ಕಾವೇರಿ ವಿಷಯದಲ್ಲಿ ನಾವು ತಮಿಳುನಾಡಿಂದ ಪಾಠ ಕಲೀಬೇಕು: ಎಚ್.ಡಿ.ದೇವೇಗೌಡ
ಕಾವೇರಿ ವಿಚಾರದಲ್ಲಿ ನಾವು ಒಗ್ಗಟ್ಟಾಗಿ ಹೋರಾಡಿ ರಾಜ್ಯದ ಹಿತ ಕಾಯಬೇಕಿದೆ. ಕಾಂಗ್ರೆಸ್, ಬಿಜೆಪಿ, ನಾವು ಒಂದಾಗಿ ರಾಜ್ಯದ ಹಿತ ಕಾಯಬೇಕಿದೆ. ಕಾವೇರಿ ವಿಚಾರದಲ್ಲಿ ತಮಿಳುನಾಡಿನಲ್ಲಿ ಪ್ರಾದೇಶಿಕ ಪಕ್ಷಗಳು ಒಂದಾಗಿ ಕೆಲಸ ಮಾಡುತ್ತವೆ. ಅವರಿಂದ ನಾವು ಪಾಠ ಕಲಿಯಬೇಕಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದ್ದಾರೆ.
ಹೊಳೆನರಸೀಪುರ (ಹಾಸನ) (ಸೆ.03): ಕಾವೇರಿ ವಿಚಾರದಲ್ಲಿ ನಾವು ಒಗ್ಗಟ್ಟಾಗಿ ಹೋರಾಡಿ ರಾಜ್ಯದ ಹಿತ ಕಾಯಬೇಕಿದೆ. ಕಾಂಗ್ರೆಸ್, ಬಿಜೆಪಿ, ನಾವು ಒಂದಾಗಿ ರಾಜ್ಯದ ಹಿತ ಕಾಯಬೇಕಿದೆ. ಕಾವೇರಿ ವಿಚಾರದಲ್ಲಿ ತಮಿಳುನಾಡಿನಲ್ಲಿ ಪ್ರಾದೇಶಿಕ ಪಕ್ಷಗಳು ಒಂದಾಗಿ ಕೆಲಸ ಮಾಡುತ್ತವೆ. ಅವರಿಂದ ನಾವು ಪಾಠ ಕಲಿಯಬೇಕಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದ್ದಾರೆ.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೀರಾವರಿಗೆ ಸಂಬಂಧಿಸಿ ಮಂತ್ರಿಗಳು ಒಂದೊಂದು ಬಾರಿ ಒಂದೊಂದು ಹೇಳಿಕೆಗಳನ್ನು ಕೊಡುತ್ತಾರೆ. ಮಂತ್ರಿಗಳೇ ಹೀಗೆ ಹೇಳಿದರೆ ಏನು ಹೇಳೋದು? ಇದು ಬಹಳ ಕಷ್ಟ. ನೀರಾವರಿ ಸಚಿವರು ಯಾವ್ಯಾವ ಸಂದರ್ಭದಲ್ಲಿ ಏನೇನು ಮಾತನಾಡುತ್ತಾರೆ, ಅದರ ದುಷ್ಪರಿಣಾಮ, ಸತ್ಪರಿಣಾಮ ಏನು ಎಂಬುದನ್ನು ಯೋಚನೆ ಮಾಡಬೇಕು. ನನ್ನ ಬಳಿ ಇಬ್ಬರು ಅಧಿಕಾರಿಗಳನ್ನು ಕಳುಹಿಸಿದ್ದರು. ಈ ರೀತಿ ಹೋಗೋಣ ಎಂದು ಹೇಳಿ ಕಳುಹಿಸಿದ್ದೇನೆ.
ರಾಜ್ಯದ 186 ತಾಲೂಕಲ್ಲಿ ಬರ, 113 ತಾಲೂಕಲ್ಲಿ ಸಮೀಕ್ಷೆ ಪೂರ್ಣ: ಸಿಎಂ ಸಿದ್ದರಾಮಯ್ಯ
ನನ್ನ ಆರೋಗ್ಯ ಸರಿಯಿಲ್ಲ, ಆದರೂ ಸಹಕಾರ ಕೊಡುತ್ತೇನೆ. ನೀರಾವರಿ ಮಂತ್ರಿ ನಡವಳಿಕೆ ಬಗ್ಗೆ ನಾನು ಪ್ರತಿಕ್ರಿಯೆ ನೀಡಲ್ಲ ಎಂದರು. ಕಾವೇರಿ ನೀರಿಗಾಗಿ ದೇವೇಗೌಡರ ಹೋರಾಟ ಏನೆಂಬುದು ಇಡೀ ನಾಡಿನ ಜನತೆಗೆ ಗೊತ್ತಿಲ್ಲವೇ? ಕಾವೇರಿ ನದಿ ನೀರು ಪ್ರಾಧಿಕಾರಕ್ಕೆ ಜವಾಬ್ದಾರಿ ಇದೆ. ಯಾವ ರಾಜ್ಯದಲ್ಲಿ ಎಷ್ಟುನೀರಿದೆ, ಬೆಳೆ ಏನಿದೆ, ಎಷ್ಟುನೀರು ಕುಡಿಯಲು ಬೇಕಿದೆ ಎಂಬುದನ್ನು ತಿಳಿಯಲು ತಂಡ ಕಳುಹಿಸಿ ಮಾಹಿತಿ ಸಂಗ್ರಹಿಸಬೇಕು. ರಾಜ್ಯದ ಹಕ್ಕು ಉಳಿಸಿಕೊಳ್ಳಲು ಯಾವುದೇ ಸಂದರ್ಭದಲ್ಲಿ ಮೂರೂ ಪಕ್ಷಗಳು ಒಗ್ಗಟ್ಟಾಗಿ ಕೆಲಸ ಮಾಡಬೇಕು ಎಂಬುದು ನನ್ನ ಭಾವನೆ ಎಂದರು.
