ರಾಜ್ಯದಲ್ಲಿ ಸಿದ್ದು, ಶಿವಕುಮಾರ್ ಮೈತ್ರಿ ಸರ್ಕಾರ: ಅಶೋಕ್ ವ್ಯಂಗ್ಯ
ರಾಜ್ಯದಲ್ಲಿ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಅವರ ಮೈತ್ರಿಯ ಸಮ್ಮಿಶ್ರ ಸರ್ಕಾರ ಅಧಿಕಾರದಲ್ಲಿದ್ದು, ಎರಡೂ ಬಣಗಳ ಗುಂಪುಗಾರಿಕೆ ದಿನೇ ದಿನೇ ಹೆಚ್ಚುತ್ತಿದೆ. ಈ ಸರ್ಕಾರ ಹೆಚ್ಚು ದಿನ ಅಧಿಕಾರದಲ್ಲಿರುವುದಿಲ್ಲ ಎಂದು ಮಾಜಿ ಉಪಮುಖ್ಯಮಂತ್ರಿ ಆರ್. ಅಶೋಕ್ ಹೇಳಿದ್ದಾರೆ.
ಮಡಿಕೇರಿ (ಜೂ.30): ರಾಜ್ಯದಲ್ಲಿ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಅವರ ಮೈತ್ರಿಯ ಸಮ್ಮಿಶ್ರ ಸರ್ಕಾರ ಅಧಿಕಾರದಲ್ಲಿದ್ದು, ಎರಡೂ ಬಣಗಳ ಗುಂಪುಗಾರಿಕೆ ದಿನೇ ದಿನೇ ಹೆಚ್ಚುತ್ತಿದೆ. ಈ ಸರ್ಕಾರ ಹೆಚ್ಚು ದಿನ ಅಧಿಕಾರದಲ್ಲಿರುವುದಿಲ್ಲ ಎಂದು ಮಾಜಿ ಉಪಮುಖ್ಯಮಂತ್ರಿ ಆರ್. ಅಶೋಕ್ ಹೇಳಿದ್ದಾರೆ. ಮಡಿಕೇರಿಯಲ್ಲಿಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರ್. ಅಶೋಕ್, ಕಾಂಗ್ರೆಸ್ ವರ್ಗಾವಣೆ ದಂಧೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದೆ.
ಮುಂಬರುವ 5 ರಾಜ್ಯಗಳ ವಿಧಾನಸಭಾ ಚುನಾವಣೆಗೆ ಕರ್ನಾಟಕವೇ ಕಾಂಗ್ರೆಸ್ ಪಾಲಿಗೆ ಎಟಿಎಂ ಆಗಿದೆ. ಪ್ರಸ್ತುತ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಯೋಜನೆ ಗೊಂದಲದಿಂದ ಕೂಡಿ ಜನತೆಗೆ ತೀವ್ರ ನಿರಾಶೆ ತಂದಿದೆ. ಒಂದೂ ಯೋಜನೆಯೂ ನಿಖರತೆಯಿಂದ ಕೂಡಿಲ್ಲ. ಯಾವುದೇ ಯೋಜನೆ ಸಲೀಸಾಗಿ ಕಾರ್ಯರೂಪಕ್ಕೆ ಬರುತ್ತಿಲ್ಲ. ಹೀಗಿದ್ದರೂ ಕೊಟ್ಟಮಾತಿನಂತೆ ಜನರಿಗೆ ಗ್ಯಾರಂಟಿ ಕಾರ್ಡ್ ಯೋಜನೆ ಜಾರಿಗೆ ಬದಲಾಗಿ ಮೋದಿಯನ್ನು ತೆಗಳುವುದೇ ಕಾಂಗ್ರೆಸ್ ಮುಖಂಡರಿಗೆ ಮುಖ್ಯ ಕೆಲಸವಾಗಿದೆ ಎಂದು ಟೀಕಿಸಿದರು.
