ಕರ್ನಾಟಕಕ್ಕೆ ಮುಂದೆ ಬಹಳ ದೊಡ್ಡ ಅಪಾಯ ಕಾದಿದೆ: ಸಿ.ಟಿ.ರವಿ
ಶಿವಮೊಗ್ಗ ಘಟನೆ ಹಿಂದೆ ರಾಜ್ಯದ ಶಾಂತಿ ಹಾಳು ಮಾಡುವ ಉದ್ದೇಶ ಇದ್ದಂತಿದೆ. ಘಟನೆಯ ನ್ಯಾಯಾಂಗ ತನಿಖೆ ಮಾಡಬೇಕು ಎಂದು ಬಿಜೆಪಿ ನಾಯಕ ಹಾಗೂ ಮಾಜಿ ಸಚಿವ ಸಿ.ಟಿ.ರವಿ ಒತ್ತಾಯಿಸಿದ್ದಾರೆ.
ಬೆಂಗಳೂರು (ಅ.05): ಶಿವಮೊಗ್ಗ ಘಟನೆ ಹಿಂದೆ ರಾಜ್ಯದ ಶಾಂತಿ ಹಾಳು ಮಾಡುವ ಉದ್ದೇಶ ಇದ್ದಂತಿದೆ. ಘಟನೆಯ ನ್ಯಾಯಾಂಗ ತನಿಖೆ ಮಾಡಬೇಕು ಎಂದು ಬಿಜೆಪಿ ನಾಯಕ ಹಾಗೂ ಮಾಜಿ ಸಚಿವ ಸಿ.ಟಿ.ರವಿ ಒತ್ತಾಯಿಸಿದ್ದಾರೆ. ಬುಧವಾರ ಪಕ್ಷದ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಕರ್ನಾಟಕಕ್ಕೆ ಮುಂದೆ ಬಹಳ ದೊಡ್ಡ ಅಪಾಯ ಕಾದಿದೆ. ಶಿವಮೊಗ್ಗ, ಕೋಲಾರ ಘಟನೆಗಳ ಮೂಲಕ ಟೆಸ್ಟಿಂಗ್ ಡೋಸ್ ಕೊಟ್ಟಿದ್ದಾರೆ. ಈಗ ಪಿಕ್ಚರ್ ಬಾಕಿ ಹೈ ಎಂಬಂತೆ ಟ್ರೈಲರ್ ತೋರಿಸುವ ಕೆಲಸ ಮಾಡಿದ್ದಾರೆ ಎಂದು ಎಚ್ಚರಿಕೆ ನೀಡಿದರು.
ಈಗ ಟಿಪ್ಪು, ಔರಂಗಜೇಬ್ ವೈಭವೀಕರಣ ನಡೆದಿದೆ. ಭವಿಷ್ಯದಲ್ಲಿ ಅಫ್ಜಲ್ ಗುರು, ಒಸಾಮ ಬಿನ್ ಲಾಡೆನ್, ಸದ್ದಾಂ ಹುಸೇನ್, ಮಹಮ್ಮದ್ ಆಲಿ ಜಿನ್ನಾ ವೈಭವೀಕರಣ ನಡೆದರೂ ಅಚ್ಚರಿಯಿಲ್ಲ ಎಂದು ಹೇಳಿದರು. ಶಿವಮೊಗ್ಗ ಅತಿ ಸೂಕ್ಷ್ಮ ಪ್ರದೇಶ. ಹರ್ಷನ ಹತ್ಯೆ ಆಗಿತ್ತು. ಕರ್ನಾಟಕವು 140 ದಿನಗಳಲ್ಲಿ ನಕಾರಾತ್ಮಕ ಕಾರಣಕ್ಕಾಗಿ ಸುದ್ದಿಯಾದುದೇ ಹೆಚ್ಚು. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದು 140 ದಿನಗಳು ಕಳೆದಿವೆ. ಕೋಮುವಾದಿ ಶಕ್ತಿಗಳು ಸಾರ್ವಜನಿಕವಾಗಿ ವಿಜೃಂಭಿಸಲು ಅವಕಾಶ ಮಾಡಿಕೊಟ್ಟಿದ್ದೇ ಈ ಸಕರ್ಮರದ ಸಾಧನೆ ಎಂದು ವ್ಯಂಗ್ಯವಾಡಿದರು.
Bitcoin ಹಗರಣಕ್ಕೆ ಮತ್ತೊಂದು ಟ್ವಿಸ್ಟ್: ಭೂಗತವಾಗಿದ್ದ ನಟೋರಿಯಸ್ ಹ್ಯಾಕರ್ ಅರೆಸ್ಟ್!
