Asianet Suvarna News Asianet Suvarna News

ಕಾವೇರಿ ವಿಚಾರದಲ್ಲಿ ನಮ್ಮಲ್ಲಿಯೇ ಒಗ್ಗಟ್ಟಿಲ್ಲ: ಎಚ್‌.ಡಿ.ದೇವೇಗೌಡ ಬೇಸರ

ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ತಮಿಳುನಾಡಿನ ರಾಜಕಾರಣಿಗಳಲ್ಲಿರುವ ಒಗ್ಗಟ್ಟು ನಮ್ಮಲ್ಲಿಲ್ಲ. ಕಾವೇರಿ ನೀರಿಗಾಗಿ ಕರೆಕೊಟ್ಟಿರುವ ಬಂದ್‌ ವಿಚಾರದಲ್ಲೇ ನಮ್ಮಲ್ಲಿ ಒಗ್ಗಟ್ಟಿಲ್ಲ ಎಂದು ಮಾಜಿ ಪ್ರದಾನಿ ಎಚ್‌.ಡಿ.ದೇವೇಗೌಡ ಬೇಸರ ವ್ಯಕ್ತಪಡಿಸಿದರು. 

Ex PM HD Devegowda Reaction On Cauvery Water Issue At Hassan gvd
Author
First Published Sep 27, 2023, 11:03 PM IST

ಹಾಸನ (ಸೆ.27): ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ತಮಿಳುನಾಡಿನ ರಾಜಕಾರಣಿಗಳಲ್ಲಿರುವ ಒಗ್ಗಟ್ಟು ನಮ್ಮಲ್ಲಿಲ್ಲ. ಕಾವೇರಿ ನೀರಿಗಾಗಿ ಕರೆಕೊಟ್ಟಿರುವ ಬಂದ್‌ ವಿಚಾರದಲ್ಲೇ ನಮ್ಮಲ್ಲಿ ಒಗ್ಗಟ್ಟಿಲ್ಲ ಎಂದು ಮಾಜಿ ಪ್ರದಾನಿ ಎಚ್‌.ಡಿ.ದೇವೇಗೌಡ ಬೇಸರ ವ್ಯಕ್ತಪಡಿಸಿದರು. ನಗರದ ಸಂಸದರ ನಿವಾಸದಲ್ಲಿ ಸುದ್ದಿಗಾರರ ಜತೆಗೆ ಮಾತನಾಡಿ, ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಕಾವೇರಿ ಕೊಳ್ಳದ ಪ್ರತಿ ಅಣೆಕಟ್ಟೆಯ ಸ್ಥಳ ಪರಿಶೀಲನೆ ಮಾಡಿ ನೀರು ಎಷ್ಟಿದೆ ಎಂದು ವಿವರ ತಂದಿದ್ದಾರೆ. ಅದೇ ವರದಿ ಆಧರಿಸಿ ನಾನು ಪ್ರಧಾನಿ ಅವರಿಗೆ ಪತ್ರ ಬರೆದಿದ್ದೇನೆ. 

ನಿಷ್ಪಕ್ಷಪಾತವಾಗಿ ಎರಡು ರಾಜ್ಯಗಳ ಸ್ಥಿತಿ ಅಧ್ಯಯನ ಮಾಡಲು ತಜ್ಞರ ಸಮಿತಿ ಕಳಿಸಿ ಎಂದು ಆ ಪತ್ರದಲ್ಲಿ ಕೇಳಿದ್ದೇನೆ. ನಾನು ಬರೆದ ಪತ್ರದ ಸಾರಾಂಶದ ಬಗ್ಗೆ ಮುಖ್ಯಮಂತ್ರಿ ಹಾಗೂ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಬೊಮ್ಮಾಯಿ ಎಲ್ಲರೂ ಸ್ವಾಗತಿಸಿದ್ದಾರೆ. ನಮ್ಮ ಬೆಳೆ ಉಳಿಸಿಕೊಳ್ಳಲು 7೦ ಟಿಎಂಸಿ ನೀರು ಬೇಕು. ನಾನು ಹಿರಿಯ ರಾಜಕಾರಣಿಯಾಗಿ ನಮ್ಮಲ್ಲಿ ಐಕ್ಯತೆ ಇಲ್ಲ ಎಂದು ಹಲವು ಬಾರಿ ಹೇಳಿದ್ದೇನೆ. ಆದರೆ ತಮಿಳುನಾಡಿನ ಪರಿಸ್ಥಿತಿ ಬೇರೆ ಇದೆ. ಈ ವಿಚಾರದಲ್ಲಿ ಸರ್ಕಾರದ ನಿಲುವು ಬಂದ ಮೇಲೆ ನಾವು ಮತ್ತು ನಮ್ಮ ಪಕ್ಷ ಪ್ರತಿಕ್ರಿಯೆ ನೀಡುತ್ತೇವೆ ಎಂದರು.

