ಸಚಿವ ಜೋಶಿಗೆ ಅವರಿಗೇನು ಅಂತರಾತ್ಮ ಇದೆಯಾ?: ಜಗದೀಶ್ ಶೆಟ್ಟರ್ ವ್ಯಂಗ್ಯ
ಕಾಂಗ್ರೆಸ್ ವರಿಷ್ಠರ ಸಭೆಯಲ್ಲಿ ಏನು ನಡೆಯುತ್ತದೆ ಎಂಬುದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರಿಗೆ ಕನಸು ಬೀಳುತ್ತದೆಯೇ? ಎಂದು ಮಾಜಿ ಮುಖ್ಯಮಂತ್ರಿ, ವಿಪ ಸದಸ್ಯ ಜಗದೀಶ್ ಶೆಟ್ಟರ್ ವ್ಯಂಗ್ಯವಾಡಿದರು.
ಹುಬ್ಬಳ್ಳಿ (ಡಿ.02): ಕಾಂಗ್ರೆಸ್ ವರಿಷ್ಠರ ಸಭೆಯಲ್ಲಿ ಏನು ನಡೆಯುತ್ತದೆ ಎಂಬುದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರಿಗೆ ಕನಸು ಬೀಳುತ್ತದೆಯೇ? ಎಂದು ಮಾಜಿ ಮುಖ್ಯಮಂತ್ರಿ, ವಿಪ ಸದಸ್ಯ ಜಗದೀಶ ಶೆಟ್ಟರ್ ವ್ಯಂಗ್ಯವಾಡಿದರು. ಕಾಂಗ್ರೆಸ್‌ನ ರಾಷ್ಟ್ರೀಯ ನಾಯಕ ಶಶಿ ತರೂರ್ ಸಭೆಯಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತು ಚರ್ಚೆ ನಡೆದಿದೆ ಎಂಬ ಜೋಶಿ ಆರೋಪಕ್ಕೆ ತಿರುಗೇಟು ನೀಡಿದ ಶೆಟ್ಟರ್, ಜೋಶಿ ಅವರಿಗೇನು ಅಂತರಾತ್ಮ ಇದೆಯಾ?
ದೃತರಾಷ್ಟ್ರನಿಗೆ ಸಂಜಯ ಹೇಳಿದಂತೆ ಜೋಶಿ ಅವರಿಗೆ ಭವಿಷ್ಯ ಹೇಳುವಂತಹ ಯಾವುದಾದರೂ ಶಕ್ತಿ ಇದೆಯಾ? ಅವರಿಗೆ ಸುಮ್ಮನೆ ಆರೋಪ ಮಾಡೋದು, ಪ್ರಚಾರ ತೆಗೆದುಕೊಳ್ಳುವುದು ಬಿಟ್ಟರೆ ಇದರ ಹಿಂದೆ ಏನು ಇಲ್ಲ. ಇದು ಸಂಪೂರ್ಣ ಆಧಾರ ರಹಿತ ಆರೋಪವಾಗಿದೆ. ಜವಾಬ್ದಾರಿ ಸ್ಥಾನದಲ್ಲಿ ಇರುವವರು ಈ ರೀತಿಯ ಬೇಜವಾಬ್ದಾರಿ ಹೇಳಿಕೆ ನೀಡಬಾರದು ಎಂದರು. ರಾಜ್ಯ ಸರ್ಕಾರವು ₹ 1 ಸಾವಿರ ಕೋಟಿ ಸಂಗ್ರಹಿಸಿ ತೆಲಂಗಾಣ ಚುನಾವಣೆಗಾಗಿ ನೀಡುತ್ತಿದೆ ಎಂದು ಪ್ರಹ್ಲಾದ ಜೋಶಿ ಆರೋಪಿಸಿದ್ದರು. ಈಚೆಗೆ ಬೆಂಗಳೂರಿನಲ್ಲಿ ಸಿಕ್ಕ ಹಣವೂ ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದು ಎಂದಿದ್ದಾರೆ.
ಪಂಚರಾಜ್ಯಗಳ ಶಾಸಕರ ರಕ್ಷಿಸಿ ಇಡುವಂತಹ ಸ್ಥಿತಿ ಬರಲ್ಲ: ಡಿಕೆಶಿ
ಕೇಂದ್ರ ಸರ್ಕಾರದ ಬಳಿಯೇ ಐಟಿ, ಈಡಿ, ಸಿಬಿಐ ಇದೆ. ಈ ಕುರಿತು ತನಿಖೆ ಮಾಡಿ ಅದು ಯಾರ ಹಣ, ಯಾರ ಮನೆ ಅಂತ ಜನರಿಗೆ ತಿಳಿಸಲಿ ಎಂದು ಸವಾಲು ಹಾಕಿದರು. ಕಾಂಗ್ರೆಸ್ಸಿನಲ್ಲಿ ಅಸಮಾಧಾನ ವಿಚಾರಕ್ಕೆ ಉತ್ತರಿಸಿದ ಶೆಟ್ಟರ್, ಇದು ಸಾರ್ವಜನಿಕವಾಗಿ ಚರ್ಚೆ ಮಾಡುವ ವಿಚಾರವಲ್ಲ. ಆದರೆ, ಅವರಿಗೆ ವೈಯಕ್ತಿಕ ಸಮಸ್ಯೆ ಆದಾಗ ಮುಖ್ಯಮಂತ್ರಿಗಳಿಗೆ ಪತ್ರ ಬರೆಯುತ್ತಾರೆ, ತಮ್ಮ ಭಾವನೆ ವ್ಯಕ್ತಪಡಿಸುತ್ತಾರೆ. ಅದನ್ನು ಮುಖ್ಯಮಂತ್ರಿಗಳು ಸರಿ ಮಾಡುತ್ತಾರೆ ಎಂದರು.
