ರಿಪೇರಿ ಮಾಡದಷ್ಟು ಹದಗೆಟ್ಟಿರುವ ಬಿಜೆಪಿ ಪಕ್ಷ: ಜಗದೀಶ್ ಶೆಟ್ಟರ್
ಬಿಜೆಪಿಯಲ್ಲಿ ದಿನೇ ದಿನೆ ಅಸಮಾಧಾನ ಭುಗಿಲೇಳುತ್ತಲೇ ಇದೆ. ಅಲ್ಲಿ ಯಾವುದೇ ಶಿಸ್ತು ಉಳಿದಿಲ್ಲ. ಈಗ ಆ ಪಕ್ಷ ರಿಪೇರಿ ಮಾಡದಷ್ಟು ಹದಗೆಟ್ಟು ಹೋಗಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದರು.
ಹುಬ್ಬಳ್ಳಿ (ನ.29): ಬಿಜೆಪಿಯಲ್ಲಿ ದಿನೇ ದಿನೆ ಅಸಮಾಧಾನ ಭುಗಿಲೇಳುತ್ತಲೇ ಇದೆ. ಅಲ್ಲಿ ಯಾವುದೇ ಶಿಸ್ತು ಉಳಿದಿಲ್ಲ. ಈಗ ಆ ಪಕ್ಷ ರಿಪೇರಿ ಮಾಡದಷ್ಟು ಹದಗೆಟ್ಟು ಹೋಗಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿ ನಾಯಕರು ದೆಹಲಿ ತನಕ ದೂರು ನೀಡಲು ಸಜ್ಜಾಗಿದ್ದಾರೆ ಅಂದರೆ ಏನರ್ಥ? ರಾಜ್ಯ ಬಿಜೆಪಿ ಅಧ್ಯಕ್ಷ, ವಿರೋಧ ಪಕ್ಷದ ನಾಯಕರನ್ನು ಆಯ್ಕೆ ಮಾಡುವಾಗ ಇಷ್ಟೊಂದು ಅಪಸ್ವರ ಬರಬಾರದು ಎಂದರು.
ಡಿ.ಕೆ.ಶಿವಕುಮಾರ್ ಮೇಲಿನ ಪ್ರಕರಣ ಹಿಂಪಡೆಯುವ ಸಂಬಂಧ ಪ್ರತಿಕ್ರಿಯಿಸಿದ ಅವರು, ಅಂದು ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿತ್ತು. ಅವರೇ ಈ ಪ್ರಕರಣವನ್ನು ಸಿಬಿಐಗೆ ಕೊಟ್ಟವರು. ಈಗ ಕಾಂಗ್ರೆಸ್ ಸರ್ಕಾರ ಬಂದಿದೆ. ರಾಜ್ಯದಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾರೆ. ಡಿ.ಕೆ.ಶಿವಕುಮಾರ್ ಮೇಲಿನ ಪ್ರಕರಣ ವಾಪಸ್ ಪಡೆದರೆ ತಪ್ಪೇನು? ಇದನ್ನು ನಾನು ಸ್ವಾಗತಿಸುವೆ ಎಂದರು. ಮಾಜಿ ಶಾಸಕ ಚಿಕ್ಕನಗೌಡರ ವಿಜೇಯಂದ್ರ ಭೇಟಿ ವಿಚಾರಕ್ಕೆ ಉತ್ತರಿಸಿದ ಶೆಟ್ಟರ್, ಯಾವಾಗ ಏನಾಗುತ್ತದೆ ಹೇಳಲು ಆಗಲ್ಲ. ಚಿಕ್ಕನಗೌಡರ ಕಾಂಗ್ರೆಸ್ ಸೇರ್ಪಡೆ ಕುರಿತು ನಾನೇ ಮಾತಾಡಿದ್ದೇನೆ. ಸ್ಥಳೀಯವಾಗಿ ಇನ್ನೂ ನಿರ್ಧಾರ ಕೈಗೊಂಡಿಲ್ಲ ಎಂದರು.
