Asianet Suvarna News Asianet Suvarna News

ಒಂದು ಸಮುದಾಯ ಓಲೈಕೆ ಮಾಡಲು ಸರ್ಕಾರ ಇಲ್ಲ: ಎಚ್‌.ಡಿ.ಕುಮಾರಸ್ವಾಮಿ ಕಿಡಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಯು ಮುಸ್ಲಿಂ ಓಲೈಕೆಯಾಗಿದೆ, ಆದರೆ ಒಂದು ಸಮುದಾಯವನ್ನು ಓಲೈಕೆ ಮಾಡಲು ಸರ್ಕಾರ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ. 

Ex CM HD Kumaraswamy Slmas On Congress Govt At Belagavi gvd
Author
First Published Dec 6, 2023, 10:03 PM IST

ಸುವರ್ಣವಿಧಾನಸೌಧ (ಡಿ.06): ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಯು ಮುಸ್ಲಿಂ ಓಲೈಕೆಯಾಗಿದೆ, ಆದರೆ ಒಂದು ಸಮುದಾಯವನ್ನು ಓಲೈಕೆ ಮಾಡಲು ಸರ್ಕಾರ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿದ ಅವರು, ಮುಖ್ಯಮಂತ್ರಿಗಳ ಹೇಳಿಕೆಯು ಮುಸ್ಲಿಂ ಓಲೈಕೆಯಲ್ಲದೇ ಮತ್ತೇನು? ಸರ್ಕಾರ ಇರುವುದು ಕೇವಲ ಒಂದು ಸಮುದಾಯವನ್ನು ಓಲೈಕೆ ಮಾಡುವುದಲ್ಲ. ಎಲ್ಲರನ್ನೂ ಸಮಾನವಾಗಿ ನೋಡಬೇಕು ಎಂದು ಟೀಕಿಸಿದರು.

ಕಾಂಗ್ರೆಸ್‌ ಸರ್ಕಾರ ಇನ್ನೂ ನಾಲ್ಕುವರೆ ವರ್ಷ ಇರಲಿದೆ. ಹಂತ ಹಂತವಾಗಿ ಎಲ್ಲ ವಿಚಾರಗಳ ಕುರಿತು ಮಾತನಾಡುತ್ತೇನೆ. ಅಧಿವೇಶನದಲ್ಲಿ ಬಿಜೆಪಿಯೊಂದಿಗೆ ಜಂಟಿಯಾಗಿ ಹೋರಾಟ ನಡೆಸುತ್ತೇವೆ. ಜನಪರ ವಿಚಾರಗಳ ಕುರಿತು ಸದನದಲ್ಲಿ ಚರ್ಚೆ ನಡೆಸಲಾಗುವುದು. ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳು, ರಾಜ್ಯಪಾಲರಿಗೆ ನೀಡಿರುವ ದೂರಿನ ವಿಚಾರಗಳ ಕುರಿತು ಸದನದಲ್ಲಿ ಮಾತನಾಡುತ್ತೇವೆ ಎಂದು ಹೇಳಿದರು. ಜನವರಿಯಲ್ಲಿ ನಡೆಯಲಿರುವ ಜಂಟಿ ಅಧಿವೇಶನ ಸಂದರ್ಭದಲ್ಲಿಯೂ ಬೇರೆ ಬೇರೆ ವಿಚಾರಗಳ ಕುರಿತು ಚರ್ಚಿಸಲಾಗುವುದು.

ಬಿಜೆಪಿಯವರಿಗೆ ಏಕೆ ಇಷ್ಟೊಂದು ಗಾಬರಿಯಾಗುತ್ತಿದೆ: ಸಚಿವ ದಿನೇಶ್‌ ಗುಂಡೂರಾವ್ ಪ್ರಶ್ನೆ

ವರ್ಗಾವಣೆ ದಂಧೆ ಸೇರಿದಂತೆ ಇತರೆ ವಿಚಾರಗಳ ಕುರಿತು ಜಂಟಿ ಅಧಿವೇಶನದಲ್ಲಿ ಮಾತನಾಡುತ್ತೇನೆ. ಒಂದು ವೇಳೆ ವೈಯಕ್ತಿಕವಾಗಿ ಕೆಣಕಿದರೆ ಸುಮ್ಮನೆ ಇರುವುದಿಲ್ಲ ಎಂದು ಎಚ್ಚರಿಕೆ ನೀಡಿದರು. ಇನ್ನು, ಪಂಚ ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿರುವುದು ಮುಂದಿನ ಲೋಕಸಭೆ ಚುನಾವಣೆಗೆ ದಿಕ್ಸೂಚಿಯಾಗಿದೆ. ಬಲಿಷ್ಠ ನಾಯಕತ್ವ ಬೇಕು ಎಂದು ಜನತೆ ಹೇಳುತ್ತಿದ್ದಾರೆ. ಬಿಜೆಪಿ ವರಿಷ್ಠರು ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಆಯ್ಕೆಯಲ್ಲಿ ನಿರತರಾಗಿದ್ದಾರೆ. ಇದಾದ ಬಳಿಕ ದೆಹಲಿಗೆ ತೆರಳುವ ಕುರಿತು ಚಿಂತನೆ ನಡೆಸಲಾಗುವುದು ಎಂದು ಅವರು ತಿಳಿಸಿದರು.

