Asianet Suvarna News Asianet Suvarna News

ರಾಜ್ಯವನ್ನು ಉದ್ಧಾರ ಮಾಡಲು ಅಧಿಕಾರಕ್ಕೆ ಬಂದ ಕಾಂಗ್ರೆಸ್: ಕೆ.ಎಸ್.ಈಶ್ವರಪ್ಪ ಲೇವಡಿ

ಲೋಕಸಭೆ ಚುನಾವಣೆ ಸನ್ನಿಹಿತವಾಗಲಿ ಆಗ ನೋಡಿ ಯಾವ ಪಕ್ಷದ ಶಾಸಕರು ಬಿಜೆಪಿಗೆ ಬರುತ್ತಾರೆ ಅಂತ ಕಾಂಗ್ರೆಸ್ ನಾಯಕರು ಲೆಕ್ಕ ಬರೆದಿಟ್ಟುಕೊಳ್ಳಲಿ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಕಾಂಗ್ರೆಸ್ ವಿರುದ್ಧ ಹರಿಹಾಯ್ದರು. 

Ex Minister KS Eshwarappa Slams On Congress Govt At Honnali gvd
Author
First Published Oct 19, 2023, 8:02 AM IST

ಹೊನ್ನಾಳಿ (ಅ.19): ಲೋಕಸಭೆ ಚುನಾವಣೆ ಸನ್ನಿಹಿತವಾಗಲಿ ಆಗ ನೋಡಿ ಯಾವ ಪಕ್ಷದ ಶಾಸಕರು ಬಿಜೆಪಿಗೆ ಬರುತ್ತಾರೆ ಅಂತ ಕಾಂಗ್ರೆಸ್ ನಾಯಕರು ಲೆಕ್ಕ ಬರೆದಿಟ್ಟುಕೊಳ್ಳಲಿ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಕಾಂಗ್ರೆಸ್ ವಿರುದ್ಧ ಹರಿಹಾಯ್ದರು. ಹೊನ್ನಾಳಿಯ ಹಿರೇಕಲ್ಮಠದಲ್ಲಿ ನಡೆದ ಶರನ್ನವರಾತ್ರಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ಬಿಜೆಪಿಯಿಂದ ಕಾಂಗ್ರೆಸ್‍ಗೆ ಸೇರ್ಪಡೆಯಾಗುವವರ ಸಂಖ್ಯೆ ನೋಡಿ ಬಿಜೆಪಿಗೆ ತಡೆದುಕೊಳ್ಳಲಾಗುತ್ತಿಲ್ಲ ಎಂಬ ಕಾಂಗ್ರೆಸ್‍ನವರ ಹೇಳಿಕೆ ಬಗ್ಗೆ ಪ್ರಶ್ನೆಗೆ ಉತ್ತರಿಸಿದರು.

ಲೋಕಸಭೆ ಚುನಾವಣೆ ಸಮಯದಲ್ಲಿ ಬಿಜೆಪಿಗೆ ಬರುವ ಕಾಂಗ್ರೆಸ್ ಶಾಸಕರ ಸಂಖ್ಯೆ ಹಾಗೂ ಲೋಕಸಭೆ ಚುನಾವಣೆಯಲ್ಲಿ ಬರುವ ಫಲಿತಾಂಶ ನೋಡಿ ನಂತರ ಮಾತನಾಡುವುದಕ್ಕೂ ಏನಾದರೂ ಇದ್ದರೆ ಉತ್ತರವನ್ನು ಈಗಲೇ ಸಿದ್ಧತೆ ಮಾಡಿಕೊಳ್ಳಲಿ ಎಂದು ಕಾಂಗ್ರೆಸ್ ಮುಖಂಡರ ಬಗ್ಗೆ ಲೇವಡಿ ಮಾಡಿದರು. ರಾಜ್ಯವನ್ನು ಉದ್ಧಾರ ಮಾಡುತ್ತೇವೆ ಎಂದು ಅಧಿಕಾರಕ್ಕೆ ಬಂದ ಕಾಂಗ್ರೆಸ್, ಅಭಿವೃದ್ಧಿ ಮರೆತು ಬಿಜೆಪಿ ಮೇಲೆ ವೃಥಾ ಆರೋಪ ಮಾಡುತ್ತ ಕಾಲ ಕಳೆಯುತ್ತಿದೆ. ಕಾಂಗ್ರೆಸ್‍ನವರು ಬಿಜೆಪಿ ಮೇಲೆ ಶೇ 40 ಕಮಿಷನ್ ಆರೋಪ ಸುಳ್ಳು ಎಂಬುದು ಡಿ.ಕೆ.ಶಿವಕುಮಾರ್ ಅವರೇ ಒಪ್ಪಿದ್ದಾರೆ. 

