Asianet Suvarna News Asianet Suvarna News

ಐಟಿ ದಾಳಿ ಚರ್ಚೆ ತಪ್ಪಿಸಲು ಹುಲಿಯುಗುರು ಸದಾರಮೆ ನಾಟಕ: ಸಿ.ಟಿ.ರವಿ

ಇತ್ತೀಚಿಗೆ ನಡೆದ ಐಟಿ ದಾಳಿ, ಅಲ್ಲಿ ಪತ್ತೆಯಾದ ನೂರು ಕೋಟಿಗೂ ಅಧಿಕ ಅಕ್ರಮ ಹಣದ ಕುರಿತಾದ ಚರ್ಚೆಯನ್ನು ದಾರಿತಪ್ಪಿಸಿ, ಸಾರ್ವಜನಿಕರ ಆಕ್ರೋಶಕ್ಕೆ ಪೂರ್ಣ ವಿರಾಮ ನೀಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ಕಮಿಷನ್ ಕಲೆಕ್ಟರ್ (CM) ಮತ್ತು ಡೆಪ್ಯೂಟಿ ಕಮಿಷನ್ ಕಲೆಕ್ಟರ್ (DCM) ಆರಂಭಿಸಿರುವ ಹೊಸ ನಾಟಕ "ಹುಲಿಯುಗುರು" ಎಂದು ಮಾಜಿ ಸಚಿವ ಸಿ.ಟಿ.ರವಿ ಆರೋಪಿಸಿದ್ದಾರೆ. 

Ex Mla CT Ravi Slams On Congress Govt At Chikkamagaluru gvd
Author
First Published Oct 28, 2023, 2:30 AM IST

ಚಿಕ್ಕಮಗಳೂರು (ಅ.28): ಇತ್ತೀಚಿಗೆ ನಡೆದ ಐಟಿ ದಾಳಿ, ಅಲ್ಲಿ ಪತ್ತೆಯಾದ ನೂರು ಕೋಟಿಗೂ ಅಧಿಕ ಅಕ್ರಮ ಹಣದ ಕುರಿತಾದ ಚರ್ಚೆಯನ್ನು ದಾರಿತಪ್ಪಿಸಿ, ಸಾರ್ವಜನಿಕರ ಆಕ್ರೋಶಕ್ಕೆ ಪೂರ್ಣ ವಿರಾಮ ನೀಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ಕಮಿಷನ್ ಕಲೆಕ್ಟರ್ (CM) ಮತ್ತು ಡೆಪ್ಯೂಟಿ ಕಮಿಷನ್ ಕಲೆಕ್ಟರ್ (DCM) ಆರಂಭಿಸಿರುವ ಹೊಸ ನಾಟಕ "ಹುಲಿಯುಗುರು" ಎಂದು ಮಾಜಿ ಸಚಿವ ಸಿ.ಟಿ.ರವಿ ಆರೋಪಿಸಿದ್ದಾರೆ. ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಹುಲಿ ಉಗುರು ಕುರಿತು ಪೋಸ್ಟ್‌ ಮಾಡಿರುವ ಸಿ.ಟಿ. ರವಿ, ನೂರಾರು ವರ್ಷಗಳಿಂದ ಹುಲಿಯುಗುರನ್ನು ಬಹಳ ಜನ ರಾಜ್ಯಾದಾದ್ಯಂತ (ದೇಶದಾದ್ಯಂತ) ಆಭರಣವಾಗಿ ಧರಿಸುತ್ತಿದ್ದದ್ದು ಹೊಸದೂ ಅಲ್ಲ ಎಂದು ಹೇಳಿದ್ದಾರೆ.

