ರಾಜ್ಯ ಸರ್ಕಾರ ಬರ ಎದುರಿಸದೆ ತೆಲಂಗಾಣ ಚುನಾವಣೆಗೆ ಹೋಗಿದ್ದಾರೆ: ಎಚ್.ಡಿ.ರೇವಣ್ಣ

ಮಳೆ ಇಲ್ಲದೆ ಬೆಳೆ ಇಲ್ಲದೆ ತೀವ್ರ ಇಡೀ ರೈತ ಸಮುದಾಯ ತೀವ್ರ ಸಂಕಷ್ಟದಲ್ಲಿ ಸಿಲುಕಿರುವಾಗ ಅವರ ನೆರವಿಗೆ ಹೋಗುವ ಬದಲು ತೆಲಂಗಾಣ ರಾಜ್ಯದ ಚುನಾವಣೆ ನಡೆಸಲು ಕಾಂಗ್ರೆಸ್ ಹೋಗಿದೆ. 

Ex Minister HD Revanna Slams On Congress Govt At Hassan gvd

ಹಾಸನ (ಡಿ.01): ಮಳೆ ಇಲ್ಲದೆ ಬೆಳೆ ಇಲ್ಲದೆ ತೀವ್ರ ಇಡೀ ರೈತ ಸಮುದಾಯ ತೀವ್ರ ಸಂಕಷ್ಟದಲ್ಲಿ ಸಿಲುಕಿರುವಾಗ ಅವರ ನೆರವಿಗೆ ಹೋಗುವ ಬದಲು ತೆಲಂಗಾಣ ರಾಜ್ಯದ ಚುನಾವಣೆ ನಡೆಸಲು ಕಾಂಗ್ರೆಸ್ ಹೋಗಿದೆ. ತೆಂಗು ಮತ್ತು ಕೊಬ್ಬರಿ ಬೆಳೆ ನಿಗದಿ ಮಾಡುವಲ್ಲಿ ಸರಕಾರ ವಿಫಲವಾಗಿದ್ದು, ಇದರ ವಿರುದ್ಧ ಡಿಸೆಂಬರ್ 2 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಹೇಮಾವತಿ ಪ್ರತಿಮೆ ಬಳಿಯಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೂ ಈಡುಗಾಯಿ ಒಡೆದು ಪ್ರತಿಭಟನಾ ಮೆರವಣಿಗೆ ಹಮ್ಮಿಕೊಂಡಿರುವುದಾಗಿ ಮಾಜಿ ಸಚಿವ ಎಚ್.ಡಿ.ರೇವಣ್ಣ ತಿಳಿಸಿದರು.

ನಗರದ ಸಂಸದರ ನಿವಾಸದಲ್ಲಿ ಗುರುವಾರ ಮಾಧ್ಯಮದೊಂದಿಗೆ ಮಾತನಾಡಿ, ಬರಗಾಲದ ನಿರ್ವಹಣೆಗಾಗಿ ಸರ್ಕಾರ ೧೨ ಕೋಟಿ ರು. ಅನುದಾನವನ್ನು ಜಿಲ್ಲಾಧಿಕಾರಿಗಳ ಖಾತೆಗೆ ಹಾಕಿದೆ. ಅದರಲ್ಲಿ ಪ್ರತಿ ತಾಲೂಕಿಗೆ ೫೦ ಲಕ್ಷ ರು. ಅನುದಾನವನ್ನ ಹಂಚಿಕೆ ಮಾಡಿದ್ದಾರೆ. ಉಳಿದ ಎಂಟು ಕೋಟಿ ಅವರ ಖಾತೆಯಲ್ಲಿ ಇದೆ. ಆದರೆ ಹಂಚಿಕೆ ಮಾಡಿರುವ ಅನುದಾನವನ್ನ ಸಮರ್ಪಕವಾಗಿ ಬಳಕೆ ಮಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ದೂರಿದರು.

