ರಾಜ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಒಂದು ಮುಖ ದಲಿತಪರ ನಾಯಕ ಎಂದು ತೋರಿಸುತ್ತದೆ ಮತ್ತೊಂದು ಮುಖ ದಲಿತರನ್ನು ಅವನತಿಗೆ ದೂಡುವುದಾಗಿ ತೋರಿಸುತ್ತದೆ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಹೇಳಿದರು. 

ಚಾಮರಾಜನಗರ (ಅ.08): ರಾಜ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಒಂದು ಮುಖ ದಲಿತಪರ ನಾಯಕ ಎಂದು ತೋರಿಸುತ್ತದೆ ಮತ್ತೊಂದು ಮುಖ ದಲಿತರನ್ನು ಅವನತಿಗೆ ದೂಡುವುದಾಗಿ ತೋರಿಸುತ್ತದೆ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ಹೇಳಿದರು. ಅವರ ಎರಡನೇ ಮುಖ ಅರ್ಥಮಾಡಿಕೊಳ್ಳುವುದರಲ್ಲಿ ದಲಿತ ನಾಯಕರು ಹಿನ್ನಡೆ ಅನುಭವಿಸಿದ್ದೇವೆ. ಪರಿಶಿಷ್ಠರ ಅಭಿವೃದ್ದಿಗಾಗಿ ಬಜೆಟ್‌ನಲ್ಲಿ ಮೀಸಲಿಟ್ಟಿರುವ 11.50 ಸಾವಿರ ಕೋಟಿ ರೂ. ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿರುವ ಬಗ್ಗೆ ಯಾರು ಕೂಡ ಚಕಾರ ಎತ್ತಿಲ್ಲ. ನೈಜವಾಗಿ ದಲಿತರಿಗೆ ಅನ್ಯಾಯವಾಗಿರುವ ಬಗ್ಗೆ ಯಾರು ಕೂಡ ಕಾಳಜಿ ವಹಿಸಿಲ್ಲ. ಇದನ್ನು ಕಾಂಗ್ರೆಸ್ ಸಾಮಾಜಿಕ ಜಾಲತಾಣ ಬೇರೆಡೆ ಗಮನ ಸೆಳೆದು ನಮ್ಮನ್ನು ದಾರಿ ತಪ್ಪಿದೆ ಎಂದು ಮಾಜಿ ಶಾಸಕ ಎಸ್. ಬಾಲರಾಜು ದೂರಿದರು.

ಎಸ್‌ಸಿಎಸ್‌ಪಿ, ಟಿಎಸ್‌ಪಿ ಅನುದಾನ ದುರ್ಬಳಕೆ ಬಗ್ಗೆ ಉತ್ತರಿಸಲಿ: ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಎಸ್‌ಸಿ ಎಸ್‌ಪಿ, ಟಿಎಸ್‌ಪಿ ಅನುದಾನ ದುರ್ಬಳಕೆ ಮಾಡಿಕೊಂಡಿರುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಉತ್ತರಿಸಬೇಕು ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ಒತ್ತಾಯಿಸಿದರು. ನಗರದ ಡಾ.ರಾಜ್‌ಕುಮಾರ್ ರಂಗಮಂದಿರದಲ್ಲಿ ಸಾಮಾಜಿಕ ನ್ಯಾಯ ಸಬಲೀಕರಣ ವೇದಿಕೆ ವತಿಯಿಂದ ನಡೆದ ಕರ್ನಾಟಕ ಕಾಂಗ್ರೆಸ್ ಸರ್ಕಾರದಿಂದ ಎಸ್‌ಸಿಎಸ್‌ಪಿ, ಟಿಎಸ್‌ಪಿ ಅನುದಾನ ದುರ್ಬಳಕೆ ಬಗ್ಗೆ ಎಸ್‌ಸಿ, ಎಸ್‌ಟಿ ಜನಾಂದೋಲನ, ಜಿಲ್ಲಾ ಮಟ್ಟದ ವಿಚಾರ ಸಂಕಿರಣ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್‌ರವರು, ಆದಿಕವಿ ಶ್ರೀ ವಾಲ್ಮೀಕಿಯವರು ಸೂರ್ಯ, ಚಂದ್ರರಿರುವವರೆಗೂ ಶಾಶ್ವತವಾಗಿ ಇರುತ್ತಾರೆ. ಸಂವಿಧಾನದಡಿ ಆಯವ್ಯಯದಲ್ಲಿ ಜನಸಂಖ್ಯೆಗೆ ಅನುಗುಣವಾಗಿ ಎಸ್‌ಸಿ, ಎಸ್‌ಟಿ ಸಮುದಾಯಗಳಿಗೆಅನುದಾನವನ್ನು ಮೀಸಲಿಡುತ್ತದೆ. ಇಂತಹ ಅನುದಾನವನ್ನು ಕಸಿಯುವ ಕೆಲಸವನ್ನು ಯಾವುದೇ ಸರ್ಕಾರ ಮಾಡಬಾರದು ಎಂದರು.

