ್ಮ ಬುಡಕ್ಕೆ ಬರ್ತಾ ಇದೆಯಲ್ಲ. ಅದಕ್ಕೆ ಈಗ ಮಾತಾಡಬೇಡಿ ಅಂತಿದ್ದಾರೆ ಎಂದರು.

ಹಣ, ಹೆಂಡ, ಜಾತಿ ಮೇಲೆ ಮತ ಕೇಳಲ್ಲ: ಆಯನೂರು ಮಂಜುನಾಥ್

ಮೈತ್ರಿಗೂ ಪೆನ್ ಡ್ರೈವ್ ಗೂ ಸಂಬಂಧ ಇಲ್ಲ: ಪ್ರಜ್ವಲ್ ಕರ್ನಾಟಕದಲ್ಲಿ ಇದ್ದಾಗಲೇ ನನ್ನ ಸಂಪರ್ಕದಲ್ಲಿ ಇರುತ್ತಾ ಇರಲಿಲ್ಲ. ಇನ್ನೂ ಈಗ ಇರ್ತಾನಾ? ಪೆನ್ ಡ್ರೈವ್ ಪ್ರಕರಣದಿಂದ ದೇವೇಗೌಡರ ಕುಟುಂಬಕ್ಕೆ ಸ್ವಲ್ಪ ತೊಂದರೆ ಆಗಿರುವುದು ಸತ್ಯ. ಪ್ರಜ್ವಲ್ ಎಚ್.ಡಿ. ರೇವಣ್ಣನ ಸಂಪರ್ಕದಲ್ಲೂ ಇಲ್ಲ. ನಾನು ಈಗ ಏನಾದರೂ ವಿದೇಶಕ್ಕೆ ಹೋದರೆ, ಪ್ರಜ್ವಲ್ ರಕ್ಷಣೆಗೆ ಹೋಗಿದ್ದಾರೆ ಅಂತಾ ಇವರು ಸುದ್ದಿ ಹಬ್ಬಿಸಿ ಬಿಡುತ್ತಾರೆ. ಯಾವ ಗ್ರಹಚಾರ ನಮಗೆ. ಪ್ರಜ್ವಲ್ ವಿದೇಶಕ್ಕೆ ಹೋಗೋದು ಅವತ್ತೆ ಗೊತ್ತಾಗಿದ್ದರೆ ನಾನು ಅವತ್ತೆ ಅದನ್ನು ನಿಲ್ಲಿಸುತ್ತಿದೆ. ಪ್ರಜ್ವಲ್ ಭಯ ಬಿದ್ದಿರಬಹುದು. ಅದಕ್ಕೆ ಬರುತ್ತಿಲ್ಲ ಎಂದರು. ಪ್ರಜ್ವಲ್ ಗೆ ನಾನು ಹೇಳುವುದಿಷ್ಟೇ. ಈ ವಿಚಾರದಲ್ಲಿ ವಕೀಲರ ಸಲಹೆ ಬೇಡ. ನೈತಿಕತೆ ಉಳಿಸಿಕೊಳ್ಳಲು ದೇಶಕ್ಕೆ ಹಿಂದಿರುಗಿ ಬಾ ಎಂದು ಅವರು ಹೇಳಿದರು.

Latest Videos
Follow Us:
Download App:
  • android
  • ios