ಸಿದ್ದರಾಮಯ್ಯ ಲೀಡರ್ ಆಗುವ ಭ್ರಮೆ ಬಿಡಲಿ: ಕೆ.ಎಸ್.ಈಶ್ವರಪ್ಪ ಲೇವಡಿ
ಕ್ಷೇತ್ರವಿಲ್ಲದೇ ಅಲೆಮಾರಿಯಾಗಿರುವ ಮಾಜಿ ಸಿಎಂ ಸಿದ್ದರಾಮಯ್ಯ ನಾನೇ ನಾಯಕ ಎಂದು ತೋರಿಸಿಕೊಳ್ಳುವುದಕ್ಕಾಗಿ ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಟೀಕಿಸುತ್ತಿದ್ದು, ಮೋದಿ ಅವರನ್ನು ಬೈದರೆ ದೊಡ್ಡ ಲೀಡರ್ ಆಗುತ್ತೇನೆ ಎನ್ನುವ ಭ್ರಮೆಯಲ್ಲಿ ಸಿದ್ದರಾಮಯ್ಯ ಇದ್ದಾರೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಲೇವಡಿ ಮಾಡಿದರು.
ರಾಯಚೂರು (ಜ.12): ಕ್ಷೇತ್ರವಿಲ್ಲದೇ ಅಲೆಮಾರಿಯಾಗಿರುವ ಮಾಜಿ ಸಿಎಂ ಸಿದ್ದರಾಮಯ್ಯ ನಾನೇ ನಾಯಕ ಎಂದು ತೋರಿಸಿಕೊಳ್ಳುವುದಕ್ಕಾಗಿ ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಟೀಕಿಸುತ್ತಿದ್ದು, ಮೋದಿ ಅವರನ್ನು ಬೈದರೆ ದೊಡ್ಡ ಲೀಡರ್ ಆಗುತ್ತೇನೆ ಎನ್ನುವ ಭ್ರಮೆಯಲ್ಲಿ ಸಿದ್ದರಾಮಯ್ಯ ಇದ್ದಾರೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಲೇವಡಿ ಮಾಡಿದರು. ಗುರುವಾರ ಸ್ಥಳೀಯ ಪ್ರವಾಸಿ ಮಂದಿರದಲ್ಲಿ ಮಾತನಾಡಿ, ಸಿದ್ದರಾಮಯ್ಯ ಅಯೋಗ್ಯರಾಗಿದ್ದು, ಅವರಿಗೆ ಮೋದಿ ಹೆಸರು ಹೇಳೋ ಯೋಗತ್ಯತೆಯೂ ಇಲ್ಲ. ಮೋದಿ ಅವರನ್ನು ಇಡೀ ಜಗತ್ತೇ ಮೆಚ್ಚುಕೊಂಡಿದೆ.
ಮುಸ್ಲಿಂ ಹಾಗೂ ಕ್ರಿಶ್ಚಿಯನ್ ದೇಶಗಳಲ್ಲಿನ ಗುಂಪುಗಾರಿಕೆ ಹಾಗೂ ದ್ವೇಷಗಳನ್ನು ತೊಲಗಿಸಿ ಅವರನ್ನು ಜೋಡಿಸುವ ಕಾರ್ಯವನ್ನು ಮೋದಿ ಮಾಡುತ್ತಾ ವಿಶ್ವನಾಯಕರಾಗಿ ಬೆಳೆದಿದ್ದಾರೆ. ಸೂರ್ಯ ಯಾವಾಗಲೂ ಸೂರ್ಯನೇ. ಅವರು ಮೇಲಿದ್ದಾರೆ ಎಂದು ಉಗುಳುವ ಕೆಲಸ ಮಾಡಿದರೆ ಅದು ವಾಪಸ್ ನಮ್ಮ ಮುಖಕ್ಕೆ ಬೀಳುತ್ತದೆ. ಅಂತವರನ್ನು ಬೈದರೆ ದೊಡ್ಡ ನಾಯಕರಾಗಬಹುದು ಎನ್ನುವ ಭ್ರಮೆಯಲ್ಲಿರುವ ಸಿದ್ದರಾಮಯ್ಯ ಅವರಿಗೆ ಮುಂದಿನ ಚುನಾವಣೆಯಲ್ಲಿ ಏನು ಎಂದು ಗೊತ್ತಾಗಲಿದೆ ಎಂದರು. ಯಾವುದೇ ಒಬ್ಬ ರಾಜಕಾರಣಿ ಒಂದೇ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡು ಆ ಕ್ಷೇತ್ರವನ್ನು ಸಮಗ್ರವಾಗಿ ಅಭಿವೃದ್ಧಿ ಮಾಡಬೇಕು. ಆ ಮುಖಾಂತರ ಕ್ಷೇತ್ರದ ಜನರ ಮನಗೆಲ್ಲಬೇಕು. ಮತ್ತದೇ ಕ್ಷೇತ್ರಕ್ಕೆ ಹೋಗಿ ಕೆಲಸ ಮಾಡಿದ್ದೇನೆ, ಮತ ನೀಡಿ ಎಂದು ಜನರನ್ನು ಕೇಳಿ ಚುನಾವಣೆಗೆ ನಿಲ್ಲಬೇಕು.