ಸರ್ಕಾರ ಲಿಂಗಾಯತರನ್ನು ನಿರ್ಲಕ್ಷ್ಯ ಮಾಡಿಲ್ಲ: ಸಚಿವ ಸಂತೋಷ್‌ ಲಾಡ್‌ ಸಮರ್ಥನೆ

ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳಿಗೆ ನನ್ನ ವಿರೋಧ ಇಲ್ಲ: ರಾಜ್ಯ ಕಾಂಗ್ರೆಸ್ ಸರ್ಕಾರ ಎಸ್‌ಸಿ ಎಸ್‌ಪಿ, ಟಿಎಸ್‌ಪಿ ಯೋಜನೆಗಳ ೧೧. ೫೦ ಸಾವಿರ ಕೋಟಿ ರು. ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡಿಕೊಂಡಿದೆ. ಇದರಿಂದ ಎಸ್‌ಸಿ, ಎಸ್‌ಟಿ ಸಮುದಾಯಗಳಿಗೆ ಅನ್ಯಾಯವಾಗಿದೆ. ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳಿಗೆ ನಮ್ಮ ಅಭ್ಯಂತರವಿಲ್ಲ. ಜನತೆಗೆ ಇನ್ನಷ್ಠು ಯೋಜನೆ ಸಿಗಲಿ. ಆದರೆ ಎಸ್‌ಸಿ, ಎಸ್‌ಟಿ ಅನುದಾನವನ್ನು ಗ್ಯಾರಂಟಿ ಯೋಜನೆಗೆ ಬಳಸಬಾರದು. ಗ್ಯಾರಂಟಿ ಯೋಜನೆಗೆ ಎಸ್‌ಸಿ, ಎಸ್‌ಟಿ ಅನುದಾನ ಬಳಕೆ ಮಾಡಿರುವುದರಿಂದ ಸಮುದಾಯದ ಜನರಿಗೆ ಕೊಳವಿಬಾವಿ ಸಿಗುತ್ತಿಲ್ಲ. ವಿದ್ಯಾರ್ಥಿವೇತನ ಸಿಗುತ್ತಿಲ್ಲ. ವಸತಿ ಶಾಲೆಗಳಿಗೆ ಅನುದಾನ ಬರುತ್ತಿಲ್ಲ. ಉನ್ನತ ಶಿಕ್ಷಣಕ್ಕೆ ಅನುದಾನ ದೊರೆತಿಲ್ಲ. ಪರಿಶಿಷ್ಠ ಬೀದಿಗಳಲ್ಲಿ ರಸ್ತೆ ಆಗುತ್ತಿಲ್ಲ, ಪರಿಶಿಷ್ಠ ನಿಗಮಗಳಿಗೆ ಅನುದಾನ ಕಡಿತವಾಗಿ ಸೌಲಭ್ಯಗಳು ಸಿಗುತ್ತಿಲ್ಲ ಇದರ ಬಗ್ಗೆ ಒಬ್ಬ ಎಸ್‌ಸಿ, ಎಸ್‌ಟಿ ಸಮುದಾಯದ ಸಚಿವರು, ಶಾಸಕರು ಚಕಾರ ಎತ್ತುತ್ತಿಲ್ಲ ಎಂದು ಆರೋಪಿಸಿದರು.