ಬಹುಶಃ ಋಣ ತೀರಿಸುವ ದೃಷ್ಟಿಯಿಂದ ತಾಲಿಬಾನಿಗಳನ್ನು ಬೆಂಬಲಿಸುವ ಕೆಟ್ಟ ಕೆಲಸವನ್ನು ರಾಜ್ಯದ ಕಾಂಗ್ರೆಸ್ ಸರಕಾರ ಮಾಡುತ್ತಿದೆ. ಈ ಸರಕಾರದ ನಡೆ ಅನುಮಾನಾಸ್ಪದ ಮತ್ತು ದುರುದ್ದೇಶದ ಹಿನ್ನೆಲೆಯಿಂದ ಕೂಡಿದೆ. ವಿಧಾನಸಭಾ ಚುನಾವಣಾ ಫಲಿತಾಂಶ ಬರುವ ಸಂದರ್ಭದಲ್ಲಿ ಬೆಳಗಾವಿಯಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂದು ಕೂಗುತ್ತಾರೆ. ಭಟ್ಕಳದಲ್ಲಿ ಹಿಂದೂಗಳ ಹೆಣ ಎತ್ತಲು ಕೂಡ ಜನ ಇರಬಾರದು ಎಂದು ಮುಸ್ಲಿಮರೊಬ್ಬರು ಬರಹ ಬರೆದಿದ್ದರು. ಬೆಳಗಾವಿಯಲ್ಲಿ ಜೈನಮುನಿಯ ಭೀಕರ ಹತ್ಯೆ ಆಗಿದೆ. ಟಿ.ನರಸೀಪುರದಲ್ಲಿ ಯುವ ಬ್ರಿಗೇಡ್ ಕಾರ್ಯಕರ್ತನ ಹತ್ಯೆ ನಡೆದಿದೆ. ಫಲಿತಾಂಶ ಬಂದ ಮರುದಿನವೇ ಹೊಸಕೋಟೆಯಲ್ಲಿ ಬಿಜೆಪಿ ಕಾರ್ಯಕರ್ತನ ಹತ್ಯೆ ನಡೆದಿದೆ ಎಂದು ವಿವರಿಸಿದರು.
ಡಿಜೆ ಹಳ್ಳಿ, ಕೆಜಿ ಹಳ್ಳಿಯ ಗಲಭೆಯಲ್ಲಿ ಕಾಂಗ್ರೆಸ್ ಪಕ್ಷದ ಶಾಸಕರ ಮನೆಗೇ ಬೆಂಕಿ ಹಾಕಿದ್ದರು. ಹಲವು ಮನೆಗಳು ಮತ್ತು ನೂರಾರು ವಾಹನಗಳಿಗೆ ಬೆಂಕಿ ಹಾಕಿದ್ದರು. ಪೊಲೀಸ್ ಸ್ಟೇಷನ್ ಮೇಲೆ ಬೆಂಕಿ ಹಾಕಿದ್ದರು. ಅಂಥ ಗಂಭೀರ ಪ್ರಕರಣದ ಕೇಸು ವಾಪಸ್ ಪಡೆಯಲು ತನ್ವೀರ್ ಸೇಠ್ ಅವರು ಸರಕಾರಕ್ಕೆ ಪತ್ರ ಬರೆದಿದ್ದರು. ಆ ಸಾಲಿನಲ್ಲೇ ಹುಬ್ಬಳ್ಳಿಯ ಪೊಲೀಸ್ ಠಾಣೆಗೆ ದಾಳಿ ಸೇರಿ 12 ಪ್ರಕರಣಗಳಲ್ಲಿ ಆರೋಪಿಗಳಾಗಿರುವವರ ಕೇಸು ಹಿಂಪಡೆಯಲು ಉಪ ಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರರು ಪತ್ರ ಬರೆಯತ್ತಾರೆ. ಮತಾಂಧತೆಗೆ ಈ ಸರಕಾರ ಕುಮ್ಮಕ್ಕು ಕೊಡುತ್ತಿರುವುದಕ್ಕೆ ಇದಕ್ಕಿಂತ ಸಾಕ್ಷಿ ಬೇಕಾಗಿಲ್ಲ ಎಂದರು.
ಕರ್ನಾಟಕದಲ್ಲಿ ರಾಕ್ಷಸರ ರಾಜ್ಯಭಾರ ನಡೆಯುತ್ತಿದೆ: ಕಾಂಗ್ರೆಸ್ ವಿರುದ್ಧ ಪ್ರತಾಪ್ ಸಿಂಹ ಕಿಡಿ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಸ್ಲಿಮರ ಋಣ ತೀರಿಸುವ ಮಾತನಾಡಿದ್ದಾರೆ. ರಾಜ್ಯದ ಋಣ ತೀರಿಸಬೇಕೆಂದು ಅವರು ಹೇಳಿಲ್ಲ. ರಾಜ್ಯದ ಸಮಗ್ರ ಅಭಿವೃದ್ಧಿಯ ಚಿತ್ರಣವನ್ನೂ ಜನರ ಮುಂದಿಟ್ಟಿಲ್ಲ. ಮುಸ್ಲಿಮರ ಅಭಿವೃದ್ಧಿಗಾಗಿ 10 ಸಾವಿರ ಕೋಟಿ ಕೊಡುವ ಮಾತನಾಡುತ್ತಾರೆ. ನಿಮಗೆ ಮುಸಲ್ಮಾನರು ಮಾತ್ರ ಮತ ಹಾಕಿದ್ದಾರಾ? ಜಾತ್ಯತೀತತೆ ಎಂದರೆ ಮುಸಲ್ಮಾನರ ಓಲೈಕೆಯೇ? ಕೋಮುವಾದಿ ರಾಜಕಾರಣ ನಿಮ್ಮದಲ್ಲವೇ ಎಂದು ರವಿ ಖಾರವಾಗಿ ಪ್ರಶ್ನಿಸಿದರು.
ಶಿವಮೊಗ್ಗ ಗಲಭೆಯ ಕಂಪ್ಲೀಟ್ ಅಪ್ಡೇಟ್ಸ್..! 24 ಕೇಸ್.. 60 ಅರೆಸ್ಟ್..! ತಲೆಮರೆಸಿಕೊಂಡವರೆಷ್ಟು..?