ಆರ್‌ಎಸ್‌ಎಸ್ ಬಗ್ಗೆ ಸಿದ್ದರಾಮಯ್ಯ ಕಪಿಚೇಷ್ಟೆ: ಕೆ.ಎಸ್.ಈಶ್ವರಪ್ಪ ಟೀಕೆ
ಆದರೆ, ಮಾಜಿ ಸಿಎಂ ಆಗಿರುವ ಸಿದ್ದರಾಮಯ್ಯ ಅವರು ಕ್ಷೇತ್ರ ಹುಡುಕಾಡುತ್ತಿದ್ದಾರೆ. ಚಾಮುಂಡೇಶ್ವರಿಯಲ್ಲಿ ಸೋತ ಅವರಿಗೆ ಬಾದಾಮಿಯಲ್ಲಿಯೂ ಸಹ ಸೋಲಿನ ಭೀತಿ ಎದುರಾಗಿದೆ. ಆದ್ದರಿಂದಲೆ ಕೋಲಾರ ಕ್ಷೇತ್ರಕ್ಕೆ ಬಂದಿದ್ದಾರೆ. ಅಲ್ಲಿಯೂ ನಿಲ್ಲುತ್ತಾರೆಯೋ ಇಲ್ಲವೋ ಎನ್ನುವ ನಿಖರತೆಯಿಲ್ಲ. ತಾನೊಬ್ಬ ದೊಡ್ಡ ಲೀಡರ್ ಎಂದು ತೋರಿಸಿಕೊಳ್ಳುವುದಕ್ಕಾಗಿ ಸಿದ್ದರಾಮಯ್ಯ ಅವರು ಈ ರೀತಿಯಾಗಿ ಮಾಡುತ್ತಿದ್ದಾರೆ ಎಂದು ಈಶ್ವರಪ್ಪ ಆರೋಪಿಸಿದರು. ಸಿದ್ದರಾಮಯ್ಯ ಹಾಗೂ ವಿಶ್ವನಾಥ ಅವರಿಗೆ ಯಾವ ಪಕ್ಷದಲ್ಲಿ ಇರಬೇಕು ಎನ್ನುವುದಿಲ್ಲ ಅಧಿಕಾರದಲ್ಲಿರಬೇಕು ಅಷ್ಟೇ. ನನ್ನ ಪಕ್ಷ ತಾಯಿ ಇದ್ದಂತೆ ಎಂದೂ ತಾಯಿಗೆ ದ್ರೋಹ ಬಗೆಯುವ ಕೆಲಸ ಮಾಡಿಲ್ಲ. ಇದು ನನ್ನ ಸಂಸ್ಕಾರ, ಅಧಿಕಾರವೇ ಸಿದ್ದರಾಮಯ್ಯ ಅವರ ಸಂಸ್ಕಾರವಾಗಿದೆ ಎಂದು ದೂರಿದರು.