ನಾನು ಬಿಜೆಪಿಗೆ ಹೋಗೋದು ಹಸಿ ಸುಳ್ಳು: ನಾನು ಭಾರತೀಯ ಜನತಾ ಪಕ್ಷಕ್ಕೆ ವಾಪಸ್ ಹೋಗುವೆ ಎನ್ನುವ ಕೆ.ಎಸ್.ಈಶ್ವರಪ್ಪ ಹೇಳಿಕೆ ಹಸಿಯಾದ ಸುಳ್ಳು ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಹೇಳಿದರು. ಶೆಟ್ಟರ್ ಬಿಜೆಪಿಗೆ ಬರುತ್ತಾರೆ, ಬರಬೇಕು ಎಂದು ಮಾಜಿ ಸಚಿವ ಕೆ.ಎಸ್.ಈಶ್ವರ ಹೇಳಿಕೆಗೆ ವಿಜಯಪುರದಲ್ಲಿ ಶುಕ್ರವಾರ ಸ್ಪಷ್ಟನೆ ನೀಡಿದ ಅವರು, ಬೇರೆಯವರು ಕಾಂಗ್ರೆಸ್‌ಗೆ ಬರಬಾರದು ಎಂದು ನಾನು ಬಿಜೆಪಿಗೆ ವಾಪಸ್ ಬರುತ್ತಿದ್ದೇನೆ ಎಂದು ಬಿಂಬಿಸಲಾಗುತ್ತಿದೆ. ನಾನು ಮರಳಿ ಬಿಜೆಪಿಗೆ ಹೋಗುವ ಮಾತೇ ಇಲ್ಲ. ನನಗೆ ಮತ್ತು ಲಕ್ಷ್ಮಣ ಸವದಿಯವರಿಗೆ ಟಿಕೆಟ್ ತಪ್ಪಿಸಿದ ಪರಿಣಾಮವನ್ನು ಜನ ತೋರಿಸಿದ್ದಾರೆ.
ಶಾಲೆಗಳಿಗೆ ಬಾಂಬ್ ಬೆದರಿಕೆ - ವೀಕ್ ಲೀಡರ್ ಶಿಪ್ ಕಾರಣ: ಗೋವಿಂದ ಕಾರಜೋಳ
ಲೋಕಸಭೆ ಚುನಾವಣೆಯಲ್ಲೂ ಇದು ಮುಂದುವರಿಯಲಿದೆ. ಬಿಜೆಪಿಯವರು ಕಾಂಗ್ರೆಸ್‌ಗೆ ಹೋಗದಂತೆ ತಡೆಯಲು ನನ್ನ ಹೆಸರು ಬಳಕೆ ಮಾಡ್ತಿದ್ದಾರೆ. ಶೆಟ್ಟರ್ ಅವರೇ ಬಿಜೆಪಿಗೆ ಬಂದು ಬಿಡ್ತಾರೆ ನೀವು ಕಾಂಗ್ರೆಸ್‌ಗೆ ಹೋಗಬೇಡಿ ಎಂದು ಹೇಳುತ್ತಿದ್ದಾರೆ ಎಂದರು. ಜನಸಂಘ ಸಮಯದಿಂದ ನಮ್ಮ ತಂದೆ, ಚಿಕ್ಕಪ್ಪನವರು ಸಂಘಟನೆ ಮಾಡಿಕೊಂಡು ಬಂದಿದ್ದರು. ಅವರ ಕಡೆಯ ವ್ಯಕ್ತಿಗೆ ಸಣ್ಣ ಎಂಎಲ್ಎ ಟಿಕೆಟ್ ಕೊಡೋಕೆ ಆಗಲಿಲ್ಲ. ಜನಸಂಘದಿಂದ ಬಂದವರಿಗೆ ಬಿಜೆಪಿ ಟಿಕೆಟ್ ಕೊಟ್ಟಿಲ್ಲ, ಬಿಜೆಪಿ ಯಾರನ್ನು ಕಡೆಗಣಿಸುತ್ತಿದೆ ಅನ್ನೋದಕ್ಕೆ ಇದು ತಾಜಾ ಉದಾಹರಣೆ. ಹಿಂದುತ್ವವನ್ನು ರಾಜಕಾರಣಕ್ಕೆ ಬಳಸಬಾರದು. ಎಲ್ಲರ ಸೌಹಾರ್ದತೆ ಕಾಪಾಡುವುದು ಮುಖ್ಯ ಎಂದು ಶೆಟ್ಟರ್ ಹೇಳಿದರು.