ಅಕ್ಕಿ ಕೇಂದ್ರ ಸರ್ಕಾರದ್ದು, ಚೀಲ ಸಿದ್ದರಾಮಯ್ಯದು: ಅಶೋಕ್ ವ್ಯಂಗ್ಯ
ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಕಾಂಗ್ರೆಸ್ ಶಾಸಕರನ್ನು ಬಣ ರಾಜಕೀಯದ ಮೂಲಕ ಹಿಡಿತದಲ್ಲಿಟ್ಟುಕೊಳ್ಳಲು ಪೈಪೋಟಿ ನಡೆಸುತ್ತಿದ್ದಾರೆ ಎಂದು ಆರೋಪಿಸಿದ ಅಶೋಕ್, ಇದು ಕೂಡ ಕಾಂಗ್ರೆಸ್ ಯೋಜನೆಗಳಲ್ಲೊಂದಾಗಿದೆ ಎಂದು ವ್ಯಂಗ್ಯವಾಡಿದರು. ವಿಧಾನಸಭಾ ಅಧಿವೇಶನಕ್ಕೆ ಮುನ್ನವೇ ಜುಲೈ 3ರಂದು ವಿಧಾನಸಭೆಯ ಪ್ರತಿಪಕ್ಷ ನಾಯಕನ ಆಯ್ಕೆಯನ್ನು ರಾಜ್ಯ ಬಿಜೆಪಿ ಅಧ್ಯಕ್ಷರು ಮಾಡಲಿದ್ದಾರೆ. ಈ ಬಗ್ಗೆ ಬಿಜೆಪಿಯಲ್ಲಿ ಯಾವುದೇ ಗೊಂದಲವಿಲ್ಲ ಎಂದು ಸ್ಪಷ್ಟಪಡಿಸಿದ ಅಶೋಕ್, ಒಳಮೀಸಲಾತಿಯಿಂದ ಬಿಜೆಪಿಗೆ ಸೋಲಾಯಿತು ಎಂಬ ಅನೇಕರ ಆರೋಪದಲ್ಲಿ ಹುರುಳಿಲ್ಲ.
ಗ್ಯಾರಂಟಿ ಯೋಜನೆ ಜನರಿಗೆ ಕೊಡದಂತೆ ಮಾಡುವುದು ಕೇಂದ್ರದ ಉದ್ದೇಶ: ಸಚಿವ ಚಲುವರಾಯಸ್ವಾಮಿ
ಆದರೆ ಒಳಮೀಸಲಾತಿ ಲಾಭ ಪಡೆದವರು ಬಿಜೆಪಿ ಜತೆ ಚುನಾವಣೆಯಲ್ಲಿ ನಿಲ್ಲದಿರುವದೇ ಸೋಲಿಗೆ ಕಾರಣಗಳಲ್ಲೊಂದಾಯಿತು ಎಂದು ವಿಶ್ಲೇಷಿಸಿದರು. ಕಾಂಗ್ರೆಸ್‌ನಿಂದ ಬಿಜೆಪಿಗೆ ಬಂದ 17 ವಲಸಿಗ ಶಾಸಕರಿಂದಾಗಿಯೇ ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಯಾಗಲು ಕಾರಣವಾಯಿತು. ಹೀಗಾಗಿ ಈ ಶಾಸಕರನ್ನು ಬಿಜೆಪಿ ಪಕ್ಷದಿಂದ ಕೈಬಿಡುವ ಪ್ರಶ್ನೆಯೇ ಇಲ್ಲ. ಅವರೊಂದಿಗೇ ಬಿಜೆಪಿ ಮುಂದೆ ಸಾಗಲಿದೆ ಎಂದು ಬಿಜೆಪಿಯ ಕೆಲ ನಾಯಕರ ದೂರಿಗೆ ಅಶೋಕ್ ಪರೋಕ್ಷವಾಗಿ ಉತ್ತರಿಸಿದರು.