Asianet Suvarna News Asianet Suvarna News

ಸಿದ್ದು ಸುಳ್ಳು ಹೇಳಿದ್ದಾರೆ, ಯಾವ ಜಿಲ್ಲೆಗೂ ಬರ ಪರಿಹಾರ ಹೋಗಿಲ್ಲ: ಈಶ್ವರಪ್ಪ

ಮುಖ್ಯಮಂತ್ರಿ ಸಿದ್ದರಾಮಯ್ಯ ಬರಪೀಡಿತ ಪ್ರದೇಶಗಳಿಗೆ ಹಣ ಬಿಡುಗಡೆ ಮಾಡಿದ ಪಟ್ಟಿ ಬಿಡುಗಡೆಗೊಳಿಸಿದರಾದರೂ ಯಾವುದೇ ಜಿಲ್ಲೆಗೂ ನಯಾ ಪೈಸೆ ಹೋಗಿಲ್ಲ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್‌.ಈಶ್ವರಪ್ಪ ಟೀಕಿಸಿದ್ದಾರೆ. 

Ex DCM KS Eshwarappa Slams On CM Siddaramaiah gvd
Author
First Published Nov 10, 2023, 9:43 PM IST

ಬೆಂಗಳೂರು (ನ.10): ಮಖ್ಯಮಂತ್ರಿ ಸಿದ್ದರಾಮಯ್ಯ ಬರಪೀಡಿತ ಪ್ರದೇಶಗಳಿಗೆ ಹಣ ಬಿಡುಗಡೆ ಮಾಡಿದ ಪಟ್ಟಿ ಬಿಡುಗಡೆಗೊಳಿಸಿದರಾದರೂ ಯಾವುದೇ ಜಿಲ್ಲೆಗೂ ನಯಾ ಪೈಸೆ ಹೋಗಿಲ್ಲ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್‌.ಈಶ್ವರಪ್ಪ ಟೀಕಿಸಿದ್ದಾರೆ. ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬರಪೀಡಿತ ಪ್ರದೇಶಗಳಿಗೆ 300 ಕೋಟಿ ರು.ಗಿಂತ ಹೆಚ್ಚು ಹಣ ನೀಡಿರುವುದಾಗಿ ಮುಖ್ಯಮಂತ್ರಿಗಳು ತಿಳಿಸಿದ್ದಾರೆ. ಆದರೆ, ಹಲವು ಜಿಲ್ಲಾಧಿಕಾರಿಗಳ ಜತೆ ಚರ್ಚೆ ನಡೆಸಿದ್ದೇನೆ. ಯಾವುದೇ ಜಿಲ್ಲೆಗೂ ಒಂದು ರುಪಾಯಿ ಹೋಗಿಲ್ಲ. ಒಬ್ಬ ರೈತರಿಗೂ ಒಂದು ರುಪಾಯಿ ನೀಡಿಲ್ಲ. ಭೀಕರ ಬರಗಾಲದಿಂದ ಜನರು ಗುಳೆ ಹೋಗುತ್ತಿದ್ದಾರೆ ಎಂದು ಹರಿಹಾಯ್ದರು.

ಬರದ ಬಗ್ಗೆ ಮುಖ್ಯಮಂತ್ರಿಗಳು ಸುಳ್ಳು ಹೇಳುತ್ತಿದ್ದಾರೆ. ಶಾಸಕರ ನಿಧಿಗೆ 50 ಲಕ್ಷ ರು. ಬಿಡುಗಡೆ ಮಾಡಿರುವುದಾಗಿ ಹೇಳಿದ್ದಾರೆ. ಆದರೆ, ಯಾವ ಶಾಸಕರಿಗೂ ದುಡ್ಡು ಹೋಗಿಲ್ಲ. ರೈತರಿಗೆ ದ್ರೋಹ ಮಾಡುವ ಮೊದಲನೇ ಮುಖ್ಯಮಂತ್ರಿ ಇವರಾಗಿದ್ದಾರೆ. ರೈತರಿಗೆ ಹಣ ತಲುಪಿಸುವಲ್ಲಿ ಸರ್ಕಾರ ಕ್ರಮ ಕೈಗೊಳ್ಳಬೇಕು ಮತ್ತು ಶಾಸಕರಿಗೂ ಹಣ ಬಿಡುಗಡೆ ಎಂದು ಆಗ್ರಹಿಸಿದರು. ಕಾಂಗ್ರೆಸ್‌ ಸರ್ಕಾರವು ಎಸ್‌ಸಿ/ಎಸ್‌ಟಿಗೆ ಮೀಸಲಿಟ್ಟಿದ್ದ 11 ಸಾವಿರ ಕೋಟಿ ರು. ಅನ್ನೇ ಬಳಸಿದೆ. ರಾಜ್ಯದಲ್ಲಿ ಬಡವರ ಆಶ್ರಯ ಮನೆಗಳ ಕೆಲಸ ನಡೆದಿಲ್ಲ. ರಾಜ್ಯವು ಕಾಂಗ್ರೆಸ್‌ ಪಕ್ಷಕ್ಕೆ ಭ್ರಷ್ಟಾಚಾರದ ಕೇಂದ್ರವಾಗಿದೆ. ಇದು ನಾಚಿಕಗೇಡಿನ ಸರ್ಕಾರ ಎಂದು ವಾಗ್ದಾಳಿ ನಡೆಸಿದರು.