ಭ್ರೂಣ ಹತ್ಯೆಗೆ ಒಳಗಾದವರಿಗೂ ಕಠಿಣ ಶಿಕ್ಷೆ ಆಗಲಿ: ಸಚಿವ ವೆಂಕಟೇಶ್

ಎನ್‌ಡಿಆರ್‌ಎಫ್‌ ಮತ್ತು ಎಸ್‌ಟಿಆರ್‌ಎಫ್‌ ಗೈಡ್‌ಲೈನ್‌ ಪ್ರಕಾರ ಅನುದಾನವನ್ನು ಬಳಕೆ ಮಾಡಿಕೊಳ್ಳಲು ಸಾಕಷ್ಟು ಸಮಸ್ಯೆಗಳು ಉಂಟಾಗುತ್ತಿವೆ. ಆದ್ದರಿಂದ ಸರ್ಕಾರ ಇದರ ಬಗ್ಗೆ ಗಮನಹರಿಸಬೇಕು. ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮತ್ತು ಜನರಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗಲಿದ್ದು ಹೇಮಾವತಿ ಜಲಾಶಯದಿಂದ ನಾಲೆಗಳ ಮೂಲಕ ನೀರು ಹರಿಸಬೇಕು ಎಂದು ಒತ್ತಾಯಿಸಿದರು. ರಾಜ್ಯದಲ್ಲಿ ಬರಗಾಲದಿಂದ ಜನರು ಸಾಕಷ್ಟು ಸಂಕಷ್ಟದಲ್ಲಿದ್ದಾರೆ. ಆದರೆ ಸರ್ಕಾರದವರು ರಾಜ್ಯವನ್ನ ಮರೆತು ತೆಲಂಗಾಣದಲ್ಲಿ ಚುನಾವಣೆ ಮಾಡಲು ಹೋಗಿದ್ದಾರೆ. ಇದರಿಂದ ರಾಜ್ಯವನ್ನ ಸಂಪೂರ್ಣವಾಗಿ ಕಡೆಗಣಿಸಲಾಗಿದೆ ಎಂದರು. ಜಿಲ್ಲೆಯಲ್ಲಿ ತೆಂಗು ಬೆಳೆ ಸಂಪೂರ್ಣವಾಗಿ ನಾಶವಾಗುತ್ತಿದೆ ಎಂದರು.

