Asianet Suvarna News Asianet Suvarna News

ಮುಡಾ ಪ್ರಕರಣದ ಬಗ್ಗೆ ಮಾತನಾಡುವಷ್ಟು ದೊಡ್ಡವನು ನಾನಲ್ಲ: ಶ್ರೀರಾಮುಲು

ಮುಡಾ ಹಾಗೂ ವಾಲ್ಮೀಕಿ ಹಗರಣದಲ್ಲಿ ತಪ್ಪು ನಡೆದಿದೆ, ಕಾಂಗ್ರೆಸ್ ಸರ್ಕಾರದ ಹಗರಣ ಈಗಾಗಲೇ ರಾಜ್ಯಪಾಲರ ಅಂಗಳದಲ್ಲಿದೆ.  ಪ್ರಕರಣದ ಬಗ್ಗೆ ಮಾತನಾಡುವಷ್ಟು ದೊಡ್ಡವನು ನಾನಲ್ಲ ಎಂದು ಜಿಲ್ಲೆಯ ಕಾರಟಗಿಯಲ್ಲಿ ಮಾಜಿ ಸಚಿವ ಬಿ.ಶ್ರೀರಾಮುಲು ತಿಳಿಸಿದರು.

ex minister b sriramulu react on muda scam at koppal gvd
Author
First Published Aug 1, 2024, 6:58 PM IST | Last Updated Aug 2, 2024, 11:05 AM IST

ಕೊಪ್ಪಳ (ಆ.01): ಮುಡಾ ಹಾಗೂ ವಾಲ್ಮೀಕಿ ಹಗರಣದಲ್ಲಿ ತಪ್ಪು ನಡೆದಿದೆ, ಕಾಂಗ್ರೆಸ್ ಸರ್ಕಾರದ ಹಗರಣ ಈಗಾಗಲೇ ರಾಜ್ಯಪಾಲರ ಅಂಗಳದಲ್ಲಿದೆ.  ಪ್ರಕರಣದ ಬಗ್ಗೆ ಮಾತನಾಡುವಷ್ಟು ದೊಡ್ಡವನು ನಾನಲ್ಲ ಎಂದು ಜಿಲ್ಲೆಯ ಕಾರಟಗಿಯಲ್ಲಿ ಮಾಜಿ ಸಚಿವ ಬಿ.ಶ್ರೀರಾಮುಲು ತಿಳಿಸಿದರು. ನಂತರ ಮಾತನಾಡಿದ ಅವರು, ಹೀಗಾಗಿ ನಾನು ಈ ಸಂಧರ್ಭದಲ್ಲಿ ಮಾತನಾಡುವುದು ತಪ್ಪಾಗುತ್ತದೆ. ಈ ಬಗ್ಗೆ ಗವರ್ನರ್ ತೀರ್ಮಾನ ತೆಗೆದುಕೊಳ್ಳುತ್ತಾರೆ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಸಾಕಷ್ಟು ಭ್ರಷ್ಟಾಚಾರ, ಕೊಲೆ, ದರೋಡೆ ಹಾಗೂ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದಾರೆ ಎಂದರು.

