ದೇವೇಗೌಡರ ಬಗ್ಗೆ ಹೇಳಿಕೆ: ರಾಜಣ್ಣ, ಬಸವರಾಜು ವಿರುದ್ಧ ಎಚ್‌ಡಿಕೆ ವಾಗ್ದಾಳಿ
ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಕುರಿತು ಹೇಳಿಕೆ ನೀಡಿರುವ ಸಹಕಾರ ಸಚಿವ ರಾಜಣ್ಣ ಮತ್ತು ಸಂಸದ ಜಿ.ಎಸ್. ಬಸವರಾಜು ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಬೆಂಗಳೂರು (ಸೆ.28): ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಕುರಿತು ಹೇಳಿಕೆ ನೀಡಿರುವ ಸಹಕಾರ ಸಚಿವ ರಾಜಣ್ಣ ಮತ್ತು ಸಂಸದ ಜಿ.ಎಸ್. ಬಸವರಾಜು ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಪಕ್ಷದ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತುಮಕೂರು ಜಿಲ್ಲೆಯ ಜನರು ದೇವೇಗೌಡರಿಗೆ ಮತ ಹಾಕಬಾರದು ಎಂದು ಬಸವರಾಜು ಹೇಳಿಕೆ ನೀಡಿದ್ದಾರೆ. ತುಮಕೂರು ಜಿಲ್ಲೆಗೆ ಆ ವ್ಯಕ್ತಿಯ ಕೊಡುಗೆ ಏನು? ಆತನ ದರ್ಪದ ಹೇಳಿಕೆಯನ್ನು ಗಮನಿಸಿದ್ದೇನೆ. ಮತ್ತೆ ತುಮಕೂರಿನಲ್ಲಿ ದೇವೇಗೌಡರನ್ನು ಸೋಲಿಸಬೇಕು ಎಂದಿದ್ದಾರೆ.
ದೇವೇಗೌಡರು ಆ ಜಿಲ್ಲೆಗೆ ಏನೂ ಮಾಡಿಲ್ಲವಾದರೆ, ಅವರೇ ಸಂಸದರಾಗಿದ್ದು, ಅವರೇನು ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಇದೇ ವೇಳೆ ಸಹಕಾರ ಸಚಿವ ರಾಜಣ್ಣ ವಿರುದ್ಧ ಹರಿಹಾಯ್ದ ಅವರು, ದೇವೇಗೌಡರು ಚುನಾವಣೆಗೆ ನಿಲ್ಲಬೇಕು, ನಾವು ಋಣ ತೀರಿಸಬೇಕು ಎಂದು ಸಚಿವರು ವ್ಯಂಗ್ಯವಾಗಿ ಹೇಳಿದ್ದಾರೆ. ಕಳೆದ ಚುನಾವಣೆಯಲ್ಲಿ ನೀವು ಋಣ ತೀರಿಸಿದ್ದು ನೋಡಿದ್ದೇವೆ. ಇವರೆಲ್ಲಾ ದೇವೇಗೌಡರ ಹೆಸರು ಹೇಳಿಕೊಂಡು ರಾಜಕೀಯಕ್ಕೆ ಬಂದವರು. ಈ ಹಿಂದೆ ದೇವೇಗೌಡರು ಹುಷಾರಿಲ್ಲದ್ದರೂ ಹೋಗಿ ಇವರ ಪರ ಪ್ರಚಾರ ಮಾಡಿದ್ದಕ್ಕೇ ಗೆದ್ದರು. ಆಗ ಕೇವಲ 700 ಮತಗಳ ಅಂತರದಿಂದ ಗೆದ್ದಿದ್ದನ್ನು ಮರೆತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕಾವೇರಿ ನೀರು ಬಿಡದಿದ್ದರೆ ನ್ಯಾಯಾಂಗ ನಿಂದನೆಯಾಗದು: ಎಚ್.ಡಿ.ಕುಮಾರಸ್ವಾಮಿ
ಕಾಂಗ್ರೆಸ್ ಸರ್ಕಾರ ಡಿಎಂಕೆಯ ಬಿ ಟೀಂ: ಕಾಂಗ್ರೆಸ್ ಸರ್ಕಾರ ಕನ್ನಡಿಗರ ಸರ್ಕಾರವೋ ಅಥವಾ ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಅಧೀನದಲ್ಲಿರುವ ಬಾಡಿಗೆ ಸರ್ಕಾರವೋ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವ್ಯಂಗ್ಯವಾಗಿ ಪ್ರಶ್ನಿಸಿದ್ದಾರೆ. ಕಾವೇರಿ ನದಿ ನೀರಿನ ಹಂಚಿಕೆ ವಿಚಾರದಲ್ಲಿ ರಾಜ್ಯ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದ್ದು, ಕಾಂಗ್ರೆಸ್ ಪಕ್ಷವು ತಮಿಳುನಾಡಿನ ಡಿಎಂಕೆ ಪಕ್ಷದ ಬಿ ಟೀಂ ಎಂದು ಅವರು ಪ್ರಕಟಣೆ ಮೂಲಕ ಟಾಂಗ್ ನೀಡಿದ್ದಾರೆ.