ಜಿಲ್ಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಕಾಲೇಜು ಕಾಲೇಜುಗಳಲ್ಲಿ ಸಿಬ್ಬಂದಿ ಕೊರತೆಯಿಂದಾಗಿ ಶಿಕ್ಷಕರು ಮತ್ತು ಉಪನ್ಯಾಸಕರೇ ಬಾತ್ ರೂಮ್ ತೊಳೆಯುವಂತಹ ಕೆಲಸ ಮಾಡುತ್ತಿದ್ದಾರೆ. ಆದರೆ ಶಿಕ್ಷಣ ಸಚಿವರು ಜಿಲ್ಲೆಗೆ ಆಗಮಿಸಿ, ಕಾಂಗ್ರೆಸ್ ಕಚೇರಿಯಲ್ಲಿ ಸಭೆ ನಡೆಸಿ ಜಿಲ್ಲಾ ಪಂಚಾಯತಿಯಲ್ಲಿ ಉಪ್ಪಿಟ್ಟು, ಕಾಫಿ ಕುಡಿದುಕೊಂಡು ಹೋಗಿದ್ದಾರೆ ಎಂದು ವ್ಯಂಗ್ಯವಾಡಿದರು. ಶಿಕ್ಷಣ ಇಲಾಖೆ ಇಂಥ ಪರಿಸ್ಥಿತಿಗೆ ಬಂದಿರುವುದು ನಾಚಿಕಗೇಡಿನ ಸಂಗತಿ. ಶಿಕ್ಷಣ ಇಲಾಖೆಯಲ್ಲಿ ಸಾಕಷ್ಟು ಸಮಸ್ಯೆಗಳಿದ್ದು, ಇದನ್ನ ಬಗೆಹರಿಸುವಲ್ಲಿ ಅವರು ಸಂಪೂರ್ಣವಾಗಿ ವಿಫಲರಾಗಿದ್ದಾರೆ. ಇಂಥವರನ್ನ ಶಿಕ್ಷಣ ಸಚಿವರನ್ನಾಗಿ ಮಾಡಿರುವುದು ನಮ್ಮ ದುರ್ದೈವ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಜಿಲ್ಲೆಯಲ್ಲಿ ಮೂರು ಸಾವಿರ ಕೋಟಿ ರೈತರ ಬೆಳೆ ನಷ್ಟವಾಗಿದೆ. ಆದರೆ ಕೇವಲ ನಮಗೆ ೧೩೧ ಕೋಟಿ ರು. ಪರಿಹಾರ ಹಣ ಬರುತ್ತದೆ. ರಾಜ್ಯ ಸರ್ಕಾರದವರು ಕೇಂದ್ರದ ಹಣವನ್ನು ಕಾಯುತ್ತಿದ್ದಾರೆ. ಇದರ ಬದಲಾಗಿ ರೈತರ ಹಿತ ಕಾಯುವಲ್ಲಿ ಸಂಪೂರ್ಣವಾಗಿ ವಿಫಲವಾಗಿದ್ದಾರೆ ಎಂದು ದೂರಿದರು. ಡಿಸೆಂಬರ್ ೧ರ ಶುಕ್ರವಾರದಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು ಹೊಳೆನರಸೀಪುರದಲ್ಲಿ ಕಾರ್ಯಕರ್ತರು ಮತ್ತು ಮುಖಂಡರ ಸಭೆ ಕರೆದು ಮುಂದಿನ ಪಕ್ಷ ಸಂಘಟನೆ ಮತ್ತು ಚುನಾವಣೆ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಈ ವೇಳೆ ಪಕ್ಷದ ಮುಖಂಡರು ಸಭೆಯಲ್ಲಿ ಭಾಗವಹಿಸುವುದಾಗಿ ಹೇಳಿದರು.

ಹೈಕೋರ್ಟ್‌ ರಿಲೀಫ್ ಕೊಟ್ಟಿಲ್ಲ, ಇವರೇ ತೆಗೆದುಕೊಂಡಿದ್ದಾರೆ: ಎಚ್‌ಡಿಕೆ ಟಾಂಗ್‌

ಈಗಿನ ನಾಯಕರಿಂದಲೇ ಕಾಂಗ್ರೆಸ್ ಧೂಳಿಪಟವಾಗಲಿದೆ: ಕಾಂಗ್ರೆಸ್ ಪಕ್ಷ ಹಿಂದಿನ ನೆಹರು ಮತ್ತು ಗಾಂಧೀಜಿಯವರ ಕಾಂಗ್ರೆಸ್ ಪಕ್ಷವಾಗಿ ಉಳಿದಿಲ್ಲ. ಈಗಿನ ನಾಯಕರಿಂದಲೇ ಕಾಂಗ್ರೆಸ್ ಧೂಳಿಪಟವಾಗಲಿದೆ ಎಂದು ಮಾಜಿ ಸಚಿವ ಎಚ್ ಡಿ ರೇವಣ್ಣ ಭವಿಷ್ಯ ನುಡಿದರು. ಮಧು ಬಂಗಾರಪ್ಪ ನಮ್ಮ ಪಕ್ಷದ ಬಗ್ಗೆ ಮಾತನಾಡುವ ಮೊದಲು ಅವರು ಎಲ್ಲಿಂದ ಬಂದಿದ್ದರು ಎಂಬುದನ್ನ ಕಲಿತುಕೊಳ್ಳಬೇಕು. ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ವ್ಯಾಪಾರ ಮಾಡಿಕೊಂಡಿದ್ದ ಗಿರಾಕಿ ಈಗ ನಮ್ಮ ಪಕ್ಷದ ಬಗ್ಗೆ ಮಾತನಾಡುತ್ತಿದ್ದಾರೆ. ಅವರ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ ಎಂದರು.

Latest Videos
Follow Us:
Download App:
  • android
  • ios