ಧೈರ್ಯವಿದ್ರೆ ಪ್ರದೀಪ್‌ ರಾಜೀನಾಮೆ ಕೊಟ್ಟು ಸ್ಪರ್ಧಿಸಲಿ: ಮಾಜಿ ಸಚಿವ ಸುಧಾಕರ್‌

ಧೈರ್ಯವಿದ್ರೆ ಪ್ರದೀಪ್‌ ಈಶ್ವರ್‌ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಸ್ವತಂತ್ರವಾಗಿ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲ್ಲಲಿ ಎಂದು ಶಾಸಕ ಪ್ರದೀಪ್‌ ಈಶ್ವರ್‌ಗೆ ಮಾಜಿ ಸಚಿವ ಡಾ.ಕೆ.ಸುಧಾಕರ್‌ ಸವಾಲು ಹಾಕಿದ್ದಾರೆ.

ex minister dr k sudhakar challenges congress mla pradeep eshwar gvd

ಚಿಕ್ಕಬಳ್ಳಾಪುರ (ಜು.30): ಧೈರ್ಯವಿದ್ರೆ ಪ್ರದೀಪ್‌ ಈಶ್ವರ್‌ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಸ್ವತಂತ್ರವಾಗಿ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲ್ಲಲಿ ಎಂದು ಶಾಸಕ ಪ್ರದೀಪ್‌ ಈಶ್ವರ್‌ಗೆ ಮಾಜಿ ಸಚಿವ ಡಾ.ಕೆ.ಸುಧಾಕರ್‌ ಸವಾಲು ಹಾಕಿದ್ದಾರೆ. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಶಾಸಕ ಪ್ರದೀಪ್‌ ಈಶ್ವರ್‌ ಕ್ಷೇತ್ರದಲ್ಲಿ ಚಿಲ್ಲರೆ ರಾಜಕಾರಣ ಮಾಡುತ್ತಿದ್ದಾರೆ. ಕ್ಷೇತ್ರದಲ್ಲಿ ರೌಡಿ ರಾಜಕಾರಣ ಬೆಳೆಸುತ್ತಿದ್ದಾರೆ. ಕಳೆದ 15 ವರ್ಷಗಳಿಂದ ಚಿಕ್ಕಬಳ್ಳಾಪುರ ಕ್ಷೇತ್ರ ಶಾಂತಿಯುತವಾಗಿತ್ತು. ಕ್ಷೇತ್ರದ ಬಿಜೆಪಿ ಮುಖಂಡರ ಮೇಲೆ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆಗೆ ಯತ್ನಿಸಿ ದೌರ್ಜನ್ಯ ನಡೆಸಿದ್ದಾರೆ. ಕಾಂಗ್ರೆಸ್‌ ಮುಖಂಡರು ಕ್ಷೇತ್ರದಲ್ಲಿ ಗುಂಡಾಗಿರಿ ರಾಜಕಾರಣಕ್ಕೆ ಮುಂದಾಗಿದ್ದಾರೆ ಎಂದು ಆರೋಪಿಸಿದರು.

ಸ್ವತಂತ್ರವಾಗಿ ಸ್ಪರ್ಧಿಸಿ ಶಕ್ತಿ ತೋರಿಸಲಿ: ಧೈರ್ಯ ಇದ್ರೆ ಪ್ರದೀಪ್‌ ಈಶ್ವರ್‌ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಸ್ವತಂತ್ರವಾಗಿ ಸ್ಪರ್ಧಿಸಲಿ. ನಾನು ಕೂಡ ಬಿಜೆಪಿಯಿಂದ ಹೊರಬಂದು ಸ್ವತಂತ್ರವಾಗಿ ಸ್ಪರ್ಧೆಸುತ್ತೇನೆ. ನಿನಗೆ ಎಷ್ಟುವೋಟ್‌ ಬರುತ್ತೆ, ನನಗೆ ಎಷ್ಟುವೋಟ್‌ ಬರುತ್ತೆ ನೋಡೋಣ. ಇಬ್ಬರಲ್ಲಿ ಯಾರು ಗೆಲ್ಲುತ್ತಾರೋ ನೋಡೋಣ. ಹಿಂದೆ ನಾನು ಒಂದೇ ವರ್ಷದಲ್ಲಿ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ್ದೆ. ರಾಜೀನಾಮೆ ನೀಡಿ ಬಿಜೆಪಿ ಇಲ್ಲದ ಕಡೆ ಗೆದ್ದು ನನ್ನ ಶಕ್ತಿ ತೋರಿಸಿದ್ದೇನೆ. ನೀನೂ ಸ್ವತಂತ್ರವಾಗಿ ಸ್ಪರ್ಧಿಸಿ ಶಕ್ತಿ ತೋರಿಸು. ಪ್ರದೀಪ್‌ ಈಶ್ವರ್‌ ಮುಖ ನೋಡಿದರೆ 5 ಸಾವಿರ ವೋಟು ಬರಲ್ಲ ಎಂದು ಕಿಡಿಕಾರಿದ್ದಾರೆ.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ: ಮಾಜಿ ಸಚಿವ ಸುಧಾಕರ್‌

