Asianet Suvarna News Asianet Suvarna News

ಕಾವೇರಿ: ರಾಷ್ಟ್ರೀಯ ಪಕ್ಷಗಳಿಂದ ರಾಜ್ಯಕ್ಕೆ ಅನ್ಯಾಯ: ಎಚ್‌.ಡಿ.ದೇವೇಗೌಡ

ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕಾಂಗ್ರೆಸ್‌ ಹಾಗೂ ಬಿಜೆಪಿ ಸರ್ಕಾರಗಳಿಂದ ರಾಜ್ಯಕ್ಕೆ ಅನ್ಯಾಯವಾಗಿದೆ. ಎರಡೂ ರಾಷ್ಟ್ರೀಯ ಪಕ್ಷಗಳು ತಮಿಳುನಾಡಿನ ಪರ ನಿಲುವು ಹೊಂದಿವೆ. ಹಿಂದೆ ಮನಮೋಹನ್‌ ಸಿಂಗ್‌, ಈಗ ನರೇಂದ್ರ ಮೋದಿಯವರು ತಮಿಳುನಾಡು ರಾಜ್ಯದೊಂದಿಗೆ ಕೈಜೋಡಿಸಿದ್ದಾರೆ ಎಂದು ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಆರೋಪಿಸಿದ್ದಾರೆ. 

Ex Prime Minister Hd Deve Gowda Statement On Cauvery Water at Kolar gvd
Author
First Published Nov 19, 2022, 11:22 AM IST

ಕೋಲಾರ (ನ.19): ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕಾಂಗ್ರೆಸ್‌ ಹಾಗೂ ಬಿಜೆಪಿ ಸರ್ಕಾರಗಳಿಂದ ರಾಜ್ಯಕ್ಕೆ ಅನ್ಯಾಯವಾಗಿದೆ. ಎರಡೂ ರಾಷ್ಟ್ರೀಯ ಪಕ್ಷಗಳು ತಮಿಳುನಾಡಿನ ಪರ ನಿಲುವು ಹೊಂದಿವೆ. ಹಿಂದೆ ಮನಮೋಹನ್‌ ಸಿಂಗ್‌, ಈಗ ನರೇಂದ್ರ ಮೋದಿಯವರು ತಮಿಳುನಾಡು ರಾಜ್ಯದೊಂದಿಗೆ ಕೈಜೋಡಿಸಿದ್ದಾರೆ ಎಂದು ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಆರೋಪಿಸಿದ್ದಾರೆ. ಶುಕ್ರವಾರ ಮುಳಬಾಗಿಲಿನಲ್ಲಿ ನಡೆದ ‘ಪಂಚರತ್ನ ರಥಯಾತ್ರೆ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಎರಡೂ ರಾಷ್ಟ್ರೀಯ ಪಕ್ಷಗಳಿಂದ ರಾಜ್ಯಕ್ಕೆ ಅನ್ಯಾಯವಾಗಿದ್ದು, ರಾಜ್ಯದ ರೈತರ ಹಿತ ಕಾಪಾಡುವುದು ಪ್ರಾದೇಶಿಕ ಪಕ್ಷವಾದ ಜೆಡಿಎಸ್‌ನಿಂದ ಮಾತ್ರ ಸಾಧ್ಯ ಎಂದರು.

ಪಂಚರತ್ನ ಯೋಜನೆ ಅತ್ಯಂತ ಶ್ರೇಷ್ಠವಾದ ಕಾರ್ಯಕ್ರಮ. ಕಳೆದ ಬಾರಿ ಯಾತ್ರೆಗೆ ಮಳೆ ಅಡ್ಡಿಯಾಗಿತ್ತು. ಈ ಬಾರಿ ಯಶಸ್ವಿಯಾಗಿ ಚಾಲನೆ ನೀಡಲಾಗಿದೆ. ಮುಂದಿನ ದಿನಗಳಲ್ಲಿ ನಾನು ಪ್ರತಿ ಜಿಲ್ಲೆಗೆ ಹೋಗುತ್ತೇನೆ. ಸಮರ್ಥ ನಾಯಕರು ಪಕ್ಷದಲ್ಲಿದ್ದಾರೆ. ಪಂಚರತ್ನ ಯಾತ್ರೆ ಯಾವುದೇ ಜಾತಿಗೆ ಸೀಮಿತವಾಗಿಲ್ಲ. ಪ್ರತಿ ಹಳ್ಳಿಗೆ ಯಾತ್ರೆ ಹೋಗಲಿದೆ. ಕೈಮುಗಿದು ಪ್ರಾರ್ಥನೆ ಮಾಡುತ್ತೇನೆ, ಕುಮಾರಸ್ವಾಮಿಗೆ ಬೆಂಬಲ ನೀಡಿ ಎಂದು ಮನವಿ ಮಾಡಿದರು.