ಜೆಡಿಎಸ್ ಶಾಸಕರು ಪಕ್ಷ ಬಿಡೋದಿಲ್ಲ: ಇನ್ನೊಂದು ಪಕ್ಷವನ್ನು ನಂಬಿ ನಮ್ಮ ಪಕ್ಷದ ಶಾಸಕರು ಯಾರೂ ಪಕ್ಷ ಬಿಟ್ಟು ಹೋಗುವುದಿಲ್ಲ. ಅದೆಲ್ಲವೂ ಊಹಾಪೋಹ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಮತ್ತು ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಹೇಳಿದ್ದಾರೆ. ಪಕ್ಷದ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ದೇವೇಗೌಡ, ಲೋಕಸಭಾ ಕ್ಷೇತ್ರಗಳ ಪುನರ್‌ವಿಂಗಡಣೆ ಕುರಿತು ಚರ್ಚೆಯಾಗುತ್ತಿದೆ. ಅದೇನೇ ಇದ್ದರೂ ನಾವು ಜಿ.ಟಿ.ದೇವೇಗೌಡ ಅಧ್ಯಕ್ಷತೆಯಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಗೆ ತಯಾರಿ ಮಾಡಿಕೊಳ್ಳುತ್ತಿದ್ದೇವೆ. ಬಿಬಿಎಂಪಿ ಚುನಾವಣೆಗೂ ಸಿದ್ಧತೆ ನಡೆಯುತ್ತಿದೆ. ಯಾವ ಶಾಸಕರೂ ಪಕ್ಷ ಬಿಟ್ಟು ಹೋಗುವುದಿಲ್ಲ. ಇದೆಲ್ಲಾ ಬರೀ ಊಹಾಪೋಹ ಅಷ್ಟೇ. ಇಂತಹವರು ಹೋಗುತ್ತಾರೆ ಎಂದು ಹೇಳಿದರೆ ನಾವು ಸರಿ ಮಾಡಿಕೊಳ್ಳುತ್ತೇವೆ. ಈ ರೀತಿಯ ಊಹಾಪೋಹದ ಸುದ್ದಿ ಮಾಡಬೇಡಿ. ಪ್ರಾದೇಶಿಕ ಪಕ್ಷ ಉಳಿಯಲು ಬಿಡಿ ಎಂದು ತಿಳಿಸಿದರು.
ಬಿಜೆಪಿಯಲ್ಲಿ ಟಿಕೆಟ್ ಮಾರಿಕೊಳ್ಳುವ ಪರಿಪಾಠ ಶುರು: ಜಗದೀಶ್ ಶೆಟ್ಟರ್
ಇನ್ನು, ಮಂಡ್ಯ ಜಿಲ್ಲೆಯ ರಾಜಕಾರಣದ ಬಗ್ಗೆಯೂ ಬಹಳ ಚರ್ಚೆ ಮಾಡಿದ್ದೇನೆ. ಪ್ರತಿಯೊಂದು ವಿಚಾರವನ್ನೂ ತಿಳಿದುಕೊಂಡಿದ್ದೇನೆ. ಒಬ್ಬರೇ ಒಬ್ಬರು ಸಹ ಪಕ್ಷ ಬಿಟ್ಟು ಹೋಗುವುದಿಲ್ಲ ಎಂದರು. ಇಬ್ರಾಹಿಂ ಮಾತನಾಡಿ, ಎರಡು ರಾಷ್ಟ್ರೀಯ ಪಕ್ಷಗಳು ಏನೇ ಕಸರತ್ತು ನಡೆಸಿದರೂ ನಮ್ಮ ಪಕ್ಷದ ಶಾಸಕರು ನಿಷ್ಠೆಯುಳ್ಳವರು. ಯಾರೂ ಸಹ ಜೆಡಿಎಸ್ ಬಿಡುವುದಿಲ್ಲ. ಕಾಂಗ್ರೆಸ್, ಬಿಜೆಪಿ ನಡುವೆ ಜೆಡಿಎಸ್ ಪಕ್ಷವನ್ನು ಉಳಿಸಲು ಪ್ರಯತ್ನ ಮಾಡುತ್ತಿದ್ದೇವೆ. ಹಿರಿಯ ನಾಯಕ ಜಿ.ಟಿ.ದೇವೇಗೌಡ ಅಧ್ಯಕ್ಷತೆಯಲ್ಲಿ ಕೋರ್ ಕಮಿಟಿ ಮಾಡಿದ್ದೇವೆ. ಎಲ್ಲಾ ಜಿಲ್ಲೆಗಳಿಗೆ ಕಮಿಟಿ ಭೇಟಿ ಕೊಟ್ಟು ವರದಿ ನೀಡುತ್ತದೆ. ಎಲ್ಲೆಲ್ಲಿ ಬದಲಾವಣೆಯಾಗಬೇಕಿದೆಯೋ ಅದನ್ನು ಕಾರ್ಯಗತಗೊಳಿಸುತ್ತೇವೆ ಎಂದು ತಿಳಿಸಿದರು.