ಕಾಂಗ್ರೆಸ್‍ನವರು ಮಾಡಿದ ಆರೋಪ ಸುಳ್ಳು ಎಂದು ಜನತೆ ಇದೆನ್ನೆಲ್ಲ ಗಮನಿಸುತ್ತಿದ್ದಾರೆ ಲೋಕಸಭೆ ಚುನಾವಣೆಯಲ್ಲಿ ತಕ್ಕ ಉತ್ತರ ನೀಡುತ್ತಾರೆ ಎಂದರು. ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅವರು ಸಮರ್ಥವಾಗಿ ಬಿಜೆಪಿ ಮುನ್ನಡೆಸುತ್ತಿದ್ದಾರೆ, ಹಾಗಾಗಿ ಶೀಘ್ರವೇ ಬಿಜೆಪಿ ಅಧ್ಯಕ್ಷರ ಆಯ್ಕೆ ಮಾಡಬೇಕೆಂದಿಲ್ಲ. ವಿಪಕ್ಷದ ನಾಯಕನ ಆಯ್ಕೆ ತೀರ್ಮಾನವನ್ನು ಯಾವ ಹಂತದಲ್ಲಿ ಮಾಡಬೇಕು ಎಂಬುದು ವರಿಷ್ಠ ನಾಯಕರಿಗೆ ಗೊತ್ತಿದೆ ವಿರೋಧ ಪಕ್ಷದ ನಾಯಕರ ಆಯ್ಕೆ ಮಾಡುತ್ತಾರೆ ಅದರ ಉಸಾಬರಿ ಕಾಂಗ್ರೆಸ್‍ಗೆ ಬೇಡ ಎಂದರು.

ಕನ್ನಡ ಬಳಕೆ ಅನಿವಾರ್ಯವೆಂಬ ವಾತಾವರಣ ಸೃಷ್ಟಿಸಿ: ಸಿದ್ದರಾಮಯ್ಯ

ಕಾಂಗ್ರೆಸ್‌ನಲ್ಲೇ ಹಲವು ಅಸಮಾಧಾನಗಳಿವೆ: ಕಾಂಗ್ರೆಸ್‍ನಲ್ಲಿರುವ ಬಣಗಳ ಬಡಿದಾಟ, ಮಂತ್ರಿ ಸ್ಥಾನ ಸಿಗದಿರುವುದಕ್ಕೆ ಅಸಮಾಧಾನ ಹಾಗೂ ಅನುದಾನ ಕೊಡುತ್ತಿಲ್ಲ ಎಂದು ಹಲವು ಮುಖಂಡರು ಹಾಗೂ ಕಾಂಗ್ರೆಸ್‍ ಶಾಸಕರು ಮುನಿಸಿಕೊಂಡಿದ್ದಾರೆ. ಮೊದಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪರಸ್ಪರ ಸಮಾಧಾನ ಮಾಡಿಕೊಳ್ಳಲಿ ಎಂದು ಕಾಂಗ್ರೆಸ್ ನಾಯಕರಿಗೆ ಈಶ್ವರಪ್ಪ ವ್ಯಂಗ್ಯವಾಡಿದರು.

Follow Us:
Download App:
  • android
  • ios