ಕೇಡಿ ಸಿದ್ದರಾಮಯ್ಯ ಸಚಿವ ಸಂಪುಟ, ಕಳ್ಳರ ಗುಂಪು: ಕೆ.ಎಸ್.ಈಶ್ವರಪ್ಪ ಆಕ್ರೋಶ
ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಪ್ರಕರಣ ಸಿಬಿಐಗೆ ವಹಿಸಲು ನೀಡಿರುವ ಅನುಮತಿ ಹಿಂಪಡೆಯುವ ಸಚಿವ ಸಂಪುಟ ನಿರ್ಧಾರ ಪ್ರಜಾಪ್ರಭುತ್ವಕ್ಕೆ ಮಾಡಿದ ಅಪಮಾನ. ಕೇಡಿ ಸಿದ್ದು ಸಚಿವ ಸಂಪುಟ ಕಳ್ಳರ ಗುಂಪಾಗಿದೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಆಕ್ರೋಶ ವ್ಯಕ್ತಪಡಿಸಿದರು.
ಶಿವಮೊಗ್ಗ (ನ.25): ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಪ್ರಕರಣ ಸಿಬಿಐಗೆ ವಹಿಸಲು ನೀಡಿರುವ ಅನುಮತಿ ಹಿಂಪಡೆಯುವ ಸಚಿವ ಸಂಪುಟ ನಿರ್ಧಾರ ಪ್ರಜಾಪ್ರಭುತ್ವಕ್ಕೆ ಮಾಡಿದ ಅಪಮಾನ. ಕೇಡಿ ಸಿದ್ದು ಸಚಿವ ಸಂಪುಟ ಕಳ್ಳರ ಗುಂಪಾಗಿದೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಆಕ್ರೋಶ ವ್ಯಕ್ತಪಡಿಸಿದರು. ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಕಳ್ಳ ಎಂದಿದ್ದರೂ ಕಳ್ಳನೇ. ಕಾಂಗ್ರೆಸ್ ಗೆ 135 ಸೀಟ್ ಬಂದಿದೆ ಅಂತಾ ಮಾಡಬಾರದ್ದನ್ನೆಲ್ಲಾ ಮಾಡ್ತಿದ್ದಾರೆ ಎಂದು ಹರಿಹಾಯ್ದರು.
ಡಿ.ಕೆ.ಶಿವಕುಮಾರ್ ಅವರದು 23 ಕೋಟಿ ಇದ್ದ ವರಮಾನ 163 ಕೋಟಿಗೆ ಹೆಚ್ಚಳವಾಗಿದೆ. ಹಾಗಾಗಿ ಯಡಿಯೂರಪ್ಪ ಸಿಎಂ ಆಗಿದ್ದಾಗ ಸಿಬಿಐಗೆ ಕೊಟ್ಟಿದ್ದರು. ನ್ಯಾಯಾಲಯಕ್ಕೆ ಹೋದ್ರು ನ್ಯಾಯಾಲಯ ತಿರಸ್ಕಾರ ಮಾಡ್ತು. ಇದು ಇಡೀ ದೇಶಕ್ಕೆ ಗೊತ್ತು. ಸಿಬಿಐ ತನಿಖೆ ಅಂತಿಮ ಹಂತಕ್ಕೆ ಬಂದಿದೆ. ಇಂತಹ ಸಂದರ್ಭದಲ್ಲಿ ಕೇಡಿ ಸಿದ್ದು ಅವರ ದರೋಡೆಕೋರರ ತಂಡ ಅಧಿಕಾರ ದುರುಪಯೋಗ ಮಾಡಿಕೊಂಡಿದೆ ಎಂದು ಚಾಟಿ ಬೀಸಿದರು.