JDS Pancharatna Rathayatra: ಮೈತ್ರಿ ಸರ್ಕಾರ ಬೀಳಿಸಿದ್ದೇ ಸಿದ್ದರಾಮಯ್ಯ: ಎಚ್‌ಡಿಕೆ

ಜೆಡಿಎಸ್‌ನಲ್ಲಿ ಸಮರ್ಥ ನಾಯಕರಿದ್ದಾರೆ: ಪಂಚರತ್ನ ಯೋಜನೆ ಅತ್ಯಂತ ಶ್ರೇಷ್ಠವಾದ ಕಾರ್ಯಕ್ರಮ. ಕಳೆದ ಬಾರಿ ಮಳೆ ಅಡ್ಡಿಯಾಗಿತ್ತು. ಈ ಬಾರಿ ಯಾವುದೇ ಆತಂಕವಿಲ್ಲ ಸಂತೋಷದಿಂದ ಚಾಲನೆ ನೀಡಿದ್ದೇನೆ ಮುಂದಿನ ದಿನಗಳಲ್ಲಿ ನಾನು ಪ್ರತಿ ಜಿಲ್ಲೆಗೆ ಹೋಗುತ್ತೇನೆ. ಸಮರ್ಥ ನಾಯಕರು ಪಕ್ಷದಲ್ಲಿದ್ದಾರೆ ಎಂದು ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ನುಡಿದರು. ಪಂಚರತ್ನ ಯಾತ್ರೆ ಯಾವುದೇ ಜಾತಿಗೆ ಸೀಮಿತವಾಗಿಲ್ಲ. ಪ್ರತಿ ಹಳ್ಳಿಗೆ ಯಾತ್ರೆ ಹೋಗಲಿದೆ. ಕೈಮುಗಿದು ಪ್ರಾರ್ಥನೆ ಮಾಡುತ್ತೇನೆ. ಕುಮಾರಸ್ವಾಮಿಗೆ ಬೆಂಬಲ ನೀಡಬೇಕು ಎಂದು ಮನವಿ ಮಾಡಿದರು.

ನೀರು ಹಂಚಿಕೆಯಲ್ಲಿ ರಾಜ್ಯಕ್ಕೆ ಅನ್ಯಾಯ: ಈ ಯೋಜನೆಯ ಮಹತ್ವ ಜನರ ಮನಸ್ಸಿಗೆ ಮುಟ್ಟುವ ರೀತಿ ಕಾರ್ಯಕರ್ತರು ಪ್ರಯತ್ನಿಸಬೇಕು. ಮಹಿಳೆಯರಿಗೆ ಮೀಸಲಾತಿಗಾಗಿ ನಾನು ಬಹಳ ಪ್ರಯತ್ನ ಮಾಡಿದೆ. ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕಾಂಗ್ರೆಸ್‌, ಬಿಜೆಪಿ ಸರ್ಕಾರದಿಂದ ರಾಜ್ಯಕ್ಕೆ ಅನ್ಯಾಯವಾಗಿದೆ. ಎರಡೂ ರಾಷ್ಟ್ರೀಯ ಪಕ್ಷಗಳು ತಮಿಳುನಾಡಿನ ಪರ ನಿಲುವು ಹೊಂದಿವೆ. ಹಿಂದೆ ಮನಮೋಹನ್‌ ಸಿಂಗ್‌, ಈಗ ನರೇಂದ್ರ ಮೋದಿ ತಮಿಳುನಾಡು ರಾಜ್ಯದೊಂದಿಗೆ ಕೈಜೋಡಿಸಿದ್ದಾರೆ. ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಆಡಿದ ಆಟಗಳ ಬಗ್ಗೆ ನಾನು ಮಾತನಾಡಲ್ಲ ಜನ ಎಚ್ಚೆತ್ತುಕೊಳ್ಳಬೇಕು ಅಷ್ಟೇ ಎಂದು ತಿಳಿಸಿದರು.

ಎಲ್ಲ ರಾಜ್ಯದಲ್ಲೂ ಕನಿಷ್ಠ ಒಬ್ಬ ಜೆಡಿಎಸ್‌ ಶಾಸಕ ಇರಬೇಕು: ದೇವೇಗೌಡ

ಜೆಡಿಎಸ್‌ ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಮಾತನಾಡಿ, ಪಂಚರತ್ನ ಯಾತ್ರೆ ಕುಮಾರಸ್ವಾಮಿಯ ಕನಸಿನ ಕೂಸು. ರಾಜ್ಯದ ಜನರ ಬದುಕು ಕಟ್ಟಿಕೊಡುವ ಕಾರ್ಯಕ್ರಮ. ತುಮಕೂರಿನಲ್ಲಿ ಆಧಾರ್‌ ಕಾರ್ಡ್‌ ಇಲ್ಲವೆಂದು ಚಿಕಿತ್ಸೆ ನಿರಾಕರಿಸಿದ್ದು ಅಮಾನವೀಯ ಕೃತ್ಯ. ಹೀಗಾಗಿ ಪಂಚಾಯಿತಿ ಮಟ್ಟದಲ್ಲಿ ಹೈಟೆಕ್‌ ಆಸ್ಪತ್ರೆ ನಿರ್ಮಿಸಲಾಗುವುದು. ರಾಜ್ಯದಲ್ಲಿ ಶೇ. 50 ಉದ್ಯೋಗ ಮೀಸಲಾತಿ ಕನ್ನಡಿಗೆ ಇರಬೇಕು ಎಂದು ಕುಮಾರಸ್ವಾಮಿರಿಗೆ ಮನವಿ ಮಾಡಿದರು.

Follow Us:
Download App:
  • android
  • ios