ಕಾವೇರಿ ಹೋರಾಟವನ್ನು ಹತ್ತಿಕ್ಕುತ್ತಿರುವ ಸರ್ಕಾರದ ಕ್ರಮ ಸರಿಯಲ್ಲ. ಒಂದು ಕಡೆ ಮೇಕೆದಾಟು ಬೇಕು ಎಂದು ಪಾದಯಾತ್ರೆ ಮಾಡಿದವರು, ಈಗ ಕಾವೇರಿ ನೀರಿಗಾಗಿ ಬೀದಿಗಿಳಿದು ಹೋರಾಟ ನಡೆಸುತ್ತಿದ್ದ ರೈತರನ್ನು, ಹೋರಾಟಗಾರರನ್ನು ಬಂಧಿಸಿದೆ. ರಾತ್ರೋರಾತ್ರಿ ಹೋರಾಟಗಾರರನ್ನು ಬಂಧಿಸಿರುವುದು ಸರ್ಕಾರದ ಕಿಡಿಗೇಡಿತನದ ಪರಮಾವಧಿ. ಕರ್ನಾಟಕದಲ್ಲಿ ಕಾಂಗ್ರೆಸ್ಸಿಗರಿಗೆ ಒಂದು ನ್ಯಾಯ, ಕನ್ನಡಿಗರಿಗೆ ಇನ್ನೊಂದು ನ್ಯಾಯ ಎನ್ನುವುದು ಇದೆಯಾ? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸ್ವಚ್ಛತೆ ಮುಖಾಂತರ ಮುಂದಿನ ಪೀಳಿಗೆಗೆ ಪ್ರಕೃತಿಯನ್ನು ಉಳಿಸಿ: ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ
ಕೋವಿಡ್ ನಿಯಮ ಉಲ್ಲಂಘಿಸಿ ಕಾಂಗ್ರೆಸ್ ನಾಯಕರು ಮೇಕೆದಾಟು ಪಾದಯಾತ್ರೆ ಮಾಡಬಹುದಾದರೆ, ನಾಡಿನ ಜೀವನಾಡಿ ಕಾವೇರಿಗಾಗಿ ಶಾಂತಿಯುತವಾಗಿ ಪ್ರತಿಭಟನೆ ನಡೆಸಬಾರದೇ? ಶಾಂತವಾಗಿ ಹೋರಾಟ ನಡೆಸುತ್ತಿದ್ದ ರೈತರು, ಹೋರಾಟಗಾರರನ್ನು ಬಂಧಿಸಿರುವುದು ಖಂಡನೀಯ. ಇದೇನು ಕನ್ನಡಿಗರ ಸರಕಾರವೋ? ಸ್ಟಾಲಿನ್ ಅಧೀನದಲ್ಲಿರುವ ಬಾಡಿಗೆ ಸರಕಾರವೋ? ಕನ್ನಡಿಗರು ಮತ ಹಾಕಿದ್ದು ಯಾರಿಗೆ ಎಂದು ಕಿಡಿಕಾರಿದ್ದಾರೆ.