ಕರಪತ್ರದಲ್ಲಿ ದೇವರ ಫೋಟೊ ಬಳಕೆ; ಎಸ್‌ಪಿ ಅಭ್ಯರ್ಥಿ ಪರಶುರಾಮ್‌ ವಿರುದ್ಧ ಪ್ರಕರಣ ದಾಖಲು

ಸೊರಬ ವಿಧಾನಸಭಾ ಕ್ಷೇತ್ರಕ್ಕೆ ಸಮಾಜವಾದಿ ಪಾರ್ಟಿಯಿಂದ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿರುವ ವಿ.ಜಿ. ಪರಶುರಾಮ್‌ ವಿರುದ್ಧ ಸೊರಬ ಪೊಲೀಸ್‌ ಠಾಣೆಯಲ್ಲಿ ಚುನಾವಣೆ ನೀತಿ ಸಂಹಿತಿ ಉಲ್ಲಂಘನೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

File a case against SP candidate Parasuram for using Gods photo in the pamphlet at shivamogga rav

ಸೊರಬ (ಏ.21): ಸೊರಬ ವಿಧಾನಸಭಾ ಕ್ಷೇತ್ರಕ್ಕೆ ಸಮಾಜವಾದಿ ಪಾರ್ಟಿಯಿಂದ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿರುವ ವಿ.ಜಿ. ಪರಶುರಾಮ್‌ ವಿರುದ್ಧ ಸೊರಬ ಪೊಲೀಸ್‌ ಠಾಣೆಯಲ್ಲಿ ಚುನಾವಣೆ ನೀತಿ ಸಂಹಿತಿ ಉಲ್ಲಂಘನೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಏಪ್ರಿಲ್‌ 20ರಂದು ಸಮಾಜವಾದಿ ಪಾರ್ಟಿ(Samajavadi party)ಯಿಂದ ತಮ್ಮ ಉಮೇದುವಾರಿಕೆ ಸಲ್ಲಿಸಲು ಪಟ್ಟಣದ ಶ್ರೀ ರಂಗನಾಥಸ್ವಾಮಿ ದೇವಸ್ಥಾನ ಮುಂಭಾಗದಿಂದ ಮುಖ್ಯರಸ್ತೆಯ ಮೂಲಕ ತಾಲೂಕು ಕಚೇರಿ ತಲುಪುವ ಮೆರವಣಿಗೆ ವೇಳೆ ಪ್ರಚಾರದ ಕರಪತ್ರದಲ್ಲಿ ಧಾರ್ಮಿಕತೆಯನ್ನು ಬಿಂಬಿಸುವಂತಹ ಚಂದ್ರಗುತ್ತಿಯ ಶ್ರೀ ರೇಣುಕಾಂಬೆ ಮತ್ತು ಪರಮೇಶ್ವರ ದೇವರುಗಳ ಫೋಟೋಗ​ಳನ್ನು ಮುದ್ರಿಸಲಾಗಿತ್ತು. ಇದು ಚುನಾವಣಾ ನೀತಿ ಸಂಹಿತೆಗೆ ವಿರೋಧವಾಗಿದೆ.

ಕರಪತ್ರದಲ್ಲಿ ದೇವರ ಫೋಟೋ ಮುದ್ರಣ: ಎಸ್‌ಪಿ ಅಭ್ಯ​ರ್ಥಿ ಮೇಲೆ ನೀತಿಸಂಹಿತೆ ಉಲ್ಲಂಘನೆ ತೂಗು​ಗ​ತ್ತಿ!

ಯಾವುದೇ ಪಕ್ಷದ ಮತ್ತು ಪಕ್ಷೇತರ ಅಭ್ಯರ್ಥಿಗಳು ಕರಪತ್ರ ಮತ್ತು ಫ್ಲೆಕ್ಸ್‌ಗಳಲ್ಲಿ ದೇವರ ಭಾವಚಿತ್ರ ಮತ್ತು ಹೆಸರನ್ನು ಬಳಸಿಕೊಳ್ಳುವಂತಿಲ್ಲ. ಅಲ್ಲದೇ ಕರಪತ್ರದಲ್ಲಿ ಮುದ್ರಣಾಲಯದ ಹೆಸರು, ಪ್ರತಿಗಳು ಮತ್ತು ಪ್ರಕಟಣೆ ಮಾಡುವವರು ಹೆಸರು ಯಾವುದೂ ಇರಲಿಲ್ಲ. ಈ ಬಗ್ಗೆ ಸಾರ್ವಜನಿಕರಿಂದ ದೇವರ ಫೋಟೋ ಹಾಕಿರುವುದಕ್ಕೆ ಆಕ್ಷೇಪ ವ್ಯಕ್ತವಾಗಿತ್ತು. ಈ ಬಗ್ಗೆ ಏ.21ರಂದು ಕನ್ನಡಪ್ರಭ ವರದಿ ಮಾಡಿತ್ತು.

ಇದ​ರಿಂದ ಎಚ್ಚೆತ್ತುಕೊಂಡ ಸೊರಬ ವಿಧಾನಸಭಾ ಚುನಾವಣಾಧಿಕಾರಿಗಳು ಪೊಲೀಸ್‌ ಠಾಣೆಗೆ ದೂರು ನೀಡಿದ್ದು, ವಿ.ಜಿ. ಪರಶುರಾಮ್‌ ವಿರುದ್ಧ ಪಿಎಸ್‌ಐ ನಾಗರಾಜ್‌ ಪ್ರಕರಣ ದಾಖಲಿಸಿ, ಮುಂದಿನ ಕ್ರಮಕೈಗೊಂಡಿದ್ದಾರೆ.

ಶಿವಮೊಗ್ಗದಲ್ಲಿ ಹೊಸ ಮುಖಕ್ಕೆ ಮಣೆ ಹಾಕಿದ ಬಿಜೆಪಿ...ಈ ಬಾರಿ ಶಿವಮೊಗ್ಗದಲ್ಲಿ ಕಮಾಲ್ ಮಾಡುತ್ತಾ ಕಾಂಗ್ರೆಸ್..?

ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆಯ ದಿನಾಂಕ.

Latest Videos
Follow Us:
Download App:
  • android
  • ios