ವಿಧಾನಪರಿಷತ್ ಚುನಾವಣೆಯಲ್ಲಿ, ಬಿಜೆಪಿ ಉಚ್ಚಾಟಿತ ಶಾಸಕರಾದ ಶಿವರಾಂ ಹೆಬ್ಬಾರ್ ಮತ್ತು ಎಸ್‌ಟಿ ಸೋಮಶೇಖರ್ ಅವರು ತಮ್ಮ 'ಆತ್ಮಸಾಕ್ಷಿ'ಗೆ ಮತ ಹಾಕುವುದಾಗಿ ಹೇಳಿದ್ದಾರೆ. ಬಿಜೆಪಿಯು ತಮ್ಮನ್ನು ಸಂಪರ್ಕಿಸದ ಕಾರಣ ಅಸಮಾಧಾನಗೊಂಡಿದ್ದು, ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡರೂ ಇದೇ ರೀತಿಯ ಹೇಳಿಕೆ ನೀಡಿರುವುದು ಚುನಾವಣಾ ಕಣದಲ್ಲಿ ತೀವ್ರ ಕುತೂಹಲ ಮೂಡಿಸಿದೆ.

ಬೆಂಗಳೂರು: ವಿಧಾನಪರಿಷತ್ ಚುನಾವಣೆಯ ಮತದಾನಕ್ಕೂ ಮುನ್ನ ಬಿಜೆಪಿ ಉಚ್ಚಾಟಿತ ಶಾಸಕರಾದ ಶಿವರಾಂ ಹೆಬ್ಬಾರ್ ಮತ್ತು ಎಸ್‌ಟಿ ಸೋಮಶೇಖರ್ ಅಚ್ಚರಿ ಹೇಳಿಕೆಯನ್ನು ನೀಡಿದ್ದಾರೆ. ಏಷ್ಯಾನೆಟ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ ಯಲ್ಲಾಪುರ ಶಾಸಕ ಶಿವರಾಂ ಹೆಬ್ಬಾರ್, ಬಿಜೆಪಿ ಸೌಜನ್ಯಕ್ಕೂ ನಮಗೆ ಮತ ಕೇಳಿಲ್ಲ

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಬಿಜೆಪಿ ಇಷ್ಟು ವರ್ಷಗಳ ಬಳಿಕವೂ ಬುದ್ದಿ ಕಲಿತಿಲ್ಲ. ಹೀಗಾಗಿ ನಮಗೆ ಸ್ವಾಭಿಮಾನ ಇದೆಯಲ್ಲ. ಬಿಜೆಪಿಗೆ ಜೆಡಿಎಸ್ ಗೆಲ್ಲೋದು ಬೇಕಿಲ್ಲ. ಜೆಡಿಎಸ್-ಬಿಜೆಪಿ ಮುಂದೇನಾಗುತ್ತೆ ಎಂದು ಕಾದು ನೋಡಿ ಎಂದು ಭವಿಷ್ಯ ನುಡಿದರು.

ಆತ್ಮಸಾಕ್ಷಿಗೆ ಮತ

ಕನಿಷ್ಠ ಪಕ್ಷ ಒಂದು ಮಾತಾದರೂ ಬಿಜೆಪಿ ಕೇಳಬೇಕಿತ್ತಲ್ಲ. ಅವರು ಕೇಳದೆ ನಾವು ಏನು ಮಾಡಬೇಕು. ಮತದಾನ ಗೌಪ್ಯವಾಗಿದ್ದು, ನಮ್ಮ ಆತ್ಮಸಾಕ್ಷಿಗೆ ಮತ ಹಾಕುತ್ತೇನೆ ಎಂದು ಶಿವರಾಂ ಹೆಬ್ಬಾರ್ ಹೇಳಿದರು. ಇನ್ನು ಯಶವಂತಪುರ ಶಾಸಕ ಎಸ್‌.ಟಿ.ಸೋಮಶೇಖರ್ ಮಾತನಾಡಿ, ನಮಗೆ ಡಿಕೆ ಶಿವಕುಮಾರ್ ಅವರು ಕರೆ ಮಾಡಿದ್ದರು. ಬಿಡದಿಗೆ ನಾನು ಮತ್ತು ಶಿವರಾಂ ಹೆಬ್ಬಾರ್ ಹೋಗಿದ್ದೀವಿ. ಬಿಜೆಪಿಯವರು ನಮಗೆ ಮತ ಕೇಳಿಲ್ಲ. ನಮಗೆ ಸ್ವಾಭಿಮಾನವಿದ್ದು, ಆತ್ಮಸಾಕ್ಷಿಗೆ ಮತ ಹಾಕುತ್ತೇವೆ ಎಂದು ಹೇಳಿದ್ದಾರೆ.

