Loksabha Elections 2024: ಹಾಸನ, ಕೋಲಾರ, ಮಂಡ್ಯದಿಂದ ಜೆಡಿಎಸ್ ಸ್ಪರ್ಧೆ: ಎಚ್‌ಡಿಕೆ ಹೇಳಿದ್ದೇನು?
ರಾಜ್ಯದಲ್ಲಿ ಮೈತ್ರಿಕೂಟದಡಿ ಮಂಡ್ಯ. ಹಾಸನ, ಕೋಲಾರದಲ್ಲಿ ಜೆಡಿಎಸ್ ಅಭ್ಯರ್ಥಿ ನಿಲ್ಲಿಸಲು ಬಿಜೆಪಿ ಅವಕಾಶ ನೀಡಿದೆ. ನಾವು ಕೇಳಿದರೆ ಇನ್ನೂ ಎರಡು ಕ್ಷೇತ್ರ ಕೊಡುತ್ತಿದ್ದರು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು.
ಹಾಸನ (ಮಾ.14): ರಾಜ್ಯದಲ್ಲಿ ಮೈತ್ರಿಕೂಟದಡಿ ಮಂಡ್ಯ. ಹಾಸನ, ಕೋಲಾರದಲ್ಲಿ ಜೆಡಿಎಸ್ ಅಭ್ಯರ್ಥಿ ನಿಲ್ಲಿಸಲು ಬಿಜೆಪಿ ಅವಕಾಶ ನೀಡಿದೆ. ನಾವು ಕೇಳಿದರೆ ಇನ್ನೂ ಎರಡು ಕ್ಷೇತ್ರ ಕೊಡುತ್ತಿದ್ದರು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು. ನಗರದಲ್ಲಿ ಬುಧವಾರ ನಡೆದ ಜೆಡಿಎಸ್ ಮುಖಂಡರ ಹಾಗೂ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ ಜೆಡಿಎಸ್‌ಗೆ ಇನ್ನೂ ಎರಡು ಕ್ಷೇತ್ರ ಸಿಗುವ ಅವಕಾಶವಿತ್ತು ಎಂದು ಹೇಳಿದರು. ಆದರೆ, ಚುನಾವಣೆ ನಡೆಯುವ ರೀತಿ ನೋಡಿದರೆ ನಮ್ಮಿಂದ ಸೇವೆ ಪಡೆದವರು ಈಗ ಕೈ ಕೊಟ್ಟಿದ್ದಾರೆ ಎನ್ನುವ ಮೂಲಕ ಸಂಪನ್ಮೂಲದ ಕೊರತೆಯ ಸುಳಿವು ನೀಡಿದರು.
ಇದೇ ವೇಳೆ ಹಾಸನ ಲೋಕಸಭಾ ಕ್ಷೇತ್ರದಲ್ಲಿ ಪ್ರಜ್ವಲ್ ರೇವಣ್ಣ ಅಭ್ಯರ್ಥಿ ಅಲ್ಲ, ಕುಮಾರಸ್ವಾಮಿಯೇ ಈ ಕ್ಷೇತ್ರದ ಅಭ್ಯರ್ಥಿ ಎಂದುಕೊಂಡು ಗೆಲ್ಲಿಸಿ ಎಂದು ಗದ್ಗದಿತರಾಗಿ ಕುಮಾರಸ್ವಾಮಿ ಮನವಿ ಮಾಡಿದರು. ಇತ್ತೀಚೆಗೆ ಶ್ರೀರಾಮ ದೇವರ ಕಟ್ಟೆಯಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಪ್ರಜ್ವಲ್ ರೇವಣ್ಣ ಮುಂದಿನ ಅಭ್ಯರ್ಥಿ ಎಂದು ದೇವೇಗೌಡರು ಘೋಷಣೆ ಮಾಡಿದರು. ನಂತರ ಯಾವ ರೀತಿ ಚರ್ಚೆಗಳು ಹಾಸನ ಜಿಲ್ಲೆ ಹಾಗೂ ರಾಜ್ಯದಲ್ಲಿ ನಡೆಯುತ್ತಿದೆ ಎಂದು ಸೂಕ್ಷ್ಮವಾಗಿ ಗಮನಿಸುತ್ತಿದ್ದೇನೆ ಎಂದರು.
ಮೈತ್ರಿಯಿಂದ ಬಿಜೆಪಿ ಶಕ್ತಿ ಹೆಚ್ಚಾಗಿದೆ: ಬಿಜೆಪಿ- ಜೆಡಿಎಸ್ ಮೈತ್ರಿಯಿಂದ ಬಿಜೆಪಿಗೆ ಕೂಡ ಶಕ್ತಿ ಜಾಸ್ತಿಯಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ ೨ ಲಕ್ಷ ಜೆಡಿಎಸ್ ಮತಗಳಿವೆ. ಅದೇ ರೀತಿ ಶಿವಮೊಗ್ಗದಲ್ಲಿ ಪಕ್ಷದ ಶಕ್ತಿ ಇದೆ. ಅದನ್ನು ಹಾಸನ ಜಿಲ್ಲೆಯ ಬಿಜೆಪಿ ಮುಖಂಡರು, ಕಾರ್ಯಕರ್ತರು ಅರ್ಥ ಮಾಡಿಕೊಳ್ಳಬೇಕು. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಎರಡೂ ಪಕ್ಷದವರು ಜೆಡಿಎಸ್ ಸೋಲಿಸಲು ಮುಂದಾಗಿದ್ದರಿಂದ ಪಕ್ಷ ಕಡಿಮೆ ಮತ ಪಡೆದಿದೆ ಎಂದು ಅಭಿಪ್ರಾಯಪಟ್ಟರು.
ಜೆಡಿಎಸ್ ಎಲ್ಲಿದೆ? ಬಿಜೆಪಿ ಸ್ಪೋಕ್ಸ್ ಪರ್ಸನ್ ಆದ ಕುಮಾರಸ್ವಾಮಿ: ಡಿ.ಕೆ.ಶಿವಕುಮಾರ್
ಸಾಲ ಮಾಡಿ ತುಪ್ಪ ತಿನ್ನಿ: ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತ ಆರಂಭವಾಗಿ ಒಂದು ವರ್ಷ ಪೂರೈಸಿ ಪ್ರತಿ ದಿನ ೫ ಗ್ಯಾರಂಟಿ ಮೇಲೆ ಲೋಕಸಭೆ ಚುನಾವಣೆ ಪ್ರಚಾರ ನಡೆಸುತ್ತಿದ್ದಾರೆ. ‘೫೨ ಸಾವಿರ ಕೋಟಿ ವೆಚ್ಚದ ೫ ಗ್ಯಾರಂಟಿ ಬಗ್ಗೆ ಚರ್ಚೆ ಮಾಡುತ್ತಿದ್ದಾರೆ. ಗ್ಯಾರಂಟಿಗಳಿಗಾಗಿ ೧ ಲಕ್ಷದ ೫ ಸಾವಿರ ಕೋಟಿ ರು. ಒಂದೇ ವರ್ಷದಲ್ಲಿ ರಾಜ್ಯ ಸರ್ಕಾರ ಖರ್ಚು ಮಾಡಿದೆ. ಅದಕ್ಕೆ ಜಾಹೀರಾತು ಕೂಡ ಕೊಡುತ್ತಾರೆ. ಆದರೆ ಅವರು ಸಾಲ ಮಾಡಿ ತುಪ್ಪ ತಿನ್ನುವ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು.