ಕಾಂಗ್ರೆಸ್‌ಗೆ ದೇಶಕಿಂತ ದೇಶದ್ರೋಹಿಗಳೇ ಮೆಚ್ಚು: ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ
ಪ್ರಜಾಪ್ರಭುತ್ವದ ದೇಗುಲ ಎಂದೇ ಕರೆಸಿಕೊಳ್ಳುವ ವಿಧಾನಸೌಧದಲ್ಲಿ ರಾಜ್ಯಸಭಾ ಅಭ್ಯರ್ಥಿ ನಾಸೀರ್ ಹುಸೇನ್ ಪರ ಬೆಂಬಲಿಗನೊಬ್ಬ ಪಾಕಿಸ್ತಾನ ಜಿಂದಾಬಾದ್ ಎಂಬ ರಾಷ್ಟ್ರದ್ರೋಹದ ಘೋಷಣೆ ಕೂಗಿರುವುದಕ್ಕೆ ಬಿಜೆಪಿ ತೀವ್ರವಾಗಿ ಖಂಡಿಸುತ್ತದೆ ಎಂದ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಆಕ್ರೋಶ ವ್ಯಕ್ತಪಡಿಸಿದರು.
ಹೊನ್ನಾಳಿ (ಫೆ.29): ಪ್ರಜಾಪ್ರಭುತ್ವದ ದೇಗುಲ ಎಂದೇ ಕರೆಸಿಕೊಳ್ಳುವ ವಿಧಾನಸೌಧದಲ್ಲಿ ರಾಜ್ಯಸಭಾ ಅಭ್ಯರ್ಥಿ ನಾಸೀರ್ ಹುಸೇನ್ ಪರ ಬೆಂಬಲಿಗನೊಬ್ಬ ಪಾಕಿಸ್ತಾನ ಜಿಂದಾಬಾದ್ ಎಂಬ ರಾಷ್ಟ್ರದ್ರೋಹದ ಘೋಷಣೆ ಕೂಗಿರುವುದಕ್ಕೆ ಬಿಜೆಪಿ ತೀವ್ರವಾಗಿ ಖಂಡಿಸುತ್ತದೆ ಎಂದ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಆಕ್ರೋಶ ವ್ಯಕ್ತಪಡಿಸಿದರು. ಸುದ್ದಿಗಾರರೊಂದಿಗೆ ಮಾತನಡಿದ ಅವರು, ರಾಜ್ಯಸಭಾ ಫಲಿತಾಂಶದ ನಂತರ ರಾಜ್ಯಸಭಾ ಚುನಾವಣೆ ವೇಳೆ ಕಾಂಗ್ರೆಸ್ ಅಭ್ಯರ್ಥಿ ನಾಸೀರ್ ಹುಸೇನ್ ಅವರು ಗೆದ್ದ ನಂತರ ಸ್ಥಳಕ್ಕೆ ಆಗಮಿಸುತ್ತಿದ್ದಂತೆ ನಾಸೀರ್ ಹುಸೇನ್ ಪಕ್ಕದಲ್ಲೇ ಇದ್ದ ಬೆಂಬಲಿಗನೊಬ್ಬ ಪಾಕಿಸ್ತಾನ ಜಿಂದಾಬಾದ್ ಎಂದು ದೇಶ ವಿರೋಧಿ ಘೋಷಣೆ ಕೂಗಿರುವುದು ನಿಜಕ್ಕೂ ಖಂಡನಿಯ.
ಕೆಲ ಕಾಂಗ್ರೆಸ್ ಕಾರ್ಯಕರ್ತರ ವಿಕೃತ ಮನಸ್ಸು ಹೇಗಿರುತ್ತದೆ ಎಂಬುದು ನೆನ್ನೆ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಪ್ರಕಟವಾಗಿದೆ ಎಂದು ಅವರು ಕಾಂಗ್ರೆಸ್ ವಿರುದ್ಧ ಹರಿಹಾಯ್ದರು. ಸರ್ಕಾರ ಈಗಲಾದರೂ ಎಚ್ಚೆತ್ತುಕೊಂಡು ಶೀಘ್ರವೇ ಪಾಕಿಸ್ತಾನ ಜಿಂದಾಬಾದ್ ಎಂಬ ರಾಷ್ಟ್ರವಿರೋಧಿ ಘೋಷಣೆ ಕೂಗಿರುವ ಆರೋಪಿಗಳನ್ನು ಕೂಡಲೇ ಬಂಧಿಸಬೇಕು ಎಂದು ಸರ್ಕಾರವನ್ನು ಆಗ್ರಹಿಸಿದರು. ಸ್ವತಃ ಕಾಂಗ್ರೆಸ್‍ನ ಮುಖಂಡರೇ ಆರೋಪಿಗಳನ್ನು ಬಂಧಿಸುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಬೇಕಾಯಿತು.
ಸಂಸದ ರಾಘವೇಂದ್ರ ಗೆಲ್ಲಿಸಿ, ಮೋದಿ ಕೈ ಬಲಪಡಿಸಬೇಕು: ಯಡಿಯೂರಪ್ಪ ಮನವಿ
ಆದರೆ, ಈವರೆವಿಗೂ ಸರ್ಕಾರ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ ಆರೋಪಿಗಳನ್ನು ಬಂಧಿಸಿಲ್ಲ ಎಂದರೆ ಸರ್ಕಾರದ ಮನಸ್ಥಿತಿ ಏನೆಂಬುದು ಇಡೀ ನಾಡಿಗೇ ಗೊತ್ತಾಗಿದೆ ಎಂದು ಕಾಂಗ್ರೆಸ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು. ಇನ್ನು, ಕನಿಷ್ಠ ಆರೋಪಿಯ ವಿರುದ್ಧ ಎಫ್‍ಐಆರ್ ದಾಖಲಿಸಿಲ್ಲ ಎಂದರೆ ಕಾಂಗ್ರೆಸ್ ಸರ್ಕಾರಕ್ಕೆ ದೇಶಕಿಂತ ದೇಶದ್ರೋಹ ಹೇಳಿಕೆ ನೀಡುವ ದೇಶದ್ರೋಹಿಗಳೇ ಅವರಿಗೆ ಹೆಚ್ಚು ಎನಿಸುತ್ತಿದೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದರು.
ಬಿಜೆಪಿ ಗೆಲುವಿಗೆ ನಿರಂತರ ಶ್ರಮಿಸಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಸಾಧನೆಗಳ ಹಾಗೂ ರೂಪಿಸಿರುವ ಯೋಜನೆಗಳ ಮನೆ, ಮನೆಗೆ ತಲುಪಿಸುವ ಕೆಲಸ ಪಕ್ಷದ ಪದಾಧಿಕಾರಿಗಳು, ಮಾಜಿ ಶಾಸಕರು ಮಾಡಬೇಕಿದೆ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೇಳಿದರು. ಪಟ್ಟಣದ ಹಿರೇಕಲ್ಮಠದಲ್ಲಿ ಬಿಜೆಪಿ ಹೊನ್ನಾಳಿ ಮಂಡಲ ವತಿಯಿಂದ ಶನಿವಾರ ಹಮ್ಮಿಕೊಂಡಿದ್ದ ಫಲಾನುಭವಿಗಳ ಸಂಪರ್ಕ ಅಭಿಯಾನದ ಕಾರ್ಯಾಗಾರಕ್ಕೆ ಚಾಲನೆ ನೀಡಿ ಮಾತನಾಡಿ ರಾಜಕೀಯ ಮುತ್ಸದ್ಧಿ, ಅಜಾತಶತ್ರು, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಉತ್ತಮ ಕೆಲಸ ಮಾಡಿದ್ದರೂ ಅವರ ಸಾಧನೆಗಳ ಪಕ್ಷದ ಮುಖಂಡರು 2004ರಲ್ಲಿ ಜನರಿಗೆ ತಲುಪಿಸದ್ದರಿಂದ ಅಂದು ಬಿಜೆಪಿ ಸೋಲಬೇಕಾಯಿತು. ಇದರಿಂದ ದೇಶದ ಅಭಿವೃದ್ಧಿಗೆ ಹತ್ತು ವರ್ಷಗಳ ಹಿನ್ನಡೆಯಾಯಿತು. ಯಾವುದೇ ಕಾರಣಕ್ಕೂ ಮೈಮರೆಯದೆ ಪಕ್ಷದ ಪರವಾಗಿ ಎಲ್ಲರೂ ಕೆಲಸ ಮಾಡಬೇಕಿದೆ ಎಂದರು.
ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಉಪಯೋಗ ಪಡೆಯಿರಿ: ಸಚಿವ ಬೈರತಿ ಸುರೇಶ್
ಕಾಂಗ್ರೆಸ್‌ಗೆ ಮತದಾರರಿಂದ ತಕ್ಕ ಪಾಠ: ರಾಜ್ಯದಲ್ಲಿ ಬಿ.ಎಸ್.ಯಡಿಯೂರಪ್ಪ ಮತ್ತು ಬಸವರಾಜ ಬೊಮ್ಮಾಯಿ ನೇತೃತ್ವದ ಹಿಂದಿನ ಬಿಜೆಪಿ ಸರ್ಕಾರ ಅನೇಕ ಅಭಿವೃದ್ಧಿ ಕಾರ್ಯಗಳ ಹಮ್ಮಿಕೊಂಡು ಕೆಲಸ ಮಾಡಿದ್ದರೂ ಕಾಂಗ್ರೆಸ್ ನ ಬಿಟ್ಟಿ ಭಾಗ್ಯಗಳ ಘೋಷಣೆ ಹಾಗೂ ಮೋಸದ ತಂತ್ರದಿಂದ ಪಕ್ಷ ಸೋಲಬೇಕಾಯಿತು. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅಧಿಕಾರದ ಲಾಲಸೆಯಲ್ಲಿ ತೇಲುತ್ತಿದ್ದು, ಲೋಕಸಭೆ ಚುನಾವಣೆಯಲ್ಲಿ ಮತದಾರರು ತಕ್ಕ ಪಾಠ ಕಲಿಸಲಿದ್ದಾರೆ ಎಂದರು. ರಾಷ್ಟ್ರದ ಭವಿಷ್ಯ ಬರೆಯುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 400ಕ್ಕೂ ಹೆಚ್ಚು ಸ್ಥಾನ ಪಡೆದು ಮೂರನೇ ಬಾರಿ ನರೇಂದ್ರ ಮೋದಿಯವರು ಮತ್ತೆ ಪ್ರಧಾನಿಯಾಗಿ ಮತ್ತೆ ದೇಶದ ಅಧಿಕಾರದ ಚುಕ್ಕಾಣಿ ಹಿಡಿಯುವುದು ಗ್ಯಾರಂಟಿ ಎಂದು ವಿಶ್ವಾಸ ವ್ಯಕ್ತಪಡಿಸಿದರು.