ಪರಿಹಾರ ವಿಚಾರದಲ್ಲಿ ರೈತರಿಗೆ ಅನ್ಯಾಯವಾಗಲು ಬಿಡಲ್ಲ: ಸಿಎಂ ಸಿದ್ದರಾಮಯ್ಯ
ಕಂಪನಿ ಹೆಸರಿನಲ್ಲಿ ಭೂಮಾಲೀಕ ರೈತರಿಗೆ ಪಡೆದ ಭೂಮಿಗೆ ಕೊಡಬೇಕಾಗಿರುವ ಪರಿಹಾರದಲ್ಲಿ ಅನ್ಯಾಯವಾಗಲು ಬಿಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಡೂರಿನ ರೈತರ ನಿಯೋಗಕ್ಕೆ ಭರವಸೆ ನೀಡಿದರು.
ಸುವರ್ಣಸೌಧ (ಡಿ.15): ಕಂಪನಿ ಹೆಸರಿನಲ್ಲಿ ಭೂಮಾಲೀಕ ರೈತರಿಗೆ ಪಡೆದ ಭೂಮಿಗೆ ಕೊಡಬೇಕಾಗಿರುವ ಪರಿಹಾರದಲ್ಲಿ ಅನ್ಯಾಯವಾಗಲು ಬಿಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಡೂರಿನ ರೈತರ ನಿಯೋಗಕ್ಕೆ ಭರವಸೆ ನೀಡಿದರು. ಸಂಡೂರಿನ ಕುಡುತಿನಿಯಲ್ಲಿ ಪ್ರಾರಂಭಿಸಲಿರುವ ಅರ್ಸೆಲರ್ ಮಿತ್ತಲ್ ಇಂಡಿಯಾ. ಉತ್ತಮ್ ಗಾಲ್ವಾ ಫೆರೋಸ್ ಕಂಪನಿ ಹಾಗೂ ಮೆ. ಕರ್ನಾಟಕ ವಿಜಯನಗರ ಸ್ಟೀಲ್ಸ್ ಲಿಮಿಟೆಡ್ ಕಾರ್ಖಾನೆಗಳ ಕುರಿತು ಸಂಡೂರು ಶಾಸಕ ಇ. ತುಕಾರಾಂ ನೇತೃತ್ವದ ನಿಯೋಗದೊಂದಿಗೆ ಗುರುವಾರ ಸಭೆ ನಡೆಸಿದರು.
ನಂತರ ಮಾತನಾಡಿದ ಸಿಎಂ, ಅರ್ಸೆಲರ್ ಮಿತ್ತಲ್ ಕಾರ್ಖಾನೆಗಾಗಿ ನಡೆಸಿರುವ ಭೂಸ್ವಾಧೀನ ಕುರಿತಂತೆ, ರೈತರಿಗೆ ನೀಡಿರುವ ಪರಿಹಾರಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ನ ತೀರ್ಪಿನ ಬಗ್ಗೆ ಅಡ್ವೊಕೇಟ್ ಜನರಲ್ ಅವರ ಜತೆಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು. ರೈತರಿಗೆಅನ್ಯಾಯ ಆಗಲು ಬಿಡುವುದಿಲ್ಲ. ಕಂಪನಿ ಹೆಸರಲ್ಲಿ ಭೂಮಿ ಪಡೆದು ರಿಯಲ್ ಎಸ್ಟೇಟ್ ವ್ಯವಹಾರ ನಡೆಸಲು ಅವಕಾಶ ಕೊಡುವುದಿಲ್ಲ ಎಂದರು. ಇದೇ ಸಂದರ್ಭದಲ್ಲಿ ಈ ಉದ್ದೇಶಿತ ಕಾರ್ಖಾನೆಗಳಿಗಾಗಿ ಭೂಸ್ವಾಧೀನ ಸಂದರ್ಭದಲ್ಲಿ ದರ ನಿಗದಿಯಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯ ಸಮಿತಿಯು ಅನ್ಯಾಯವೆಸಗಿದೆ ಎಂಬ ರೈತರು ಆರೋಪಿಸಿದರು.
