ಸುಳ್ಳು ಜಾತಿ, ಶೈಕ್ಷಣಿಕ ಪ್ರಮಾಣಪತ್ರ ಆರೋಪ; ಪ್ರಿಯಾಂಕ್‌ ಖರ್ಗೆ ಆಯ್ಕೆ ರದ್ದತಿ ಕೋರಿ ಹೈಕೋರ್ಟ್‌ಗೆ ಅರ್ಜಿ

ಕಳೆದ ವಿಧಾನಸಭೆ ಚುನಾವಣೆ ವೇಳೆ ಚುನಾವಣಾ ಆಯೋಗಕ್ಕೆ ಸುಳ್ಳು ಜಾತಿ ಪ್ರಮಾಣಪತ್ರ ಹಾಗೂ ಶೈಕ್ಷಣಿಕ ದಾಖಲೆಗಳನ್ನು ಸಲ್ಲಿಸಿರುವುದಲ್ಲದೆ ಉಚಿತ ಗ್ಯಾರಂಟಿಗಳ ಮೂಲಕ ಮತದಾರರಿಗೆ ಆಮಿಷವೊಡ್ಡಿ ಗೆದ್ದಿರುವ ಆರೋಪದ ಹಿನ್ನೆಲೆಯಲ್ಲಿ ಚಿತ್ತಾಪುರ ಕಾಂಗ್ರೆಸ್‌ ಶಾಸಕ ಪ್ರಿಯಾಂಕ್‌ ಖರ್ಗೆ ಅವರ ಆಯ್ಕೆಯನ್ನು ಅಸಿಂಧುಗೊಳಿಸಬೇಕು ಎಂದು ಕೋರಿ ಹೈಕೋರ್ಟ್‌ಗೆ  ಅರ್ಜಿ ಸಲ್ಲಿಕೆಯಾಗಿದೆ.

False certificate issue petition to High Court agains priyank kharge bengaluru rav

ಬೆಂಗಳೂರು (ಆ.3): ಕಳೆದ ವಿಧಾನಸಭೆ ಚುನಾವಣೆ ವೇಳೆ ಚುನಾವಣಾ ಆಯೋಗಕ್ಕೆ ಸುಳ್ಳು ಜಾತಿ ಪ್ರಮಾಣಪತ್ರ ಹಾಗೂ ಶೈಕ್ಷಣಿಕ ದಾಖಲೆಗಳನ್ನು ಸಲ್ಲಿಸಿರುವುದಲ್ಲದೆ ಉಚಿತ ಗ್ಯಾರಂಟಿಗಳ ಮೂಲಕ ಮತದಾರರಿಗೆ ಆಮಿಷವೊಡ್ಡಿ ಗೆದ್ದಿರುವ ಆರೋಪದ ಹಿನ್ನೆಲೆಯಲ್ಲಿ ಚಿತ್ತಾಪುರ ಕಾಂಗ್ರೆಸ್‌ ಶಾಸಕ ಪ್ರಿಯಾಂಕ್‌ ಖರ್ಗೆ ಅವರ ಆಯ್ಕೆಯನ್ನು ಅಸಿಂಧುಗೊಳಿಸಬೇಕು ಎಂದು ಕೋರಿ ಹೈಕೋರ್ಟ್‌ಗೆ  ಅರ್ಜಿ ಸಲ್ಲಿಕೆಯಾಗಿದೆ. ಈ ಕುರಿತಂತೆ ಕಲಬುರಗಿ ಜಿಲ್ಲೆಯ ಚಿತ್ತಾಪೂರ ತಾಲೂಕು ನಿವಾಸಿ ಅಶ್ವಥರಾಮ ರಾಠೋಡ್‌(Ashwathram rathod) ಸಲ್ಲಿಸಿರುವ ಚುನಾವಣಾ ತಕರಾರು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಜಿ. ಉಮಾ ಅವರ ಪೀಠ, ಸಚಿವ ಪ್ರಿಯಾಂಕ್‌ ಖರ್ಗೆ ಅವರಿಗೆ ಸಮನ್ಸ್‌ ಜಾರಿಗೊಳಿಸಿ ಅರ್ಜಿ ಸಂಬಂಧ ಸೆ.5ಕ್ಕೆ ವಿಚಾರಣೆಗೆ ಹಾಜರಾಗುವಂತೆ ಸಚಿವರಿಗೆ ನಿರ್ದೇಶಿಸಿ ವಿಚಾರಣೆ ಮುಂದೂಡಿದೆ.