ಕಾಂಗ್ರೆಸ್ ಸರ್ಕಾರದ ಈ ಭ್ರಷ್ಟಾಚಾರ ತಡೆಯಲು ಹಾಗೂ ಸರ್ಕಾರಕ್ಕೆ ಎಚ್ಚರ ನೀಡಲು ಇದೇ 3ಕ್ಕೆ ಪಾದಯಾತ್ರೆ ಮಾಡುತ್ತಿದ್ದೇವೆ. ಬೆಂಗಳೂರಿನಿಂದ ಮೈಸೂರಿನ ತನಕ ಪಾದಯಾತ್ರೆ ಮಾಡುತ್ತಿದ್ದೇವೆ. ಪಾದಯಾತ್ರೆಯಲ್ಲಿ ಯಾವುದೇ ಬಿನ್ನಮತವಿಲ್ಲದೆ ಎಲ್ಲರೂ ಭಾಗಿಯಾಗ್ತಾರೆ. ಸಿದ್ದರಾಮಯ್ಯ ಅವರ ಮುಡಾ ಪ್ರಕರಣದ ಕುರಿತು ಪ್ರತಿಕ್ರಿಯಿಸಿದ ರಾಮುಲು, ಉಪ್ಪು ತಿಂದ ಮೇಲೆ ಯಾರಾದರೂ ಸಹ ನೀರು ಕುಡಿಯಬೇಕು. ಈ ಪ್ರಕರಣದ ಬಗ್ಗೆ ಮಾತನಾಡುವಷ್ಟು ದೊಡ್ಡವನು ನಾನಲ್ಲ ಎಂದರು. ಈ ಪ್ರಕರಣದಲ್ಲಿ ಕಾನೂನು ತನ್ನ ಕೆಲಸ ಮಾಡುತ್ತದೆ. ನಾವು ಕಾನೂನಿಗೆ ಗೌರವ ಕೊಡುತ್ತೇವೆ ಬಿಜೆಪಿ ಪಕ್ಷ ತೆಗೆದುಕೊಳ್ಳುವ ತೀರ್ಮಾನಕ್ಕೆ ನಾವು ಬದ್ಧರಾಗಿರುತ್ತೇವೆ ಎಂದರು.

ಹೈಕಮಾಂಡ್‌ ಸೂಚನೆಯಂತೆ ಕಾರ್ಯ ನಿರ್ವಹಿಸುವುದು ನಮ್ಮ ಕೆಲಸ: ಆರ್‌.ಅಶೋಕ್‌

ಬಿಜೆಪಿ ಪಾದಯಾತ್ರೆಯಲ್ಲಿ ನಾನು ನನ್ನ ಸ್ನೇಹಿತ ಜಿ. ಜನಾರ್ದನ ರೆಡ್ಡಿ ಹಾಗೂ ಶಾಸಕ ದೊಡ್ಡನಗೌಡ ಸೇರಿ ಎಲ್ಲ ನಾಯಕರು ಪಾಲ್ಗೊಳ್ಳುತ್ತೇವೆ ಬಿಜೆಪಿ ಅಪ್ಪ ಮಕ್ಕಳ ಪಕ್ಷ ಎಂದಿದ್ದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ನಾನು ವೈಯಕ್ತಿಕ ಬಗ್ಗೆ ಮಾತನಾಡುವವರಿಗೆ ಉತ್ತರ ಕೊಡಲ್ಲ. ಪಕ್ಷ ಹಾಗೂ ನಮ್ಮ ನಾಯಕ ವಿಜಯೇಂದ್ರ ನೇತೃತ್ವದಲ್ಲಿ ಕೆಲಸ ಮಾಡುತ್ತೇವೆ. ಇನ್ನೂ ಸಂಡೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಶ್ರೀರಾಮುಲು ಸ್ಪರ್ಧೆ ವಿಚಾರವಾಗಿ ನಾನು ಯಾವುದೇ ಕಾರಣಕ್ಕೂ ಈ ಬಾರಿ ಉಪ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದರು. ಜೊತೆಗೆ ರಾಜಕೀಯವಾಗಿ ಓಡಿಹೋಗುವ ಪರಿಸ್ಥಿತಿ ನನಗಿಲ್ಲ. ಸದ್ಯ ಪಕ್ಷಕ್ಕಾಗಿ ಕೆಲಸ ಮಾಡುತ್ತೇನೆ‌. ಪಕ್ಷ ಯಾರಿಗೆ ಸೂಚನೆ ನೀಡುತ್ತದೆಯೋ ಅವರ ಪರ ಕೆಲಸ ಮಾಡುತ್ತೇನೆ ಎಂದಷ್ಟೇ ಶ್ರೀರಾಮುಲು ಹೇಳಿದರು.

Latest Videos
Follow Us:
Download App:
  • android
  • ios