ಅತಿವೃಷ್ಠಿ-ಅನಾವೃಷ್ಟಿ ಎರಡರಲ್ಲೂ ನಮ್ಮನ್ನು ಪರಿಗಣಿಸಲ್ಲ: ಸರ್ಕಾರದ ವಿರುದ್ದ ಮೂಡಿಗೆರೆ ಜನ ಕಿಡಿ

ಮೋದಿ ಮಧ್ಯಪ್ರವೇಶಕ್ಕೆ ಗೌಡ ಆಗ್ರಹ: ಕಾವೇರಿ ನದಿ ನೀರು ವಿಚಾರದಲ್ಲಿ ತಲೆದೋರಿರುವ ವಿವಾದ ಬಗೆಹರಿಸುವ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರು ತಕ್ಷಣವೇ ಮಧ್ಯಪ್ರವೇಶಿಸಬೇಕು ಎಂದು ಜೆಡಿಎಸ್‌ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಆಗ್ರಹಿಸಿದ್ದಾರೆ. ಅಲ್ಲದೆ, ಎರಡು ರಾಜ್ಯಗಳ ವಾಸ್ತವ ಸ್ಥಿತಿ ಕುರಿತು ಸಂಪೂರ್ಣ ಮಾಹಿತಿ ಪಡೆದು ಸುಪ್ರೀಂಕೋರ್ಟ್‌ನಲ್ಲಿ ಪರಿಶೀಲನಾ ಅರ್ಜಿ ಸಲ್ಲಿಸಲು ಜಲಶಕ್ತಿ ಸಚಿವಾಲಯಕ್ಕೆ ಅದೇಶಿಸಬೇಕು ಎಂದೂ ಅವರು ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರಿಗೆ ದೇವೇಗೌಡ ಈ ಕುರಿತು ಸುದೀರ್ಘ ಪತ್ರ ಬರೆದಿದ್ದು, ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಪತ್ರ ಬಿಡುಗಡೆ ಮಾಡಿ ಮಾತನಾಡಿದರು.

