Asianet Suvarna News Asianet Suvarna News

ರಾಜ್ಯ ಕಾಂಗ್ರೆಸ್‌ ಸರ್ಕಾರಕ್ಕೆ ಅಭದ್ರತೆ ಕಾಡಿದೆ: ಮಾಜಿ ಶಾಸಕ ಸುರೇಶ್‌ಗೌಡ

136 ಶಾಸಕರಿರುವ ಕಾಂಗ್ರೆಸ್‌ ಸರ್ಕಾರ ಬೇರೆ ಪಕ್ಷದ ಶಾಸಕರನ್ನು ಆಪರೇಷನ್ ಹಸ್ತ ಮಾಡುತ್ತದೆ ಎಂದರೆ ಈ‌ ಸರ್ಕಾರ ಸುಭದ್ರವಾಗಿಲ್ಲ, ಸರ್ಕಾರಕ್ಕೆ ಅಭದ್ರತೆ ಕಾಡುತ್ತಿದೆ ಎನ್ನುವುದು ಎದ್ದು ಕಾಣುತ್ತಿದೆ ಎಂದು ಮಾಜಿ ಶಾಸಕ ಸುರೇಶ್‌ಗೌಡ ಹೇಳಿದರು. 

Ex Mla K Suresh Gowda Slams On Congress Govt At Hassan gvd
Author
First Published Nov 15, 2023, 11:33 AM IST

ಹಾಸನ (ನ.15): 136 ಶಾಸಕರಿರುವ ಕಾಂಗ್ರೆಸ್‌ ಸರ್ಕಾರ ಬೇರೆ ಪಕ್ಷದ ಶಾಸಕರನ್ನು ಆಪರೇಷನ್ ಹಸ್ತ ಮಾಡುತ್ತದೆ ಎಂದರೆ ಈ‌ ಸರ್ಕಾರ ಸುಭದ್ರವಾಗಿಲ್ಲ, ಸರ್ಕಾರಕ್ಕೆ ಅಭದ್ರತೆ ಕಾಡುತ್ತಿದೆ ಎನ್ನುವುದು ಎದ್ದು ಕಾಣುತ್ತಿದೆ ಎಂದು ಮಾಜಿ ಶಾಸಕ ಸುರೇಶ್‌ಗೌಡ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ಬಸ್ಸಿನಲ್ಲಿ ಎಷ್ಟು ಜನ ಹೋಗ ಬಹುದು ಅಷ್ಟು ಜನರಿದ್ದರೆ ಮಾತ್ರ ಚೆನ್ನ. ಅದಕ್ಕಿಂತ ಹೆಚ್ಚಾದರೆ ಆ ಬಸ್ಸಿನ ಕಥೆ ಏನಾಗುತ್ತೆ? ಕಾಂಗ್ರೆಸ್‌ನವರ ಕಥೆ ಅದೇ ಆಗಲಿದೆ. ಈಗಾಗಲೇ ಅವರ ಪಕ್ಷದವರೇ ತುಂಬಿ ಹೋಗಿದ್ದಾರೆ. ಇಷ್ಟಾದರೂ ಬೇರೆ ಪಕ್ಷದವರನ್ನು ಕರೆದುಕೊಂಡು ಹೋಗಿ ಸಿಂಕ್ ಮಾಡಿಕೊಳ್ಳಲು ಟ್ರೈ ಮಾಡ್ತಿದ್ದಾರೆ ಎಂದು ಲೇವಡಿ ಮಾಡಿದರು.

ಸಿದ್ದು ಸರ್ಕಾರ ಇನ್ನು ಟೇಕಾಫ್ ಆಗಿಲ್ಲ: ಸರ್ಕಾರ ಅಧಿಕಾರಕ್ಕೆ ಬಂದು 6 ತಿಂಗಳಾದ್ರು ಇನ್ನು ಸಿದ್ದರಾಮಯ್ಯ ಟೇಕಾಫ್ ಆಗಿಲ್ಲ. ಚೀಪ್ ಪಾಪುಲರಿಟಿ ಸ್ಕೀಂಗಳನ್ನು ಮಾಡಿಕೊಂಡು ಅದರ ಸುಳಿಯಲ್ಲಿ ಒದ್ದಾಡುತ್ತಿದ್ದಾರೆ ಎಂದು ಮಾಜಿ ಶಾಸಕ ಕೆ. ಸುರೇಶ್‌ಗೌಡ ಆರೋಪಿಸಿದರು. ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಸಿದ್ದರಾಮಯ್ಯ ಒಳ್ಳೆಯ ಆಡಳಿತಗಾರ ಎಂದು ಹೆಸರು ತೆಗೆದುಕೊಂಡಿದ್ದಾರೆ. ಗೊತ್ತಿದ್ದೂ ಗೊತ್ತಿದ್ದೂ ಈ ಕೂಪಕ್ಕೆ ಬಿದ್ದಿದ್ದಾರೆ. ಈ ರಾಜ್ಯವನ್ನು 25 ವರ್ಷದ ಹಿಂದಕ್ಕೆ ತೆಗೆದುಕೊಂಡು ಹೋಗುತ್ತಿದ್ದಾರೆ. ಮುಂದೆ ಅಭಿವೃದ್ಧಿ ಮಾಡಲು ಕಷ್ಟವಾಗಲಿದೆ. ಸುಳ್ಳು ಹೇಳಿಕೊಂಡು ತಿರುಗಾಡುತ್ತಾ ಜನರ ಗಮನವನ್ನು ಬೇರೆಡೆಗೆ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ ಎಂದರು. 

