ಅಮಿತ್‌ ಶಾ ಕಾರ್ಯವೈಖರಿಗೆ ಮಾಜಿ ಪ್ರಧಾನಿ ದೇವೇಗೌಡ ಮೆಚ್ಚುಗೆ

ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್‌ ಶಾ ಅವರು ಸಹಕಾರ ಇಲಾಖೆಯಲ್ಲಿ ನಡೆಯುತ್ತಿರುವ ಅಕ್ರಮಗಳ ಬಗ್ಗೆ ಗಮನ ಹರಿಸುತ್ತಿದ್ದಾರೆ. ಅಕ್ರಮಗಳ ತಡೆಗೆ ಕ್ರಮ ಕೈಗೊಳ್ಳುತ್ತಿದ್ದಾರೆ. ಶಾ ಅವರ ವ್ಯಕ್ತಿತ್ವ ಬಹಳ ದೊಡ್ಡದು. ಈ ವಿಷಯದಲ್ಲಿ ರಾಜಕೀಯ ಮಾಡುವುದು ಬೇಡ ಎಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಹೇಳಿದರು. 

EX Prime Minister HD Devegowda appreciates Amit Shahs performance gvd

ಮದ್ದೂರು (ಡಿ.31): ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್‌ ಶಾ ಅವರು ಸಹಕಾರ ಇಲಾಖೆಯಲ್ಲಿ ನಡೆಯುತ್ತಿರುವ ಅಕ್ರಮಗಳ ಬಗ್ಗೆ ಗಮನ ಹರಿಸುತ್ತಿದ್ದಾರೆ. ಅಕ್ರಮಗಳ ತಡೆಗೆ ಕ್ರಮ ಕೈಗೊಳ್ಳುತ್ತಿದ್ದಾರೆ. ಶಾ ಅವರ ವ್ಯಕ್ತಿತ್ವ ಬಹಳ ದೊಡ್ಡದು. ಈ ವಿಷಯದಲ್ಲಿ ರಾಜಕೀಯ ಮಾಡುವುದು ಬೇಡ ಎಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಹೇಳಿದರು. ತಾಲೂಕಿನ ಗೆಜ್ಜಲಗೆರೆಯಲ್ಲಿ ಶುಕ್ರವಾರ ನಡೆದ ಮೆಗಾ ಡೇರಿ ಘಟಕ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಕೇಂದ್ರ ಗೃಹ ಸಚಿವರ ಕಾರ್ಯವೈಖರಿಗೆ ಶ್ಲಾಘನೆ ವ್ಯಕ್ತಪಡಿಸಿದರು. ಹಲವು ಇಲಾಖೆಗಳಲ್ಲಿ ನಡೆಯುತ್ತಿರುವ ಅಕ್ರಮಗಳ ಬಗ್ಗೆ, ನಷ್ಟಕ್ಕೆ ಕಾರಣವಾದ ಸಂಗತಿಗಳನ್ನು ತಿಳಿದುಕೊಳ್ಳಲು ಅವರು ಉತ್ಸುಕರಾಗಿದ್ದಾರೆ ಎಂದರು.

ನಾನು ಪ್ರಧಾನಿಯಾಗಿದ್ದಾಗ ರಾಜ್ಯದಲ್ಲಿ ಹಾಲು ಉತ್ಪಾದಕರ 12 ಸೊಸೈಟಿಗಳಿದ್ದವು. ರೇವಣ್ಣ 12 ಸೊಸೈಟಿಗಳನ್ನು ಒಂದುಗೂಡಿಸಿದರು. ಇದೇ ವೇಳೆ ಕುರಿಯನ್‌ ಅವರು ಗುಜರಾತ್‌ನಲ್ಲಿ ಸಾಕಷ್ಟುಬದಲಾವಣೆ ತಂದಿದ್ದರು. ನಮ್ಮಲ್ಲೂ ಅಭಿವೃದ್ಧಿಗೆ ಏನಾದರೂ ಮಾಡಿ ಎಂದು ಕೇಳಿಕೊಂಡೆ. ಅವರ ಸಹಕಾರ ದೊರೆತ ಪರಿಣಾಮ ಇಂದು ಜಿಲ್ಲಾ ಹಾಲು ಒಕ್ಕೂಟ ಸ್ಥಾಪನೆಯಾಗಿ ದೊಡ್ಡದಾಗಿ ಬೆಳೆದು ನಿಂತಿದೆ ಎಂದರು. ಅಮಿತ್‌ ಶಾ ಅವರಿಗೆ ಅರ್ಥವಾಗಲಿ ಎಂದು ಅವರು ಇಂಗ್ಲಿಷ್‌ನಲ್ಲಿಯೇ ಮಾತನಾಡಿದರು.