ರಾಜ್ಯದಲ್ಲಿ ಅಶಾಂತಿ, ಅತ್ಯಾಚಾರ, ಹತ್ಯೆ ಪ್ರಕರಣಗಳು ಹೆಚ್ಚಾಗಿವೆ. ದೇಶದಲ್ಲಿ ಯಾವತ್ತೂ ಕೂಡ ಜೈನಮುನಿ ಹತ್ಯೆ ಆಗಿರಲಿಲ್ಲ. ಜೈನ ಮುನಿ ಹತ್ಯೆಗೆ ರಾಜ್ಯ ಖ್ಯಾತಿಯಾಗಿದೆ. ರಾಜ್ಯದಲ್ಲಿ ಐಟಿ ಕಂಪನಿಯ ಮುಖ್ಯಸ್ಥರ ಕೊಲೆಯಾಗಿದೆ. ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಹಾಳಾಗಿದೆ ಎಂಬುದಕ್ಕೆ ಇದೇ ಸಾಕ್ಷಿ ಎಂದು ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಚಿವ ಡಾ.ಸುಧಾಕರ್‌ ಆಕ್ರೋಶ ಹೊರ ಹಾಕಿದರು.

ಮೆಡಿಕಲ್‌ ಕಾಲೇಜಿಗೆ ಸರ್ಕಾರ ಹಣ ನೀಡಲಿ: ಮಾನವೀಯತೆ ಇದ್ದರೆ ಸರ್ಕಾರಿ ಮೆಡಿಕಲ್‌ ಕಾಲೇಜಿಗೆ ಹಣ ನೀಡಿ. ನಿರ್ಮಾಣ ಹಂತದ ಮೆಡಿಕಲ್‌ ಕಾಲೇಜುಗಳಿಗೆ ಮೊದಲು ಹಣ ನೀಡಿ. ಗುತ್ತಿಗೆದಾರರಿಂದ ಕಾಲೇಜು ಕಟ್ಟಡಗಳನ್ನು ಪಡೆದು ವಿದ್ಯಾರ್ಥಿಗಳಿಗೆ ನೆರವಾಗಿ. ಸಿಎಂ ಸಿದ್ದರಾಮಯ್ಯಗೆ ಮಾನವೀಯತೆ ಇದ್ದರೆ ಈ ಕೆಲಸ ಮಾಡಲಿ ಎಂದರು. ಇದೇ ವೇಳೆ ಚಿಕ್ಕಬಳ್ಳಾಪುರ ಮೆಡಿಕಲ್‌ ಕಾಲೇಜು ಬಗ್ಗೆ ತನಿಖೆಗೆ ಸರ್ಕಾರ ಚಿಂತನೆ ನಡೆಸಿದ ಎಂಬ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿದ ಮಾಜಿ ಸಚಿವ ಸುಧಾಕರ್‌, ನಾನು ಅವ್ಯವಹಾರ, ಹಗರಣ ಮಾಡಿದ್ರೆ ನನಗೆ ಕಠಿಣ ಶಿಕ್ಷೆ ವಿಧಿಸಲಿ. ನನ್ನ ಮೇಲಿನ ಸೇಡಿಗೆ ಮೆಡಿಕಲ್‌ ವಿದ್ಯಾರ್ಥಿಗಳಿಗೆ ಶಿಕ್ಷೆ ನೀಡಬೇಡಿ ಎಂದರು.

ತುಮಕೂರು ಜಿಲ್ಲೆಗೆ ಮೆಟ್ರೋ ರೈಲು ತರುವ ಚಿಂತನೆ: ಸಚಿವ ಪರಮೇಶ್ವರ್‌

ಮುಖ್ಯಮಂತ್ರಿಗಳೇ ದ್ವೇಷದ ರಾಜಕಾರಣ ಮಾಡಬೇಡಿ. ನೀವೇ ಏನಾದರೂ ಶಾಶ್ವತವಾಗಿ ಮುಖ್ಯಮಂತ್ರಿಯಾಗಿ ಇರುತ್ತೀರಾ, ಕಳೆದ 4 ವರ್ಷದಲ್ಲಿ ನಾವು ದ್ವೇಷದ ರಾಜಕಾರಣ ಮಾಡಲಿಲ್ಲ. ಮಾಜಿ ಸಿಎಂಗಳಾದ ಬಿ.ಎಸ್‌.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಒಳ್ಳೆಯ ನಾಯಕರು. ಎಷ್ಟೇ ಒತ್ತಡಗಳಿದ್ದರೂ ದ್ವೇಷದ ರಾಜಕಾರಣ ಮಾಡಲಿಲ್ಲ ಎಂದು ಹೇಳಿದರು.

Latest Videos
Follow Us:
Download App:
  • android
  • ios