ಡಿ.17ರಿಂದ ದತ್ತಮಾಲಾ ಅಭಿಯಾನಕ್ಕೆ ಜಿಲ್ಲಾಡಳಿತದಿಂದ ಸಕಲ ಸಿದ್ದತೆ: ಡಿಸಿ ಮೀನಾ ನಾಗರಾಜ್
ಅದಕ್ಕೆ ಸಭೆಯಲ್ಲಿದ್ದ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಅವರು, ಪ್ರಕರಣವನ್ನು ಗಂಭೀರವಾಗಿ ಪರಿಶೀಲಿಸಿದ್ದು, ಸಮಸ್ಯೆ ಬಗೆಹರಿಸುವುದಾಗಿ ತಿಳಿಸಿದರು. ಸಭೆಯಲ್ಲಿ ಸಚಿವ ನಾಗೇಂದ್ರ, ಜಿಲ್ಲೆಯ ಶಾಸಕರಾದ ಕಂಪ್ಲಿ ಗಣೇಶ್, ನಾರಾ ಭರತ್ ರೆಡ್ಡಿ, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್, ಕಾರ್ಯದರ್ಶಿ ಡಾ. ಕೆ.ವಿ. ತ್ರಿಲೋಕಚಂದ್ರ, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ. ಎಸ್. ಸೆಲ್ವಕುಮಾರ್ ಮತ್ತು ರೈತ ಪ್ರತಿನಿಧಿಗಳು ಉಪಸ್ಥಿತರಿದ್ದರು.
ಅನುದಾನಿತ ಶಿಕ್ಷಕರಿಗೂ ಜ್ಯೋತಿ ಸಂಜೀವಿನಿ: ಸರ್ಕಾರಿ ನೌಕರರಿಗೆ ಇರುವ ಜ್ಯೋತಿ ಸಂಜೀವಿನಿ ಆರೋಗ್ಯ ಯೋಜನೆಯನ್ನು ಅನುದಾನಿತ ಶಾಲೆ, ಕಾಲೇಜುಗಳ ಶಿಕ್ಷಕರು, ಉಪನ್ಯಾಸಕರಿಗೆ ವಿಸ್ತರಿಸುವ ಬಗ್ಗೆ ಪರಿಶೀಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಬಿಜೆಪಿಯ ಹೇಮಲತಾ ನಾಯಕ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಸರ್ಕಾರಿ ನೌಕರರಿಗೆ 2015ರ ಜನವರಿಯಿಂದ ‘ಜ್ಯೋತಿ ಸಂಜೀವಿನಿ’ ಯೋಜನೆ ಜಾರಿಗೆ ತರಲಾಗಿದೆ. ಕ್ಯಾನ್ಸರ್, ಹೃದ್ರೋಗ ಸೇರಿದಂತೆ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಖರ್ಚಾದ ಹಣವನ್ನು ಸರ್ಕಾರ ಮರು ಪಾವತಿಸುತ್ತದೆ.
ನರೇಗಾ ಬಗ್ಗೆ ಕೇಂದ್ರ ಸಚಿವ ಗಿರಿರಾಜ್ ಹಸಿ ಸುಳ್ಳು: ಸಚಿವ ಪ್ರಿಯಾಂಕ್ ಖರ್ಗೆ
ಈ ಯೋಜನೆಯನ್ನು ಅನುದಾನಿತ ಶಿಕ್ಷತ ಶಿಕ್ಷಣ ಸಂಸ್ಥೆಗಳ ಶಿಕ್ಷಕರು, ಉಪನ್ಯಾಸಕರಿಗೂ ವಿಸ್ತರಿಸುವ ಬಗ್ಗೆ ಹಣಕಾಸು ಲಭ್ಯತೆ ನೋಡಿಕೊಂಡು ಪರಿಶೀಲಿಸಲಾಗುವುದು ಎಂದರು. ಅನುದಾನಿತ ಶಿಕ್ಷಕರು, ಉಪನ್ಯಾಸಕರಿಗೆ ಆಯುಷ್ಮಾನ್ ಆರೋಗ್ಯ ಕರ್ನಾಟಕ ಯೋಜನೆ ಸೇರಿದಂತೆ ಯಾವುದೇ ಆರೋಗ್ಯ ಯೋಜನೆ ಸಿಗದೇ ಸಂಕಷ್ಟದಲ್ಲಿದ್ದಾರೆ. ಹಾಗಾಗಿ ಅವರಿಗೆ ಜ್ಯೋತಿ ಸಂಜೀವಿನಿ ಯೋಜನೆ ವ್ಯಾಪ್ತಿಗೆ ಸೇರ್ಪಡೆ ಮಾಡಬೇಕೆಂದು ಜೆಡಿಎಸ್, ಬಿಜೆಪಿ ಸದಸ್ಯರೂ ಮನವಿ ಮಾಡಿದರು.