ಸರ್ಕಾರದ ತೀರ್ಮಾನವನ್ನು ಪ್ರಶ್ನಿಸಿ ಕೋರ್ಟ್‌ಗೆ ಹೋಗಲು ಎಲ್ಲರಿಗೂ ಹಕ್ಕಿದೆ: ಸಿದ್ದರಾಮಯ್ಯ
ಧ್ವನಿ ಎತ್ತಿದವರ ಮನೆಗೆ ಹೋಗಿ ಬಂದರೆ ಎಲ್ಲವೂ ಸರಿಯಾಗಲ್ಲ: ಯಾರು ಪಕ್ಷದ ವಿರುದ್ಧ ಧ್ವನಿ ಎತ್ತುತ್ತಾರೋ ಅವರ ಮನೆಗೆ ಹೋಗಿ ಬಂದರೆ ಎಲ್ಲವೂ ಸರಿಯಾಗುವುದಿಲ್ಲ ಎಂಬುದನ್ನು ಬಿಜೆಪಿ ವರಿಷ್ಠರು ಅರಿತುಕೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ, ವಿಧಾನ ಪರಿಷತ್ ಸದಸ್ಯ ಜಗದೀಶ್ ಶೆಟ್ಟರ್ ಹರಿಹಾಯ್ದರು.
ಸುದ್ದಿಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿ, ರಾಜ್ಯ ಬಿಜೆಪಿ ಇಂದು ರಿಪೇರಿ ಮಾಡಲಾಗದಷ್ಟು ದುಸ್ಥಿತಿಗೆ ತಲುಪಿದೆ. ಯಾರೇ ಅಧ್ಯಕ್ಷರಾದರೂ ಅದನ್ನು ರಿಪೇರಿ ಮಾಡಲು ಆಗುವುದಿಲ್ಲ. ಅರವಿಂದ ಲಿಂಬಾವಳಿ, ವಿ.ಸೋಮಣ್ಣ ಸೇರಿ ಹಲವರು ಅಸಮಾಧಾನದ ಧ್ವನಿ ಎತ್ತಿದ್ದಾರೆ. ಯಾರು ಪಕ್ಷದ ವಿರುದ್ಧ ಧ್ವನಿ ಎತ್ತುತ್ತಾರೋ ಅವರ ಮನೆಗೆ ಭೇಟಿ ನೀಡಿ ಬಂದರೆ ಎಲ್ಲವೂ ಸರಿಯಾಗುತ್ತೆ ಎಂದುಕೊಂಡಿರುವುದು ತಪ್ಪು. ಸ್ವತಃ ಬಿಜೆಪಿ ಕಾರ್ಯಕರ್ತರೇ ನನ್ನ ಬಳಿ ಬಂದು ನೋವು ಹೊರ ಹಾಕುತ್ತಿದ್ದಾರೆ. ತಮ್ಮದು ಲೀಡರ್ ಲೆಸ್ ಪಾರ್ಟಿ ಅಂತ ಅಳಲು ತೋಡಿಕೊಳ್ಳುತ್ತಿದ್ದಾರೆ ಎಂದರು.
ಶಾಸಕ ಎಚ್.ಸಿ.ಬಾಲಕೃಷ್ಣ ಪ್ರಧಾನಿ ಮೋದಿ ಬಳಿ ಕ್ಷಮೆ ಕೇಳಲಿ: ಎಂ.ಪಿ.ರೇಣುಕಾಚಾರ್ಯ
ಎಲ್ಲರ ಅಭಿಪ್ರಾಯ ಪಡೆಯಲಿ: ರಾಜ್ಯ ಸರ್ಕಾರ ಜಾತಿ ಗಣತಿ ವಿಚಾರದಲ್ಲಿ ಎಲ್ಲರ ಅಭಿಪ್ರಾಯ ಪಡೆಯಬೇಕು. ಅದರಲ್ಲಿರುವ ನ್ಯೂನತೆ ಹೊರಹಾಕುವ ಯತ್ನ ಮಾಡಬೇಕು. ಎಲ್ಲ ವರ್ಗದ ಪ್ರಮುಖರನ್ನು ಕರೆದು ಮಾತನಾಡುವ ಅವಶ್ಯಕತೆಯಿದೆ ಎಂದರು. ಭ್ರಷ್ಟಾಚಾರ, ಕುಟುಂಬ ರಾಜಕಾರಣದ ಬಗ್ಗೆ ಮಾತನಾಡುವ ನೈತಿಕತೆ ಬಿಜೆಪಿಯವರಿಗಿಲ್ಲ. ಬಿಜೆಪಿ ಇ.ಡಿ. ಮತ್ತು ಐಟಿ ಮೂಲಕ ರಾಜಕೀಯ ಮಾಡುತ್ತಿದೆ. ವಿಪಕ್ಷಗಳು ಇರಲೇ ಬಾರದು ಎನ್ನುವುದು ಬಿಜೆಪಿ ಚಿಂತನೆ. ಈಗ ದೇಶದಲ್ಲಿ ಅಘೋಷಿತ ತುರ್ತುಸ್ಥಿತಿ ನಿರ್ಮಾಣವಾಗಿದೆ ಎಂದು ಆರೋಪಿಸಿದರು.