ಶಾಸಕ ಯತ್ನಾಳ್ ಅವನತಿ ಆರಂಭವಾಗಿದೆ: ಮಾಜಿ ಸಚಿವ ಮುರುಗೇಶ್ ನಿರಾಣಿ
ಆರ್. ಅಶೋಕ್‌ಗೆ ಪ್ರತಿಪಕ್ಷ ನಾಯಕನ ಸ್ಥಾನ ಮತ್ತು ಬಿ.ವೈ.ವಿಜಯೇಂದ್ರ ಅವರಿಗೆ ರಾಜ್ಯಾಧ್ಯಕ್ಷ ಸ್ಥಾನ ಪಟ್ಟ ಕಟ್ಟಿರೋದು ಹೈಕಮಾಂಡ್. ಆದರೆ ಇದನ್ನು ಸಹಿಸಿಕೊಳ್ಳಲು ‘ಆ ವ್ಯಕ್ತಿ’ಗೆ ಆಗುತ್ತಿಲ್ಲ ಎಂದು ಪರೋಕ್ಷವಾಗಿ ಶಾಸಕ ಯತ್ನಾಳ್ ವಿರುದ್ಧ ಮಾಜಿ ಸಚಿವ ಮುರುಗೇಶ್ ನಿರಾಣಿ ಕಿಡಿಕಾರಿದ್ದಾರೆ.
ನವದೆಹಲಿ (ಡಿ.13): ಆರ್. ಅಶೋಕ್‌ಗೆ ಪ್ರತಿಪಕ್ಷ ನಾಯಕನ ಸ್ಥಾನ ಮತ್ತು ಬಿ.ವೈ.ವಿಜಯೇಂದ್ರ ಅವರಿಗೆ ರಾಜ್ಯಾಧ್ಯಕ್ಷ ಸ್ಥಾನ ಪಟ್ಟ ಕಟ್ಟಿರೋದು ಹೈಕಮಾಂಡ್. ಆದರೆ ಇದನ್ನು ಸಹಿಸಿಕೊಳ್ಳಲು ‘ಆ ವ್ಯಕ್ತಿ’ಗೆ ಆಗುತ್ತಿಲ್ಲ ಎಂದು ಪರೋಕ್ಷವಾಗಿ ಶಾಸಕ ಯತ್ನಾಳ್ ವಿರುದ್ಧ ಮಾಜಿ ಸಚಿವ ಮುರುಗೇಶ್ ನಿರಾಣಿ ಕಿಡಿಕಾರಿದ್ದಾರೆ. ನವದೆಹಲಿಯಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ವಿಜಯೇಂದ್ರ ಅವರಿಗೆ ಅರ್ಹತೆಯ ಮೇಲೆ ರಾಜ್ಯಾಧ್ಯಕ್ಷ ಸ್ಥಾನ ಸಿಕ್ಕಿದೆ. ಬ್ಲ್ಯಾಕ್‌ಮೇಲ್ ಮಾಡಿ ಅವರಿಗೆ ಪಟ್ಟ ಕಟ್ಟಲಾಗಿದೆ ಎಂಬುದೆಲ್ಲ ಸುಳ್ಳು. ಈ ರೀತಿಯ ಆರೋಪ ಮಾಡುವವರ ಅವನತಿ ಆರಂಭವಾಗಿದೆ. ರಾಜ್ಯಾಧ್ಯಕ್ಷರ ಬಳಿ ಮಾತನಾಡಿ ಅವರ ವಿರುದ್ಧ ಕ್ರಮಕೈಗೊಳ್ಳುವ ಕುರಿತು ನಿರ್ಧಾರ ಮಾಡಲಾಗುವುದು ಎಂದು ಹೇಳಿದರು.