ಪಕ್ಷದಿಂದ ಉಚ್ಚಾಟನೆ ಆಗ್ತಾರಾ ಜಿ.ಟಿ.ದೇವೇಗೌಡ?

ಪರಿಷತ್ ಚುನಾವಣೆ ಹಿನ್ನೆಲೆ ಏಕಾಂಗಿಯಾಗಿ ಬಂದ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡರು ಮತದಾನ ಮಾಡಿ ತೆರಳಿದ್ದಾರೆ. ಪಕ್ಷ ಮತ್ತು ಜೆಡಿಎಸ್ ನಾಯಕರಿಂದ ಅಂತರ ಕಾಯ್ದುಕೊಂಡಿರುವ ಜಿ.ಟಿ.ದೇವೇಗೌಡರು, ಉಚ್ಚಾಟನೆ ಮಾಡಲು ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಹೇಳಲಾಗುತ್ತಿದೆ. ಮತದಾನದ ಬಳಿಕ ಆತ್ಮಸಾಕ್ಷಿಯಾಗಿ ವೋಟ್ ಮಾಡಿರೋದಾಗಿ ಜಿ.ಟಿ.ದೇವೇಗೌಡರ ಹೇಳಿಕೆ ತೀವ್ರ ಕುತೂಹಲ ಮೂಡಿಸಿದೆ.

ರೆಸಾರ್ಟ್‌ನಿಂದ ಐದು ಬಸ್‌ಗಳಲ್ಲಿ ಬಂದ ಕಾಂಗ್ರೆಸ್ ಶಾಸಕರು ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡುತ್ತಿದ್ದಾರೆ. ಜೆಡಿಎಸ್ ಅಭ್ಯರ್ಥಿ ಗೋವಿಂದರಾಜು, ಬಿಜೆಪಿ ಶಾಸಕರಲ್ಲಿ ಎರಡನೇ ಪ್ರಾಶಸ್ತ್ಯದ ಮತ ನೀಡುವಂತೆ ಮನವಿ ಮಾಡಿಕೊಳ್ಳುತ್ತಿರುವ ದೃಶ್ಯಗಳು ಕಂಡು ಬಂದವು. ಬಿಜೆಪಿಯಿಂದ ಉಚ್ಚಾಟಿತ ಮತ್ತೋರ್ವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಕಮಲದ ಅಭ್ಯರ್ಥಿಗೆ ಮತ ಹಾಕುತ್ತೇನೆ ಎಂದು ಅಧಿಕೃತವಾಗಿ ಹೇಳಿಕೊಂಡಿದ್ದಾರೆ. ಈ ಸಂಬಂಧ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಿಗೆ ಪತ್ರ ಬರೆದು ಯತ್ನಾಳ್ ಮಾಹಿತಿ ನೀಡಿದ್ದಾರೆ.

ಚುನಾವಣೆ ಕಣದಲ್ಲಿರುವ ಅಭ್ಯರ್ಥಿಗಳು

ಕಾಂಗ್ರೆಸ್‌ನಿಂದ ಬಿ.ಕೆ.ಹರಿಪ್ರಸಾದ್‌, ತಿಪ್ಪಣ್ಣಪ್ಪ ಕಮಕನೂರ, ಪಿ.ವಿ.ಮೋಹನ್, ಬಿ.ಎಸ್‌.ಶಿವಣ್ಣ, ವಿನಯ್‌ ಕಾರ್ತಿಕ್ ಪ್ರಕಾಶ್‌. ಬಿಜೆಪಿಯಿಂದ ಕೌಟಿಲ್ಯ ರಘು ಮತ್ತು ಲಿಂಗರಾಜ್‌ ಪಾಟೀಲ್‌. ಜೆಡಿಎಸ್‌ನಿಂದ ಗೋವಿಂದರಾಜು