Asianet Suvarna News Asianet Suvarna News

ಉಪ್ಪು ತಿಂದವ ನೀರು ಕುಡಿಬೇಕು: ಡಿಕೆಶಿಗೆ ಟಕ್ಕರ್ ಕೊಟ್ಟ ಸಿ.ಟಿ.ರವಿ

ಉಪ್ಪು ತಿಂದವರು ನೀರು ಕುಡಿಯಲೇ ಬೇಕು, ಹಾಲಿಂದು ಹಾಲಿಗೆ, ನೀರಿಂದು ನೀರಿಗೆ, ತಪ್ಪು ಮಾಡಿದವನಿಗೆ ಶಿಕ್ಷೆ ಆಗಬೇಕು, ಪ್ರಾಮಾಣಿಕರಿಗೆ ತೊಂದರೆ ಆಗಬಾರದು ಎಂದು ಮಾಜಿ ಸಚಿವ ಸಿ.ಟಿ.ರವಿ ಹೇಳಿದ್ದಾರೆ.

Ex Mla CT Ravi Slams On DK Shivakumar At Chikkamagaluru gvd
Author
First Published Oct 20, 2023, 6:02 PM IST

ಚಿಕ್ಕಮಗಳೂರು (ಅ.20): ಉಪ್ಪು ತಿಂದವರು ನೀರು ಕುಡಿಯಲೇ ಬೇಕು, ಹಾಲಿಂದು ಹಾಲಿಗೆ, ನೀರಿಂದು ನೀರಿಗೆ, ತಪ್ಪು ಮಾಡಿದವನಿಗೆ ಶಿಕ್ಷೆ ಆಗಬೇಕು, ಪ್ರಾಮಾಣಿಕರಿಗೆ ತೊಂದರೆ ಆಗಬಾರದು ಎಂದು ಮಾಜಿ ಸಚಿವ ಸಿ.ಟಿ.ರವಿ ಹೇಳಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರ ಅಕ್ರಮ ಆಸ್ತಿ ಪ್ರಕರಣದಲ್ಲಿ ಸಿಬಿಐ ತನಿಖೆಗೆ ಹೈಕೋರ್ಟ್‌ ಸಮ್ಮತಿ ನೀಡಿದ ವಿಚಾರಕ್ಕೆ ಸಂಬಂಧಿಸಿ ಸುದ್ದಿಗಾರರ ಜತೆಗೆ ಮಾತನಾಡಿ, ಯಾರಾದರೂ ಅಕ್ರಮ ಮಾಡಿದರೆ ಇಂದಲ್ಲ, ನಾಳೆ ಬಯಲಿಗೆ ಬರಬೇಕು. ಗಾದೆಗಳು ಸುಮ್ಮನೆ ಹುಟ್ಟಲ್ಲ, ಅದಕ್ಕೆ ತಲೆ ತಲಾಂತರದ ಸತ್ಯ ಇರುತ್ತದೆ. ಸತ್ಯ ಹೂತಾಕಲು ಆಗಲ್ಲ, ಕೆಲ ಕಾಲ ಮುಚ್ಚಿಡಬಹುದು ಅಷ್ಟೆ ಎಂದರು.

ಕಾನೂನಿಗಿಂತ ದೊಡ್ಡವರು ಯಾರೂ ಇಲ್ಲ. ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಪ್ರಧಾನಿ ಯಾರೂ ಕಾನೂನಿಗೆ ಅತೀಥರಲ್ಲ. ಅಂಬೇಡ್ಕರ್ ಅವರು ಕಾನೂನಿನ ದೃಷ್ಟಿಯಲ್ಲಿ ಎಲ್ಲರೂ ಸಮಾನರು ಎಂದಿದ್ದಾರೆ. ಇವರಿಗೆ ಕಾನೂನು ಅನ್ವಯ ಆಗಲ್ಲ, ಏನ್‌ ಮಾಡಿದರೂ ನಡೆಯಲಿದೆ ಅನ್ನೋದು ನಮ್ಮ ದೇಶದಲ್ಲಿ ಇಲ್ಲ. ಯಾರು ತಪ್ಪು ಮಾಡಿದರೂ ಶಿಕ್ಷೆ ಆಗಲೇಬೇಕು. ಯಾರು ತಪ್ಪು ಮಾಡಿದ್ದಾರೆಂದು ಹೇಳುವ ಅಧಿಕಾರ ನನಗೆ ಇಲ್ಲ, ಅದು ನ್ಯಾಯಾಲಯಕ್ಕೆ ಮಾತ್ರ ಇದೆ. ನಾವು ಮಾಡಿರಬಹುದು ಅಂತ ಹೇಳಬಹುದು, ಮಾಡಿದ್ದಾರೆ ಅಂತ ಹೇಳಲು ಆಗಲ್ಲ ಎಂದು ಹೇಳಿದರು.

