ಸ್ಟಾಲಿನ್ ಮೇಲಿನ ಮೋಹಕ್ಕೆ ತಮಿಳುನಾಡಿಗೆ ನೀರು: ಕಾಂಗ್ರೆಸ್ ವಿರುದ್ಧ ಅಶೋಕ್ ಆಕ್ರೋಶ

ಈಗಿನ ಕಾಂಗ್ರೆಸ್ ಸರ್ಕಾರ ಕದ್ದು ಮುಚ್ಚಿ ರಾತ್ರೋರಾತ್ರಿ ತಮಿಳುನಾಡಿಗೆ ನೀರು ಹರಿಸಿದೆ ಎಂದು ಮಾಜಿ ಸಚಿವ ಆರ್.ಅಶೋಕ್ ಆರೋಪಿಸಿದರು. ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಅಣೆಕಟ್ಟು ವೀಕ್ಷಣೆ ಬಳಿ ಇದ್ದ ಸುದ್ದಿಗಾರರೊಂದಿಗೆ ಮಾತನಾಡಿ, ಸ್ಟಾಲಿನ್ ಮೇಲಿನ ಮೋಹಕ್ಕೆ ಒಳಗಾಗಿ ತಮಿಳುನಾಡಿಗೆ ನೀರು ಹರಿಸಿದೆ.
 

Ex Minister R Ashok Slams On Congress Govt Over Cauvery Water Issue gvd

ಮಂಡ್ಯ (ಸೆ.09): ಈಗಿನ ಕಾಂಗ್ರೆಸ್ ಸರ್ಕಾರ ಕದ್ದು ಮುಚ್ಚಿ ರಾತ್ರೋರಾತ್ರಿ ತಮಿಳುನಾಡಿಗೆ ನೀರು ಹರಿಸಿದೆ ಎಂದು ಮಾಜಿ ಸಚಿವ ಆರ್.ಅಶೋಕ್ ಆರೋಪಿಸಿದರು. ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಅಣೆಕಟ್ಟು ವೀಕ್ಷಣೆ ಬಳಿ ಇದ್ದ ಸುದ್ದಿಗಾರರೊಂದಿಗೆ ಮಾತನಾಡಿ, ಸ್ಟಾಲಿನ್ ಮೇಲಿನ ಮೋಹಕ್ಕೆ ಒಳಗಾಗಿ ತಮಿಳುನಾಡಿಗೆ ನೀರು ಹರಿಸಿದೆ. ನೀರನ್ನು ಸಂರಕ್ಷಿಸಿಕೊಂಡು ರೈತರಿಗೆ ನೀಡದ ಕಾಂಗ್ರೆಸ್ ಸರ್ಕಾರ ಹಳೇ ಮೈಸೂರು ಭಾಗದ ರೈತರಿಗೆ ಅನ್ಯಾಯ ಮಾಡಿದ್ದಾರೆ ಎಂದು ದೂರಿದರು.

ತಮಿಳುನಾಡಿಗೆ ನೀರು ಹರಿಸಿದ ಪರಿಣಾಮ ಅಣೆಕಟ್ಟೆಯಲ್ಲಿ ಅತಿ ಕಡಿಮೆ ನೀರು ಸಂಗ್ರಹವಾಗಿದೆ. ಮುಂದಿನ ದಿನಗಳಲ್ಲಿ ಕುಡಿವ ನೀರಿಗೂ ಹಾಹಾಕಾರ ಎದುರಾಗುವುದು ನಿಶ್ಚಿತವಾಗಿದೆ. ಅಧಿಕಾರಿಗಳು ಮಾಧ್ಯಮದವರನ್ನು ಅಣೆಕಟ್ಟೆ ಮೇಲೆ ಹೋಗಲು ನಿರ್ಬಂಧ ಮಾಡಿದರು. ಸರ್ಕಾರದ ನಿಜಬಣ್ಣ ತಿಳಿಯುತ್ತದೆ ಎಂಬ ಕಾರಣಕ್ಕೆ ಮಾಧ್ಯಮಗಳಿಗೆ ತುರ್ತು ಪರಿಸ್ಥಿತಿ ತಂದಿದ್ದಾರೆ. ಕೇವಲ 11 ಜನರಿಗೆ ಮಾತ್ರ ಡ್ಯಾಂ ಮೇಲೆ ಹೋಗಲು ಅವಕಾಶ ಕೊಟ್ಟಿದ್ದು, ಇದರ ಒಳ ಉದ್ದೇಶ ಕಾಂಗ್ರೆಸ್ ನೇತೃತ್ವದ ಇಂಡಿಯಾ ಆಗಿದೆ ಎಂದು ಜರಿದರು.

ಕೆಆರ್‌ಎಸ್ ಅಣೆಕಟ್ಟು ನೋಡಿದ್ರೆ ಹೊಟ್ಟೆ ಉರಿಯುತ್ತೆ: ಮಾಜಿ ಸಿಎಂ ಬೊಮ್ಮಾಯಿ

ಕಿಸಾನ್‌ ಸಂಘ ಪ್ರತಿಭಟನೆ: ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಹರಿಸುತ್ತಿರುವ ರಾಜ್ಯ ಸರ್ಕಾರದ ನಿರ್ಧಾರ ವಿರೋಧಿಸಿ ‘ಭಾರತೀಯ ಕಿಸಾನ್‌ ಸಂಘ-ಕರ್ನಾಟಕ’ ನೇತೃತ್ವದಲ್ಲಿ ರೈತರು ಪ್ರತಿಭಟನೆ ನಡೆಸಿದರು. ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಸಂಘದ ಪ್ರಾಂತ್ಯ ಸಂಘಟನಾ ಕಾರ್ಯದರ್ಶಿ ನಾರಾಯಣಸ್ವಾಮಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ತಮಿಳುನಾಡಿಗೆ ಕೆಆರ್‌ಎಸ್‌ ಅಣೆಕಟ್ಟೆಯಿಂದ ಕಾವೇರಿ ನೀರು ಹರಿಸುವ ಮೂಲಕ ಬೆಂಗಳೂರು ಭಾಗದ ಜನರಿಗೆ ಕುಡಿಯುವ ನೀರಿಗೆ ಹಾಗೂ ಮಂಡ್ಯ ಜಿಲ್ಲೆಯ ರೈತರು ಬೆಳೆಯುವ ಬೆಳೆಗೆ ರಾಜ್ಯ ಸರ್ಕಾರ ದ್ರೋಹ ಮಾಡಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಮುಂಗಾರು ಮಳೆಯ ಕೊರತೆಯಿಂದಾಗಿ ಕೆಆರ್‌ಎಸ್‌ ಅಣೆಕಟ್ಟು ಜಲಾಶಯ ಭರ್ತಿಯಾಗದೆ ಸಂಕಷ್ಟದಲ್ಲಿದ್ದಾಗ ಆಗಸ್ಟ್‌ 11ರಂದು ದೆಹಲಿಯಲ್ಲಿ ನಡೆದ ಕಾವೇರಿ ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಅಧ್ಯಕ್ಷ ಎನ್‌. ಮಸೂದ್‌ ಹುಸೇನ್‌ ಅವರು ಕುಡಿಯುವ ನೀರಿನ ಆದ್ಯತೆ ನೋಡಿಕೊಂಡು ಒಳ ಹರಿವಿನ ಪ್ರಮಾಣ ಗಮನಿಸಿ ಕೆಳಭಾಗದ ರಾಜ್ಯಕ್ಕೆ ನೀರು ಹರಿಸುವ ಬಗ್ಗೆ ಕರ್ನಾಟಕ ಸರ್ಕಾರವೇ ನಿರ್ಧರಿಸಲೆಂದು ತಿಳಿಸಿದ್ದರೂ ನೀರು ಹರಿಸಲಾಗಿದೆ ಎಂದು ದೂರಿದರು.

ಕಾವೇರಿ ನೀರಿನ ವಿಚಾರದಲ್ಲಿ ಬಿಜೆಪಿ ರಾಜಕೀಯ ಬಿಡಲಿ: ಚಲುವರಾಯಸ್ವಾಮಿ

ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಹೋಗಿ ವಾಸ್ತವ ಸ್ಥಿತಿ ತಿಳಿಸಬೇಕಿತ್ತು. ಆದರೆ, ತಮಿಳುನಾಡು ನ್ಯಾಯಾಲಯಕ್ಕೆ ಹೋದ ತಕ್ಷಣ ಬೇಜವಾಬ್ದಾರಿಯಿಂದ ಪ್ರಾಧಿಕಾರ 10 ಸಾವಿರ ಕ್ಯುಸೆಕ್ಸ್‌ ನೀರು ಬಿಡಲು ಆದೇಶಿಸಿದೆ ಎಂದು ಸುಳ್ಳು ಹೇಳಿ ದಿನಕ್ಕೆ 12 ಸಾವಿರದಿಂದ 15 ಸಾವಿರ ಕ್ಯುಸೆಕ್‌ವರೆಗೆ ನೀರನ್ನು ತಮಿಳುನಾಡಿಗೆ ಹರಿಸಿದೆ. ಇದರಿಂದ ಅಂದಾಜು 24 ಟಿಎಂಸಿ ಇದ್ದ ನೀರು 17 ಟಿಎಂಸಿಗೆ ಇಳಿದಿದೆ. ಈ ಪೈಕಿ 4 ಟಿಎಂಸಿ ನೀರು ಡೆಡ್‌ ಸ್ಟೋರೇಜ್‌ ಆಗಿದ್ದು, ಉಪಯೋಗಕ್ಕೆ ಕೇವಲ 13 ಟಿಎಂಸಿ ಅಷ್ಟೇ ಸಿಗಲಿದೆ. ಇಷ್ಟು ನೀರು 3 ಜಿಲ್ಲೆಗಳಿಗೆ ಕುಡಿಯುವುದಕ್ಕೆ ಸಾಲುವುದಿಲ್ಲ. ಇನ್ನು ವ್ಯವಸಾಯಕ್ಕಂತೂ ಇಲ್ಲವೇ ಇಲ್ಲ. ಇದಕ್ಕೆ ಮುಂದಾಲೋಚನೆ ಇಲ್ಲದ ಸರ್ಕಾರದ ನಡೆಯೇ ಕಾರಣ ಎಂದು ಪ್ರತಿಭಟನಾಕಾರರು ಟೀಕಿಸಿದರು.

Latest Videos
Follow Us:
Download App:
  • android
  • ios