ಕರ್ನಾಟಕದ ಲೂಟಿ ಹಣದಿಂದ ತೆಲಂಗಾಣ ಗೆಲುವು: ರಾಜ್ಯದಲ್ಲಿ ಲೂಟಿ ಹೊಡೆದ ಹಣವನ್ನು ತೆಲಂಗಾಣದಲ್ಲಿ ಖರ್ಚು ಮಾಡಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಂಚರಾಜ್ಯಗಳನ್ನೂ ಆವರಿಸಿಕೊಂಡೇ ಬಿಟ್ಟೆವು ಎಂದು ಬೀಗುತ್ತಿದ್ದ ಕಾಂಗ್ರೆಸ್‌ಗೆ ಗರ್ವಭಂಗ ಆಗಿದೆ. ತೆಲಂಗಾಣದ ಗೆಲುವು ಕಾಂಗ್ರೆಸ್‌ನ ಸ್ವಶಕ್ತಿಯಿಂದ ಪಡೆದ ಗೆಲುವಲ್ಲ. ದೇಶದೆಲ್ಲಿ ಕಾಂಗ್ರೆಸ್ ಪ್ರಭಾವ ಕುಗ್ಗಿರುವುದಕ್ಕೆ ಈ ಫಲಿತಾಂಶ ಸಾಕ್ಷಿ ಯಾಗಿದೆ ಎಂದರು.

ಅಕ್ಕಿ ಹಗರಣದ ತನಿಖೆ ಮುಗಿಯುವವರೆಗೆ ಚುನಾವಣೆ ಬೇಡ: ಎಸ್.ಗಂಗಾಧರ್

ಮತಗಟ್ಟೆ ಸಮೀಕ್ಷೆಗಳಲ್ಲಿ ಎರಡು ರಾಜ್ಯಗಳಲ್ಲಿ ಬಿಜೆಪಿ, ಎರಡು ರಾಜ್ಯಗಳಲ್ಲಿ ಕಾಂಗ್ರೆಸ್ ಎಂದು ಭವಿಷ್ಯ ಹೇಳಿದ್ದವು. ಎಲ್ಲಾ ಉಲ್ಟಾ ಆಗಿದೆ. ನರೇಂದ್ರ ಮೋದಿಯವರ ನಾಯಕತ್ವಕ್ಕೆ ಜನರು ಬೆಂಬಲ ನೀಡಿದ್ದಾರೆ. ತೆಲಂಗಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೂ ಆ ಪಕ್ಷದ ಮುಂದೆ ಸಾಕಷ್ಟು ಸವಾಲುಗಳು ಇವೆ. ಅನೇಕ ಆಸೆ, ಆಮಿಷಗಳನ್ನು ಮುಂದೊಡ್ಡಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ ಎಂದು ಹೇಳಿದರು. ಕರ್ನಾಟಕದ ನಾಯಕರ ಪ್ರಚಾರದಿಂದ ತೆಲಂಗಾಣದಲ್ಲಿ ಕಾಂಗ್ರೆಸ್ ಗೆದ್ದಿಲ್ಲ. ಕರ್ನಾಟಕದಿಂದ ಅಲ್ಲಿಗೆ ರವಾನೆಯಾದ ಆರ್ಥಿಕ ಚೀಲಗಳು ಗೆಲುವಿಗೆ ಕಾರಣವಾಗಿದೆ. ಇವರ ಸಮಾಜ ಸೇವೆ, ಅಭಿವೃದ್ಧಿ, ಜನಸೇವೆ ನೋಡಿ ತೆಲಂಗಾಣದ ಜನರು ತೀರ್ಮಾನ ಮಾಡಿದ್ದಲ್ಲ. ತೆಲಂಗಾಣದಲ್ಲಿ ಕಾಂಗ್ರೆಸ್ ಗೆಲ್ಲಲು ನಾನಾ ಕಾರಣಗಳಿವೆ, ಕುತಂತ್ರಗಳು ಕೆಲಸ ಮಾಡಿವೆ. ಲೋಕಸಭೆ ಚುನಾವಣೆ ಬಳಿಕ ಏನೇನಾಗುತ್ತದೆ ಎಂಬುದನ್ನು ನೋಡಬೇಕಿದೆ ಎಂದರು.

Latest Videos
Follow Us:
Download App:
  • android
  • ios