ಕಾಂಗ್ರೆಸ್ ನಾಯಕರೇ ಕೇಂದ್ರದ ಕಡೆ ಬೆಟ್ಟು ಮಾಡುವುದನ್ನು ಬಿಡಿ: ಕೆ.ಎಸ್.ಈಶ್ವರಪ್ಪ

ಸರ್ಕಾರ ಮೋಜು-ಮಸ್ತಿಯಲ್ಲಿ ಮುಳುಗಿದೆ: ರಾಜ್ಯದಲ್ಲಿ ಭೀಕರ ಬರಗಾಲ ಆವರಿಸಿ ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ. ಆದರೆ ಕಾಂಗ್ರೆಸ್ ಸರ್ಕಾರ ರೈತರ ಹಿತ ಕಾಪಾಡದೆ ಮೋಜು-ಮಸ್ತಿಯಲ್ಲಿ ಮುಳುಗಿದೆ. ಈ ಸರ್ಕಾರ ರೈತರ ಪಾಲಿಗೆ ಇದ್ದು ಸತ್ತಂತಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಆರೋಪಿಸಿದರು. ತಾಲೂಕಿನ ಹಿರೇಅರಳಿಹಳ್ಳಿ, ಹೊಸೂರು, ಬೇವೂರು ಗ್ರಾಮಗಳ ರೈತರ ಜಮೀನುಗಳಲ್ಲಿ ಬಿಜೆಪಿ ವತಿಯಿಂದ ಮಂಗಳವಾರ ಸಂಜೆ ಬರ ಅಧ್ಯಯನ ನಡೆಸಿ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರ ಬರಗಾಲ ಘೋಷಣೆ ಮಾಡಿ ಎರಡ್ಮೂರು ತಿಂಗಳಾದರೂ ಇದುವರೆಗೂ ರೈತರಿಗೆ ನೈಯಾಪೈಸೆ ಬರ ಪರಿಹಾರ ನೀಡಲು ಆಗುತ್ತಿಲ್ಲ.

ಗ್ಯಾರಂಟಿ ಯೋಜನೆಗಳಿಂದ ಸರ್ಕಾರದ ಬೊಕ್ಕಸ ಖಾಲಿಯಾಗಿದೆ. ರೈತರಿಗೆ ಎಲ್ಲಿಂದ ಪರಿಹಾರ ನೀಡುತ್ತಾರೆ? ಇಂತಹ ಭ್ರಷ್ಟ ಸರ್ಕಾರ ಬಹಳ ದಿನ ರಾಜ್ಯದಲ್ಲಿ ಉಳಿಯುವುದಿಲ್ಲ ಎಂದರು. ವಿದ್ಯುತ್ ಕೊರತೆಯಿಂದ ರೈತರು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಕೊಳವೆಬಾವಿಗೆ ಮೋಟಾರ್ ಅಳವಡಿಸಲು ರೈತರು ತಮ್ಮ ಸ್ವಂತ ಖರ್ಚಿನಲ್ಲಿ ನಿರ್ವಹಿಸಿಕೊಳ್ಳಬೇಕು ಎನ್ನುವ ಆದೇಶವನ್ನು ರಾಜ್ಯ ಸರ್ಕಾರ ತಕ್ಷಣವೇ ಹಿಂಪಡೆಯಬೇಕು. ರೈತ ಹಿತ ಕಾಪಾಡಬೇಕಾದ ಸರ್ಕಾರ ಜನರಿಗೆ ಇನ್ನಿಲ್ಲದ ಸಮಸ್ಯೆಗಳನ್ನು ಸೃಷ್ಟಿಸಿ ರೈತರು ಸಾಲ-ಸೋಲಕ್ಕೆ ಸಿಲುಕಿ ಆತ್ಮಹತ್ಯೆ ಮಾಡಿಕೊಳ್ಳುವಂತಹ ಹೀನಾಯ ಸ್ಥಿತಿಗೆ ತಲುಪಲು ಸರ್ಕಾರದ ಆಡಳಿತ ವೈಖರಿಯೇ ಕಾರಣವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಿದ್ದರಾಮಯ್ಯಗೆ ಸುಳ್ಳು ಹೇಳುವುದರಲ್ಲಿ ನೊಬೆಲ್ ಪ್ರಶಸ್ತಿ ನೀಡಬೇಕು: ಕೆ.ಎಸ್.ಈಶ್ವರಪ್ಪ

ಸಂಸದ ಸಂಗಣ್ಣ ಕರಡಿ ಹಾಗೂ ಮಾಜಿ ಸಚಿವ ಹಾಲಪ್ಪ ಆಚಾರ ಮಾತನಾಡಿ, ಕಾಂಗ್ರೆಸ್ ಆಡಳಿತಕ್ಕೆ ಬಂದು ನಾಲ್ಕೈದು ತಿಂಗಳಾದರೂ ಯಾವುದೇ ಅಭಿವೃದ್ಧಿ ಕಾರ್ಯಗಳಿಲ್ಲ. ಜನರ ಸಮಸ್ಯೆಗಳನ್ನು ಆಲಿಸುವವರಿಲ್ಲ. ಈ ಸರ್ಕಾರ ಕೇವಲ ವರ್ಗಾವಣೆ ಹಾಗೂ ಭ್ರಷ್ಟಾಚಾರದಲ್ಲಿ ತೊಡಗಿದೆ. ರಾಜ್ಯದ ಜನರ ಸಂಕಷ್ಟಕ್ಕೆ ಕಿಂಚತ್ತೂ ಸ್ಪಂದಿಸುತ್ತಿಲ್ಲ ಎಂದರು.

Follow Us:
Download App:
  • android
  • ios