ಟಿಕೆಟ್‌ ನಿರ್ಧಾರ ಜನರದ್ದು, ಬಿ ಫಾರ್ಮ್‌ ನಿರ್ಧಾರ ನನ್ನದು: ಎಚ್‌.ಡಿ.ದೇವೇಗೌಡ

ಉಪ್ಸಾರು, ಮುದ್ದೆ ಸವಿದ ಮಾಜಿ ಪ್ರಧಾನಿ: ಮನ್ಮುಲ್‌ನಲ್ಲಿ ಮೆಗಾಡೇರಿ ಉದ್ಘಾಟನೆಗೆ ಆಗಮಿಸಿದ್ದ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ಉಪ್ಸಾರು, ಮುದ್ದೆ ಊಟ ಸವಿದರು. ಮದ್ದೂರು ಪಟ್ಟಣಕ್ಕೆ ಆಗಮಿಸಿದ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರನ್ನು ಶಾಸಕ ಡಿ.ಸಿ.ತಮ್ಮಣ್ಣ, ಜೆಡಿಎಸ್‌ ಮುಖಂಡರು, ಕಾರ್ಯಕರ್ತರು ಅಭಿನಂದಿಸಿ ಸ್ವಾಗತಿಸಿದರು. ನಂತರ ಪಟ್ಟಣದ ಪ್ರವಾಸಿ ಮಂದಿರಕ್ಕೆ ತೆರಳಿ ಮುಖಂಡರೊಂದಿಗೆ ಉಪ್ಸಾರು, ಮುದ್ದೆ ಸೇವಿಸಿದರು. ಈ ವೇಳೆ ಶಾಸಕ ಡಿ.ಸಿ.ತಮ್ಮಣ್ಣ, ವಿಧಾನ ಪರಿಷತ್‌ ಮಾಜಿ ಸದಸ್ಯರಾದ ಕೆ.ಟಿ.ಶ್ರೀಕಂಠೇಗೌಡ, ಅಪ್ಪಾಜಿಗೌಡ, ಮನ್ಮುಲ್‌ ಅಧ್ಯಕ್ಷ ಬಿ.ಆರ್‌.ರಾಮಚಂದ್ರು, ನಿರ್ದೇಶಕರಾದ ನಲ್ಲಿಗೆರೆ ಬಾಲು, ಎಚ್‌.ಟಿ.ಮಂಜು ಸೇರಿದಂತೆ ಇತರರಿದ್ದರು.

ದೇವೇಗೌಡರ ಬೆನ್ನಿಗೆ ಚೂರಿ ಹಾಕೋಲ್ಲ: ಶಾಸಕ ಸಿ.ಎಸ್‌.ಪುಟ್ಟರಾಜು

ಸಹಕಾರ ಇಲಾಖೆ ಅಕ್ರಮಗಳ ಬಗ್ಗೆ ಗಮನ: ರಾಷ್ಟ್ರದ ಗೃಹ ಮಂತ್ರಿಗಳು ಸಹಕಾರ ಇಲಾಖೆಯಲ್ಲಿ ನಡೆಯುತ್ತಿರುವ ಅಕ್ರಮಗಳ ಬಗ್ಗೆ ಗಮನ ಹರಿಸಿದ್ದಾರೆ. ಹಲವು ಇಲಾಖೆಗಳಲ್ಲಿ ನಡೆಯುತ್ತಿರುವ ಅಕ್ರಮಗಳ ಬಗ್ಗೆ ನಷ್ಟದ ಕಾರಣ ತಿಳಿದುಕೊಳ್ಳಲು ನಮ್ಮ ಜೊತೆ ಕುಳಿತಿದ್ದಾರೆ. ಇದರಲ್ಲಿ ರಾಜಕೀಯ ಬೇಡ ಎಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಹೇಳಿದರು. ಸಮಾರಂಭದಲ್ಲಿ ಮಾತನಾಡಿ, ನಾನು ಪ್ರಧಾನಿಯಾಗಿದ್ದಾಗ 12 ಸೊಸೈಟಿ ಇತ್ತು. ರೇವಣ್ಣ 12 ಸೊಸೈಟಿಗಳನ್ನು ಒಂದುಗೂಡಿಸಿದರು. ಕುರಿಯನ್‌ ಅವರು ಏನಾದರೂ ಮಾಡಬೇಕು ಎಂದಿದ್ದರು. ಅವರು ಗುಜರಾತ್‌ನಲ್ಲಿ ಸಾಕಷ್ಟುಬದಲಾವಣೆ ತಂದಿದ್ದರು. ನಮ್ಮಲ್ಲೂ ಮಾಡುವಂತೆ ಕೇಳಿಕೊಂಡೆ. ಅದರ ಫಲವಾಗಿ ಜಿಲ್ಲಾ ಹಾಲು ಒಕ್ಕೂಟ ಸ್ಥಾಪನೆಯಾಗಿ ದೊಡ್ಡದಾಗಿ ಬೆಳೆದು ನಿಂತಿದೆ ಎಂದರು.

Latest Videos
Follow Us:
Download App:
  • android
  • ios