ಮುಂಬೈ(ನ. 17)  ಕೇಂದ್ರದ ಮಾಜಿ ಸಚಿವ ಮತ್ತು ಹಿರಿಯ ಬಿಜೆಪಿ ಮುಖಂಡ ಜಯಸಿಂಗ್ ರಾವ್ ಗಾಯಕ್ವಾಡ್ ಪಾಟೀಲ್  ಮಂಗಳವಾರ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ  ರಾಜೀನಾಮೆ ನೀಡಿ ಪಕ್ಷದಿಂದ ಹೊರಬಂದಿದ್ದಾರೆ. 

ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷ ಚಂದ್ರಕಾಂತ್ ಪಾಟೀಲ್ ಅವರಿಗೆ ರಾಜೀನಾಮೆ ಪತ್ರವನ್ನು ಸಲ್ಲಿಸಿರುವ ಗಾಯಕ್ವಾಡ್ , ಪಕ್ಷಕ್ಕಾಗಿ ಕೆಲಸ ಮಾಡಲು ಸಿದ್ಧವಿದ್ದರೂ ಅವಕಾಶ ನೀಡುತ್ತಿಲ್ಲ. ಅದಕ್ಕಾಗಿ ಈ ನಿರ್ಧಾರ ಕೈಗೊಂಡಿದ್ದೇನೆ ಎಂದು ಹೇಳಿದ್ದಾರೆ.

ಕೇಂದ್ರ ಹಾಗೂ ಮಹಾರಾಷ್ಟ್ರ ಸರ್ಕಾರದಲ್ಲಿ ಸಚಿವರಾಗಿ ಕಾರ್ಯನಿರ್ವಹಿಸಿದ್ದ ನಾಯಕ ಪಕ್ಷ ತೊರೆದಿದ್ದಾರೆ.  ಅಧಿಕಾರದ ವೇಳೆ ಜನರಿಗೆ ಸೇವೆ ಮಾಡಿದ ತೃಪ್ತಿ ಇದೆ ಎಂದಿದ್ದಾರೆ.

ನನಗೆ ವಿಧಾನಸಭೆ ಅಥವಾ ಲೋಕಸಭೆಯ ಸದಸ್ಯನಾಗಬೇಕು ಎಂಬ ಬಯಕೆ ಇರಲಿಲ್ಲ. ಪಕ್ಷ ಸಂಘಟನೆಯ ಕೆಲಸ ಮಾಡುವ ಇಚ್ಛೆ ಹೊಂದಿದ್ದೆ. ಅದು ಯಾವುದು ಸಾಧ್ಯವಾಗದ ಕಾರಣ ರಾಜೀನಾಮೆ ನೀಡುತ್ತಿದ್ದೇನೆ ಎಂದಿದ್ದಾರೆ.