ಸಿಎಂ ಇಬ್ರಾಹಿಂ ಯಾವ ಸಭೆಯಲ್ಲೂ ಮೈತ್ರಿಗೆ ವಿರೋಧ ವ್ಯಕ್ತಪಡಿಸಿರಲಿಲ್ಲ: ಶಾಸಕ ಎ.ಮಂಜು

ಗುತ್ತಿಗೆದಾರರ ಮನೆಯಲ್ಲಿ ಕೋಟಿ ಕೋಟಿ ಹಣ ಸಿಕ್ಕಿರುವುದು ಪಂಚರಾಜ್ಯ ಚುನಾವಣೆಗೆ ಸಂಗ್ರಹಿಸಲಾದ ಹಣವೆನ್ನುವುದು ನೂರಕ್ಕೆ ನೂರರಷ್ಟು ಸತ್ಯ. ಕಾಂಗ್ರೆಸ್ ವಲಯದಿಂದಲೇ ನಮಗೆ ಮಾಹಿತಿ ಲಭ್ಯ ಆಗಿದೆ ಆಗಿದೆ ಎಂದು ಬಿಜೆಪಿ ಮುಖಂಡ ಸಿ.ಟಿ.ರವಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಹೈವೋಲ್ಟೇಜ್ ಮೀಟಿಂಗ್ ಮಾಹಿತಿ ಕೂಡಾ ಸಿಕ್ಕಿದೆ, ಈ ವಿಚಾರವಾಗಿ ಸದ್ಯಕ್ಕೆ ಏನೂ ಹೇಳಲ್ಲ. ಐಟಿ ದಾಳಿ ವೇಳೆ ಬರಗಾಲದಲ್ಲಿ ನೂರು ಕೋಟಿ ಹಣ ಸಿಕ್ಕಿದೆ. ಕೆಲವು ಭಾಗದಲ್ಲಿ ಹೆದರಿಸಿ, ಬೆದರಿಸಿ ಹಣ ಸಂಗ್ರಹಿಸಿದ್ದಾರೆ. ಹಣ ಸಿಕ್ಕಿರುವ ಅಂಬಿಕಾಪತಿ ಇವರಿಗೆ ದೂರದವರಲ್ಲ. 

ಸಿಎಂ ಮತ್ತು ಡಿಸಿಎಂ ಇಬ್ಬರೂ ಪ್ರಾಮಾಣಿಕರು ಆಗಿದ್ದರೆ ಸಿಬಿಐ ತನಿಖೆಗೆ ವಹಿಸಲಿ ಎಂದರು. ರಾಜೀವ್ ತಾರನಾಥ್ ಅವರ ಬಳಿ ಹಣಕ್ಕೆ ಡಿಮ್ಯಾಂಡ್ ಮಾಡಲಾಗಿದೆ. ಸಿದ್ದರಾಮಯ್ಯ ಅವರ ತವರು ಕ್ಷೇತ್ರದಲ್ಲಿ ಈ ಘಟನೆ ನಡೆದಿದೆ. ಸಿಎಂ ಸಿದ್ದರಾಮಯ್ಯ, ಮೈಸೂರು ಉಸ್ತುವಾರಿ ಸಚಿವ ಮಹದೇವಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಕೂಡಾ ಇದ್ದರು. ಇದ್ದವರು ಮೂವರು, ಕದ್ದವರು ಯಾರು ಎಂದು ಸಿ.ಟಿ.ರವಿ ಪ್ರಶ್ನೆ ಮಾಡಿದರು.

ರೇಣುಕಾಚಾರ್ಯ ಹೇಳಿಕೆಗೆ ಬಿಜೆಪಿ ಕಾರ್ಯಕರ್ತರ ಖಂಡನೆ: ಉಚ್ಚಾಟನೆಗೆ ವರಿಷ್ಠರಿಗೆ ಮನವಿ

ಬಿಜೆಪಿ ಲೂಟಿ ನಾಯಕರಿಗೆ ಉತ್ತರ ಕೊಡ್ತೀನಿ ಎಂಬ ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿಕೆಗೆ ಪ್ರತಿಕ್ರಿಸಿದ ಸಿ.ಟಿ.ರವಿ, ಹೆದರಿಸಿ ರಾಜಕಾರಣ ಮಾಡುವುದೇ ಅವರ ಸ್ಟೈಲ್. ಎಲ್ಲರನ್ನ ಎಲ್ಲಾ ಕಾಲದಲ್ಲಿ ಹೆದರಿಸಿ ರಾಜಕಾರಣ ಮಾಡಲು ಆಗಲ್ಲ ಎಂದರು. ಧರ್ಮದ ಆಧಾರದ ಮೇಲೆ ಭಯೋತ್ಪಾದನೆ ನಡೆಯುತ್ತಿದೆ ಎಂದ ಖಂಡ್ರೆ ಹೇಳಿಕೆಗೆ ತಡವಾಗಿ ಆದರೂ ಸಚಿವ ಈಶ್ವರ್ ಖಂಡ್ರೆ ಸತ್ಯ ಹೇಳಿದ್ದಾರೆ. ಇಸ್ಲಾಂ ಹೆಸರಲ್ಲಿ ಭಯೋತ್ಪಾದನೆ ನಡೆಯುತ್ತಿದೆ ಎಂದರು.

Follow Us:
Download App:
  • android
  • ios