ರನ್ನ ಕಾರ್ಖಾನೆ ಅವ್ಯವಹಾರದಲ್ಲಿ ಭಾಗಿಯಾದವರಿಗೆ ಶಿಕ್ಷೆ ಗ್ಯಾರಂಟಿ: ಸಚಿವ ಆರ್.ಬಿ.ತಿಮ್ಮಾಪುರ

ಕಾಂಗ್ರೆಸ್‌ನವರು ಕೊಟ್ಟಿರುವ ಯೋಜನೆ ಶೇ.20ರಷ್ಟು ಜನರಿಗೆ ತಲುಪಿಲ್ಲ. ಅಕ್ಕಿ ಕೊಡ್ತಿದ್ದೀವಿ ಅಂತಾರೆ. ರೇಷನ್ ಕಾರ್ಡ್ ರದ್ದು ಮಾಡುತ್ತಿದ್ದಾರೆ. ಮಹಿಳೆಯರಿಗೆ 2 ಸಾವಿರ ರು. ಹಣವನ್ನು ನೂರರಷ್ಟು ಕೊಡುತ್ತಿಲ್ಲ. ಯುವನಿಧಿ ಕೊಟ್ಟಿಲ್ಲ, ವಿದ್ಯುತ್ ಉತ್ಪಾದನೆಯೇ ಇಲ್ಲ. ಕರೆಂಟ್ ಎಲ್ಲಿಂದ ಕೊಡ್ತಾರೆ. ಕೃತಕ ಅಭಾವ ಸೃಷ್ಟಿಸುವ ಕೆಲಸವನ್ನು ಮಾಡುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರದಲ್ಲಿ ಏನೂ ನಡೆಯುತ್ತಿಲ್ಲ ಎಂದು ನೇರವಾಗಿ ಹೇಳುತ್ತೇನೆ ಎಂದರು. ಬಿಜೆಪಿ ಸರ್ಕಾರದ ಕಾಮಗಾರಿಗಳಿಗೆ ಹೀಗಿರುವ ಶಾಸಕರು, ಮಂತ್ರಿಗಳು ಕಮಿಷನ್ ತೆಗೆದುಕೊಳ್ಳುತ್ತಿದ್ದಾರೆ. ಇದಕ್ಕೆ ಸಾಕ್ಷಿ ಕೊಡುವುದಕ್ಕೆ ಆಗುವುದಿಲ್ಲ. 

ಪಕ್ಷದ ಸಂಘಟನೆಗಾಗಿ ಶ್ರದ್ಧೆಯಿಂದ ದುಡಿದಿದ್ದೇನೆ: ನಿರ್ಗಮಿತ ಬಿಜೆಪಿ ಅಧ್ಯಕ್ಷ ನಳಿನ್ ಕಟೀಲ್

ಗುತ್ತಿಗೆದಾರರ ಬಳಿ ಕೇಳಿದರೆ ಗೊತ್ತಾಗುತ್ತೆ ಎಂದು ಹೇಳಿದರು. ನಮ್ಮ ಗುರಿ ಲೋಕಸಭಾ ಚುನಾವಣೆ ಗೆಲ್ಲುವುದು. ನಮ್ಮ ಹೈಕಮಾಂಡ್ ಯಾರಿಗೇ ಟಿಕೆಟ್ ಕೊಟ್ಟರೂ ಅವರ ಪರವಾಗಿ ಕೆಲಸ ಮಾಡಲು ನಾವು ಬದ್ದ ಎಂದು ತಿಳಿಸಿದರು. ಆಪರೇಷನ್ ಹಸ್ತ ವಿಚಾರದ ಬಗ್ಗೆ ಕೇಳಿದಾಗ, ಕೆಲವರಿಗೆ ಅವರದ್ದೇ ಆದ ರಾಜಕೀಯ ಲೆಕ್ಕಾಚಾರಗಳಿರುತ್ತವೆ. ಅದರ ಮೇಲೆ ಕೆಲವರು ಪಕ್ಷದಿಂದ ಪಕ್ಷಕ್ಕೆ ಜಂಪ್ ಆಗುತ್ತಾರೆ. ನಮ್ಮ ಪಕ್ಷದಿಂದ ಯಾರು ಹೋಗುತ್ತಾರೆ ಅಂತ ಗೊತ್ತಿಲ್ಲ, ಡಿ.ಕೆ. ಶಿವಕುಮಾರ್ ಯಾರನ್ನು ಸಂಪರ್ಕ ಮಾಡಿದ್ದಾರೆ ಅನ್ನೋದನ್ನ ಅವರೇ ಹೇಳಬೇಕು‌ ಎಂದರು.

Follow Us:
Download App:
  • android
  • ios