ಅರಣ್ಯ ಇಲಾಖೆ ಅಧಿಕಾರಿಗಳು ಕಾಣದೆ ಇದ್ದದ್ದೂ ಅಲ್ಲ. ಈಗ ಸರ್ಕಾರದ ಆಡಳಿತಾತ್ಮಕ ವೈಫಲ್ಯ, ಬೋಗಸ್ ಭರವಸೆಗಳ ಮೇಲಿನ ಜನರ ಆಕ್ರೋಶ, ರೈತರಿಗೆ ವಿದ್ಯುತ್ ಪೂರೈಸಲಾಗದೆ ನೀಡಿದ ಕತ್ತಲೆ ಭಾಗ್ಯ, ಬರ ಪರಿಸ್ಥಿತಿ ನಿರ್ವಹಣೆಯಲ್ಲಿನ ವೈಫಲ್ಯ, ನಿಮ್ಮ ಸರಕಾರದ ಮಂತ್ರಿಗಳು ತೆರೆದ ನಕಲಿ ದಾಖಲೆಗಳ ಇಲಾಖೆ, ಶಾಸಕರು ಬಂಡಾಯದ ಬಸ್ ಹತ್ತುತ್ತಿರುವ ಬೇಗುದಿ ಮತ್ತು ಇವೆಲ್ಲಕ್ಕಿಂತ ಮುಖ್ಯವಾಗಿ ಪಂಚ ರಾಜ್ಯ ಚುನಾವಣೆಗೆ ನಡೆಸಿದ ಕಲೆಕ್ಷನ್ ಐಟಿ ಇಲಾಖೆ ಪಾಲಾಗಿ ಜನರ ಎದುರು ತಲೆಯೆತ್ತಿ ನಡೆಯಲಾಗದು ಎನ್ನುವ ಕಾರಣಕ್ಕೆ "ಹುಲಿಯುಗುರು" ಎಂಬ ಸದಾರಮೆ ನಾಟಕ ಆಡುತ್ತಿರುವುದು ಸ್ಪಷ್ಟ ಎಂದು ಕಟುವಾಗಿ ಟೀಕಿಸಿದ್ದಾರೆ.

ಜೆಡಿಎಸ್ ಜೊತೆ ಮೈತ್ರಿಯಾದ್ರೆ ನಮ್ಮ ಹಕ್ಕು ಬಿಟ್ಟು ಕೊಡುವ ಸಂದರ್ಭ ಬರೋದಿಲ್ಲ: ಸಿ.ಟಿ.ರವಿ

ಒಮ್ಮೆ ನಿಮ್ಮ ಮಂತ್ರಿಮಂಡಲದ ಒಳಗೆ ಇಣುಕಿ ಅಲ್ಲಿ ಬಹಳಷ್ಟು ಜನ ಕಾಡು ಪ್ರಾಣಿಗಳನ್ನು ಬಂಧನದಲ್ಲಿರಿಸಿದವರು, ಕಾಡು ಪ್ರಾಣಿಗಳನ್ನು ಹತ್ಯೆ ಮಾಡಿದವರು ಸಿಗಬಹುದು. ಅಂತವರನ್ನು ಬಿಟ್ಟು ಹುಲಿಯುಗುರು ಧರಿಸಿದ್ದಾರೆ ಎನ್ನುವ ಕಾರಣಕ್ಕೆ ಕ್ರಮ ಕೈಗೊಳ್ಳಲು ಹೊರಟಿರುವುದು, ಅದರಲ್ಲೂ ಜನಸಾಮಾನ್ಯರಿಗೆ ನೇರ ಎಫ್‌ಎಸ್‌ಎಲ್‌ ವರದಿ ಬರುವುದಕ್ಕೆ ಮುಂಚೆಯೇ ಬಂಧನ , ಇನ್ನು ಸೆಲೆಬ್ರಿಟಿಗಳಿಗೆ ನೋಟಿಸ್ ಇದೆಲ್ಲವೂ ಈ ನಾಟಕದ ಭಾಗವಲ್ಲವೇ ?, ಇದು ನಿಮ್ಮ ಸರ್ಕಾರದ ಪ್ರಾಮಾಣಿಕತೆಯ ಬಗ್ಗೆ ಸಂಶಯ ಮೂಡಿಸುವುದಿಲ್ಲವೇ ಎಂದು ಪ್ರಶ್ನಿಸಿದ್ದಾರೆ.

Follow Us:
Download App:
  • android
  • ios