ಅಭಿವೃದ್ಧಿ ಕಾಮಗಾರಿಗಳಲ್ಲಿ ವಿಳಂಬ ಧೋರಣೆ ಸಹಿಸಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಖಡಕ್ ಎಚ್ಚರಿಕೆ
ಈ ಹಿಂದೆ ಗೃಹ ಸಚಿವರಾಗಿದ್ದ ಜಾರ್ಜ್ ಮೇಲೆ ಆಪಾದನೆ ಬಂದಾಗ ರಾಜೀನಾಮೆ ಕೊಟ್ಟು ನಂತರ ಸಚಿವ ಸಂಪುಟಕ್ಕೆ ಸೇರಿದರು. ನನ್ನ ಮೇಲೆ ಆಪಾದನೆ ಬಂತು ನಾನು ರಾಜೀನಾಮೆ ಕೊಟ್ಟೆ. ಸಿಬಿಐಗೆ ತನಿಖೆಗೆ ವಹಿಸಲು ಅನುಮತಿ ಇದೆ. ಆದರೆ, ಹಿಂಪಡೆಯಲು ಅನುಮತಿ ಬೇಕಿಲ್ಲ ಎಂದು ಸುಪ್ರೀಂ ಕೋರ್ಟ್ ತಜ್ಞರು ಹೇಳುತ್ತಿದ್ದಾರೆ. ಸಿದ್ದರಾಮಯ್ಯ ಅವರಿಗೆ ಈ ವಿಷಯ ಗೊತ್ತಿಲ್ವಾ ಎಂದು ಪ್ರಶ್ನಿಸಿದರು. ಡಿ.ಕೆ.ಶಿವಕುಮಾರ್ ವಾಪಸ್ ಪಡೆಯಬೇಕು ಅಂತಾ ಹಚ್ಚಿ ಕೊಟ್ಟು ಸಚಿವ ಸಂಪುಟ ಸಭೆಗೆ ಹೋಗಿಲ್ಲ. ಇದು ದೇಶದಲ್ಲೇ ದೊಡ್ಡ ಅಪರಾಧ. ಸಚಿವ ಸಂಪುಟ ದುರ್ಬಳಕೆ ಮಾಡಿಕೊಳ್ಳುತ್ತಿರುವ ಮೊದಲ ವ್ಯಕ್ತಿ ಡಿ.ಕೆ.ಶಿವಕುಮಾರ್ ಎಂದು ಆರೋಪಿಸಿದರು.
ರಾಜ್ಯದ ಜನತೆ ಮುಂದೆ ಸಿದ್ದರಾಮಯ್ಯ ಸರ್ಕಾರ ಬೆತ್ತಲಾಗಿದೆ: ಕೇಂದ್ರ ಸಚಿವ ನಾರಾಯಣಸ್ವಾಮಿ
ನಮಗೂ ಮುಂದೆ ಇಂತಹ ಸ್ಥಿತಿ ಬರಬಹುದು ಅಂತಾ ಅವರ ಕೇಂದ್ರದ ನಾಯಕರು ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಒಪ್ಪಿಕೊಂಡಿರಬಹುದು. ಸಿದ್ದರಾಮಯ್ಯ ಅವರಿಗೆ ಖುರ್ಚಿ ಮುಖ್ಯನಾ ಹೊರತು ನ್ಯಾಯವಲ್ಲ. ದೇಶದಲ್ಲಿ ಕಾಂಗ್ರೆಸ್ ಅನ್ನು ಜನ ಕಿತ್ತು ಹಾಕಿದ್ದಾರೆ. ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಯಲ್ಲಿ ಮೋಸ ಮಾಡಿ ಅಧಿಕಾರಕ್ಕೆ ಬಂದಿದ್ದಾರೆ. ಮುಂದಿನ ಚುನಾವಣೆಯಲ್ಲಿ ಜನ ಬುದ್ದಿ ಕಲಿಸುತ್ತಾರೆ. ಸಚಿವ ಸಂಪುಟಕ್ಕೆ ಬೆಲೆ ಇಲ್ಲ ಅಂತಾ ಇವರು ತೀರ್ಮಾನ ಮಾಡಿದ್ದಾರೆ. ಆದರೆ, ಸಂವಿಧಾನಕ್ಕೆ ಬೆಲೆ ಇದೆ, ಅಲ್ಲಿ ಸರಿಯಾದ ತೀರ್ಪು ಬರುತ್ತದೆ. ಸಿಬಿಐ ತನಿಖೆ ಹಿಂಪಡೆಯುವುದನ್ನೇ ವಾಪಸ್ ಪಡೆಯಬೇಕು. ಗೂಂಡಾಗಳಿಗೆ ಕಾಂಗ್ರೆಸ್ ಸರ್ಕಾರ ರಕ್ಷಣೆ ಕೊಡಬಾರದು ಎಂದು ವಾಗ್ದಾಳಿ ನಡೆಸಿದರು.