ಎಸ್ಸಿ, ಎಸ್ಟಿಅಭಿವೃದ್ಧಿಗೆ ₹34300 ಕೋಟಿ;ಸಿಎಂ ನೇತೃತ್ವದ ಸಭೆ ಸಮ್ಮತಿ

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲೆ ಪ್ರಮೀಳಾ ನೇಸರ್ಗಿ ವಾದ ಮಂಡಿಸಿ, ಕಳೆದ ವಿಧಾನಸಭೆ ಚುನಾವಣೆ(Karnataka assembly election 2023)ಯಲ್ಲಿ ಚಿತ್ತಾಪುರ ಕ್ಷೇತ್ರದಿಂದ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಪ್ರಿಯಾಂಕ್‌ ಖರ್ಗೆ(Priyank kharge) ಅವರು ಚುನಾವಣಾ ಆಯೋಗಕ್ಕೆ ಸಲ್ಲಿಸಿದ ಚುನಾವಣಾ ಪ್ರಮಾಣ ಪತ್ರದಲ್ಲಿ ಸುಳ್ಳು ಜಾತಿ ಪ್ರಮಾಣಪತ್ರ ಸಲ್ಲಿಸಿದ್ದಾರೆ. ಪರಿಶಿಷ್ಟಜಾತಿ ಪ್ರಮಾಣ ಪತ್ರದ ಬದಲು ಗ್ರಾಮ ಪಂಚಾಯಿತಿ ಚುನಾವಣೆಗೆ ಸಲ್ಲಿಸಲಾಗುವ ಜಾತಿ ಮತ್ತು ಆದಾಯ ಪ್ರಮಾಣಪತ್ರ ಸಲ್ಲಿಸಿದ್ದಾರೆ. ಅದೂ ಸಹ 2021 ಪ್ರಮಾಣ ಪತ್ರವಾಗಿದೆ ಎಂದು ವಿವರಿಸಿದರು.

ಸುಳ್ಳು ಜಾತಿ ಪ್ರಮಾಣ ಪತ್ರವಲ್ಲದೇ ಶೈಕ್ಷಣಿಕ ಅರ್ಹತೆಗೆ ಸಂಬಂಧಿಸಿದಂತೆಯೂ ಅಸಮರ್ಪಕ ಮತ್ತು ನಕಲಿ ದಾಖಲೆ ಅವರು ಸಲ್ಲಿಸಿದ್ದಾರೆ. ಮತ್ತೊಂದೆಡೆ ಕಾಂಗ್ರೆಸ್‌ನಿಂದ ಗ್ಯಾರಂಟಿ ಕಾರ್ಡ್‌ ಯೋಜನೆಗಳ ಮೂಲಕ ಪ್ರಿಯಾಂಕ್‌ ಖರ್ಗೆ ಮತದಾರರಿಗೆ ಆಮಿಷ ಒಡ್ಡಿದ್ದಾರೆ. ಇದು ಲಂಚ ಹಾಗೂ ಭ್ರಷ್ಟಾಚಾರಕ್ಕೆ ಸಮ ಹಾಗೂ ಅಪರಾಧವಾಗಿದೆ. ಇದು ಮತದಾರರ ಮೇಲೆ ಪ್ರಭಾವ ಬೀರುವ ಯತ್ನವಾಗಿದೆ. ಈ ಹಿನ್ನೆಲೆಯಲ್ಲಿ ಅವರ ಆಯ್ಕೆಯನ್ನು ಅಸಿಂಧುಗೊಳಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.

ಜೈವಿಕ ತಂತ್ರಜ್ಞಾನ ಕ್ಷೇತ್ರಕ್ಕೂ ಕಾಲಿಡಲಿದೆ ಕೃತಕ ಬುದ್ಧಿಮತ್ತೆ!

Latest Videos
Follow Us:
Download App:
  • android
  • ios