ಕಾವೇರಿ ನೀರು ಹರಿಸಲು ತೀರ್ಪು ಬಂದಿರುವುದಕ್ಕೆ ಸುಪ್ರೀಂಕೋರ್ಟ್ ಅನ್ನು ದೂರುವುದಿಲ್ಲ. ಇದಕ್ಕೆ ರಾಜ್ಯ ಸರ್ಕಾರದ ವೈಫಲ್ಯ ಕಾರಣ. ಕೇಂದ್ರ ಸರ್ಕಾರವು ತಟಸ್ಥವಾದ ಒಂದು ಸಮಿತಿಯನ್ನು ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳಿಗೆ ಕಳುಹಿಸಿ ವಸ್ತುನಿಷ್ಠ ಮಾಹಿತಿ ಪಡೆದುಕೊಳ್ಳಬೇಕು ಎಂದು ಒತ್ತಾಯಿಸಿದರು. ಮಳೆ ಕೊರತೆ ಕಾರಣದಿಂದ ರೈತರು ಪರದಾಡುತ್ತಿದ್ದಾರೆ. ಕಾವೇರಿ ಕೊಳ್ಳದ ಜಲಾಶಯಗಳಿಗೆ ನೀರು ಹರಿದು ಬಂದಿಲ್ಲ. ವಸ್ತುಸ್ಥಿತಿ ಹೀಗಿದ್ದರೂ ಕಾವೇರಿ ನದಿ ನೀರು ಪ್ರಾಧಿಕಾರ ಹಾಗೂ ಸುಪ್ರೀಂ ಕೋರ್ಟ್ ತಮಿಳುನಾಡಿಗೆ ನೀರು ಹರಿಸುವಂತೆ ಆದೇಶಿಸಿವೆ. ಇದು ರಾಜ್ಯದ ಸಂಕಷ್ಟಕ್ಕೆ ಕಾರಣವಾಗಿದೆ. ಅಲ್ಲದೇ, ಕಾವೇರಿ ಭಾಗದ ಜನರ ಆಕ್ರೋಶಕ್ಕೆ ಕಾರಣವಾಗಿದೆ ಎಂದು ತಿಳಿಸಿದರು.

ಮಂಗಳೂರು ಖಾಸಗಿ ಸಿಟಿ ಬಸ್ ಮಾಲೀಕರಿಗೆ ಕಮಿಷನರ್ ಖಡಕ್ ಕ್ಲಾಸ್: ಸಭೆಯಲ್ಲಿ ನಡೆದಿದ್ಧೇನು?

ಕಾಂಗ್ರೆಸ್ ಅನ್ಯಾಯ ಮಾಡಿದೆ: ಕಾಂಗ್ರೆಸ್ ಪಕ್ಷಕ್ಕೆ ಮೊದಲಿನಿಂದಲೂ ಕಾವೇರಿ ವಿಷಯದಲ್ಲಿ ಕರ್ನಾಟಕದ ಪರ ನಿಲುವು ಇಲ್ಲ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು, ದೇವೇಗೌಡರೇ ನೀವು ಕಾವೇರಿ ಬಗ್ಗೆ ಮಾತನಾಡಿದರೆ ನನ್ನ ಸರ್ಕಾರ ಹೋಗುತ್ತದೆ. ತಮಿಳರು ಎಲ್ಲರೂ ಒಟ್ಟಾಗಿ ಇದ್ದಾರೆ. ಕೋರ್ಟ್‌ನಲ್ಲಿಯೇ ಇದನ್ನು ಬಗೆಹರಿಸಿಕೊಳ್ಳಿ ಎಂದು ಕೈಚೆಲ್ಲಿದ್ದರು. ಅವರ ಸಂಪುಟದಲ್ಲಿ ನಮ್ಮ ರಾಜ್ಯದ ನಾಲ್ಕು ಮಂದಿ ಸಚಿವರು ಇದ್ದರು. ಅವರಲ್ಲಿ ಒಬ್ಬರೂ ಮಾತನಾಡಲಿಲ್ಲ. ಈಗ ಮನಮೋಹನ್ ಸಿಂಗ್ ಮತ್ತು ಆ ನಾಲ್ವರು ಸಚಿವರಾದ ಮಲ್ಲಿಕಾರ್ಜುನ ಖರ್ಗೆ, ವೀರಪ್ಪ ಮೊಯ್ಲಿ, ಎಸ್.ಎಂ.ಕೃಷ್ಣ, ಕೆ.ಎಚ್.ಮುನಿಯಪ್ಪ ಅವರೆಲ್ಲ ಇದ್ದಾರೆ. ಇದು ಕರ್ನಾಟಕದ ಬಗ್ಗೆ ಕಾಂಗ್ರೆಸ್ ತೋರಿಸಿದ ಕಾಳಜಿ ಎಂದು ಟೀಕಾಪ್ರಹಾರ ನಡೆಸಿದರು.

Follow Us:
Download App:
  • android
  • ios