Asianet Suvarna News Asianet Suvarna News

ಶೀಘ್ರವೇ ಸಿದ್ದು ನೇತೃತ್ವದ ಕಾಂಗ್ರೆಸ್‌ ಸರ್ಕಾರ ಪತನ: ಮಾಜಿ ಸಚಿವ ಮುರಗೇಶ್‌ ನಿರಾಣಿ

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಬಹಳ ದಿನ ಉಳಿಯುವುದಿಲ್ಲ. ಶೀಘ್ರವೇ ಪತನವಾಗಲಿದೆ ಎಂದು ಮಾಜಿ ಸಚಿವ ಮುರಗೇಶ್‌ ನಿರಾಣಿ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮಗೆ ಅನುದಾನ ಬಂದಿಲ್ಲ ಎಂದು ಕಾಂಗ್ರೆಸ್ ಶಾಸಕರೇ ಬೇಜಾರು ವ್ಯಕ್ತಪಡಿಸುತ್ತಿದ್ದಾರೆ. 

Ex Minister Murugesh Nirani Slams On Siddaramaiah Congress Govt At Belagavi gvd
Author
First Published Feb 16, 2024, 11:03 PM IST

ಬೆಳಗಾವಿ (ಫೆ.16): ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಬಹಳ ದಿನ ಉಳಿಯುವುದಿಲ್ಲ. ಶೀಘ್ರವೇ ಪತನವಾಗಲಿದೆ ಎಂದು ಮಾಜಿ ಸಚಿವ ಮುರಗೇಶ್‌ ನಿರಾಣಿ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮಗೆ ಅನುದಾನ ಬಂದಿಲ್ಲ ಎಂದು ಕಾಂಗ್ರೆಸ್ ಶಾಸಕರೇ ಬೇಜಾರು ವ್ಯಕ್ತಪಡಿಸುತ್ತಿದ್ದಾರೆ. ಐದು ಗ್ಯಾರಂಟಿಗಳನ್ನು ನಾವು ಸ್ವಾಗತ ಮಾಡಿದ್ದೇವು. ಆದರೆ ಈಗ ಕಂಡಿಷನ್ ಹಾಕುತ್ತಿದ್ದಾರೆ. ಗ್ಯಾರಂಟಿ ಯೋಜನೆ ಜಾರಿಯಾದಾಗಿನಿಂದ ಅನುದಾನ ಬಿಡುಗಡೆಯಾಗುತ್ತಿಲ್ಲ. ಹೀಗಾಗಿ ಸರ್ಕಾರದ ವಿರುದ್ಧ ಶಾಸಕರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ ಎಂದರು.

ಅತ್ಯಂತ ಕಡಿಮೆ ಅವಧಿಯಲ್ಲಿಯೇ ಈ ಸರ್ಕಾರ ಏನಾಗುತ್ತದೆ ಎಂದು ಕಾಯ್ದು ನೋಡಿ ಎಂದ ಅವರು, ಅನುದಾನದ ವಿಚಾರದಲ್ಲಿ ಶಾಸಕರೇ ಅಸಮಾದಾನಿತರಾಗಿ ಸರ್ಕಾರ ಕೆಡವಲು ತುದಿಗಾಲ ಮೇಲೆ ನಿಂತಿದ್ದಾರೆ. ಬಿಜೆಪಿ ನಾಯಕರೇನು ಈ ಸರ್ಕಾರ ಪತನಗೊಳಿಸಲು ಪ್ರಯತ್ನಿಸುತ್ತಿಲ್ಲ. ಅನುದಾನ ವಿಚಾರವಾಗಿ ಕಾಂಗ್ರೆಸ್ ‌ಶಾಸಕರೇ ಅಸಮಾಧಾನಗೊಂಡಿದ್ದಾರೆ. ಹೀಗಾಗಿ ‌ದೊಡ್ಡ ಪ್ರಮಾಣದಲ್ಲಿ ಕಾಂಗ್ರೆಸ್ ‌ಶಾಸಕರಿಂದಲೇ‌ ಈ ಸರ್ಕಾರ ‌ಪತನವಾಗಲಿದೆ ಎಂದು ಹೇಳಿದರು.

ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ಲೂಟಿ ಜಾತ್ರೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ವಾಗ್ದಾಳಿ

ಮಾಜಿ ಸಿಎಂ ಯಡಿಯೂರಪ್ಪ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿಕೆಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಅವರು, ಕೆಲವೊಬ್ಬರು ಅಸಾಧಾರಣ ವ್ಯಕ್ತಿಗಳಿರುತ್ತಾರೆ. ಅವರ ಬಗ್ಗೆ ನಾನು ಮಾತನಾಡುವುದಿಲ್ಲ ಎಂದರು. ನಾನು ಲೋಕಸಬಾ ಚುನಾವಣೆಗೆ ಸ್ಪರ್ಧಿಸುವ ಆಕಾಂಕ್ಷಿ ನಾನಲ್ಲ. ಪಕ್ಷದ ಶಿಸ್ತಿನ ಕಾರ್ಯಕರ್ತ. ಪಕ್ಷ ನನಗೆ ಯಾವುದೇ ಜವಾಬ್ದಾರಿ ನೀಡಿದರೂ ಅದನ್ನು ಸಮರ್ಥವಾಗಿ ನಿಭಾಯಿಸುತ್ತೇನೆ. ಬಿಜೆಪಿಯಲ್ಲಿ ಯಾರಿಗೆ ಯಾವಾಗ ಸರ್ಪೈಸ್‌ ಆಗುತ್ತದೆಯೋ ಗೊತ್ತಿಲ್ಲ. ಆದರೆ, ಪಕ್ಷ ವಹಿಸಿದ ಯಾವುದೇ ಜವಾಬ್ದಾರಿ ನಿಭಾಯಿಸಲು ನಾನು ಸಿದ್ಧ ಎಂದು ಹೇಳಿದರು.

ಸದನದಲ್ಲಿ ಕಾನೂನು ಸುವ್ಯವಸ್ಥೆ ಬಗ್ಗೆ ಗದ್ದಲ: ‘ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ. ಬಿಜೆಪಿಯ ಅವಧಿ ಬಳಿಕ ಅಪರಾಧ ಚಟುವಟಿಕೆ ಶೇ.46 ರಷ್ಟು ಹೆಚ್ಚಾಗಿದೆ. ಮಹಿಳೆಯರ ಮೇಲಿನ ದೌರ್ಜನ್ಯದಲ್ಲಿ ಕರ್ನಾಟಕ ದೇಶದಲ್ಲೇ ಮೂರನೇ ಸ್ಥಾನಕ್ಕೆ ಬಂದಿದೆ. ಗುಪ್ತಚರ ದಳ ಹಾಗೂ ಪೊಲೀಸ್ ಇಲಾಖೆ ಸತ್ತಿದೆಯೋ, ಬದುಕಿದೆಯೋ ಎಂಬುದೂ ಗೊತ್ತಾಗುತ್ತಿಲ್ಲ’ ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಆರ್‌. ಅಶೋಕ್‌ ಕಾನೂನು ಸುವ್ಯವಸ್ಥೆ ವೈಫಲ್ಯದ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗುತ್ತಿಗೆ ಆಧಾರದಲ್ಲಿ 337 ವೈದ್ಯರ ನೇಮಕಕ್ಕೆ ನಿರ್ಧಾರ: ಸಚಿವ ದಿನೇಶ್ ಗುಂಡೂರಾವ್

ವಿಧಾನಸಭೆಯಲ್ಲಿ ಕಾನೂನು ಸುವ್ಯವಸ್ಥೆ ಬಗ್ಗೆ ಚರ್ಚೆಗೆ ನಿಲುವಳಿ ಮಂಡಿಸಿ ಅವಕಾಶ ಕೋರಿದರು. ಈ ವೇಳೆ ಕಾನೂನು ಸುವ್ಯವಸ್ಥೆ ವಿಚಾರವಾಗಿ ಗೃಹ ಸಚಿವರಿಂದ ಪ್ರತ್ಯೇಕ ಉತ್ತರ ಕೊಡಿಸುವುದಾಗಿ ಹೇಳಿದ ಸ್ಪೀಕರ್‌ ಯು.ಟಿ. ಖಾದರ್‌, ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆ ವೇಳೆಯೇ ಈ ಬಗ್ಗೆಯೂ ಮಾತನಾಡುವಂತೆ ಮನವೊಲಿಸಿದರು. ಇದಕ್ಕೆ ಒಪ್ಪಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳಾಗಿದೆ. ಉದ್ಯೋಗ ಮತ್ತು ಹೂಡಿಕೆಯ ಸ್ವರ್ಗದಂತಿದ್ದ ರಾಜ್ಯ ಅಪರಾಧದ ನಾಡಾಗಿ ಕುಖ್ಯಾತಿ ಪಡೆಯುತ್ತಿದೆ. NCRB ಪ್ರಕಾರ ಕಳೆದ ವರ್ಷ 1,80,742 ಪ್ರಕರಣ ದಾಖಲಾಗಿದೆ. ಇದು ಬಿಜೆಪಿ ಅವಧಿಗಿಂತ ಶೇ.46 ಕ್ಕೂ ಅಧಿಕ. ಹಿರಿಯ ನಾಗರಿಕರ ವಿರುದ್ಧ ನಡೆದ ಅಪರಾಧಿ ಚಟುವಟಿಕೆ 50 ಸಾವಿರದಷ್ಟು ಹೆಚ್ಚಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.

Follow Us:
Download App:
  • android
  • ios