ಕಾಂಗ್ರೆಸ್ ಬರೀ ಚುನಾವಣೆಯಲ್ಲಿ ಎಸ್‌ಸಿ, ಎಸ್‌ಟಿ ಸಮುದಾಯಗಳನ್ನು ಮತಬ್ಯಾಂಕ್ ಮಾಡಿಕೊಂಡು ಮತ ಪಡೆದು ಅಧಿಕಾರ ಬಂದ ಮೇಲೆ ನಿರಂತರವಾಗಿ ಅನ್ಯಾಯ ಮಾಡಿಕೊಂಡು ಬಂದಿದೆ. ಎಸ್‌ಸಿ, ಎಸ್‌ಟಿ ಸಮುದಾಯಗಳ ಮೀಸಲಾತಿ ಹೆಚ್ಚಳ ಮಾಡಲಿಲ್ಲ. ಬಿಜೆಪಿ ಸರ್ಕಾರ ಬಂದ ಮೇಲೆ ಸುಮಾರು ೪೦ ವರ್ಷಗಳ ಹೋರಾಟ ಫಲವಾಗಿ ಎಸ್‌ಟಿ ಶೇ. ೩ ರಿಂದ ಶೇ೭ ರಷ್ಠು, ಎಸ್‌ಸಿ ಶೇ. ೧೫ರಿಂದ ೧೭ ರಷ್ಠು ಏರಿಕೆ ಮಾಡಿದೆ. ಮುಂದಿನ ದಿನಗಳಲ್ಲಿ ಎಸ್‌ಸಿ, ಎಸ್‌ಟಿ ಸಮುದಾಯಗಳ ಒಗ್ಗೂಡಿ, ಜಾಗೃತರಾಗಿ ಹೋರಾಟ ಮಾಡುವ ಮೂಲಕ ಪರಿಶಿಷ್ಠರಿಗೆ ಅನ್ಯಾಯ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರವನ್ನು ಕಿತ್ತೊಗೆಯಬೇಕು ಎಂದರು.

ಬಾರ್‌ಗೆ ಹೊಸ ಲೈಸೆನ್ಸ್‌ ಕೊಡ್ತೇವಂತ ಡಿಸಿಎಂ ಹೇಳಿಲ್ಲ: ಸಿದ್ದರಾಮಯ್ಯ

ಎಸ್‌ಸಿ, ಎಸ್‌ಟಿ ಸಚಿವರು, ಶಾಸಕರು ಸರ್ಕಾರದ ಕೈಗೊಂಬೆ: ಕೇಂದ್ರ ಪರಿಹಾರ ಸಮಿತಿ ಮಾಜಿ ಅಧ್ಯಕ್ಷ ಎಂ.ರಾಮಚಂದ್ರ ಪ್ರಾಸ್ತಾವಿಕವಾಗಿ ಮಾತನಾಡಿ, ಕಾಂಗ್ರೆಸ್‌ನ ಮನಸ್ಥಿತಿ ಎಸ್‌ಸಿ. ಎಸ್‌ಟಿಗಳಿಗೆ ಅನ್ಯಾಯ ಮಾಡುವುದೇ ಆಗಿದೆ. ಅಂಬೇಡ್ಕರ್ ಅವರನ್ನು ಚುನಾವಣೆಯಲ್ಲಿ ಸೋಲಿಸಿದ್ದು ಕಾಂಗ್ರೆಸ್ ಬಿಜೆಪಿ ಸಂವಿಧಾನ ಬದಲಿಸುತ್ತದೆ ಎಂದು ಅಪಪ್ರಚಾರ ಮಾಡಿಕೊಂಡು ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಇಂದು ಎಸ್‌ಸಿಎಸ್‌ಟಿ ಅನುದಾನ ದುರ್ಬಳಕೆ ಮಾಡಿಕೊಂಡಿದೆ. ಇದರ ಬಗ್ಗೆ ಎಸ್‌ಸಿ, ಎಸ್‌ಟಿ ಶಾಸಕರು, ಸಚಿವರು ಚಕಾರ ಎತ್ತದೆ ಸರ್ಕಾರ ಕೈಗೊಂಬೆಯಾಗಿದ್ದಾರೆ ಎಂದು ಆರೋಪಿಸಿದರು. ಮಾಜಿ ಸಚಿವ ಎನ್. ಮಹೇಶ್ ಮಾತನಾಡಿ, ಎಸ್‌ಸಿಎಸ್‌ಪಿ, ಟಿಎಸ್‌ಪಿ ಅನುದಾನವನ್ನು ನಾಲ್ಕು ಭಾಗ ಮಾಡಿ ಅದರಲ್ಲಿ ಶೇ ೪೦ರಷ್ಟು ಅನುದಾನವನ್ನು ಶಿಕ್ಷಣ, ಉದ್ಯೋಗ ಸೃಷ್ಠಿಗೆ ಕೊಡಬೇಕು. ಶೇ ೧೦ ರಷ್ಠು ಅನುದಾನವನ್ನು ಆರೋಗ್ಯ ಕ್ಷೇತ್ರಕ್ಕೆ ಕೊಡಬೇಕು. ಶೇ. ೨೫ ರಷ್ಠು ಆರ್ಥಿಕ ಅಭಿವೃದ್ದಿಗೆ ಕೊಡಬೇಕು. ಶೇ. ೨೫ ರಷ್ಠು ವಸತಿ ಮತ್ತು ಮೂಲ ಸೌಕರ್ಯಗಳಿಗೆ ಕೊಡಬೇಕು ಎಂದರು.