ಬಿಜೆಪಿಗೆ ಸಂಘಟನೆ, ಕಾರ್ಯಕರ್ತರೇ ಬಲ: ಬಿಜೆಪಿ ಪಕ್ಷಕ್ಕೆ ಹಿಂದೆಲ್ಲ ಬೆರಳೆಣಿಕೆ ಕ್ಷೇತ್ರಗಳಲ್ಲಿ ಜಯ ಸಿಗುತ್ತಿತ್ತು. ಆದರೆ, ಈಗ ಆ ಪರಿಸ್ಥಿತಿ ಇಲ್ಲ, ರಾಜ್ಯದ 224 ಕ್ಷೇತ್ರದಲ್ಲೂ ಪಕ್ಷದ ಸಂಘಟನೆ ಬಲಿಷ್ಠವಾಗಿದೆ ಎಂದು ಶಾಸಕ ಕೆ.ಎಸ್.ಈಶ್ವರಪ್ಪ ಹೇಳಿದರು. ನಗರದ ಮಲ್ಲೇಶ್ವರ ನಗರದಲ್ಲಿ ಬಿಜೆಪಿಯಿಂದ ರಾಜ್ಯಾದ್ಯಂತ ಹಮ್ಮಿಕೊಂಡಿರುವ ಬೂತ್‌ವಿಜಯ್ ಅಭಿಯಾನಕ್ಕೆ ಸೋಮವಾರ ಚಾಲನೆ ನೀಡಿ ಅವರು ಮಾತನಾಡಿ, ಹಿಂದೆ ಜನಸಂಘ ನಂತರ ಬಿಜೆಪಿ ಪ್ರಾರಂಭಿಸಿದಾಗ ಅಭ್ಯರ್ಥಿಗಳೆ ಸಿಗುತ್ತಿರಲಿಲ್ಲ. ನಾನು 1994ರಲ್ಲಿ ಬಿಜೆಪಿ ರಾಜ್ಯಾಧ್ಯಕ್ಷನಾಗಿದ್ದಾಗ ರಾಜ್ಯದ 220 ಸ್ಥಾನಗಳಲ್ಲಿ ಕೇವಲ 116 ಜನ ನಿಲ್ಲಿಸಿದ್ದೆವು. ಆಗ ಬಿಜೆಪಿಗೆ 40ಸೀಟ್ ಬಂತು.
ಸಂತೋಷ್ ಪಾಟೀಲ್ ಆತ್ಮಹತ್ಯೆ ಕೇಸ್: ಈಶ್ವರಪ್ಪಗೆ ಇನ್ನೂ ಮುಗಿದಿಲ್ಲ ಸಂಕಷ್ಟ?
ಸಂಘಟನೆ ಗಟ್ಟಿ ಇದ್ದ ಕಡೆ ಬಿಜೆಪಿಗೆ ಗೆಲುವಾಯಿತು. ಇವತ್ತು ರಾಜ್ಯದ 224 ಕ್ಷೇತ್ರಗಳಲ್ಲೂ ಕೂಡ ಸ್ಪರ್ಧೆಗೆ ಪೈಪೋಟಿಯಿದೆ. ಅಷ್ಟರ ಮಟ್ಟಿಗೆ ಬಿಜೆಪಿ ರಾಜ್ಯದ ಮತ್ತು ದೇಶದ ಎಲ್ಲಾ ಕಡೆ ಬೆಳೆದಿದೆ. ಇದಕ್ಕೆ ಕಾರಣ ಬೂತ್ ಸಮಿತಿ, ಕಾರ್ಯಕರ್ತರು ಮತ್ತು ಪೇಜ್ ಪ್ರಮುಖರು ಎಂದರು. ಇದುವರೆಗಿನ ಚುನಾವಣೆಯಲ್ಲಿ ಬಿಜೆಪಿಗೆ ಪೂರ್ಣ ಬಹುಮತ ಬಂದಿಲ್ಲ. ಈ ನಿಟ್ಟಿನಲ್ಲಿ ಪ್ರತಿ ಬೂತ್‌ನಲ್ಲಿ ವಿಜಯಗಳಿಸಿ ಸಂಪೂರ್ಣ ಬಹುಮತ ಪಡೆಯುವುದಕ್ಕಾಗಿ ಬೂತ್ ವಿಜಯ್ ಅಭಿಯಾನ ಕೈಗೊಂಡಿದ್ದೇವೆ. ಪಕ್ಷದ ವಿಚಾರಧಾರೆ ಮತ್ತು ಸಿದ್ಧಾಂತ, ಅಭಿವೃದ್ಧಿ ಮತ್ತು ನಾಯಕತ್ವ ಈ ಮೂರು ವಿಚಾರಗಳ ಬಗ್ಗೆ ಪಕ್ಷ ಗಮನಹರಿಸಿದೆ. ಕಾಶ್ಮೀರ, ಕಾಶಿ, ಅಯೋಧ್ಯೆ, ಮಥುರಾ ಬಗ್ಗೆ ಪಕ್ಷ ಕೆಲಸ ಮಾಡಿದೆ. ಭಯೋತ್ಪಾದನೆ ನಿರ್ಮೂಲನಕ್ಕೆ ಪಣ ತೊಟ್ಟಿದೆ. ಭಾರತೀಯ ಸಂಸ್ಕೃತಿ ಜಾರಿಗೆ ತರಲು ಶ್ರಮಿಸುತ್ತಿದೆ.