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಂದಲೇ ಮೇಲೆ ಬಂದು, ನಮ್ಮ ಪಕ್ಷದ ಮುಖಂಡರ ವಿರುದ್ಧವೇ ಮಾತಾಡುವ ಆ ವ್ಯಕ್ತಿ ಸ್ವಘೋಷಿತ ಮುಖ್ಯಮಂತ್ರಿ ಎಂದು ಹೇಳುತ್ತಿದ್ದಾನೆ. ಮಾತನಾಡಿದಾಗ ನಾಲ್ಕು ಜನರು ಚಪ್ಪಾಳೆ ಹೊಡೆದರೆ ಆತ ನಾಯಕ ಅಲ್ಲ. ಸಮಾಜಕ್ಕೆ ಆತನ ಕೊಡುಗೆ ಏನು? ಎಂದು ಪ್ರಶ್ನಿಸಿದರು. ಅವರ ಕೊಡ ತುಂಬಲು ಬಂದಿದೆ, ಇನ್ನು ಬಹಳ ದಿನ ನಡೆಯಲ್ಲ. ಅಧಿಕಾರಕ್ಕಾಗಿ ಅವರು ಹೀಗೆ ಕ್ಷುಲ್ಲಕವಾಗಿ ಮಾತನಾಡುತ್ತಿದ್ದಾರೆ. ದೀಪ ಆರುವಾಗ ಜೋರಾಗಿ ಉರಿಯುತ್ತೆ, ಈಗ ಜೋರಾಗಿ ಉರಿಯುತ್ತಿದೆ ಅಷ್ಟೇ ಎಂದವರು ಪರೋಕ್ಷವಾಗಿ ಕುಟುಕಿದರು.
ಸಾಮರ್ಥ್ಯ ಸಾಬೀತು ಪಡಿಸಿದ ಬಿಜೆಪಿ: ನಾಲ್ಕು ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ ಲೋಕಸಭೆ ಚುನಾವಣೆಗೆ ದಿಕ್ಸೂಚಿಯಾಗಿದೆ ಎಂದು ಮಾಜಿ ಸಚಿವ, ಬಿಜೆಪಿ ನಾಯಕ ಡಾ.ಮುರುಗೇಶ ಆರ್.ನಿರಾಣಿ ಹೇಳಿದ್ದಾರೆ. ನಾಲ್ಕು ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ ಕುರಿತು ಪ್ರತಿಕ್ರಿಯಿಸಿದ ಅವರು ತೆಲಂಗಾಣ ಹೊರತುಪಡಿಸಿ ಮಧ್ಯಪ್ರದೇಶ, ಛತ್ತೀಸಗಡ ಮತ್ತು ರಾಜಸ್ಥಾನದಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸುವ ಮೂಲಕ ತನ್ನ ಸಾಮರ್ಥ್ಯ ಸಾಬೀತುಪಡಿಸಿದೆ.
ಮುಂದಿನ 25 ವರ್ಷಗಳಲ್ಲಿ ಮಹಾನ್ ಕರ್ನಾಟಕ ನಿರ್ಮಿಸಿ: ರಾಜ್ಯಪಾಲ ಗೆಹ್ಲೋಟ್
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಅಧಿಕಾರಕ್ಕೆ ಬರುವುದಕ್ಕೆ ಈ ಫಲಿತಾಂಶ ಮುನ್ನುಡಿಯಾಗಿದೆ ಎಂದು ಆಭಿಪ್ರಾಯಪಟ್ಟಿದ್ದಾರೆ. ನಾಲ್ಕು ರಾಜ್ಯಗಳ ಪೈಕಿ ಮೂರು ರಾಜ್ಯಗಳಲ್ಲಿ ಬಿಜೆಪಿಗೆ ಅಧಿಕಾರ ನೀಡಿದ ಮತ್ತು ತೆಲಂಗಾಣದಲ್ಲಿ ಕೇವಲ ಒಂದು ಸ್ಥಾನದಲ್ಲಿದ್ದ ಬಿಜೆಪಿಯನ್ನು 9 ಸ್ಥಾನಕ್ಕೆ ಕೊಂಡೊಯ್ದ ಆ ರಾಜ್ಯಗಳ ಜನರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ತಿಳಿಸಿದ್ದಾರೆ.